• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home GUEST COLUMN

ಇದ್ದ ಬುದ್ಧಿ ಬಳಸಿ, ಸಾಧ್ಯವಾದರೆ ಬೆಳೆಸಿ ಎನ್ನುತ್ತಿದ್ದರು ಕಾರಂತರು

cknewsnow desk by cknewsnow desk
October 10, 2021
in GUEST COLUMN
Reading Time: 1 min read
0
ಇದ್ದ ಬುದ್ಧಿ ಬಳಸಿ, ಸಾಧ್ಯವಾದರೆ ಬೆಳೆಸಿ ಎನ್ನುತ್ತಿದ್ದರು ಕಾರಂತರು
1.1k
VIEWS
FacebookTwitterWhatsuplinkedinEmail

ಇಂದು ಡಾ.ಶಿವರಾಮ ಕಾರಂತರ ಜನ್ಮದಿನ

ಕಡಲತಡಿಯ ಭಾರ್ಗವ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ.ಶಿವರಾಮ ಕಾರಂತ ಅವರ ಜನ್ಮದಿನ ಇಂದು. ತನ್ನಿಮಿತ್ತ ಕಾರಂತರನ್ನು ನಮ್ಮ ಓದುಗರಿಗೆ ದರ್ಶನ ಮಾಡಿಸಿದ್ದಾರೆ ನಮ್ಮ ಅಂಕಣಕಾರ ಡಾ.ಗುರುಪ್ರಸಾದ್‌ ಹವಲ್ದಾರ್.

“ಕಡಲತೀರದ ಭಾರ್ಗವ”, “ನಡೆದಾಡುವ ವಿಶ್ವಕೋಶ” ಎಂದೇ ಖ್ಯಾತರಾಗಿದ್ದ ಕನ್ನಡ ಸಾಹಿತ್ಯ-ಸಂಸ್ಕೃತಿಯ ವಕ್ತಾರ, ಕವಿ, ಕಾದಂಬರಿಕಾರ, ನಾಟಕಕಾರ, ಅನುವಾದಕ, ವೈಜ್ಞಾನಿಕ ಬರಹಗಾರು ಆದ ಶಿವರಾಮ ಕಾರಂತರ ಜನ್ಮದಿನವಿಂದು.

ಆಡುಮುಟ್ಟದ ಸೊಪ್ಪಿಲ್ಲ. ಹಾಗೇಯೆ ಕಾರಂತರು ಬರೆಯದ ಸಾಹಿತ್ಯ ಪ್ರಕಾರವೇ ಇಲ್ಲವೆನ್ನಲಾಗಿದೆ.

ಕಡಲ ತೀರದ ಭಾರ್ಗವ ಎಂದು ಪ್ರಖ್ಯಾತಿಯನ್ನು ಪಡೆದ ಶಿವರಾಮ ಕಾರಂತರು ಉಡುಪಿ ಜಿಲ್ಲೆಯ ಕೋಟ ಎಂಬಲ್ಲಿ 1902ರ ಅಕ್ಟೋಬರ್ 10ರಂದು ಜನಿಸಿದರು. ಇವರ ತಂದೆ ಶೇಷ ಕಾರಂತರು, ತಾಯಿ ಲಕ್ಶ್ಮೀ ಕಾರಂತರು. 9 ಮಕ್ಕಳ ಕುಟುಂಬದಲ್ಲಿ ಶಿವರಾಮ ಕಾರಂತರು ೪ನೇಯ ಮಗ. ಶಿವರಾಮ ಕಾರಂತರ ಅಣ್ಣ ಮದರಾಸ್ ಸರಕಾರದಲ್ಲಿ ಸಚಿವರಾಗಿದ್ದರು. ಇನ್ನೊಬ್ಬ ಅಣ್ಣ ವಾಸುದೇವ ಕಾರಂತರು ಲೇಖಕರೂ, ಆಧ್ಯಾತ್ಮ ವಿಷಯಗಳಲ್ಲಿ ಪ್ರಸಿದ್ಧಿಯನ್ನು ಪಡೆದಿದ್ದಾರೆ.

