• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home GUEST COLUMN

ಯಾವ ಕನಸು ನಿಮ್ಮನ್ನು ನಿದ್ದೆ ಮಾಡಲು ಬಿಡುವುದಿಲ್ಲವೋ ಅದೇ ನಿಜವಾದ ಕನಸು

cknewsnow desk by cknewsnow desk
October 15, 2021
in GUEST COLUMN, STATE
Reading Time: 2 mins read
0
ಯಾವ ಕನಸು ನಿಮ್ಮನ್ನು ನಿದ್ದೆ ಮಾಡಲು ಬಿಡುವುದಿಲ್ಲವೋ ಅದೇ ನಿಜವಾದ ಕನಸು

APJ Abdul kalam Photo courtesy: Wikipedia

1.1k
VIEWS
FacebookTwitterWhatsuplinkedinEmail

ಇಂದು ಮಹಾನ್‌ ವಿಜ್ಞಾನಿ, ಜನರ ರಾಷ್ಟ್ರಪತಿ ಅಬ್ದುಲ್‌ ಕಲಾಂ ಅವರ ಜಯಂತಿ‌

ಡಾ.ಎಪಿಜೆ ಅಬ್ದುಲ್‌ ಕಲಾಂ. ಭಾರತದ ಕಂಡ ಸರ್ವಶ್ರೇಷ್ಟ ಸ್ಫೂರ್ತಿ, ಮಾರ್ಗದರ್ಶನ ಹಾಗೂ ವಿನಮ್ರತೆ, ವಿದ್ವತ್ತಿಕೆಯ ಮೇರು. ಇಂದು ಆ ಮಹಾನ್‌ ಚೇತನದ ಜನ್ಮದಿನ. ನಮ್ಮ ಅಂಕಣಕಾರ ಡಾ.ಗುರುಪ್ರಸಾದ್‌ ರಾವ್‌ ಹವಲ್ದಾರ್‌ ಅವರಿಂದ ಅಕ್ಷರ ನಮನ

ಇಂದು ನಮ್ಮ ದೇಶದ ಮಹಾನ್ ವಿಜ್ಞಾನಿ,ಮಿಸೈಲ್ ಮ್ಯಾನ್’ ಎಂದೇ ಖ್ಯಾತರಾಗಿದ್ದ ಮಾಜಿ ರಾಷ್ಟ್ರಪತಿ ಡಾ.ಅಬ್ದುಲ್‌ ಕಲಾಂ ಅವರ 90ನೇ ವರ್ಷದ ಜನ್ಮದಿನ.

ಕಲಾಂ ಅವರು ಬಡತನದಿಂದ, ಸ್ವಂತ ಪರಿಶ್ರಮದಿಂದ ಸಾಧನೆಗೈದವರು. ದೇಶದ ಅತ್ಯುನ್ನತ ರಾಷ್ಟ್ರಪತಿ ಪದವಿಯನ್ನು ಅಲಂಕರಿಸಿದವರು. ಆದ್ದರಿಂದ ಇವರಿಗೆ ಬಡತನದ ನೋವು ಗೊತ್ತು, ಸಿರಿತನದ ಐಭೋಗವೂ ಗೊತ್ತಿದೆ. ತಾನು ಎಷ್ಟೇ ಉನ್ನತ ಹುದ್ದೆ ಏರಿದರು ಇವರಿಗೆ ವಿದ್ಯಾರ್ಥಿಗಳ ಮೇಲಿದ್ದ ಪ್ರೀತಿ ಮಾತ್ರ ಎಂದಿಗೂ ಕುಂದಲಿಲ್ಲ.

ಏಕತೆಯ ವಿರಳತೆ ಎಂದೇ ಕರೆಯಬಹುದಾಗಿದ್ದ ಸಂದರ್ಭದಲ್ಲಿ ಎಲ್ಲಾ ರಾಜಕೀಯ ಪಕ್ಷಗಳು ಒಟ್ಟಾಗಿ 2002ರಲ್ಲಿ ಭಾರತದ 11ನೇ ರಾಷ್ಟ್ರಪತಿಯಾಗಿ ಕಲಾಂ ಅವರನ್ನು ಆಯ್ಕೆ ಮಾಡಿದ್ದವು.

