• About
  • Advertise
  • Careers
  • Contact
Thursday, October 29, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಮನೆಗಳಿಗೆ ಕೆರೆ ನೀರು!

cknewsnow desk by cknewsnow desk
November 6, 2021
in STATE
Reading Time: 1 min read
0
ಮನೆಗಳಿಗೆ ಕೆರೆ ನೀರು!
1.2k
VIEWS
FacebookTwitterWhatsuplinkedinEmail

ಹೊಸ ಘೋಷಣೆ ಮಾಡಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್!!

ಚಿಕ್ಕಬಳ್ಳಾಪುರ: ಹೆಚ್ಚು ಶೇಖರಣಾ ಸಾಮರ್ಥ್ಯವಿರುವ ಕೆರೆಗಳಿಂದ ಮನೆಮನೆಗಳಿಗೆ ನೀರು ಪೂರೈಸಲು ಯೋಜನೆ ರೂಪಿಸುವ ಬಗ್ಗೆ ಚರ್ಚಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಗೌರಿಬಿದನೂರು ಮೊದಲಾದ ಕಡೆಗಳಲ್ಲಿ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ, ಚಾಲನೆ ನೀಡಿ ಮಾತನಾಡಿದ ಸಚಿವರು, ಪ್ರಧಾನಿ ನರೇಂದ್ರ ಮೋದಿಯವರು ಜಲಜೀವನ್ ಮಿಷನ್ ಯೋಜನೆ ಜಾರಿ ಮಾಡಿದ್ದಾರೆ. ಗ್ರಾಮೀಣ ಪ್ರದೇಶಗಳ ಜನರು ಇಂದಿಗೂ ಕೆರೆ, ಬಾವಿಗಳಿಂದ ನೀರನ್ನು ತರುವ ಪರಿಸ್ಥಿತಿ ಇದೆ. ಮನೆಗೆ ನೀರು ಪೂರೈಸಲು ಕಳೆದ 70 ವರ್ಷಗಳಲ್ಲೂ ಸಾಧ್ಯವಾಗಿಲ್ಲ. ಮುಂದಿನ ಎರಡು ವರ್ಷದೊಳಗೆ ನೀರಿನ ಲಭ್ಯತೆ ಇರುವೆಡೆ ನೋಡಿಕೊಂಡು ಕೊಳಾಯಿ ಸಂಪರ್ಕ ಕಲ್ಪಿಸಲು ಯೋಜನೆ ರೂಪಿಸಲಾಗಿದೆ. ಹೆಚ್ಚು ಶೇಖರಣಾ ಸಾಮರ್ಥ್ಯ ಇರುವ ಕೆರೆಗಳಿಗೆ ಹೊಂದಿಕೊಂಡ ಹಳ್ಳಿಗಳಲ್ಲಿ ಮನೆಮನೆಗೆ ನೀರು ನೀಡುವ ಕೆಲಸ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಚಿಕ್ಕಬಳ್ಳಾಪುರ ತಾಲೂಕು ಹಾಗೂ ಮಂಚೇನಹಳ್ಳಿಯಲ್ಲಿ ಈ ರೀತಿಯಲ್ಲಿ ಮಾಡಲಾಗಿದೆ. ಈ ಬಗ್ಗೆ ಪ್ರತ್ಯೇಕ ಸಭೆ ನಡೆಸಿ ಕೆರೆಗಳಿಂದ ನೀರು ನೀಡುವ ಯೋಜನೆ ರೂಪಿಸಲಾಗುವುದು ಎಂದರು.