ಶೇಷ ಕಾರಂತರು ಶಾಲಾ ಶಿಕ್ಷಕರಾಗಿದ್ದು ದೊಡ್ದ ಕುಟುಂಬವನ್ನು ಸಾಕಲು ಅಸಾಧ್ಯವಾದಾಗ ಕೆಲಸ ಬಿಟ್ಟು ಜವಳಿ ಅಂಗಡಿ ಆರಂಭಿಸಿದರು.ಇಂಗ್ಲೀಷರನ್ನು ಕಂಡರೆ ಅಸಹ್ಯಪಡುತಿದ್ದ ಕಾಲದಲ್ಲಿ ಶೇಷರು ಅವರ ಮಕ್ಕಳನ್ನು ಇಂಗ್ಲೀಷ್ ಶಾಲೆಗೆ ಕಳುಹಿಸಿದರು. ಕುಂದಾಪುರದ ಶಾಲೆಯಲ್ಲಿ 1920ರಲ್ಲಿ ಶಿವರಾಮ ಕಾರಂತರು ತಮ್ಮ ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಬರೆದು ಮುಗಿಸಿದರು. ತಮ್ಮ ಶಾಲೆಯಲ್ಲಿ ರಂಗರಾಯರು ಕಾರಂತರ ಮೊದಲ ಗುರುಗಳಾಗಿ ಕಾರಂತರಿಗೆ ಬೆಂಬಲ ನೀಡಿದರು. ಮುದ್ದಣ ಕವಿಯ ಗುರುವಾಗಿದ್ದ ಮಳಲಿ ಸುಬ್ಬರಾಯರು ಸಹ ಶಿವರಾಮ ಕಾರಂತರಿಗೆ ಗುರುವಾಗಿದ್ದರು. ಮಳಲಿ ಸುಬ್ಬರಾಯರು ಮೂಲತ: ಯಕ್ಷಗಾನ ರಚನೆ ಮಾಡಬಲ್ಲವರಾಗಿದ್ದು ಯಕ್ಷಗಾನದ ಬಗ್ಗೆ ಶಿವರಾಮರಿಗೆ ಆಸಕ್ತಿ ಮೂಡಲು ಮುಖ್ಯ ಕಾರಣರಾದರು.

ಶಿವರಾಮ ಕಾರಂತರಿಗೆ ಪರಿಸರವೆಂದರೆ ಬಹಳ ಪ್ರೀತಿ. ಅವರು ಬಾಲ್ಯದಲ್ಲಿ ಕೆರೆಗಳ ಬಳಿ, ಏರಿಗಳ ಬಳಿ,ಸಮುದ್ರತೀರ,ಮರದ ನೆರಳಿನ ಪ್ರದೇಶಗಳಲ್ಲಿ ಸಮಯವನ್ನು ಕಳೆಯುತ್ತಿದ್ದರು. ಆಧುನಿಕ ವಿದ್ಯಾಭ್ಯಾಸ ಕೇವಲ ಹೊಟ್ಟೆಪಾಡಿಗಾಗಿ ಎನ್ನುವುದು ಅವರ ಅಭಿಪ್ರಾಯ. ನಿಜವಾದ ವ್ಯಕ್ತಿತ್ವದ ವಿಕಸನವಾದರೆ ಅದೇ ನಿಜವಾದ ಶಿಕ್ಷಣವೆನ್ನುವುದು ಅವರ ಅಭಿಪ್ರಾಯವಾಗಿತ್ತು. 1920ರಲ್ಲಿ ಗಾಂಧೀಜಿಯವರು ಸ್ವತಂತ್ರ ಹೋರಾಟದಲ್ಲಿ ಶಾಲಾ ಮಕ್ಕಳು ಭಾಗವಹಿಸಬೇಕೆಂದು ಕರೆಕೊಟ್ಟಾಗ ಕಾರಂತರೂ ಚಳವಳಿಯಲ್ಲಿ ಭಾಗವಹಿಸಿದ್ದರು.

