• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಅಗಲಿದ ಡಾ.ರಂಗಾರೆಡ್ಡಿ ಕೋಡಿರಾಂಪುರ ಅವರಿಗೆ ನುಡಿ ನಮನ

cknewsnow desk by cknewsnow desk
October 27, 2021
in CHIKKABALLAPUR, STATE
Reading Time: 1 min read
0
ಅಗಲಿದ ಡಾ.ರಂಗಾರೆಡ್ಡಿ ಕೋಡಿರಾಂಪುರ ಅವರಿಗೆ ನುಡಿ ನಮನ
983
VIEWS
FacebookTwitterWhatsuplinkedinEmail

ಬಾಗೇಪಲ್ಲಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಂಸ್ಮರಣೆ

by Ra Na Gopala Reddy Bagepalli

ಬಾಗೇಪಲ್ಲಿ: ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿಂದು ದಿವಂಗತ ರಂಗಾರೆಡ್ಡಿ ಕೋಡಿರಾಂಪುರ ಅವರಿಗೆ ಶ್ರದ್ಧಾಂಜಲಿ ಹಾಗೂ ನುಡಿ ನಮನ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಲವರು ಅಗಲಿದ ರಂಗಾರೆಡ್ಡಿ ಅವರಿಗೆ ಭಾವಪೂರ್ಣ ನಮನ ಸಲ್ಲಿಸಿದರು.

ಡಾ.ನಯಾಜ್ ಅಹಮದ್‌ ಪ್ರಾಸ್ತಾವಿಕ ಭಾಷಣ ಮಾತನಾಡಿ, “ನಾನು ಪಿಎಚ್.ಡಿ. ಮಾಡುವ ಸಂದರ್ಭದಲ್ಲಿ ಜಾತಿ, ಧರ್ಮದ ಕಾರಣಕ್ಕೆ ನಾನು ಅಲ್ಪಸಂಖ್ಯಾತ ಆಗಿದ್ದ ಕಾರಣಕ್ಕೆ ನನಗೆ ಪಿಎಚ್.ಡಿ ಪದವಿಗೆ ಮಾರ್ಗದರ್ಶನ ಮಾಡಲು ಬಹಳಷ್ಟು ಜನ ನಿರಾಕರಿಸಿದಾಗ ನನ್ನ ಜೀವನದ ಉತ್ಸಾಹವೇ ಕುಂದು ಹೋಗಿತ್ತು. ಅಂಥ ಸಂಕಷ್ಟದ ಸಮಯದಲ್ಲಿ ನನ್ನ ಕೈ ಹಿಡಿದು ಸತತ ಐದು ವರ್ಷಗಳ ಕಾಲ ನನ್ನ ಸಂಶೋಧನೆಗೆ ಮಾರ್ಗದರ್ಶನ ಮಾಡಿ ಪಿಎಚ್.ಡಿ ಪದವಿ ಕೊಡಿಸಿದವರು ರಂಗಾರೆಡ್ಡಿ ಅವರು” ಎಂದರು.

ನನಗಷ್ಟೇ ಅಲ್ಲ ನನ್ನಂತಹ ಅನೇಕ ಹಿಂದುಳಿದ, ದಲಿತ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಅವರು ಮಾಡಿದ ಸಹಾಯ ಎಂದಿಗೂ ಮರೆಯಲು ಸಾಧ್ಯವೇ ಇಲ್ಲ. ನನ್ನ ಕೀರ್ತಿ, ಸಾಧನೆ ಎಲ್ಲವೂ ಡಾ.ರಂಗಾರೆಡ್ಡಿ ಕೋಡಿರಾಂಪುರ ಅವರಿಗೇ ಸೇರಿದ್ದು ಎಂದರು ನಯಾಜ್.‌

ನ್ಯಾಷನಲ್ ಕಾಲೇಜು ಕನ್ನಡ ವಿಭಾಗದ ನಿವೃತ್ತ ಮುಖ್ಯಸ್ಥ ಎ.ಕೆ.ನಿಂಗಪ್ಪ ಮಾತನಾಡಿ; “ಸಾಹಿತಿ ರಂಗಾರೆಡ್ಡಿ ಕೋಡಿರಾಂಪುರ ಅವರು ಕನ್ನಡ ಸಾಹಿತಿ, ಜನಪದ ತಜ್ಞ, ಪ್ರಗತಿಪರ ಚಿಂತಕ, ಹೋರಾಟಗಾರ. ಅವರು  ಪ್ರಾಧ್ಯಾಪಕರಾಗಿ ಅತ್ಯುತ್ತಮ ಸೇವೆ ಮಾಡಿದ್ದಾರೆ. ಅವರು ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕು ಕೋಡಿರಾಂಪುರದವರು. ಗೌರಿಬಿದನೂರು ನ್ಯಾಷನಲ್ ಕಾಲೇಜಿನಲ್ಲಿ ಕನ್ನಡ ಅಧ್ಯಾಪಕರಾಗಿದ್ದರು. ನಿವೃತ್ತಿ ನಂತರ ಬೆಂಗಳೂರಿನಲ್ಲಿ ನೆಲೆಸಿದ್ದರು” ಎಂದು ನುಡಿದರು.