ಎಚ್‍ಎನ್ ವ್ಯಾಲಿ, ಕೆಸಿ ವ್ಯಾಲಿಯಿಂದ ಅನೇಕ ಕೆರೆಗಳು ತುಂಬಿದೆ. ಆದರೂ ಅಂತರ್ಜಲ ವೃದ್ಧಿ ಕಷ್ಟವಾಗಿದೆ. ಆದರೆ ಉತ್ತಮ ಮಳೆಯಾಗಿರುವುದರಿಂದ ಶೇ.50 ಕ್ಕೂ ಹೆಚ್ಚು ಕೆರೆಗಳು ತುಂಬಿವೆ. ಮಂಚೇನಹಳ್ಳಿಯನ್ನು ತಾಲೂಕಾಗಿ ರೂಪಿಸುವ ಕೆಲಸವಾಗಿದೆ. ಮಂಚೇನಹಳ್ಳಿಯಲ್ಲಿ ಸಾರ್ವಜನಿಕ ಆಸ್ಪತ್ರೆಗೆ ಹೊಸ ರೂಪ ನೀಡಲಿದ್ದು, ಸಚಿವ ಸಂಪುಟದಲ್ಲಿ ಚರ್ಚೆಯಾಗಬೇಕಿದೆ. ಶೀಘ್ರದಲ್ಲೇ ಸಂಪುಟಕ್ಕೆ ತಂದು ಮಂಜೂರಾತಿ ನೀಡಿ ಜನವರಿ ಒಳಗೆ ಭೂಮಿಪೂಜೆ ಮಾಡಲು ಪ್ರಯತ್ನಿಸಲಾಗುವುದು. ಇದು 100 ಹಾಸಿಗೆ ಇರುವ ಆಸ್ಪತ್ರೆಯಾಗಲಿದೆ ಎಂದರು.

ಈ ಭಾಗದಲ್ಲಿ ಗುಡಿ ಕೈಗಾರಿಕೆಗೆ ಹೆಚ್ಚು ಒತ್ತು ನೀಡಬೇಕು. ಇದರಿಂದ ಯುವಜನರಿಗೆ ಹೆಚ್ಚು ಉದ್ಯೋಗಾವಕಾಶ ನೀಡಲು ಸಾಧ್ಯವಾಗುತ್ತದೆ. ಒಂದನೇ ಹಾಗೂ ಎರಡನೇ ಹಂತದ ಕೈಗಾರಿಕಾಭಿವೃದ್ಧಿಗೆ ಪೂರ್ಣ ಪ್ರಮಾಣದ ಭೂಮಿ ಬಳಸಿಲ್ಲ. 3 ನೇ ಹಂತಕ್ಕೆ ಮೊದಲು 1, 2 ನೇ ಹಂತದಲ್ಲೇ ಜಮೀನು ಬಳಸಬೇಕಿದೆ. ಈ ನಿಟ್ಟಿನಲ್ಲಿ ಸರ್ಕಾರ ಕ್ರಮ ವಹಿಸಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇದೇ ತಿಂಗಳು ಜಿಲ್ಲೆಗೆ ಬರಲಿದ್ದು, ನೀರಾವರಿ, ಹಾಲು ಉತ್ಪಾದಕ ಸಂಘದ ವಿಚಾರದಲ್ಲಿ ಅವರು ತೀರ್ಮಾನ ಪ್ರಕಟಿಸಲಿದ್ದಾರೆ ಎಂದರು.

ಗ್ರಾಮ ವಿಕಾಸ ಯೋಜನೆಗೆ ಸಂಬಂಧಿಸಿದಂತೆ ಬಿಸಲಹಳ್ಳಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ನನ್ನ ವಿಧಾನಸಭಾ ಕ್ಷೇತ್ರದಲ್ಲಿ 430 ಗ್ರಾಮಗಳಿದ್ದು, ಗ್ರಾಮ ವಿಕಾಸ ಯೋಜನೆಗೆ ಬಿಸಲಹಳ್ಳಿ ಗ್ರಾಮ ಆರಿಸಿದ್ದೇನೆ. 1.64 ಕೋಟಿ ರೂ. ಈ ಗ್ರಾಮಕ್ಕೆ ದೊರೆತಿದೆ. ಪುರ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ ನಡೆಯುತ್ತಿದ್ದು, ಸ್ಥಳದಲ್ಲೇ ಅಹವಾಲು ಆಲಿಸಿ ಪರಿಹರಿಸಲಾಗುವುದು ಎಂದರು.