ಯುವಕರಾಗಿದ್ದಾಗ, ಸಮಾಜ ಸುಧಾರಣೆಗೂ ಕೈ ಹಾಕಿ, ವೇಶ್ಯಾ ವಿವಾಹಗಳನ್ನು ಮಾಡಿಸಿದ್ದರು.! ಯಕ್ಷಗಾನ ತಂಡಗಳನ್ನು ಕಟ್ಟಿಕೊಂಡು ದೇಶ ವಿದೇಶಗಳಲ್ಲಿ ಈ ಕಲೆಯನ್ನು ಪ್ರಚುರಪಡಿಸಲು ಯತ್ನಿಸಿದರು. ಮಕ್ಕಳಲ್ಲಿದ್ದ ಪ್ರತಿಭೆ ಅರಳಿಸಲು ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ಬಾಲವನ ಎಂಬ ಅಸಂಪ್ರದಾಯಿಕ ಶೈಕ್ಷಣಿಕ ಕೇಂದ್ರವನ್ನು ತೆರೆದಿದ್ದರು. ಪುತ್ತೂರಿನಲ್ಲಿ ಒಂದು ಮುದ್ರಣಾಲಯ ತೆರೆದು, ತಮ್ಮ ಪುಸ್ತಕಗಳನ್ನು ಮುದ್ರಿಸುತ್ತಿದ್ದರಲ್ಲದೆ, ತಮ್ಮ ಹಲವು ಕಾದಂಬರಿಗಳಿಗೆ ತಾವೆ ಮುಖಪುಟದ ಚಿತ್ರಗಳನ್ನೂ ಬರೆದು ಮುದ್ರಿಸಿದ ಬಹುಮುಖ ಪ್ರತಿಭೆ ಇವರದ್ದು! ಬಹುಶಃ ಮುಖಪುಟ ಚಿತ್ರ ಬರೆದು ಪ್ರಕಟಿಸಿದ ಕನ್ನಡದ ಪ್ರಥಮ ಪ್ರಮುಖ ಸಾಹಿತಿ ಇವರೊಬ್ಬರೇ. 1925 ರಲ್ಲಿ ವಸಂತ ಎಂಬ ಮಾಸಪತ್ರಿಕೆಯನ್ನು ಆರಂಭಿಸಿದ ಕಾರಂತರು ಅದರ ಸಂಪಾದಕರಾಗಿ ಸುಮಾರು ಐದು ವರ್ಷಗಳ ಕಾಲ ದುಡಿದರು. ಕಾರಂತರ ಮೊದಲ ಕಾದಂಬರಿ “ವಿಚಿತ್ರ ಕೂಟ”ವು ಇದೇ ಪತ್ರಿಕೆಯ ಮೂಲಕ ಬೆಳಕು ಕಂಡಿತು. ನಂತರ ಕಾರಣಾಂತರಗಳಿಂದ 1930ರಲ್ಲಿ ಈ ಪತ್ರಿಕೆಯು ನಿಂತು ಹೋಯಿತು. 1950ರಲ್ಲಿ ಅವರು “ವಿಚಾರಮಣಿ” ಎಂಬ ಮತ್ತೊಂದು ಪತ್ರಿಕೆಯನ್ನು ಆರಂಭಿಸಿದರಾದರೂ ಅದು ಬಹು ಕಾಲ ಉಳಿಯಲಿಲ್ಲ. ಮಕ್ಕಳ ಶಿಕ್ಷಣದಲ್ಲಿ ಕಾರಂತರಿಗೆ ತುಂಬಾ ಆಸಕ್ತಿ. ಮಕ್ಕಳಿಗಾಗಿ ಸಾಹಿತ್ಯರಚನೆ ಮಾಡಿದ ಅವರು ಮಕ್ಕಳ ಪ್ರೀತಿಯ “ಕಾರಂತಜ್ಜ” ಎಂದೇ ಖ್ಯಾತರಾದರು. ವಿಜ್ಞಾನದ ಅನೇಕ ಮುಖಗಳನ್ನು ಮಕ್ಕಳಿಗೆ ಪರಿಚಯಿಸಲು ಅವರು ಬರೆದ “ಅದ್ಭುತ ಜಗತ್ತು”, “ಬಾಲ ಪ್ರಪಂಚ” ಕನ್ನಡದ ಮಟ್ಟಿಗೆ ಅದ್ಭುತ ಏಕವ್ಯಕ್ತಿ ಜ್ಞಾನಕೋಶ.

ಕಾರಂತರು ಕೆಲಕಾಲ ತರಂಗ ಸಾಪ್ತಾಹಿಕದ ‘ಬಾಲವನ’ – ಮಕ್ಕಳ ವಿಭಾಗದಲ್ಲಿ ‘ಬಾಲವನದಲ್ಲಿ ಕಾರಂತಜ್ಜ’ ಎಂಬ ಕಾಲಂ ನಡೆಸಿ ಕೊಡುತ್ತಿದ್ದರು. ಇದು ಬಹಳವಾಗಿ ಜನಪ್ರಿಯವಾಗಿತ್ತು. ಪುಟಾಣಿಗಳು ಕಳುಹಿಸಿದ ವಿಜ್ಞಾನ ಕುರಿತ ಪ್ರಶ್ನೆಗಳಿಗೆ ಕಾರಂತರು ಮಕ್ಕಳಿಗೆ ಅರ್ಥವಾಗುವಂತೆ ಸರಳ ರೀತಿಯಲ್ಲಿ ಉತ್ತರ ನೀಡುತ್ತಿದ್ದರು. ಆಗಿನ ತಲೆಮಾರಿನ ಕನ್ನಡಿಗರಿಗೆ ಕಾರಂತರು, ‘ಕಾರಂತಜ್ಜ’ ರೆಂದೇ ಚಿರಪರಿಚಿತ.

