• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಕನ್ನಡ ಉದ್ಧಾರಕ್ಕೆ ಕ್ರಮ

cknewsnow desk by cknewsnow desk
November 1, 2021
in STATE
Reading Time: 1 min read
0
ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಕನ್ನಡ ಉದ್ಧಾರಕ್ಕೆ ಕ್ರಮ
940
VIEWS
FacebookTwitterWhatsuplinkedinEmail

ಚಿಕ್ಕಬಳ್ಳಾಪುರ ಜಿಲ್ಲೆ ರಾಜ್ಯೋತ್ಸವದಲ್ಲಿ ಸಚಿವ ಡಾ.ಕೆ.ಸುಧಾಕರ್

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ, ಕೋಲಾರ ಸೇರಿದಂತೆ ಗಡಿಭಾಗದ ಜಿಲ್ಲೆಗಳಲ್ಲಿ ಕನ್ನಡವನ್ನು ಹೆಚ್ಚಾಗಿ ಬೆಳೆಸುವ ಕಡೆ ಒತ್ತು ನೀಡಬೇಕಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಾರ್ಯನಿರ್ವಹಿಸುತ್ತಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ಜಿಲ್ಲಾಡಳಿತ ವತಿಯಿಂದ ನಡೆದ ೬೬ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಕನ್ನಡವನ್ನು ಪ್ರೀತಿಸುವುದರೊಂದಿಗೆ ಅನ್ಯಭಾಷೆಗಳನ್ನೂ ಕಲಿಯಬೇಕು. ಆದರೆ ಕನ್ನಡವನ್ನು ಉಸಿರಾಗಿಸಿಕೊಳ್ಳಬೇಕು. ಯುವಜನರಲ್ಲಿ ಹೆಚ್ಚಾಗಿ ಪುಸ್ತಕ ಓದುವ ಹವ್ಯಾಸ ಬೆಳೆಸಬೇಕು. ಚಿಕ್ಕಬಳ್ಳಾಪುರ, ಕೋಲಾರ ಸೇರಿದಂತೆ ಗಡಿಭಾಗದ ಜಿಲ್ಲೆಗಳಲ್ಲಿ ಕನ್ನಡವನ್ನು ಬೆಳೆಸುವ ಕೆಲಸವನ್ನು ಮಾಡಬೇಕು. ಅದಕ್ಕಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರು ‘ಕನ್ನಡಕ್ಕಾಗಿ ನಾವು’ ಅಭಿಯಾನ ಆರಂಭಿಸಿದ್ದಾರೆ. ಕನ್ನಡದ ಗೀತೆ ಗಾಯನ, ಕನ್ನಡ ಬಳಕೆ ಮೊದಲಾದ ಕಾರ್ಯಕ್ರಮ ನಡೆದಿದೆ ಎಂದರು.

ದೇಶಕ್ಕೆ ಸ್ವಾತಂತ್ರ್ಯ ಬಂದ ಬಳಿಕವೂ ಕರ್ನಾಟಕ ಐದು ಪ್ರಾಂತ್ಯಗಳಾಗಿ ಹಂಚಿಹೋಗಿತ್ತು. ಅನೇಕ ಮಹನೀಯರ ಹೋರಾಟದ ಫಲವಾಗಿ ೧೯೫೬, ನವೆಂಬರ್ ೧ ರಂದು ಮೈಸೂರು ರಾಜ್ಯವಾಗಿ ಒಂದಾಯಿತು. ನಂತರ ಕರ್ನಾಟಕ ಉದಯವಾಯಿತು. ಕಳೆದ ಸಾಲಿನಲ್ಲಿ ೧೬ ಲಕ್ಷ ಕೋಟಿ ರೂ. ಜಿಎಸ್‍ಡಿಪಿಯನ್ನು ರಾಜ್ಯ ಹೊಂದಿದ್ದು, ಇಡೀ ದೇಶದಲ್ಲಿ ನಾಲ್ಕನೇ ಸ್ಥಾನದಲ್ಲಿದ್ದೇವೆ. ಕಾಫಿಯನ್ನು ಅತಿ ಹೆಚ್ಚು ಬೆಳೆಸಿದ್ದು, ಶೇ.೪೦ ರಫ್ತು ರಾಜ್ಯದಿಂದಾಗುತ್ತಿದೆ. ಪ್ರಾಕೃತಿಕ ಸಂಪನ್ಮೂಲ, ಐತಿಹಾಸಿಕ ತಾಣ, ಉದ್ದದ ಕರಾವಳಿ ತೀರ, ಸರೋವರ, ದೀರ್ಘ ಐತಿಹಾಸಿಕ ಹಿನ್ನೆಲೆ ರಾಜ್ಯಕ್ಕಿದೆ. ಜಗತ್ತಿನ ಅನೇಕ ಕಡೆಗಳಿಂದ ಉದ್ಯೋಗಕ್ಕಾಗಿ ಬಂದ ಜನರು ಬೆಂಗಳೂರಿನಲ್ಲಿ ವಾಸಿಸುತ್ತಿದ್ದಾರೆ. ಪ್ರತಿ ಜಿಲ್ಲೆಯಲ್ಲಿ ವಿಶಿಷ್ಟ ಆಹಾರ ಪದ್ಧತಿ ಇದೆ. ಭಾಷಾ ವೈವಿಧ್ಯವೂ ಇಲ್ಲಿದೆ. ಎಲ್ಲಾ ಬಹುವೈವಿಧ್ಯಗಳನ್ನು ರಾಜ್ಯದಲ್ಲಿ ಕಾಣಬಹುದು ಎಂದರು.

