ಮಾಜಿ ಪ್ರಧಾನಿ ಆರೋಗ್ಯಕ್ಕಾಗಿ ಧರ್ಮಸ್ಥಳದಲ್ಲಿ ಪ್ರಾರ್ಥನೆ ಸಲ್ಲಿಸಿದ ಯುವ ಕಾಂಗ್ರೆಸ್ ಕಾರ್ಯಕರ್ತರು
ನವದೆಹಲಿ: ಅನಾರೋಗ್ಯದಿಂದ ಇಲಲಿನ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಪ್ರಧಾನಮಂತ್ರಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ಆರೋಗ್ಯ ಸ್ಥಿರವಾಗಿದೆ. ಅವರು ಚೇತರಿಸಿಕೊಳ್ಳುತ್ತಿದ್ದಾರೆಂದು ಆಸ್ಪತ್ರೆ ಅಧಿಕಾರಿಗಳು ತಿಳಿಸಿದ್ದಾರೆ.
ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಿಂಗ್ ಅವರು, ಸುಸ್ತು ಮತ್ತು ಜ್ವರದಿಂದ ಬುಧವಾರ ಆಸ್ಪತ್ರೆಗೆ ದಾಖಲಾಗಿದ್ದರು. 89 ವರ್ಷ ವರ್ಷ ವಯಸ್ಸಿನ ಅವರಿಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದು, ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ ಎಂದು ಹೇಳಿದ್ದಾರೆ.
ಏತನ್ಮಧ್ಯೆ ಇಂದು ಬೆಳಗ್ಗೆ ಕೇಂದ್ರ ಆರೋಗ್ಯ ಸಚಿವ ಮನ್ಸೂಖ್ ಮಾಂಡವೀಯ ಆಸ್ಪತ್ರೆಗೆ ಭೇಟಿ ನೀಡಿ ಮಾಜಿ ಪ್ರಧಾನಿಗಳ ಆರೋಗ್ಯ ವಿಚಾರಿಸಿದ್ದರು. ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಮತ್ತಿತರೆ ನಾಯಕರೂ ಭೇಟಿ ನೀಡಿದ್ದರು.
ಇದೇ ವೇಳೆ ರಾಜ್ಯ ಯುವ ಕಾಂಗ್ರೆಸ್ ಕಾರ್ಯಕರ್ತರು ಮನಮೋಹನ್ ಸಿಂಗ್ ಅವರ ಆರೋಗ್ಯ ಚೇತರಿಕೆಗಾಗಿ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.