“ನಾನು ದೇವರನ್ನು ನಂಬುವುದಿಲ್ಲ. ಏಕೆಂದರೆ ನಾನು ನೋಡಿಲ್ಲ. ನನಗೆ ಯಾವುದು ಗೊತ್ತಿಲ್ಲವೋ ಅದನ್ನು ನಂಬುವುದಿಲ್ಲ. ರಾಮಕೃಷ್ಣ ಪರಮಹಂಸರು ನಂಬಿದ್ದರು. ಅದನ್ನು ತಪಸ್ಸಿನಿಂದ ಕಂಡುಕೊಂಡರು. ನನಗೆ ರಾಮ ಎಂದರೆ ರಾಜಾ ರವಿವರ್ಮ ಅವರ ಚಿತ್ರ. ಕೃಷ್ಣ ಎಂದರೆ ಗುಬ್ಬಿ ವೀರಣ್ಣನವರ ಕೃಷ್ಣಲೀಲಾ ನೆನಪಿಗೆ ಬರುತ್ತದೆ. ಒಳ್ಳೆಯ ಕೆಲಸ ಮಾಡಿದರೆ ಒಳ್ಳೆಯದಾಗುತ್ತದೆ ಎಂದು ನಾವು ನಂಬಿ ಬಂದಿದ್ದೇವೆ. ಆದರೆ ಆ ರೀತಿ ಆಗಿಲ್ಲ. ನನಗೆ ಅನುಕೂಲವಾದಾಗ ಮಾತ್ರ ದೇವರನ್ನು ನಂಬುತ್ತೇನೆ ಎಂಬುದು ಸರಿಯಲ್ಲ”.

“ಸಾಹಿತಿಗಳಿಗೆ ಸಮಾಜದಲ್ಲಿ ಬೇರೆ ಪಾತ್ರವೇನೂ ಇಲ್ಲ. ಸಾಹಿತಿ ಲೋಕೋದ್ಧಾರಕ ಎಂಬ ಭಾವನೆ ಏನೂ ಬೇಡ. ಆತನೂ ನಿಮ್ಮ ಹಾಗೆ ಮನುಷ್ಯ. ಬದುಕಿನ ಬಗ್ಗೆ ತನ್ನ ಅನುಭವವನ್ನು ಮಾತ್ರ ಹೇಳುತ್ತಾನೆ. ಪರಿಹಾರ ಸೂಚಿಸುವುದಲ್ಲ. ಆತ ಬರೆದ ಮಾತ್ರಕ್ಕೆ ಮಹಾನುಭಾವ ಆಗೋಲ್ಲ. ಬರೆಯದವರೂ ದೊಡ್ಡ ಕೆಲಸಗಳನ್ನು ಮಾಡಿದ್ದಾರೆ. ಮರ ತಾನಾಗಿ ಬೆಳೆಯುತ್ತದೆ. ಆ ರೀತಿ ಮನುಷ್ಯ ಬೆಳೆಯಲಾರ. ನಮ್ಮ ಬದುಕು ಆರಂಭವಾಗುವುದಕ್ಕೆ ಸಾವಿರಾರು ವರ್ಷಗಳ ಮೊದಲೇ ಜೀವರಾಶಿ ಇಲ್ಲಿತ್ತು ಎಂಬುದನ್ನು ತಿಳಿದರೆ ಸಾಕು”.

ಕಾರಂತರ ವಿಚಾರವಾದಗಳು ರೂಢಿಯನ್ನು ಮೀರಿ ಹೊಸ ದೃಷ್ಟಿಕೋನಗಳೆಡೆಗೆ ಮುಖಮಾಡುವಂತೆ ಮಾಡುತ್ತವೆ. ಅವನ್ನು ಅವರೇ ಹೇಳಿಕೊಳ್ಳುವಂತೆ., ರೂಢಿಗತ ಆಚರಣೆಗಳಿಂದ,ಪದ್ಧತಿಯಿಂದ ಹೊರ ಬಂದು,ವಿಚಾರ ವಾದಗಳಿಗೆ ತಮ್ಮ ಬುದ್ಧಿಮತ್ತೆಯನ್ನು ಒಡ್ಡಿಕೊಂಡಿದ್ದರು. ಈ ಮುಖೇನ ಹೊಸ ತಲೆಮಾರಿಗೆ ಹೊಸ ಸಂದೇಶವನ್ನು ರವಾನಿಸಿದರು.

