• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ಐವರು ಕೇಂದ್ರ ಸಚಿವರನ್ನು ಭೇಟಿಯಾದ ಸಚಿವ ಡಾ.ಅಶ್ವತ್ಥನಾರಾಯಣ

cknewsnow desk by cknewsnow desk
November 2, 2021
in NATION, STATE
Reading Time: 1 min read
0
ಐವರು ಕೇಂದ್ರ ಸಚಿವರನ್ನು ಭೇಟಿಯಾದ ಸಚಿವ ಡಾ.ಅಶ್ವತ್ಥನಾರಾಯಣ

ಕೇಂದ್ರ ಸಚಿವ ಧರ್ಮೇಂದ್ರ ಪ್ರದಾನ್‌ ಜತೆ ಮಾತುಕತೆ ನಡೆಸಿದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.‌ಅಶ್ವತ್ಥನಾರಾಯಣ.

925
VIEWS
FacebookTwitterWhatsuplinkedinEmail

ಹೈಬ್ರಿಡ್ ಕಾರ್ಯ ಮಾದರಿಗೆ ಕಾರ್ಯನೀತಿ ಬೆಂಬಲ ಕೋರಿಕೆ


ನವದೆಹಲಿ: ತಮ್ಮ ಖಾತೆಗಳಿಗೆ ಸಂಬಂಧಿಸಿದ ನಾನಾ ಯೋಜನೆಗಳು ಮತ್ತು ಪ್ರಸ್ತಾವನೆಗಳಿಗೆ ಕೇಂದ್ರದ ನೆರವು ಕೋರಿ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಮಂಗಳವಾರ ಕೇಂದ್ರದ ಐವರು ಸಚಿವರನ್ನು ಭೇಟಿಯಾಗಿ, ಕೂಲಂಕಷವಾಗಿ ಚರ್ಚಿಸಿದರು.

ರಾಷ್ಟ್ರ ರಾಜಧಾನಿಯಲ್ಲಿ ದಿನವಿಡೀ ವಿವಿಧ ಸಭೆಗಳಲ್ಲಿ ಪಾಲ್ಗೊಂಡಿದ್ದ ಅವರು, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಐಟಿ-ಬಿಟಿ ಸಚಿವ ಅಶ್ವಿನಿ ವೈಷ್ಣವ್, ಆಹಾರ ಸಂಸ್ಕರಣಾ ಸಚಿವ ಪಶುಪತಿ ಪಾರಸ್, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮತ್ತು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತಿರಾಜ್ ಸಚಿವ ಗಿರಿರಾಜ್ ಸಿಂಗ್ ಅವರನ್ನು ಭೇಟಿಯಾದರು.

ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಯಾವುದೇ ಸ್ಥಳದಿಂದ ಕೆಲಸ ಮಾಡುವುದಕ್ಕೆ ಐಟಿ ಕ್ಷೇತ್ರದವರಿಗೆ ಅವಕಾಶ ಮಾಡಿಕೊಡುವ ಹೈಬ್ರಿಡ್ ಕಾರ್ಯ ಮಾದರಿಗೆ ಸೂಕ್ತ ಕಾರ್ಯನೀತಿಗಳ ಬೆಂಬಲದೊಂದಿಗೆ ಮನ್ನಣೆ ನೀಡುವಂತೆ ಅಶ್ವಿನಿ ವೈಷ್ಣವ್ ಅವರನ್ನು ಕೋರಲಾಗಿದೆ ಎಂದು ತಿಳಿಸಿದರು. ನ,17ರಿಂದ ಆರಂಭವಾಗುವ ಬೆಂಗಳೂರು ತಂತ್ರಜ್ಞಾನ ಶೃಂಗದ (ಬಿಟಿಎಸ್-2021) ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ವೈಷ್ಣವ್ ಅವರನ್ನು ಆಹ್ವಾನಿಸಲಾಗಿದೆ ಎಂದೂ ಅವರು ಹೇಳಿದರು.

ರಾಜ್ಯದಲ್ಲಿ ಉದ್ಯೋಗ ಸೃಷ್ಟಿಯ ದೃಷ್ಟಿಯಿಂದ ಅದಕ್ಕೆ ತಕ್ಕ ವಾತಾವರಣ ನಿರ್ಮಾಣ, ಹಲವು ಪ್ರಸ್ತಾವನೆಗಳನ್ನು ಕಾರ್ಯರೂಪಕ್ಕೆ ತರುವ ಜರೂರು ಮತ್ತು ಈಗಾಗಲೇ ಪ್ರಗತಿಯಲ್ಲಿರುವ ಯೋಜನೆಗಳನ್ನು ಮುಂದುವರಿಸಿಕೊಂಡು ಹೋಗಬೇಕಾಗಿದೆ. ಕೇಂದ್ರ ಸಚಿವರುಗಳೊಂದಿಗೆ ಇವೆಲ್ಲವನ್ನೂ ಕುರಿತು ಚರ್ಚಿಸಲಾಯಿತು,’ ಎಂದರು.

