• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಮುಜರಾಯಿ ಇಲಾಖೆ ಅರ್ಚಕರು, ದೇವಾಲಯ ನೌಕರರಿಗೆ ದಸರಾ ಬಂಪರ್

cknewsnow desk by cknewsnow desk
October 12, 2021
in STATE
Reading Time: 1 min read
0
ಮುಜರಾಯಿ ಇಲಾಖೆ ಅರ್ಚಕರು, ದೇವಾಲಯ ನೌಕರರಿಗೆ ದಸರಾ ಬಂಪರ್
981
VIEWS
FacebookTwitterWhatsuplinkedinEmail

6ನೇ ವೇತನ ಆಯೋಗ, ಆರೋಗ್ಯ ವಿಮೆ ಜಾರಿಗೆ ಕ್ರಮ: ಶಶಿಕಲಾ ಜೊಲ್ಲೆ

ಬೆಂಗಳೂರು: ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅರ್ಚಕರು ಹಾಗೂ ನೌಕರರಿಗೆ ಮುಜರಾಯಿ ಇಲಾಖೆ ಸಚಿವರು ದಸರಾ ಹಬ್ಬಕ್ಕೆ ಬಂಪರ್ ಕೊಡುಗೆ ನೀಡಿದ್ದಾರೆ.

ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅರ್ಚಕರಿಗೆ ವಿಮಾ ಯೋಜನೆ ಹಾಗೂ ನೌಕರರಿಗೆ 6 ನೇ ವೇತನ ಆಯೋಗದ ಶಿಫಾರಸ್ಸಿನಂತೆ ವೇತನ ಜಾರಿಗೆ ಆದೇಶ ಹೊರಡಿಸಲಾಗಿದೆ ಎಂದು ಮುಜರಾಯಿ ಹಜ್ ಮತ್ತು ವಕ್ಪ್ ‌ ಸಚಿವರಾದ ಶಶಿಕಲಾ ಜೊಲ್ಲೆಯವರು ತಿಳಿಸಿದ್ದಾರೆ.

ಮಂಗಳವಾರ ವಿಕಾಸಸೌಧದಲ್ಲಿ ಮುಜರಾಯಿ ಇಲಾಖೆಯಲ್ಲಿ ಜಾರಿಗೆ ತಂದ ಹೊಸ ಯೋಜನೆಗಳ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಮುಜರಾಯಿಇಲಾಖೆಯವ್ಯಾಪ್ತಿಗೆಒಳಪಡುವದೇವಸ್ಥಾನಗಳಲ್ಲಿ ಪೂಜೆಸಲ್ಲಿಸುವ ಅರ್ಚಕರು ಹಾಗೂ ದೇವಾಲಯ ನೌಕರರು ಆರೋಗ್ಯಸಮಸ್ಯೆಗೆ ಒಳಗಾದರೆ ಅವರಿಗೆ ರಕ್ಷಣೆ ಒದಗಿಸಲು ನಾನು ಇಲಾಖೆಯ ಜವಾಬ್ದಾಾರಿ ತೆಗೆದುಕೊಂಡ ಮೇಲೆ ಅವರದ ರಕ್ಷಣೆಗೆ ವಿನೂತನ ವಿಮೆ ಯೋಜನೆ ಜಾರಿಗೊಳಿಸಿದ್ದು, ಅರ್ಚಕರು ಹಾಗೂ ಇಲಾಖೆ ನೌಕರರಿಗೆ ವಿಮೆ ಜಾರಿಗೆ ತರಲು ತೀರ್ಮಾನಿಸಿದ್ದೇನೆ. ಇದರಿಂದ ಮುಜರಾಯಿ ಇಲಾಖೆಯ ಸುಮಾರು 37,000 ಸಿಬ್ಬಂದಿಗೆ ಪ್ರಯೋಜನವಾಗಲಿದೆ ಎಂದು ಸಚಿವರು ಹೇಳಿದರು.

ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಧಾರ್ಮಿಕ ಸಂಸ್ಥೆಗಳಲ್ಲಿ ಈಗಾಗಲೇ 5ನೇವೇತನ ಆಯೋಗದ ಶಿಫಾರಸ್ಸಿನಂತೆ ವೇತನ ಪಡೆದು ಕರ್ತವ್ಯ ನಿರ್ವಹಿಸುತ್ತಿರುವ ನೌಕರರು ಹಾಗೂ ಅರ್ಚಕರಿಗೆ 6ನೇವೇತನ ಆಯೋಗದ ವೇತನ ದೊರಕಿಸಿಕೊಡುವಂತೆ ಅರ್ಚಕರಿಂದ ಬಹಳ ದಿನಗಳಿಂದ ಬೇಡಿಕೆ ಇತ್ತು. ನಾನು ಇಲಾಖೆ ಜವಾಬ್ದಾರಿ ವಹಿಸಿಕೊಂಡ ನಂತರ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ತ್ವರಿತಗತಿಯಲ್ಲಿ ಅರ್ಚರಿಕರಿಗೆ 6ನೇ ವೇತನ ಆಯೋಗದ ವೇತನ ನೀಡಲು ತೀರ್ಮಾನಿಸಿದ್ದೇನೆ. ಕೆಲವು ಷರತ್ತುಗಳನ್ನು ವಿಧಿಸಿ, ದೇವಾಲಯದ ವಾರ್ಷಿಕ ಆದಾಯದಲ್ಲಿ ನೌಕರರ ವೇತನ ಶೇ35%ರಷ್ಟುಮೀರದಂತೆನೌಕರರನ್ನು6ನೇವೇತನಆಯೋಗದವ್ಯಾಪ್ತಿಗೆಒಳಪಡುವಂತೆಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಚಿವರು ತಿಳಿಸಿದರು.ಇದರಿಂದ ಮುಜರಾಯಿ ಇಲಾಖೆಯ ಸುಮಾರು 1034 ಸಿಬ್ಬಂದಿಗೆ ಪ್ರಯೋಜನವಾಗಲಿದೆ. ಇದಕ್ಕೆ 20 ಕೋಟಿ ರೂ. ವೆಚ್ಚವಾಗಲಿದ್ದು, ಆಯಾ ದೇವಸ್ಥಾನಗಳ ನಿಧಿಯಿಂದ ಒದಗಿಸಲಾಗುವುದು. ಸರ್ಕಾರಕ್ಕೆ ಯಾವುದೇ ಆರ್ಥಿಕ ಹೊರೆಯಾಗುವುದಿಲ್ಲ ಎಂದು ಸಚಿವರು ಹೇಳಿದರು.

ಸಿ ದರ್ಜೆಯ ದೇವಸ್ಥಾನಗಳ ಅರ್ಚಕರಿಗೆ 6 ವೇತನ ಆಯೋಗದ ಶಿಫಾರಸ್ಸಿನ ಪ್ರಕಾರ ವೇತನ ನೀಡುಲಾಗುತ್ತದೆಯೇ ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸಿ ದರ್ಜೆಯ ಬಹುತೇಕ ದೇವಸ್ಥಾನಗಳಲ್ಲಿ ಕಾಯಂ ಅರ್ಚಕರು ಇರುವುದಿಲ್ಲ. ಈ ಬಗ್ಗೆ ಎಲ್ಲ ದೇವಸ್ಥಾಗಳಿಂದ ಮಾಹಿತಿ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುವುದು. ಎಲ್ಲ ದೇವಸ್ಥಾನಗಳಿಗೆ ತಸ್ತಿಕ ಹಣ 19.ಕೋಟಿ ರೂ. ಬಾಕಿ ಇದ್ದು ಶೀಘ್ರವೇ ಹಣ ಬಿಡುಗಡೆ ಮಾಡಲಾಗುವುದು ಎಂದು ಸಚಿವರು ತಿಳಿಸಿದರು.

ಇನ್ನು ಮುಜರಾಯಿಇಲಾಖೆ ವ್ಯಾಪ್ತಿಗೆ ಒಳಪಡುವ ರಾಜ್ಯದ ಎಲ್ಲ ದೇವಸ್ಥಾನಗಳಆಸ್ತಿ ಮಾರ್ಗನಕ್ಷೆ, ಅಲ್ಲಿನಸೇವೆಗಳಸಂಪೂರ್ಣಮಾಹಿತಿಯನ್ನು ಆನ್‌ಲೈನ್‌ಮೂಲಕತಿಳಿದುಕೊಳ್ಳುವಂತೆಐಟಿಎಂಎಸ್ (ಇಂಟಿಗ್ರೆಟೆಡ್ ಡೆವೆಲಪ್ ಮೆಂಟ್ ಮ್ಯಾನೇಜ್ ಮೆಂಟ್ ಸಿಸ್ಟಮ್) ಜಾರಿಗೆ ತೀರ್ಮಾನಿಸಲಾಗಿದೆ ಎಂದು ಸಚಿವರು ತಿಳಿಸಿದರು. ಇದೊಂದು ವಿನೂತನ ಯೋಜನೆಯಾಗಿದ್ದು, ರಾಜ್ಯದಲ್ಲಿ ಇದನ್ನು ಮೊದಲ ಬಾರಿಗೆ ಜಾರಿಗೆ ತರಲಾಗುತ್ತಿದೆ. ಇದರಿಂದ ರಾಜ್ಯದ ದೇವಾಲಯಗಳ ಮಾಹಿತಿ ಒಂದೆಡೆ ದೊರೆಯುವುದರಿಂದ ದೇಶ-ವಿದೇಶಗಳಿಂದ ಬರುವ ಭಕ್ತಾಧಿಗಳಿಗೆ ಅನುಕೂಲವಾಗಲಿದೆ. ದೇವಾಲಯಗಳ ಆದಾಯ ವೃದ್ಧಿಿಗೂ ಇದು ಪೂರಕವಾಗಲಿದೆ ಎಂದು ವಿವರಿಸಿದರು.

