• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home GUEST COLUMN

ದೀಪಾವಳಿ ಹಬ್ಬಕ್ಕೆ ದೀಪದಾನ; ಹಾಗೆಂದರೇನು?

cknewsnow desk by cknewsnow desk
November 4, 2021
in GUEST COLUMN, STATE
Reading Time: 1 min read
1
ದೀಪಾವಳಿ ಹಬ್ಬಕ್ಕೆ ದೀಪದಾನ; ಹಾಗೆಂದರೇನು?

Photo courtesy: Wikipedia

968
VIEWS
FacebookTwitterWhatsuplinkedinEmail

ಇಂದು ಬೆಳಕಿನ ಹಬ್ಬ ದೀಪಾವಳಿ

ಅನಾದಿ ಕಾಲದಿಂದ ಐದು ದಿನಗಳ ದೀಪಾವಳಿ ಇಂದು ಎರಡು ಅಥವಾ ಮೂರು ದಿನಕ್ಕೆ ಬಂದು ನಿಂತಿದೆ. ಆದರೂ ಹಬ್ಬದ ಸಡಗರ ತಗ್ಗಿಲ್ಲ. ಬೆಳಕಿನ ಹಬ್ಬದ ಕೆಲ ಸ್ವಾರಸ್ಯಗಳನ್ನು ಇಲ್ಲಿ ಬರೆದಿದ್ದಾರೆ ನಮ್ಮ ಅಂಕಣಕಾರ ಡಾ.ಗುರುಪ್ರಸಾದ್‌ ಹವಲ್ದಾರ್.‌

ನಮ್ಮ ಭಾರತೀಯ ಪರಂಪರೆಯಲ್ಲಿ “ಅಸತೋಮಾ ಸದ್ಗಮಯಾ, ತಮಸೋ ಮಾ ಜ್ಯೋತಿರ್ಗಮಯ”, ಎಂಬ ಮಾತಿದೆ. ಮನುಷ್ಯನಲ್ಲಿರುವ ಅಂಧಕಾರ, ಅಜ್ಞಾನ, ಬುದ್ಧಿ, ಆಚಾರ, ವಿಚಾರಗಳಿಗೆ ಅಂಟಿಕೊಂಡಿರುವಂತಹ ಕತ್ತಲೆಯನ್ನು ಹೋಗಲಾಡಿಸುವಂತಹದ್ದು ಎಂಬರ್ಥ ಕೂಡ ಇದೆ. ಜೀವನದ, ಮನದ ಎಲ್ಲಾ ಋಣಾತ್ಮಕ ಅಂಶಗಳನ್ನು ಹೋಗಲಾಡಿಸಲು ದೀಪ ಬೆಳಗುವ ಬೆಳಕಿನ ಹಬ್ಬ ದೀಪಾವಳಿ. ನಮ್ಮ ಜೀವನದ ಕಷ್ಟಗಳನ್ನು ಹೊಡೆದೋಡಿಸಿ ಬೆಳಕನ್ನು ಕಂಡು ಸಂಭ್ರಮಿಸುವಂತಹ ವಿಶೇಷ ಹಬ್ಬ ಇದಾಗಿದೆ.

ದೀಪಾವಳಿಯನ್ನು ನಾವು ಇಂದು ಮೂರು ದಿನಗಳಿಗೆ ಸೀಮಿತಗೊಳಿಸಿದರೂ ಮೂಲತಃ ಅದು ಐದು ದಿನಗಳ ಹಬ್ಬ. ಈ ಐದು ದಿನಗಳಲ್ಲಿ ಮೊದಲ ದಿನ ನೀರು ತುಂಬುವುದು, ಎರಡನೇ ದಿನ ನರಕ ಚತುರ್ದಶಿ, ಮೂರನೇ ದಿನ ದೀಪಾವಳಿ ಅಮವಾಸ್ಯೆ, ನಾಲ್ಕನೇ ದಿನ ಬಲಿಪಾಡ್ಯಮಿ ಹಾಗೂ ಐದನೇ ದಿನ ಯಮದ್ವಿತೀಯ ಆಚರಣೆ ಇರುತ್ತದೆ.

ಬೌದ್ಧರಲ್ಲಿರುವ ಹಲವಾರು ಪಂಗಡಗಳು ದೀಪಾವಳಿಯ ಮೂರು ದಿನ ಪೂಜೆ ಮಾಡುತ್ತಾರೆ. ಸಿಖ್ಖರು ಕೂಡ ಆಚರಿಸುತ್ತಾರೆ.  ಜೈನರು, ಬೌದ್ಧರು ಸಿಖ್ಖರು, ಹಿಂದುಗಳು, ಕಾಡಿನಿಂದ ಹಿಡಿದು ನಾಡಿನ ಜನರವರೆಗೂ ಆಚರಿಸುವ ಪುರಾತನ ಹಬ್ಬ.