ಜಿಲ್ಲೆಯಲ್ಲಿ ಎಚ್.ಎನ್.ವ್ಯಾಲಿಯಿಂದ ೪೩ ಕೆರೆಗಳನ್ನು ತುಂಬಿಸಲಾಗಿದೆ. ಕಿಸಾನ್ ಸಮ್ಮಾನ್ ನಡಿ ರೈತರಿಗೆ ೧೪೭ ಕೋಟಿ ರೂ. ನೀಡಲಾಗಿದೆ. ೪ ಸಾವಿರ ಎಕರೆಯನ್ನು ಕೈಗಾರಿಕೆ ಅಭಿವೃದ್ಧಿಪಡಿಸಲಾಗುತ್ತಿದೆ. ಈ ಮೂಲಕ ಪ್ರತಿ ಯುವಜನರಿಗೆ ಕೆಲಸ ದೊರೆಯಲಿದೆ. ಚಿಂತಾಮಣಿ, ಗೌರಿಬಿದನೂರಿನಲ್ಲೂ ಕೈಗಾರಿಕೆ ಅಭಿವೃದ್ಧಿಪಡಿಸಲಾಗುತ್ತಿದೆ. ಚಿಕ್ಕಬಳ್ಳಾಪುರವನ್ನು ಕೈಗಾರಿಕೆಗೆ ಸೂಕ್ತವಾಗಿ ಬೆಳೆಸಲಾಗುತ್ತಿದೆ. ಆರೋಗ್ಯ ಅಭಿವೃದ್ಧಿಗೆ ವೈದ್ಯಕೀಯ ಕಾಲೇಜು ನಿರ್ಮಿಸಲಾಗುತ್ತಿದೆ ಎಂದರು.

ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದ್ದು, ಬಾವಿಗಳು ತುಂಬಿದೆ. ರೈತರಿಗೆ ಇದರಿಂದ ಬಹಳ ಅನುಕೂಲವಾಗಿದೆ. ಆದರೆ ಕೆಲವೆಡೆ ಬೆಳೆಹಾನಿಯಾಗಿದ್ದು, ನಷ್ಟ ಪರಿಹಾಕ್ಕೆ ವರದಿ ನೀಡಲು ಸೂಚಿಸಲಾಗಿದೆ. ಶೀಘ್ರದಲ್ಲಿ ಪರಿಹಾರ ನೀಡಲಾಗುವುದು ಎಂದರು.

ಜನರು ಕ್ಷಮಿಸುತ್ತಾರಾ?

ಜಿಲ್ಲಾ ಸಹಕಾರಿ ಬ್ಯಾಂಕ್ ಹಾಗೂ ಕೋಚಿಮುಲ್ ಅನ್ನು ಶೀಘ್ರ ಪ್ರತ್ಯೇಕ ಮಾಡಲು ಕ್ರಮ ವಹಿಸಲಾಗುವುದು. ಇದನ್ನು ವಿರೋಧಿಸುವವರನ್ನು, ಜಿಲ್ಲೆಗೆ ಅನ್ಯಾಯ ಮಾಡುವವರನ್ನು ಜಿಲ್ಲೆಯ ಪ್ರತಿನಿಧಿಗಳು ಎಂದು ಹೇಳಲು ಸಾಧ್ಯವಿಲ್ಲ. ಕ್ಷೇತ್ರದ ಜನರು ಕ್ಷಮಿಸುತ್ತಾರಾ ಎಂಬುದನ್ನು ಅವರು ಪ್ರಶ್ನೆ ಮಾಡಿಕೊಳ್ಳಲಿ ಎಂದರು.