ಇಂದು ವಿಕಾಸಸೌಧದ ನನ್ನ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ, ನಮ್ಮ ಮುಜರಾಯಿ ಇಲಾಖೆಯಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾರ್ಯ ಹಾಗೂ ವಿಶೇಷ ಯೋಜನೆಗಳನ್ನು ಘೋಷಣೆ ಮಾಡಿರುವ ಕುರಿತು ಪತ್ರಕರ್ತ ಮಿತ್ರರಿಗೆ ಮಾಹಿತಿ ನೀಡಲಾಯಿತು.@CMofKarnataka | @BSBommai | @BJP4India | @BJP4Karnataka | @DDChandanaNews | @KarnatakaVarthe pic.twitter.com/qyte5iI25o

— Shashikala Jolle (Modi Ka Parivar) (@ShashikalaJolle) October 12, 2021

ವಿಜಯದಶಮಿ ದಿನ ವಿಶೇಷ ಪೂಜೆ

ವಿಶ್ವದಲ್ಲಿ ಕೊರೊನಾ ಎರಡು ಅಲೆಗಳಿಂದ ಸಾಕಷ್ಟು ಜನರ ಜೀವ ಹಾನಿಯಾಗಿದೆ. ಈಗ ಮೂರನೆ ಅಲೆ ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರಲಿದೆ ಎಂದು ತಜ್ಞರು ಅಭಿಪ್ರಾಾಯ ಪಟ್ಟಿದ್ದಾರೆ. ನಾವು ನಮ್ಮ ಇಲಾಖೆ ವ್ಯಾಪ್ತಿಯಲ್ಲಿ ಬರುವ ಎಲ್ಲ ವರ್ಗದ ದೇವಸ್ಥಾನಗಳಲ್ಲಿ ವಿಜಯದಶಮಿ ಹಬ್ಬದ ಪ್ರಯುಕ್ತ ಅಕ್ಟೋಬರ್ 15 ರಂದು ಎಲ್ಲ ಜನರು ಹಾಗೂ ಮಕ್ಕಳ ಆರೋಗ್ಯ ರಕ್ಷಣೆಗಾಗಿ ಪ್ರಾರ್ಥಿಸಲು ವಿಶೇಷ ಪೂಜೆ ಸಲ್ಲಿಸಲು ಎಲ್ಲ ದೇವಸ್ಥಾನಗಳಿಗೆ ಸುತ್ತೋಲೆ ಹೊರಡಿಸಲಾಗಿದೆ.

ಹಿಂದು ಧರ್ಮ ಶಾಸ್ತ್ರ ಪುರಾಣದಲ್ಲಿ ವಿಜಯದಶಮಿಯನ್ನು ವಿಶೇಷ ದಿನವೆಂದು ಪರಿಗಣಿಸಲಾಗುತ್ತದೆ. ಇದು ದುಷ್ಟ ಶಕ್ತಿಯನ್ನು ಸಂಹರಿಸಿ ವಿಜಯವನ್ನು ಆಚರಿಸುವ ದಿನ. ಆದ್ದರಿಂದ ಈ ದಿನ ಶ್ರೀ ಭಗವತಿ ಮತ್ತು ಭಗವಂತನನ್ನು ವಿಶೇಷವಾಗಿ ಪ್ರಾರ್ಥಿಸಿ ಪೂಜಿಸಿದರೆ. ವಿಶೇಷ ಫಲ ಹೊಂದ ಬಹುದೆಂದು ಶಾಸ್ತ್ರ ವಿಧಿತವಾಗಿದೆ. ಅಲ್ಲದೇ ಭಕ್ತರ ನಂಬಿಕೆಯೂ ಆಗಿರುವುದರಿಂದ ಪ್ರಾಕೃತಿಕವಾಗಿ ಯಾರಿಗೂ ದಷ್ಪರಿಣಾಮ ಆಗದಂತೆ ವಿಜಯ ದಶಮಿಯ ದಿನ ಅಕ್ಟೋಬರ 15 ರಂದು ಎಲ್ಲ ಮುಜರಾಯಿ ದೇವಸ್ಥಾನಗಳಲ್ಲಿ ಕೊರೊನಾ ಸಂಕಟ ದೂರ ಮಾಡಿ ಜನತೆಯ ಆರೋಗ್ಯ ಕಾಯುವಂತೆ ವಿಶೇಷ ಪೂಜೆ ನೆರವೇರಿಸಲು ಸೂಚಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.