ಕಾರಂತರ ಕಾದಂಬರಿಗಳುದ್ದಕ್ಕೂ ಪರಿಸರದ ಚಿತ್ರಣ ಗಾಢವಾಗಿದೆ. ನಿಜ ಜೀವನದಲ್ಲೂ ಪರಿಸರದ ಉಳಿವಿಗೆ ಹೋರಾಡಿದ ಕಾರಂತರು, ಕೈಗಾ ಅಣುವಿದ್ಯುತ್ ಸ್ಥಾವರದ ವಿರುದ್ಧ ಹೋರಾಟಕ್ಕೆ ನಾಯಕತ್ವ ವಹಿಸಿದ್ದು ಪ್ರಖ್ಯಾತವಾಗಿದೆ. ಮಕ್ಕಳಿಂದ, ವಯೋವೃದ್ಧರವರೆಗೆ ಸಾಹಿತ್ಯ ಕೃಷಿ ಮಾಡಿದ, ಚಿಂತಿಸಿದ ಕಾರಂತರು ಇಡೀ ದೇಶದ ದೊಡ್ಡ ನಿಧಿಯಾಗಿದ್ದರು. ಕರ್ನಾಟಕದ ಮೂಲೆ ಮೂಲೆ, ಭಾರತದ ಬಹುತೇಕ ಸ್ಥಳಗಳು, ವಿದೇಶಗಳ ಸಾಂಸ್ಕೃತಿಕ ಕೇಂದ್ರಗಳಿಗೆ ಸುತ್ತುತ್ತ, ತಮ್ಮ ಕೊನೆಗಾಲದವರೆಗೂ ಪ್ರವಾಸ ಮಾಡಿದ್ದರು. ವಯಸ್ಸಿನ ದಣಿವು ಮರೆತು, ಜ್ಞಾನದಾರಿಯಲ್ಲಿ ಜನರನ್ನು ಕೊಂಡೊಯ್ದ ಪ್ರೀತಿಯ “ಕಾರಂತಜ್ಜ” ಆಗಿದ್ದರು.

ವಿಶ್ವ ಪ್ರೇಮಿ ಹಾಗೂ ಮಹಾ ಮಾನವತಾವಾದಿ ಆಗಿದ್ದ ಕಾರಂತರು ಜ್ಞಾನ ಕ್ಷಿತಿಜವನ್ನು ಎಂಟು ದಿಕ್ಕಿಗೆ ಚಾಚಿದ ಅಕ್ಷರ ಪ್ರೇಮಿಯಾಗಿದ್ದರು.


ಬರೋಬ್ಬರಿ 98 ವರ್ಷಗಳ ಕಾಲ ಬದುಕಿದ್ದ ಕಾರಂತರು, ತಮ್ಮ ಜೀವಿತಾವಧಿಯಲ್ಲಿ ಸುಮಾರು 427 ಪುಸ್ತಕಗಳನ್ನು ರಚಿಸಿದರು. ಅವುಗಳಲ್ಲಿ ಕಾದಂಬರಿಗಳು 47. ತಮ್ಮ 96ನೆಯ ವಯಸ್ಸಿನಲ್ಲೂ ಹಕ್ಕಿಗಳ ಕುರಿತು ಒಂದು ಪುಸ್ತಕವನ್ನು ಬರೆದಿದ್ದು, ಇದು ವಿಶ್ವ ದಾಖಲೆಗೆ ಅರ್ಹವಾಗಿರುವ ಒಂದು ಸಾಧನೆ ಎನ್ನಬಹುದು. ಸಾಹಿತಿಯಾಗಿ ಶಿವರಾಮ ಕಾರಂತರು ಪ್ರಸಿದ್ಧಿಯಾಗಿರುವಂತೆ, ಇತರ ಕ್ಷೇತ್ರಗಳಲ್ಲೂ ಅಪಾರ ಸಾಧನೆ ಮಾಡಿದವರು.

ಕರ್ನಾಟಕದ ಪ್ರಮುಖ ಕಲೆಯಾದ ಯಕ್ಷಗಾನದ ಉಳಿವಿಗೆ ಪ್ರಯತ್ನಿಸಿ, ಅದರಲ್ಲಿ ಹಲವು ಪ್ರಯೋಗಗಳನ್ನು ಮಾಡಿದ್ದರು. ತಾವೇ ಸ್ವತಃ ನೃತ್ಯವನ್ನು , ಬ್ಯಾಲೆಯಲ್ಲೂ ಕಲಿತು ಗಂಭೀರ ಪ್ರಯೋಗ ಮತ್ತು ಪ್ರಯತ್ನ ಮಾಡಿದ್ದರು.