ರಾಷ್ಟ್ರಾಧ್ಯಕ್ಷರಾಗಿ ಭಾರತ ಮತ್ತು ಹೊರ ದೇಶಗಳಲ್ಲಿ ಕಲಾಂ ಅವರ ಘನತೆ ಮತ್ತು ಆಶಾವಾದ ದೊಡ್ಡ ಪ್ರಮಾಣದಲ್ಲಿ ಹರಡಿತು. ಯುಎನ್ ಮತ್ತು ಐರೋಪ್ಯ ಪಾರ್ಲಿಮೆಂಟ್‌ಗಳಲ್ಲಿ ಅವರ ಸ್ಫೂರ್ತಿದಾಯಕ ಭಾಷಣಗಳು ಎಲ್ಲರ ಮನಗೆದ್ದವು. ಅವರು ತಮ್ಮ ಸರಳತೆಯಿಂದಲೇ ಎಲ್ಲರ ಪ್ರೀತಿಪಾತ್ರರಾದರು.

ರಾಷ್ಟ್ರಾಧ್ಯಕ್ಷರಾಗಿ ತಮ್ಮ ಸೇವೆ ಪೂರ್ಣಗೊಳಿಸಿದ ನಂತರ, ಕಲಾಂ ಅವರು ಅತಿಥಿ ಪ್ರಾಧ್ಯಾಪಕರಾದರು ಮತ್ತು ಯುವ ಜನರಿಗಾಗಿ ಹಲವಾರು ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡರು.ಕಲಾಂ ಅವರು ಬರೆದ ‘ವಿಂಗ್ಸ್ ಆಫ್ ಫೈರ್’ ಮತ್ತು ‘ಇಂಡಿಯಾ 2020’ ಅಸಂಖ್ಯಾತ ಭಾರತೀಯರ ಪಾಲಿಗೆ ಸ್ಫೂರ್ತಿದಾಯಕ ಕೃತಿಗಳಾಗಿವೆ.

ಕಲಾಂ ಎಂದಿಗೂ ತಮ್ಮ ಜೀವನದ ಅನುಭವಗಳನ್ನೇ ವಿದ್ಯಾರ್ಥಿಗಳಿಗೆ ಬುದ್ದಿಪಾಠವಾಗಿ ಹೇಳುತ್ತಿದ್ದರು. ಇವರ ಸಾಕಷ್ಟು ಹೇಳಿಕೆಗಳಿಂದ ಪ್ರೇರಣೆ ಪಡೆದ ಅನೇಕರು ಇಂದು ದೇಶದ ಉನ್ನತ ಹುದ್ದೆಗಳನ್ನು ಅಲಂಕರಿಸಿದ್ದಾರೆ. ಕಲಾಂ ನುಡಿಮುತ್ತುಗಳು ಇಂದಿಗೂ ಜನರಿಗೆ ಸ್ಪೂರ್ತಿದಾಯಕ. ಕಲಾಂ ಅವರ ಜೀವನ ಅನುಭವದ ಸ್ಪೂರ್ತಿಯ ಮಾತುಗಳನ್ನು ಈ ಲೇಖನದಲ್ಲಿ ನೋಡೋಣ