Met Minister of Railways, Communications and Electronics & Information Technology of India, Shri @AshwiniVaishnaw ji and reviewed with him various aspects of IT, Electronics, & Skill Development initiatives and issues of Karnataka. pic.twitter.com/7S5rlTu07b

— Dr. C.N. Ashwath Narayan (ಮೋದಿ ಅವರ ಪರಿವಾರ) (@drashwathcn) November 2, 2021

ಐಟಿ-ಬಿಟಿ ಸಚಿವ ಅಶ್ವಿನಿ ವೈಷ್ಣವ್ ಅವರೊಂದಿಗೆ ಐಟಿ ಸೇವೆಗಳು ಮತ್ತು ಜಿಸಿಸಿ (ಗ್ಲೋಬಲ್ ಕೇಪಬಿಲಿಟಿ ಸೆಂಟರ್)ಗಳಿಗೆ ಬಿಯಾಂಡ್ ಬೆಂಗಳೂರು ಉಪಕ್ರಮದಡಿ ಘೋಷಿಸಿರುವ ಉತ್ಪಾದನೆ ಆಧರಿತ ಪ್ರೋತ್ಸಾಹಕ ಭತ್ಯೆಗಳನ್ನು ಉದ್ಯೋಗ ಸೃಷ್ಟಿಯೊಂದಿಗೆ ಬೆಸೆಯುವ ಅಗತ್ಯದ ಬಗ್ಗೆ ಚರ್ಚಿಸಲಾಯಿತು. ಜಿಜಿಸಿಗಳು ರಾಜ್ಯದ 5 ಕಡೆಗಳಲ್ಲಿ ಹೈಬ್ರಿಡ್ ಮಾದರಿಯಲ್ಲಿ ಈ ವ್ಯವಸ್ಥೆಯನ್ನು ಪ್ರಾರಂಭಿಸಲು ಅವಕಾಶವಿದೆ ಎಂದು ವಿವರಿಸಿದರು.

ಇದರ ಜತೆಗೆ ಎಸ್ಇಜೆಡ್ ವಲಯಗಳಲ್ಲಿ ಸಿಬ್ಬಂದಿ ವರ್ಗಕ್ಕೆ ಮನೆಯಿಂದಲೇ ಕೆಲಸ ಮಾಡುವ ಅವಕಾಶ, ಭವಿಷ್ಯದ ತಂತ್ರಜ್ಞಾನ ವಲಯಗಳನ್ನು ಗುರುತಿಸಿ ಮುಂದಿನ 10 ವರ್ಷಗಳಿಗೆ ಅನ್ವಯವಾಗುವಂತೆ ವಿಶೇಷ ವರ್ಗಾವಣೆ ದರ ನಿಗದಿ ಮತ್ತು ಹೆಚ್ಚುವರಿಯಾಗಿ ಪ್ರೋತ್ಸಾಹಕ ಭತ್ಯೆಗಳನ್ನು ಕೊಡುವ ಬಗ್ಗೆ ವಿಚಾರ ವಿನಿಮಯ ನಡೆಸಲಾಯಿತು ಎಂದು ಹೇಳಿದರು.

ರಾಜ್ಯ ಸರಕಾರವು ಪ್ರವರ್ಧಮಾನಕ್ಕೆ ಬರುತ್ತಿರುವ ತಂತ್ರಜ್ಞಾನ ವಲಯಗಳಲ್ಲಿ ಪಿಪಿಪಿ ಮಾದರಿಯಲ್ಲಿ 3-4 ಕಡೆಗಳಲ್ಲಿ `ಟ್ಯಾಲೆಂಟ್ ಡೆವಲಪ್ಮೆಂಟ್ ಲ್ಯಾಬ್ ಸೆಂಟರ್’ ಮತ್ತು ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರಗಳನ್ನು ಆರಂಭಿಸಲು ನಿರ್ಧರಿಸಿದೆ. ಇಲ್ಲಿ ವಿಎಲ್ಎಸ್ಎಲ್, ಎಬೆಂಡೆಡ್ ತಂತ್ರಜ್ಞಾನ, ಕ್ಲೌಡ್, ಬ್ಲಾಕ್ ಚೈನ್ ಮುಂತಾದ ಆಧುನಿಕ ತಂತ್ರಜ್ಞಾನಗಳಿಗೆ ಸಂಬಂಧಿಸಿದ ತರಬೇತಿ ನೀಡಲಾಗುವುದು. ರಾಜ್ಯದ ಈ ಉಪಕ್ರಮವನ್ನು ಅಶ್ವಿನಿ ವೈಷ್ಣವ್ ಅವರಿಗೆ ತಿಳಿಸಲಾಯಿತು ಎಂದರು.