ಪ್ರಶಸ್ತಿಗಳು
1955ರಲ್ಲಿ ಮೈಸೂರಿನಲ್ಲಿ ನಡೆದ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ.
1958ಸ್ವೀಡನ್ ನ “ಲಾ ಅರ್ಕೈವ್ ಇಂಟರ್ ನ್ಯಾಷನಲ್” ಸಂಸ್ಠೆಯು ಕಾರಂತರು ಯಕ್ಷಗಾನಕ್ಕಾಗಿ ಮಾಡಿದ ಸೇವೆಗಾಗಿ ಕಂಚಿನ ಪದಕ ನೀಡಿ ಗೌರವ.
1959ರಲ್ಲಿ ಯಕ್ಷಗಾನ ಬಯಲಾಟ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ.
1975ರಲ್ಲಿ ಭಾರತ ಸರ್ಕಾರದ ಪದ್ಮಭೂಷಣ ಪ್ರಶಸ್ತಿ.
1978ರಲ್ಲಿ ಮೂಕಜ್ಜಿಯ ಕನಸುಗಳು ಕೃತಿಗೆ ಜ್ಞಾನಪೀಠ ಪ್ರಶಸ್ತಿ.
1989ರಲ್ಲಿ ಮೈ ಮನಗಳ ಸುಳಿಯಲ್ಲಿ ಕಾದಂಬರಿಗೆ ಪಂಪ ಪ್ರಶಸ್ತಿ.
ಕರ್ನಾಟಕ, ಮೈಸೂರು ವಿಶ್ವವಿದ್ಯಾನಿಲಯದಿಂದ ಗೌರವ ಡಾಕ್ಟರೇಟ್ ಪ್ರಶಸ್ತಿ.


1975ರಲ್ಲಿ ಭಾರತ ಸರ್ಕಾರವು ಕಾರಂತರಿಗೆ “ಪದ್ಮಭೂಷಣ” ಪ್ರಶಸ್ತಿಯನ್ನು ನೀಡಿ ಗೌರವಿಸಿತ್ತು. ಆದರೆ ಸರ್ಕಾರ ತುರ್ತುಪರಿಸ್ಥಿತಿಯನ್ನು ಘೋಷಿಸಿದಾಗ ಅದನ್ನು ಕಾರಂತರು ವಿರೋಧಿಸಿ ಪ್ರಶಸ್ತಿಯನ್ನು ಸರ್ಕಾರಕ್ಕೆ ಹಿಂದಿರುಗಿಸಿ ಪ್ರತಿಭಟಿಸಿದರು.


ನಿರಂತರ ಪ್ರಯೋಗಶೀಲರಾಗಿದ್ದ ಕೋಟ ಶಿವರಾಮ ಕಾರಂತ ಅವರು ಕನ್ನಡ ಚಿತ್ರರಂಗದಲ್ಲಿ ಕೂಡ ತಮ್ಮ ಪ್ರಯೋಗವನ್ನು ಆರಂಭ ಮಾಡಿದ್ದು. ಮೂಕಿ ಚಿತ್ರ ನಿರ್ಮಾಣಕ್ಕೆ ಕೈಹಾಕುವ ಮೂಲಕ. ಹರಿಜನರ ಬದುಕನ್ನು ಆಧರಿಸಿದ್ದ ಡೊಮಿಂಗೋ(1930) ಚಿತ್ರವನ್ನು ತಾವೇ ಚಿತ್ರೀಕರಿಸಿ, ಅಭಿನಯಿಸಿ ನಿರ್ದೇಶಿಸಿದ್ದರು. ಅನಂತರ ಭೂತರಾಜ್ಯ (1931) ಎಂಬ ಮೂಕಿ ಚಿತ್ರಗಳನ್ನು ಸಹ ನಿರ್ದೇಶಿಸಿದ್ದರು.


ನಿಸರ್ಗದ ಚೆಲುವಿನೊಂದಿಗೆ ಅವಿರತವಾಗಿ ಸಾಹಿತ್ಯ ಸೃಷ್ಟಿಸಿದವರು ಕಾರಂತರು. ದೂರದ ಕೋಟದಿಂದ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿಗೆ ಬಂದು ಪ್ರಕೃತಿಯ ಮಡಿಲಿನಲ್ಲಿ ಜೀವನದ ಹೋರಾಟದೊಂದಿಗೆ, ಅರ್ಥಪೂರ್ಣ ಬದುಕು ಕಳೆದ ಸಾಹಿತ್ಯ ದಿಗ್ಗಜ ಡಾ. ಶಿವರಾಮಕಾರಂತರು 1997, ಡಿಸೆಂಬರ್ 09 ರಂದು ನಿಧನ ಹೊಂದಿದರು.‌