ಮಾರ್ಗಸೂಚಿ

ಜಿಮ್ ನಿಂದ ಸಮಸ್ಯೆಯಾಗುತ್ತದೆ ಎಂಬ ತಪ್ಪು ಎಂಬ ಭಾವನೆ ಬೇಡ. ಜಿಮ್, ಯೋಗ, ಕ್ರೀಡೆಯಿಂದ ಯಾವುದೇ ಅಪಾಯ ಇಲ್ಲ. ಕೆಲವರಲ್ಲಿ ಮಾತ್ರ ಏಕೆ ಆರೋಗ್ಯ ಸಮಸ್ಯೆ ಉಂಟಾಗುತ್ತಿದೆ ಎಂದು ಅಧ್ಯಯನ ಮಾಡಲಾಗುತ್ತಿದೆ. ಕೆಲವರು ಮೊದಲು ವೈದ್ಯಕೀಯ ಪರೀಕ್ಷೆ ಮಾಡಿಸಿಕೊಂಡು ನಂತರ ಜಿಮ್ ಮಾಡಬೇಕಾಗುತ್ತದೆ. ಜಿಮ್ ನಿಂದಲೇ ಹೃದಯ ತೊಂದರೆ ಬರುತ್ತದೆ ಎಂಬುದು ಸುಳ್ಳು. ಕೆಲವರಿಗೆ ಅನುವಂಶೀಯವಾಗಿ ಹೃದಯ ಸಮಸ್ಯೆ ಇರುತ್ತದೆ. ಅಂತಹವರು ಎಚ್ಚರದಿಂದ ಇರಬೇಕು. ಜಿಮ್, ಯೋಗ ಕೇಂದ್ರದಲ್ಲಿ ಸಮಸ್ಯೆಯಾದರೆ ಸಿಪಿಆರ್ ಮೊದಲಾದ ತುರ್ತು ಚಿಕಿತ್ಸೆ ವ್ಯವಸ್ಥೆ ಲಭ್ಯವಿರಬೇಕಾಗುತ್ತದೆ. ಇದಕ್ಕಾಗಿ ಮಾರ್ಗಸೂಚಿ ರೂಪಿಸುತ್ತಿದ್ದು, ಇನ್ನೂ ಪ್ರಾಥಮಿಕ ಹಂತದಲ್ಲಿದೆ. ನಾನು ಕೂಡ ೨೦ ವರ್ಷದಿಂದ ಜಿಮ್ ಗೆ ಹೋಗುತ್ತಿದ್ದೇನೆ. ಆದರೆ ವಯಸ್ಸು, ಆರೋಗ್ಯದ ಆಧಾರವಾಗಿ ವ್ಯಾಯಾಮ ಮಾಡಬೇಕಾಗುತ್ತದೆ. ನಟ ಪುನೀತ್ ಅವರಿಗೆ ಹೀಗೆ ಆಗಿರುವುದರಿಂದ ಜನರು ಭಯ ಪಟ್ಟುಕೊಳ್ಳುತ್ತಿದ್ದಾರೆ. ಆದರೆ ಈ ರೀತಿಯ ಆತಂಕ ಬೇಡ. ಈ ಬಗ್ಗೆ ಹೃದಯ ತಜ್ಞರ ಜೊತೆ ಚರ್ಚಿಸಿ ನಿರ್ದಿಷ್ಟ ಮಾರ್ಗಸೂಚಿ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.

Tags: chikkaballapuracknewsnowdr k sudhakarkannadakannada rajyotsava 2021karnatakanewsnovember 1
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಮುಂದಿನ ರಾಜ್ಯೋತ್ಸವಕ್ಕೆ ಬಾಗೇಪಲ್ಲಿ ಆಗಲಿದೆ ಭಾಗ್ಯನಗರ

ಮುಂದಿನ ರಾಜ್ಯೋತ್ಸವಕ್ಕೆ ಬಾಗೇಪಲ್ಲಿ ಆಗಲಿದೆ ಭಾಗ್ಯನಗರ

Leave a Reply Cancel reply

Your email address will not be published. Required fields are marked *

Recommended

ಬರಪೀಡಿತ ಗುಡಿಬಂಡೆ ಈಗ ಜಲಪೀಡಿತ!

ಚಿಕ್ಕಬಳ್ಳಾಪುರ ಜನರಿಗೆ ಎಚ್ಚರಿಕೆ ಕೊಟ್ಟ ಎಸ್ಪಿ

4 years ago
ಕನ್ನಡ ಬಿಗ್‌ಬಾಸ್ ಸೀಸನ್ 3 ಸ್ಪರ್ಧಿ, ಕನ್ನಡ್ ಗೊತ್ತಿಲ್ಲ, ಉಪ್ಪು ಹುಳಿ ಖಾರ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಇನ್ನಿಲ್ಲ; ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ನಟಿ

ಕನ್ನಡ ಬಿಗ್‌ಬಾಸ್ ಸೀಸನ್ 3 ಸ್ಪರ್ಧಿ, ಕನ್ನಡ್ ಗೊತ್ತಿಲ್ಲ, ಉಪ್ಪು ಹುಳಿ ಖಾರ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಇನ್ನಿಲ್ಲ; ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ನಟಿ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