ದೀಪಾವಳಿ ಹಬ್ಬ ಎಂದ ತಕ್ಷಣ ಕಣ್ಣಮುಂದೆ ಬರುವುದು ದೀಪ, ಹಣತೆ, ಬೆಳಕು. ನಾವು ಪ್ರತಿನಿತ್ಯ ಮನೆಯಲ್ಲಿ ಬೆಳಗ್ಗೆ ಮತ್ತು ಸಾಯಂಕಾಲ ದೀಪ ಬೆಳಗುತ್ತೇವೆ. ದೀಪಾವಳಿ ಹಬ್ಬದಲ್ಲಿ ಹಣತೆ, ದೀಪ, ಬೆಳಕಿಗೆ ಬಹಳ ಪ್ರಾಮುಖ್ಯತೆ ಏಕೆ ಎಂದು ನೋಡಿದರೆ, ನಮ್ಮ ಸಂಸ್ಕೃತಿಯಲ್ಲಿ ದೀಪ ಬೆಳಗುವ ಮೂಲಕವೇ ಯಾವುದೇ ಕೆಲಸವನ್ನು ಆರಂಭಿಸುವುದು. ನಂದಾದೀಪವನ್ನು ಹಚ್ಚಿ ಪೂಜೆ ಪ್ರಾರಂಭಿಸುತ್ತೇವೆ. ದೀಪಗಳನ್ನೇ ಇಟ್ಟು ದೀಪದಿಂದಲೇ ಬೆಳಗುತ್ತೇವೆ.

ಈ ಹಬ್ಬವು ಅಸುರಿ ಗುಣಗಳ ಮೇಲೆ ದೇವತ್ವದ ವಿಜಯದ ಪ್ರತೀಕವಾಗಿದೆ. ದೀಪಾವಳಿಯಂದು ಎಲ್ಲರೂ ತಮ್ಮ-ತಮ್ಮ ಮನೆಗಳನ್ನು, ಗಲ್ಲಿಗಳನ್ನು, ಅಂಗಡಿಗಳನ್ನು ದೀಪಗಳಿಂದ ಬೆಳಗಿಸುತ್ತಾರೆ. ಇದರ ಜೊತೆ-ಜೊತೆಗೆ ಮನಸ್ಸಿನ ಅಜ್ಞಾನದ ಕತ್ತಲನ್ನು ದೂರಮಾಡುವಂತಹ ಜ್ಞಾನದೀಪವನ್ನು ಬೆಳಗಿಸಿಕೊಳ್ಳುವುದು ಸಹ ಅವಶ್ಯಕವಾಗಿದೆ.

ಇಲ್ಲಿ ಅಮಾವಾಸ್ಯೆಯು ಅಜ್ಞಾನ ಅಂಧಕಾರದ ಪ್ರತೀಕವಾಗಿದೆ. ಆಧ್ಯಾತ್ಮಿಕ ಭಾಷೆಯಲ್ಲಿ ಕತ್ತಲನ್ನು ಅಜ್ಞಾನವೆಂದು ಕರೆಯುತ್ತಾರೆ. ಹಾಗಾಗಿ ಭಕ್ತರು ಭಗವಂತನಲ್ಲಿ ಈ ರೀತಿ ಮೊರೆ ಇಡುತ್ತಾರೆ – ‘ದೇವರೇ, ನಮ್ಮನ್ನು ಅಜ್ಞಾನದಿಂದ ಜ್ಞಾನದ ಕಡೆಗೆ ಕರೆದುಕೊಂಡು ಹೋಗು, ಕತ್ತಲಿನಿಂದ ಬೆಳಕಿನಡೆಗೆ ಕರೆದುಕೊಂಡು ಹೋಗು, ಮೃತ್ಯುವಿನಿಂದ ಅಮರತ್ವದೆಡೆಗೆ ಕರೆದುಕೊಂಡು ಹೋಗು.’ ಯಾರು ಈ ದೀಪಾವಳಿಯಂದು ದೀಪದಾನ ಮಾಡುತ್ತಾರೆಯೋ ಅವರು ಅಕಾಲ-ಮೃತ್ಯುವಿನಿಂದ ದೂರವಾಗುತ್ತಾರೆ ಎಂಬ ಪ್ರತೀತಿಯೂ ಸಹ ಇದೆ. ದೀಪದಾನ ಮಾಡುವುದೆಂದರೆ ‘ಜ್ಞಾನ-ದಾನ ಮಾಡುವುದು.