ಡಾ.ಗುರುಪ್ರಸಾದ ಹವಲ್ದಾರ್

  • ಮೂಲತಃ ಉಪನ್ಯಾಸಕರು. ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲ್ಲೂಕಿನ ಮರಿಯಮ್ಮನ ಹಳ್ಳಿಯವರು. ಪ್ರಸ್ತುತ ಹಗರಿಬೊಮ್ಮನಹಳ್ಳಿ ಜಿವಿಪಿಪಿ ಪದವಿ ಕಾಲೇಜನಲ್ಲಿ ಕನ್ನಡ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತ ಜೊತೆಗೆ ಪತ್ರಿಕೆಗಳಿಗೆ ವೆಬ್ ನ್ಯೂಸ್ ಪೋಟ್೯ಲ್ ಗಳಿಗೆ ಲೇಖನ ಬರೆಯುತ್ತಿದ್ದಾರೆ.

Tags: birth anniversarycknewsnowJnanpith AwardkarnatakaKota Shivarama KaranthShivarama Karanth
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಒಬ್ಬರೇ ಒಬ್ಬರು! ಅವರೇ ಭಾರತರತ್ನ ಕರ್ಪೂರಿ ಠಾಕೂರ್.., ಹರಿದ ಕೋಟು, ಹರಿದ ಚಪ್ಪಲಿಯೊಂದಿಗೆ ಸಾಗಿದ ಮಹಾನ್‌ ದಂತಕಥೆ!!

ಒಬ್ಬರೇ ಒಬ್ಬರು! ಅವರೇ ಭಾರತರತ್ನ ಕರ್ಪೂರಿ ಠಾಕೂರ್.., ಹರಿದ ಕೋಟು, ಹರಿದ ಚಪ್ಪಲಿಯೊಂದಿಗೆ ಸಾಗಿದ ಮಹಾನ್‌ ದಂತಕಥೆ!!

by cknewsnow desk
January 27, 2024
0

"ಒಬ್ಬರ ಜನನವು ಅವರ ಹಣೆಬರಹವನ್ನು ನಿಶ್ಚಯಿಸುವುದಿಲ್ಲ" ಎಂದ ಜನ ನಾಯಕ; ಅಪ್ಪಟ ಭಾರತರತ್ನ, ಮೀಸಲು ಕೊಟ್ಟು ಬದುಕು ಕಟ್ಟಿಕೊಟ್ಟ ಭಾರತದ ಭಾಗ್ಯವಿದಾತ

ಸರ್ದಾರ್ ಪಟೇಲರ ದೃಢ ಸಂಕಲ್ಪ, ಮುನ್ಷಿ ಅವರ ಪ್ರಚಂಡ ಧೈರ್ಯ ಮತ್ತು ಬಾಬು ರಾಜೇಂದ್ರ ಪ್ರಸಾದರ ರಾಜಿ ಇಲ್ಲದ ನಿಲುವು

ಸರ್ದಾರ್ ಪಟೇಲರ ದೃಢ ಸಂಕಲ್ಪ, ಮುನ್ಷಿ ಅವರ ಪ್ರಚಂಡ ಧೈರ್ಯ ಮತ್ತು ಬಾಬು ರಾಜೇಂದ್ರ ಪ್ರಸಾದರ ರಾಜಿ ಇಲ್ಲದ ನಿಲುವು

by cknewsnow desk
January 21, 2024
0

ಅಯೋಧ್ಯಾ ಆಂದೋಲನ ಭಾರತದ ಅಂತರಾತ್ಮದ ಧ್ವನಿ; ಎಲ್.ಕೆ.ಆಡ್ವಾಣಿ ಅವರು ತಮ್ಮ ಆತ್ಮಕಥೆ My Country My Life ಕೃತಿಯಲ್ಲಿ ಬರೆದಿರುವ ಮಹತ್ವದ ಲೇಖನ ಸಿಕೆನ್ಯೂಸ್‌ ನೌ ನಲ್ಲಿ..

ಶ್ರೀರಾಮಪ್ರಭುವೇ ಕ್ಷಮಿಸು! ನಿನ್ನ ಹೆಸರಿಟ್ಟುಕೊಂಡವರೆಲ್ಲ ನಿನ್ನವರಲ್ಲ!!