ಪರಿಷ್ಕೃತ ಎಲೆಕ್ಟ್ರಾನಿಕ್ಸ್ ಉತ್ಪಾದನಾ ಕ್ಲಸ್ಟರ್ ಗಳ ನಿಯಮದಡಿ ಈಗ ಕನಿಷ್ಠ 200 ಎಕರೆ ಭೂಮಿಯನ್ನು ಹೊಂದಬೇಕೆಂಬ ಬಿಗಿ ನಿಯಮವಿದೆ. ಸೆಮಿಕಂಡಕ್ಟರ್ ವಲಯದ ಬೆಳವಣಿಗೆಯ ಹಿತದೃಷ್ಟಿಯಿಂದ ಇದನ್ನು ಸಡಿಲಿಸುವ ಅಗತ್ಯದ ಬಗ್ಗೆ ಕೇಂದ್ರ ಸಚಿವರೊಂದಿಗೆ ಚರ್ಚಿಸಲಾಯಿತು ಎಂದು ಅಶ್ವತ್ಥನಾರಾಯಣ ಮಾಹಿತಿ ನೀಡಿದರು.

ರಾಜ್ಯ ಸರಕಾರವು `ಬಿಯಾಂಡ್ ಬೆಂಗಳೂರು’ ಯೋಜನೆಯಡಿ ಬೆಳಗಾವಿಯಲ್ಲಿ750 ಎಕರೆ ಪ್ರದೇಶದಲ್ಲಿ ಐಟಿ ಪಾರ್ಕ್ ಸ್ಥಾಪಿಸಲು ತೀರ್ಮಾನಿಸಿದೆ. ಆದರೆ, ಈ ಭೂಮಿ ಸದ್ಯ  ರಕ್ಷಣಾ ಇಲಾಖೆ ಸ್ವಾಧೀನದಲ್ಲಿದೆ. ಹೀಗಾಗಿ, ಈ ಭೂಮಿಯನ್ನು ಪುನಃ ರಾಜ್ಯ ಸರಕಾರಕ್ಕೆ ಹಸ್ತಾಂತರಿಸಬೇಕೆಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಕೋರಲಾಗಿದೆ ಎಂದರು.

ಕೇಂದ್ರ ಆಹಾರ ಸಂಸ್ಕರಣೆ ಸಚಿವ ಪಶುಪತಿ ಪಾರಸ್ ಅವರೊಂದಿಗೆ ರಾಮನಗರದಲ್ಲಿ ಪಿಪಿಪಿ ಮಾದರಿಯಲ್ಲಿ ಆಹಾರ ಸಂಸ್ಕರಣೆ ಪಾರ್ಕ್ ಸ್ಥಾಪನೆಗೆ ಕೇಂದ್ರದ ನೆರವಿನ ಬಗ್ಗೆ ಸಂವಾದ ಮಾಡಲಾಯಿತು ಎಂದು ಅವರು ತಿಳಿಸಿದರು.

A pleasure to meet Shri @girirajsinghbjp ji and speak about #DeepaSanjeevini initiative by Self Help Group women under @KarnatakaKsrlps.

I updated him about the transformative and model programmes of @MgnregsK in Ramanagara district that he had seen during his last visit. pic.twitter.com/vo8GmNP4Ye

— Dr. C.N. Ashwath Narayan (ಮೋದಿ ಅವರ ಪರಿವಾರ) (@drashwathcn) November 2, 2021

ಕೇಂದ್ರ ಪಂಚಾಯತ್ ರಾಜ್ ರಾಜ್ಯ ಸಚಿವ ಗಿರಿರಾಜ್ ಸಿಂಗ್ ಅವರೊಂದಿಗೆ ರಾಜ್ಯದಲ್ಲಿ ಎನ್.ಆರ್.ಎಲ್.ಎಂ. ಕಾರ್ಯಕ್ರಮಗಳಲ್ಲಿ ಆಗಿರುವ ಪ್ರಗತಿಗಳ ಬಗ್ಗೆ ಚರ್ಚಿಸಲಾಯಿತು ಎಂದು ಅಶ್ವತ್ಥ ನಾರಾಯಣ ಹೇಳಿದರು.

ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರೊಂದಿಗಿನ ಸಭೆಯಲ್ಲಿ, ರಾಜ್ಯದಲ್ಲಿ ಎನ್ಇಪಿ ಜಾರಿಯಲ್ಲಿ ಆಗಿರುವ ಪ್ರಗತಿಯ ಬಗ್ಗೆ ವಿಷಯ ಹಂಚಿಕೊಳ್ಳಲಾಯಿತು. ಇದೇ ವೇಳೆ, ಉನ್ನತ ಶಿಕ್ಷಣ ಇಲಾಖೆಗೆ ಹೆಚ್ಚಿನ ಅನುದಾನ ಕೋರಲಾಗಿದೆ. ಧರ್ಮೇಂದ್ರ ಪ್ರಧಾನ್ ಅವರು ಕರ್ನಾಟಕದಲ್ಲಿ ಎನ್ಇಪಿ ಜಾರಿ ಸಂಬಂಧ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಪ್ರತಿ 2 ತಿಂಗಳಿಗೊಮ್ಮೆ ರಾಜ್ಯಕ್ಕೆ ಭೇಟಿ ಕೊಡುವುದಾಗಿ ತಿಳಿಸಿದ್ದಾರೆ ಎಂದರು.

ಇದಕ್ಕೂ ಮುನ್ನ ಸಚಿವರ ಕರ್ನಾಟಕದ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಭೇಟಿಯಾಗಿ ರಾಜ್ಯದ ಸ್ವಸಹಾಯ ಸಂಘದವರು ತಯಾರಿಸಿರುವ ಮಣ್ಣಿನ ದೀಪಗಳನ್ನು ಕೊಟ್ಟು ಶುಭ ಕೋರಿದರು. ಸಚಿವರು ಕೇಂದ್ರ ಸಚಿವರಾದ ಪಶುಪತಿ ಪರಸ್ ಮತ್ತು ಗಿರಿರಾಜ್ ಸಿಂಗ್ ಅವರಿಗೆ ಸಂಜೀವಿನಿ ಮಣ್ಣಿನ ದೀಪಗಳನ್ನು ಕೊಟ್ಟು ದೀಪಾವಳಿ ಶುಭಾಶಯಗಳನ್ನು ಕೋರಿದರು.

cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಜೆಡಿಎಸ್‌ ಬಗ್ಗೆ ಕಾಂಗ್ರೆಸ್ ನಡೆಸಿದ ಅಪಪ್ರಚಾರಕ್ಕೆ ಫಲಿತಾಂಶವೇ ಉತ್ತರ ನೀಡಿದೆ: ಹೆಚ್‌ಡಿಕೆ

ಜೆಡಿಎಸ್‌ ಬಗ್ಗೆ ಕಾಂಗ್ರೆಸ್ ನಡೆಸಿದ ಅಪಪ್ರಚಾರಕ್ಕೆ ಫಲಿತಾಂಶವೇ ಉತ್ತರ ನೀಡಿದೆ: ಹೆಚ್‌ಡಿಕೆ

Leave a Reply Cancel reply

Your email address will not be published. Required fields are marked *

Recommended

ಪೆನ್ ಡ್ರೈ ಪ್ರಕರಣ: HDK ಹೆಸರು ಹೇಳಲು ₹100 ಕೋಟಿ ಆಫರ್ ಕೊಟ್ಟ ಡಿಕೆಶಿ!

ಪೆನ್ ಡ್ರೈ ಪ್ರಕರಣ: HDK ಹೆಸರು ಹೇಳಲು ₹100 ಕೋಟಿ ಆಫರ್ ಕೊಟ್ಟ ಡಿಕೆಶಿ!

1 year ago
ಜ್ಞಾನ ಆರ್ಥಿಕತೆ ಮತ್ತು ಆತ್ಮನಿರ್ಭರತೆ; ನೂತನ ಶಿಕ್ಷಣ ನೀತಿಗೆ ಹೊಸ ಆಯಾಮ ಕೊಡಲು ಮೋದಿ ಹೆಜ್ಜೆ

ಮೋದಿ 3ನೇ ಸಲ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಒಂದೇ ತಿಂಗಳಲ್ಲಿ ಕಾಂಗ್ರೆಸ್ ಇಬ್ಬಾಗ!

1 year ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