ಇದೇ ವೇಳೆ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಸ್ಥಾನಗಳ ಪ್ರವೇಶಕ್ಕೆ ಡ್ರೆಸ್ ಕೋಡ್ ಮಾಡುವ ಬಗ್ಗೆ ನನ್ನ ಮುಂದೆ ಯಾವುದೆ ಪ್ರಸ್ತಾಪ ಬಂದಿಲ್ಲ. ಧಾರ್ಮಿಕ ಪರಿಷತ್ ನಲ್ಲಿ ಚರ್ಚೆಯಾಗಿದ್ದರೆ ಮಾಹಿತಿ ಪಡೆದು ಪರಿಶೀಲನೆ ಮಾಡಲಾಗುವುದು.ಚಿಕ್ಕಮಗಳೂರಿನ ಬಾಬಾ ಬುಡನ್ ಗಿರಿ ದತ್ತ ಪೀಠದಲ್ಲಿ ಮುಜಾವರ ಅವರನ್ನು ನೇಮಕ ಮಾಡಿದ್ದನ್ನು ರದ್ದು ಪಡಿಸಿರುವ ಹೈಕೋರ್ಟ್ ಆದೇಶದ ಬಗ್ಗೆ ಸಂಪುಟ ಉಪ ಸಮಿತಿಯಲ್ಲಿ ಚರ್ಚೆಯಾಗಿದೆ ಎಂದು ಸಚಿವರಿಗೆ ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಕಂದಾಯ ಹಾಗೂ ಮುಜರಾಯಿ ಇಲಾಖೆ ಪ್ರಧಾನ ಕಾರ್ಯದರ್ಶಿ ತುಷಾರ್ ಗಿರಿನಾಥ, ಮುಜರಾಯಿ ಇಲಾಖೆಯ ಆಯುಕ್ತರಾದ ರೋಹಿಣಿ ಸಿಂಧೂರಿ ಉಪಸ್ಥಿತರಿದ್ದರು.

Tags: cknewsnowkarnatakamuzrai departmentmuzrai templenewssalaryshashikala jolle
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಗುಡಿಬಂಡೆ ಅಮಾನಿ ಭೈರಸಾಗರಕ್ಕೆ ಬಾಗೀನ ಅರ್ಪಣೆ

ಗುಡಿಬಂಡೆ ಅಮಾನಿ ಭೈರಸಾಗರಕ್ಕೆ ಬಾಗೀನ ಅರ್ಪಣೆ

Leave a Reply Cancel reply

Your email address will not be published. Required fields are marked *

Recommended

ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಎಸ್‌ಸಿ ಒಳ ಮೀಸಲಿಗೆ ಕೈ ಹಾಕಿದ ಸರಕಾರ

ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಎಸ್‌ಸಿ ಒಳ ಮೀಸಲಿಗೆ ಕೈ ಹಾಕಿದ ಸರಕಾರ

2 years ago
ಮನುಷ್ಯನ ನೆಮ್ಮದಿಗೆ ಅಧ್ಯಾತ್ಮ ಅತಿ ಮುಖ್ಯ; ಚಿಂತೆ ಬಿಟ್ಟರೆ ಬದುಕು ಸುಂದರ ಎಂದ ಸ.ರಘುನಾಥ

ಮನುಷ್ಯನ ನೆಮ್ಮದಿಗೆ ಅಧ್ಯಾತ್ಮ ಅತಿ ಮುಖ್ಯ; ಚಿಂತೆ ಬಿಟ್ಟರೆ ಬದುಕು ಸುಂದರ ಎಂದ ಸ.ರಘುನಾಥ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