ಅಯೋಧ್ಯಾ ಆಂದೋಲನ ಭಾರತದ ಅಂತರಾತ್ಮದ ಧ್ವನಿ; ಮಂದಿರಕ್ಕೆ ಅಂಕುರಾರ್ಪಣೆ ಆಗಿದ್ದು ಹೇಗೆ?

by cknewsnow desk
January 19, 2024
0

ಎಲ್.ಕೆ.ಆಡ್ವಾಣಿ ಅವರು ತಮ್ಮ ಆತ್ಮಕಥೆ My Country My Life ಕೃತಿಯಲ್ಲಿ ಬರೆದಿರುವ ಮಹತ್ವದ ಲೇಖನ ಸಿಕೆನ್ಯೂಸ್‌ ನೌ ನಲ್ಲಿ..

ನಿಡುಮಾಮಿಡಿ ಶ್ರೀಗಳು: ಕಾವಿಯೊಳಗೆ ನಿಗಿನಿಗಿ ಹೊಳೆಯುವ ಕೆಂಪುಸೂರ್ಯ

ನಿಡುಮಾಮಿಡಿ ಶ್ರೀಗಳು: ಕಾವಿಯೊಳಗೆ ನಿಗಿನಿಗಿ ಹೊಳೆಯುವ ಕೆಂಪುಸೂರ್ಯ

by cknewsnow desk
December 28, 2023
0

ನಿಜದ ಜಾಡು ಹಿಡಿದು ಹೊರಟ ನಿಡುಮಾಮಿಡಿ ಶ್ರೀಗಳ ಹೋರಾಟಕ್ಕೆ 33 ವರ್ಷ

ಅಖಂಡ ಭಾರತದ ಅಷ್ಟದಿಕ್ಕುಗಳ ಆಮೂಲಾಗ್ರ ಅಭಿವೃದ್ಧಿಗೆ ಸುವರ್ಣ ಅಧ್ಯಾಯ ಬರೆದವರೇ ಅಜಾತಶತ್ರು ಅಟಲ್‌ ಬಿಹಾರಿ ವಾಜಪೇಯಿ

ಅಟಲ್ ಎಂದರೆ ಅಜಾತಶತ್ರು

by cknewsnow desk
December 25, 2023
0

ಇಂದು ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನ, ಉತ್ತಮ ಆಡಳಿತ ದಿನ by Dr.Gurupeasad Hawaldar ಜಾಗತಿಕ ಮಟ್ಟದ ಶ್ರೇಷ್ಠ ನಾಯಕರ ಸಾಲಿನಲ್ಲಿ ಗೌರವಿಸಲ್ಪಡುವ  ನಿಸ್ವಾರ್ಥ ರಾಜಕಾರಣಿ,...

ಶಿಕ್ಷಣ, ಶಿಕ್ಷಕ ಮತ್ತು ಬದಲಾವಣೆ; ನೂತನ ಶಿಕ್ಷಣ ನೀತಿಯ ಹೊತ್ತಿನಲ್ಲಿ ಓಶೋ ಜೋಶ್..

ಓಶೋ: ಬೆರಗು, ಬೆಡಗು ಮತ್ತು ವಿಸ್ಮಯ

by cknewsnow desk
December 11, 2023
0

ಇಂದು ಓಶೋ ಜನ್ಮದಿನ

Next Post
ಹೂ ಈಸ್ ಸಿದ್ದರಾಮಯ್ಯ?

ಜೆಡಿಎಸ್‌ ವ್ಹೀಕ್‌ ಆಗುತ್ತಿದೆ ಎಂದ ಪ್ರತಿಪಕ್ಷ ನಾಯಕನಿಗೆ ಹೆಚ್‌ಡಿಕೆ ತಿರುಗೇಟು

Leave a Reply Cancel reply

Your email address will not be published. Required fields are marked *

Recommended

ರಾತ್ರಿ ಪುನರ್ಜನ್ಮದ ಬಗ್ಗೆ ಅಂಗೇನು ಎಂದಿದ್ದ ಅಪ್ಪ, ಬೆಳಗ್ಗೆ ಹೊತ್ತಿಗೆ ಹೊರಟುಬಿಟ್ಟಿದ್ದರು!!

ರಾತ್ರಿ ಪುನರ್ಜನ್ಮದ ಬಗ್ಗೆ ಅಂಗೇನು ಎಂದಿದ್ದ ಅಪ್ಪ, ಬೆಳಗ್ಗೆ ಹೊತ್ತಿಗೆ ಹೊರಟುಬಿಟ್ಟಿದ್ದರು!!

5 years ago
ಇಸ್ರೋ ನೂತನ ಮುಖ್ಯಸ್ಥರಾಗಿ ಎಸ್ ಸೋಮನಾಥ್

ಇಸ್ರೋ ನೂತನ ಮುಖ್ಯಸ್ಥರಾಗಿ ಎಸ್ ಸೋಮನಾಥ್

3 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