• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಮುಂದಿನ ವರ್ಷದಿಂದ ಅರ್ಜಿ ಪಡೆದು ರಾಜ್ಯೋತ್ಸವ ಪ್ರಶಸ್ತಿ ನೀಡುವುದಿಲ್ಲ

cknewsnow desk by cknewsnow desk
November 2, 2021
in STATE
Reading Time: 1 min read
0
ಮುಂದಿನ ವರ್ಷದಿಂದ ಅರ್ಜಿ ಪಡೆದು ರಾಜ್ಯೋತ್ಸವ ಪ್ರಶಸ್ತಿ ನೀಡುವುದಿಲ್ಲ
938
VIEWS
FacebookTwitterWhatsuplinkedinEmail

ರಾಜ್ಯೋತ್ಸವ ಪ್ರಶಸ್ತಿ ಮೊತ್ತ 5 ಲಕ್ಷ ರೂ.ಗಳಿಗೆ ಹೆಚ್ಚಳ

ಬೆಂಗಳೂರು: ಮುಂದಿನ ವರ್ಷದಿಂದ ರಾಜ್ಯೋತ್ಸವ ಪ್ರಶಸ್ತಿಯನ್ನು ಅರ್ಜಿ ಪಡೆದು ನೀಡಲಾಗುವುದಿಲ್ಲ. ಅದರ ಜತೆ ರಾಜ್ಯೋತ್ಸವ ಪ್ರಶಸ್ತಿಯ ಮೊತ್ತವನ್ನು 5 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಘೋಷಿಸಿದರು.

ಅವರು ರವೀಂದ್ರ ಕಲಾ ಕ್ಷೇತ್ರದಲ್ಲಿ ಆಯೋಜಿಸಿದ್ದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ – 2021ದಲ್ಲಿ ಪ್ರಶಸ್ತಿಗಳನ್ನು ಪ್ರದಾನ ಮಾಡಿ ಮಾತನಾಡುತ್ತಿದ್ದರು.

ರಾಜ್ಯೋತ್ಸವ ಈ ಪ್ರಶಸ್ತಿಯ ಮೌಲ್ಯ ಹೆಚ್ಚಬೇಕು. ಹಣದ ಮೊತ್ತ ಇಲ್ಲಿ ಮಹತ್ವದ್ದಲ್ಲ. ಆದರೆ ಸರ್ಕಾರವೇ ಅರ್ಹರನ್ನು ಗುರುತಿಸುತ್ತದೆ. ಎರಡು ತಿಂಗಳಿಗಿಂತ ಮುಂಚಿತವಾಗಿ ಆಯ್ಕೆ ಸಮೀತಿ ಸಾಧಕರನ್ನು ಪಟ್ಟಿ ಮಾಡುತ್ತದೆ. ನಂತರ ಸರ್ಕಾರವೇ ಸಾಧಕರನ್ನು ಅಯ್ಕೆ ಮಾಡಿ ಪ್ರಶಸ್ತಿ ನೀಡುತ್ತದೆ. ಇಂಥ ವ್ಯವಸ್ಥೆ ಜಾರಿಗೆ ಬರಲಿದೆ ಎಂದರು.

ಸರ್ಕಾರವೇ ಅರ್ಹರನ್ನು ಗುರುತಿಸಿದಾಗ ಪ್ರಶಸ್ತಿಯ ಮೌಲ್ಯ ನೂರು ಪಟ್ಟು ಹೆಚ್ಚುತ್ತದೆ. ಪ್ರಶಸ್ತಿ ಪಡೆಯುವವರ ನೋವು, ಅದರ ಹಿಂದಿರುವ ಕಠಿಣ ಪರಿಶ್ರಮವನ್ನು ಗುರುತಿಸಿ, ಸಮಾಜದಲ್ಲಿ ಸಾಧಕರಿಗೆ ಯಾವುದೇ ಕಷ್ಟವಾಗಬಾರದು ಎಂಬ ದೃಷ್ಟಿಯಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಇನ್ನು ಮುಂದೆ ಯಾರೂ ಬಯೋಡೇಟಾ ತಯಾರು ಮಾಡಬೇಕಾದ, ಪತ್ರಿಕಾ ತುಣುಕುಗಳನ್ನು ಜೋಡಿಸಿತಟ್ಟು ತೋರಿಸುವ ಅಗತ್ಯವಿಲ್ಲ ಎಂದು ಪ್ರಶಸ್ತಿ ಆಕಾಂಕ್ಷಿಗಳಿಗೆ ಕಿವಿ ಮಾತು ಹೇಳಿದರು.

ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಬಹಳ ಪ್ರತಿಷ್ಠಿತವಾದ್ದದ್ದು. ಇದರ ಮೌಲ್ಯ ಹೆಚ್ಚಾಗಬೇಕಾದರೆ ಆಯ್ಕೆ ಪ್ರಕ್ರಿಯೆ ಬದಲಾಗಬೇಕು. ಮಾಡದಂಡಗಳ ಪರಿಷ್ಕರಣೆಗೆ ಅಗತ್ಯ ಕ್ರಮ ವಹಿಸಲಾಗುವುದು. ಒಳ್ಳೆತನಕ್ಕೆ ಶಿಕ್ಷಣ ಬೇಕಾಗಿಲ್ಲ ಮನಸ್ಸು ಒಳ್ಳೆಯದಿರಬೇಕು. ಪೌರಕಾರ್ಮಿಕರಿಗೆ ದೊಡ್ಡ ಪ್ರಶಸ್ತಿ ನೀಡಿದರೆ ಇನ್ನೂ ಹೆಚ್ಚು ಕೆಲಸ ಮಾಡುತ್ತಾರೆ. ಆಯ್ಕೆ ಶೋಧನೆಯಿಂದಾಗಬೇಕು ಹೊರತಾಗಿ ಅರ್ಜಿಗಳಿಂದ ಅಲ್ಲ ಎಂದರು.

ಮುಖ್ಯಮಂತ್ರಿ @BSBommai ಅವರು ಇಂದು ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಆಯೋಜಿಸಲಾಗಿದ್ದ ೨೦೨೧ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡು ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಿದರು. (೧/೨)#ಕನ್ನಡರಾಜ್ಯೋತ್ಸವ೨೦೨೧ pic.twitter.com/suaLCbIAg4

— CM of Karnataka (@CMofKarnataka) November 1, 2021

ಪ್ರತಿಭೆಗೆ ವಯಸ್ಸಿನ ಗಡಿ ಮಿತಿಗಳಿಲ್ಲ

60 ವರ್ಷದ ಮೇಲ್ಪಟ್ಟವರಿಗೆ ಪ್ರಶಸ್ತಿ ನೀಡಬೇಕೆಂದು ಹಿಂದೆ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲಾಗಿದೆ. ಆದರೆ ಪ್ರತಿಭೆ ಎನ್ನುವುದು ವಯಸ್ಸಿಗೆ ಸಂಬಂಧಿಸಿದ್ದಲ್ಲ. ತಂತ್ರಜ್ಞಾನದ ಕಾಲದಲ್ಲಿ ಅದೇಷ್ಟೋ ಮಕ್ಕಳು ಎಷ್ಟೊಂದು ಕ್ಷೇತ್ರಗಳಲ್ಲಿ ಪ್ರತಿಭಾವಂತರಿದ್ದಾರೆ. ಕನ್ನಡ ನಾಡಿನಲ್ಲಿ ಎಷ್ಟು ನೀರಜ್ ಛೋಪ್ರಾ ಒಬ್ಬರಿಗೆ ಒಲಂಪಿಕ್ಸ್ ಚಿನ್ನದ ಪದಕ ದೊರೆತಿರುವುದು ಇಡೀ ದೇಶಕ್ಕೆ ಸ್ಫೂರ್ತಿ ದೊರೆತಿದೆ ಎಂದು ಅಭಿಪ್ರಾಯ ಪಟ್ಟ ಮುಖ್ಯಮಂತ್ರಿಗಳು ವಯಸ್ಸನ್ನು ಕಡಿಮೆ ಮಾಡುವ ಕುರಿತು ನ್ಯಾಯಾಲಯದಲ್ಲಿ ಅಫಿಡವಿಟ್ ಸಲ್ಲಿಸಿ ಅನುಮತಿ ಪಡೆಯುವ ಕೆಲಸವನ್ನು ಮುಂದಿನ ವರ್ಷ ಮಾಡಲಿದ್ದೇವೆ. ಜತೆಗೆ, ಪ್ರಶಸ್ತಿಗೆ ಹಿರಿಯರ ಜೊತೆಗೆ ವಿಶೇಷ ಪ್ರತಿಭೆಗಳನ್ನು ಗುರುತಿಸಲಾಗುವುದು ಎಂದರು.

ಕಂದಾಯ ಸಚಿವ ಆರ್ ಅಶೋಕ್, ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ ಸುನೀಲ್ ಕುಮಾರ್ ಮತ್ತು ಇತರರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

Tags: Bengaluruchief minister basavaraj bommaikannada rajyotsavarajyotsava awards 2021
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಗುಡಿಬಂಡೆ ಪಟ್ಟಣ ಪಂಚಾಯಿತಿ ಚುನಾವಣೆಗೆ ಕ್ಷಣಗಣನೆ

ಗುಡಿಬಂಡೆ ಪಟ್ಟಣ ಪಂಚಾಯಿತಿ ಚುನಾವಣೆಗೆ ಕ್ಷಣಗಣನೆ

Leave a Reply Cancel reply

Your email address will not be published. Required fields are marked *

Recommended

ದೇವರಾಜ ಅರಸು ಆಶಯ ಉಲ್ಟಾ ಮಾಡಿದ ಬಿಜೆಪಿ!!

ಸಂಕಷ್ಟ ಸೂತ್ರ ಇಲ್ಲದಿರುವುದೇ ಸಂಕಷ್ಟಕ್ಕೆ ಕಾರಣ ಎಂದು ಕೈಚೆಲ್ಲಿದ ಸಿದ್ದರಾಮಯ್ಯ

3 years ago
ಲಾಕ್ ಡೌನ್ ಇಲ್ಲ

ವೈಫಲ್ಯ ಮುಚ್ಚಿಕೊಳ್ಳಲು ಬೊಮ್ಮಾಯಿ ಬುಲ್ಡೋಜರ್ ಜಪ

4 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