ಡಾ.ಎಪಿಜೆ ಅಬ್ದುಲ್‌ ಕಲಾಂ / ಚಿತ್ರಗಳ ಕೃಪೆ ವಿಕೀಪೀಡಿಯಾ

“ಬದುಕಿನ ಯಶಸ್ಸು ಮತ್ತು ಸಂತೋಷದ ಅರಿವಾಗುವುದು ಕಷ್ಟಗಳನ್ನು ಅನುಭವಿಸಿದ ಮನುಷ್ಯನಿಗೆ ಮಾತ್ರ. ಈ ಜಗತ್ತು ನಾವು ಹೇಳುವ ಸತ್ಯಕ್ಕಿಂತ ಮಿಗಿಲಾಗಿ ನಮ್ಮ ಕುರಿತು ಇತರರು ಹೇಳುವ ಸುಳ್ಳನ್ನು ನಂಬುತ್ತದೆ. ಯಶಸ್ವಿಯಾಗುವ ನನ್ನ ನಿರ್ಣಯವು ಸಾಕಷ್ಟು ಬಲವಾಗಿದ್ದರೆ ವಿಫಲತೆಯು ನನ್ನನ್ನು ಏನು ಮಾಡಲಾಗದು. ಒಂದು ಪುಸ್ತಕ ನೂರು ಉತ್ತಮ ಸ್ನೇಹಿತರಿಗೆ ಸಮ, ಆದರೆ ಒಬ್ಬ ಒಳ್ಳೆಯ ಸ್ನೇಹಿತ ಒಂದು ಗ್ರಂಥಾಲಯಕ್ಕೆ ಸಮ. ಅತಿಯಾದ ಸಂತೋಷವಾದಾಗ ಅಥವಾ ಅತೀವ ದುಃಖವಾದಾಗ ಮಾತ್ರ ಕವನ ಕುಡಿಯೊಡೆಯುತ್ತದೆ.”

“ಸೋಲೆಂಬ ರೋಗಕ್ಕೆ ಕಠಿಣ ಪರಿಶ್ರಮ ಮತ್ತು ಆತ್ಮವಿಶ್ವಾಸವೇ ಮದ್ದು. ಇದು ಯಾರಲ್ಲಿ ಇರುತ್ತದೆಯೋ ಅವರಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ. ಈ ಸಮಾಜವೇ ಒಂದು ವಿಚಿತ್ರ. ಮಾತನಾಡಿದರೆ ಮಾತಿನಲ್ಲಿರುವ ತಪ್ಪನ್ನು ಹುಡುಕುತ್ತದೆ. ಮೌನಿಯಾದರೆ ನಮ್ಮನ್ನೇ ತಪ್ಪಾಗಿ ಚಿತ್ರಿಸುತ್ತಾರೆ. ಒಬ್ಬ ಒಳ್ಳೆಯ ವ್ಯಕ್ತಿಗೆ ಮೋಸ ಮಾಡುವುದು ಎಂದರೆ ಕೈಯಲ್ಲಿರುವ ವಜ್ರವನ್ನು ಎಸೆದು ಕಲ್ಲನ್ನು ಎತ್ತಿಕೊಂಡಂತೆ. ಅದೃಷ್ಟದ ಮೇಲೆ ಎಂದಿಗೂ ನಂಬಿಕೆ ಇಡಬೇಡಿ. ನಿಮ್ಮ ಕಠಿಣ ಶ್ರಮದ ಮೇಲೆ ನಂಬಿಕೆ ಇಡಿ, ಯಶಸ್ಸು ನಿಮ್ಮದಾಗುತ್ತದೆ. ಶ್ರೇಷ್ಠ ವ್ಯಕ್ತಿಗಳಿಗೆ ಧರ್ಮವು ಸ್ನೇಹಿತರನ್ನು ಸಂಪಾದಿಸುವ ಮಾರ್ಗವಾಗಿದೆ. ಆದರೆ ಚಿಲ್ಲರೆ ವ್ಯಕ್ತಿಗಳಿಗೆ ಧರ್ಮವು ಕಲಹವನ್ನು ಸೃಷ್ಟಿಸುವ ಅಸ್ತ್ರವಾಗಿದೆ.

ಕೇವಲ ಯಶಸ್ಸಿನ ಕಥೆಗಳನ್ನೇ ಹೆಚ್ಚು ಓದಬೇಡಿ. ಏಕೆಂದರೆ ಯಶಸ್ಸಿನ ಕಥೆಗಳಲ್ಲಿ ನಿಮಗೆ ಸಂದೇಶಗಳಷ್ಟೇ ಸಿಗುತ್ತವೆ. ಸೋಲಿನ ಕಥೆಗಳನ್ನು ಓದಿ, ನೀವು ಯಶಸ್ವಿಯಾಗಲು ಉತ್ತಮ ಚಿಂತನೆಗಳು ಕುಡಿಯೊಡೆಯುತ್ತವೆ.”