ಜನಪದ ಸಂಸ್ಕೃತಿ, ಸಾಲು ಹೊಂಗೆಯ ತಂಪು, ಬಂಡಾಯ ಜನಪದ, ನನ್ನೂರ ಹಾಡು ಸೇರಿದಂತೆ ಹಲವು ಕೃತಿಗಳನ್ನು ರಚಿಸಿದ್ದರು‌. ಚಿಕ್ಕಬಳ್ಳಾಪುರದಲ್ಲಿ 2015ರಲ್ಲಿ ನಡೆದ ಚಿಕ್ಕಬಳ್ಳಾಪುರ ಜಿಲ್ಲಾ ಐದನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. ಯಕ್ಷಗಾನ ಅಕಾಡೆಮಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಜಾನಪದ ಅಕಾಡೆಮಿ ಸದಸ್ಯರಾಗಿಯೂ ಕೆಲಸ ಮಾಡಿದ್ದಾರೆ ಎಂದು ಅವರು ಹೇಳಿದರು.

ಎ.ಜಿ.ಸುಧಾಕರ್ ಮಾತನಾಡಿ, “ಗುರು ಆದವರು ರಂಗಾರೆಡ್ಡಿ ಕೋಡಿರಾಂಪುರಂ ರವರಂತೆ ಇರಬೇಕು ಎಂದರು. ಬಿ.ಆರ್. ಕೃಷ್ಣ ಮಾತನಾಡಿ ರಂಗಾರೆಡ್ಡಿ ಕೋಡಿರಾಂಪುರಂ ರವರು ವೈಚಾರಿಕ ತತ್ವ ಸಿದ್ಧಾಂತಗಳ ನೆಲೆಗಟ್ಟಿನಲ್ಲಿ ಕೆಲಸ ಮಾಡಿದವರು” ಎಂದರು.

ಈ ಸಂದರ್ಭದಲ್ಲಿ ಪ್ರಾಂಶುಪಾಲರಾದ ನಾರಾಯಣಪ್ಪ, ವೆಂಕಟರಾಮರೆಡ್ಡಿ, ಹಸಿರು ಸೇನೆ ರೈತ ಮುಖಂಡೆ ಸಿ.ಉಮಾ, ಪತ್ರಕರ್ತರಾದ ಪಿ.ಎಸ್.ರಾಜೇಶ್, ರಾ.ನ.ಗೋಪಾಲ ರೆಡ್ಡಿ, ಆಸ್ಪಿಯಾ ಇನ್ನೂ ಮುಂತಾದವರು ಪಾಲ್ಗೊಂಡಿದ್ದರು.

Tags: bagepallicknewsnowgowribidanurkannada professornational collegenewsno moreRANGAREDDY KODIRAMPURA
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳನ್ನು ಮಳೆ ವಿಪತ್ತು ಜಿಲ್ಲೆಗಳೆಂದು ಘೋಷಿಸಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 40 ವರ್ಷಗಳ ಮಹಾಮಳೆ

Leave a Reply Cancel reply

Your email address will not be published. Required fields are marked *

Recommended

ವೆಂಟಿಲೇಟರ್ ಲಭ್ಯತೆ 10 ಪಟ್ಟು ಹೆಚ್ಚಿಸಲು ಕ್ರಮ, ವಿದೇಶದಿಂದಲೂ ರೆಮ್ಡಿಸಿವಿರ್ ಆಮದು ಮಾಡಿಕೊಳ್ಳಲು ಮುಂದಾದ ರಾಜ್ಯ ಸರಕಾರ, ಕೇಂದ್ರ ಅನುಮತಿಗೆ ವೇಯ್ಟಿಂಗ್

ರಾಜ್ಯಕ್ಕೆ ಕೇಂದ್ರದಿಂದ 4.25 ಲಕ್ಷ ಡೋಸ್‌ ರೆಮಿಡಿಸಿವರ್‌ ಹಂಚಿಕೆ: ಡಿಸಿಎಂ ಡಾ.ಸಿ.ಎನ್.‌ಅಶ್ವತ್ಥನಾರಾಯಣ

5 years ago
ಕರ್ನಾಟಕದಲ್ಲಿ TCM AND DCM ಸರಕಾರ!!

ಕರ್ನಾಟಕದಲ್ಲಿ TCM AND DCM ಸರಕಾರ!!

2 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