ಇಂದಿಗೂ ಸಹ ಸಾಧಕರು ದೀಪೋತ್ಸವದ ರಾತ್ರಿಯನ್ನು ಸಾಧನೆಯ ದೃಷ್ಟಿಕೋನದಿಂದ ‘ಮಹಾರಾತ್ರಿ’ಯೆಂದು ಕಾಣುತ್ತಾರೆ. ಅವರ ಪ್ರಕಾರ ಈ ರಾತ್ರಿಯು ಸಾಧಕರಿಗೆ ಇನ್ನೂ ಹೆಚ್ಚಿನ ಶಕ್ತಿ ಮತ್ತು ಯುಕ್ತಿಯನ್ನು ತಂದುಕೊಡುತ್ತದೆ. ಆದ್ದರಿಂದ ಸಾಧಕರು ಈ ರಾತ್ರಿಯಂದು ಹೆಚ್ಚಿನ ಸಾಧನೆಯನ್ನು ಮಾಡುತ್ತಾರೆ. ಈ ಮಾನ್ಯತೆಯು ಕಲಿಯುಗದ ಘೋರ ಅಜ್ಞಾನರಾತ್ರಿಯ ಪ್ರತೀಕವಾಗಿದೆ. ಕಲಿಯುಗದ ಈ ತಮೋಪ್ರಧಾನ ಅಂತಿಮ ಚರಣದಲ್ಲಿ ಯಾರು ಪರಮಾತ್ಮನ ಮಾರ್ಗದಲ್ಲಿ ಅವನು ಹೇಳಿದಂತೆ ನಡೆಯುತ್ತಾರೆಯೋ ಅವರಿಗೆ ಸರ್ವಸಿದ್ಧಿಗಳು ದೊರೆಯುತ್ತವೆ.ದೀಪ ಹೇಗೆ ತನ್ನನ್ನು ತಾನು ಉರಿದುಕೊಂಡು ಸುತ್ತಲಿಗೆ ಬೆಳಕು ಕೊಡುತ್ತದೋ ಮನುಷ್ಯ ಕೂಡ ತಾನು ತ್ಯಾಗ ಮಾಡಿ ಸುತ್ತಲಿನವರ ಬಾಳಿಗೆ ಬೆಳಕಾಗಬೇಕು.

ಡಾ.ಗುರುಪ್ರಸಾದ ಹವಲ್ದಾರ್

  • ಮೂಲತಃ ಉಪನ್ಯಾಸಕರು. ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲ್ಲೂಕಿನ ಮರಿಯಮ್ಮನ ಹಳ್ಳಿಯವರು. ಪ್ರಸ್ತುತ ಹಗರಿಬೊಮ್ಮನಹಳ್ಳಿ ಜಿವಿಪಿಪಿ ಪದವಿ ಕಾಲೇಜನಲ್ಲಿ ಕನ್ನಡ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತ ಜೊತೆಗೆ ಪತ್ರಿಕೆಗಳಿಗೆ ವೆಬ್ ನ್ಯೂಸ್ ಪೋಟ್೯ಲ್ ಗಳಿಗೆ ಲೇಖನ ಬರೆಯುತ್ತಿದ್ದಾರೆ.
Tags: DeepavaliDiwaliDiwali lampfestivals of Indiafestivals of karnatakaguest column
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ದೀಪಾವಳಿಯ ಬೆಡಗು, ಜತೆಗೊಂದು ರಾಕೆಟ್ ಮತ್ತು ನಮ್ಮೂರಿನ ಪ್ಯಾಂಟ್‌ ಅಶ್ವತ್ಥಮ್ಮ

ದೀಪಾವಳಿಯ ಬೆಡಗು, ಜತೆಗೊಂದು ರಾಕೆಟ್ ಮತ್ತು ನಮ್ಮೂರಿನ ಪ್ಯಾಂಟ್‌ ಅಶ್ವತ್ಥಮ್ಮ

Comments 1

  1. Pingback: ದೀಪಾವಳಿಯ ಬೆಡಗು, ಜತೆಗೊಂದು ರಾಕೆಟ್ ಮತ್ತು ನಮ್ಮೂರಿನ ಪ್ಯಾಂಟ್‌ ಅಶ್ವತ್ಥಮ್ಮ - cknewsnow

Leave a Reply Cancel reply

Your email address will not be published. Required fields are marked *

Recommended

ಎಂಜಿನಿಯರಿಂಗ್ ಪ್ರವೇಶ: ಡಿ.31ರವರೆಗೂ ಅವಕಾಶ

ಎಂಜಿನಿಯರಿಂಗ್ ಪ್ರವೇಶ: ಡಿ.31ರವರೆಗೂ ಅವಕಾಶ

4 years ago
ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

11 months ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