“ನೀವು ನಿದ್ದೆ ಮಾಡುವಾಗ ಕಾಣುವ ಕನಸು ನಿಜವಾದ ಕನಸಲ್ಲ. ಯಾವ ಕನಸು ನಿಮ್ಮನ್ನು ನಿದ್ದೆ ಮಾಡಲು ಬಿಡುವುದಿಲ್ಲವೋ ಅದೇ ನಿಜವಾದ ಕನಸು.

“ಕಪ್ಪು ಬಣ್ಣ ಭಾವನಾತ್ಮಕವಾಗಿ ಕೆಟ್ಟದು. ಆದರೆ ಪ್ರತಿಯೊಂದು ಕಪ್ಪುಹಲಗೆಯು ವಿದ್ಯಾರ್ಥಿಯ ಜೀವನವನ್ನು ಪ್ರಕಾಶಮಾನವಾಗಿಸುತ್ತದೆ.”

“ಇತರರಿಗಾಗಿ ನಿಮ್ಮ ಸ್ವಂತಿಕೆಯನ್ನು ಎಂದಿಗೂ ಬಿಟ್ಟುಕೊಡಬೇಡಿ. ಏಕೆಂದರೆ, ಈ ಪ್ರಪಂಚದಲ್ಲಿ ನಿಮ್ಮ ಪಾತ್ರವನ್ನು ನಿಮಗಿಂತ ಚೆನ್ನಾಗಿ ಯಾರೂ ನಿಭಾಯಿಸಲು ಸಾಧ್ಯವಿಲ್ಲ.

“ಗೆದ್ದಾಗ ಅಹಂ ಪಟ್ಟವನು ಉಳಿಯಲಾರ, ಸೋತಾಗ ಕುಸಿದು ಹೋದವನು ಬೆಳೆಯಲಾರ. ಗೆಲುವಿನ ಸಂಭ್ರಮ ನೆತ್ತಿಗೆ ಏರದಿರಲಿ, ಸೋಲಿನ ನೋವು ಮನಸಿಗೆ ತಾಕದಿರಲಿ.”

“ದೊಡ್ಡ ಗುರಿ, ಜ್ಞಾನ ಹೆಚ್ಚಿಸಿಕೊಳ್ಳುವುದು, ಕಠಿಣ ಪರಿಶ್ರಮ ಮತ್ತು ಧೃಢ ನಿಷ್ಠೆ ಇವುಗಳನ್ನು ನೀವು ನಿರಂತರವಾಗಿ ಪಾಲಿಸಿದರೆ ಜೀವನದಲ್ಲಿ ಏನನ್ನು ಬೇಕಾದರೂ ಸಾಧಿಸಬಹುದು.”

“ನೊಣಗಳು ಸುಂದರವಾದ ದೇಹವನ್ನು ಬಿಟ್ಟು ಗಾಯದ ಮೇಲೆಯೇ ಕುಳಿತುಕೊಳ್ಳುವ ಹಾಗೆ, ಕೆಲವರು ನಮ್ಮಲ್ಲಿರುವ ಸದ್ಗುಣಗಳನ್ನು ತಳ್ಳಿಹಾಕಿ ಲೋಪದೋಷಗಳನ್ನು ಮಾತ್ರ ಹುಡುಕುತ್ತಾರೆ.”

“ನಿಮ್ಮ ಮೊದಲ ವಿಜಯದ ನಂತರ ವಿಶ್ರಾಂತಿ ತೆಗೆದುಕೊಳ್ಳಬೇಡಿ. ಏಕೆಂದರೆ, ನೀವು ಎರಡನೇಯದರಲ್ಲಿ ವಿಫಲರಾದರೆ ನಿಮ್ಮ ಮೊದಲ ಗೆಲುವು ಕೇವಲ ಅದೃಷ್ಟ ಎಂದು ಹೇಳಲು ಹೆಚ್ಚು ತುಟಿಗಳು ಕಾಯುತ್ತಿರುತ್ತವೆ.”

“ಒಂದು ದೇಶ ಭ್ರಷ್ಟಾಚಾರ ಮುಕ್ತವಾಗಬೇಕೆಂದರೆ ಹಾಗೂ ಅತ್ಯುತ್ತಮ ಮನಸ್ಸು, ಬುದ್ದಿ ಇರುವ ಜನರ ದೇಶವಾಗಬೇಕೆಂದರೆ, ಸಮಾಜದ ಮೂರು ಪ್ರಮುಖ ವ್ಯಕ್ತಿಗಳಿಂದ ಮಾತ್ರ ಸಾಧ್ಯ ಎಂಬುದು ನನ್ನ ದೃಢ ನಂಬಿಕೆ. ಅವರೆಂದರೆ, ತಂದೆ, ತಾಯಿ ಹಾಗೂ ಶಿಕ್ಷಕರು.”

ನನ್ನ ಜೀವನ ನಾನು ವಿದ್ಯಾರ್ಥಿಗಳ ಜೊತೆಗೆ ಇರುವಾಗಲೇ ಕೊನೆಯಾಗಬೇಕು ಎಂದು ಹೇಳಿದ್ದ ಕಲಾಂ ಅವವರು ಜುಲೈ 27ರಂದು 2015ರಲ್ಲಿ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಶಿಲ್ಲಾಂಗ್ ನಲ್ಲಿ ವಿದ್ಯಾರ್ಥಿಗಳ ಎದುರು ಉಪನ್ಯಾಸ ನೀಡುವ ಸಮಯದಲ್ಲೇ ಹೃದಯ ಸ್ತಂಭನದಿಂದ ಕುಸಿದು ನಿಧನರಾದರು.

ದೇಶ ಕಂಡ ಶ್ರೇಷ್ಠ ವಿಜ್ಞಾನಿ ಕಲಾಂ ಅವರ ಜೀವನವೇ ಒಂದು ಸ್ಪೂರ್ತಿಯ ಸೆಲೆ.


ಡಾ.ಗುರುಪ್ರಸಾದ ಹವಲ್ದಾರ್

  • ಮೂಲತಃ ಉಪನ್ಯಾಸಕರು. ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲ್ಲೂಕಿನ ಮರಿಯಮ್ಮನ ಹಳ್ಳಿಯವರು. ಪ್ರಸ್ತುತ ಹಗರಿಬೊಮ್ಮನಹಳ್ಳಿ ಜಿವಿಪಿಪಿ ಪದವಿ ಕಾಲೇಜನಲ್ಲಿ ಕನ್ನಡ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತ ಜೊತೆಗೆ ಪತ್ರಿಕೆಗಳಿಗೆ ವೆಬ್ ನ್ಯೂಸ್ ಪೋಟ್೯ಲ್ ಗಳಿಗೆ ಲೇಖನ ಬರೆಯುತ್ತಿದ್ದಾರೆ.

Tags: 11th President of IndiaAPJ Abdul Kalambirth anniversarycknewsnowindiakalam sir
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಡಾ.ಮನಮೋಹನ್‌ ಸಿಂಗ್‌ ಆರೋಗ್ಯ ಚೇತರಿಕೆ

ಡಾ.ಮನಮೋಹನ್‌ ಸಿಂಗ್‌ ಆರೋಗ್ಯ ಚೇತರಿಕೆ

Leave a Reply Cancel reply

Your email address will not be published. Required fields are marked *

Recommended

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

ಧಮ್ಕಿ ಹಾಕುವ ಸಂಸ್ಕೃತಿ ನನ್ನದಲ್ಲ; ಡಿ.ಕೆ.ಶಿವಕುಮಾರ್’ಗೆ ತಿರುಗೇಟು ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

2 years ago
ವಿಧಾನಮಂಡಲ ಅಧಿವೇಶನ

ನಾಟಕ ಬಿಡಿ, ಮೀಸಲಾತಿ ಕೊಡಿ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