ಗೌರಿಬಿದನೂರಿನಲ್ಲಿ ನಗರೋತ್ಥಾನ ಹಂತ-3 ರಡಿ, ಕುಡಿಯುವ ನೀರಿನ ಯೋಜನೆಗೆ ಚಾಲನೆ, ಪೌರಕಾರ್ಮಿಕ ಗೃಹಭಾಗ್ಯ ಯೋಜನೆಯಡಿ ನಿರ್ಮಿಸಿದ ಮನೆಗಳಿಗೆ ಚಾಲನೆ, 30 ಪೌರಕಾರ್ಮಿಕರಿಗೆ ಇ-ಖಾತಾ ವಿತರಣೆ ಮೊದಲಾದ ಕಾರ್ಯಕ್ರಮಗಳಲ್ಲಿ ಸಚಿವರು ಪಾಲ್ಗೊಂಡರು.

ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ಮತ್ತು ಉದ್ಘಾಟನೆ ವಿವರ

ಗೌರಿಬಿದನೂರು ನಗರಸಭೆಯ ನಗರೋತ್ಥಾನ (ಮುನಿಸಿಪಾಲಿಟಿ) ಹಂತ-3 ಯೋಜನೆಯಡಿ ಕುಡಿಯುವ ನೀರಿನ ಕಾಮಗಾರಿಗಳಿಗೆ ಸುಮಾರು 500.00 ಲಕ್ಷ ಎಂದು ಅಂದಾಜಿಸಲಾಗಿದೆ. ಹಂತ-3 ರ ಯೋಜನೆಯಡಿ ಕುಡಿಯುವ ನೀರಿನ ಕಾಮಗಾರಿ ವಿವರ ಇಂತಿದೆ.
5 ಲಕ್ಷ ಲೀಟರ್ ಸಾಮರ್ಥ್ಯದ 3 ಸಂಖ್ಯೆ ಓಂ.ಹೆಚ್.ಟಿ ನಿರ್ಮಾಣ.
1 ಲಕ್ಷ ಲೀಟರ್ ಸಾಮರ್ಥ್ಯದ 4 ಸಂಖ್ಯೆ ಜಿ.ಎಲ್.ಎಸ್.ಆರ್ ನಿರ್ಮಾಣ.
2.5 ಲಕ್ಷ ಲೀಟರ್, 1 ಸಂಖ್ಯೆ ಜಿ.ಎಲ್.ಎಸ್.ಆರ್ ನಿರ್ಮಾಣ.
2 ಕಿ.ಮೀ ಉದ್ದ ಪೈಪ್ ಲೈನ್ ಅಳವಡಿಸುವುದು.
2 ಪಂಪ್ ಹೌಸ್ ನಿರ್ಮಿಸುವುದು.
4 ಕೊಳವೆ ಬಾವಿ ಕೊರೆದು ಪಂಪ್/ಹೌಸ್ ಅಳವಡಿಸುವ ಕಾಮಗಾರಿಗಳಿಗೆ ಶಂಕುಸ್ಥಾಪನೆ
ಮತ್ತು 170.78 ಲಕ್ಷದಲ್ಲಿ 19 ಮತ್ತು 20 ವಾರ್ಡ್ ಗಳಲ್ಲಿ ನಿರ್ಮಿಸಿರುವ ಎರಡು ಓ.ಹೆಚ್.ಟಿ ಗಳು ಉದ್ಘಾಟನೆಯನ್ನು ನೆರವೇರಿಸಲಾಯಿತು.
ಕಾರ್ಯಕ್ರಮದಲ್ಲಿ 8.60 ಕೋಟಿ ರೂಪಾಯಿಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ಮತ್ತು ಉದ್ಘಾಟನೆ ಮಾಡಲಾಯಿತು.

ಈ ಸಂದರ್ಭದಲ್ಲಿ ಶಾಸಕರಾದ ಎನ್.ಎಚ್.ಶಿವಶಂಕರರೆಡ್ಡಿ, ಗೌರಿಬಿದನೂರು ನಗರಸಭೆ ಅಧ್ಯಕ್ಷರಾದ ಕೆ.ಎಂ.ಗಾಯತ್ರಿ, ಉಪಾಧ್ಯಕ್ಷರಾದ ಭಾಗ್ಯಮ್ಮ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಎಂ.ರೇಣುಕಾ, ನಗರಸಭೆಯ ಎಲ್ಲಾ ಸದಸ್ಯರು, ನಾಮ ನಿರ್ದೇಶಿತ ಸದಸ್ಯರು,ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
Tags: chikkaballapuracknewsnowdr k sudhakardrinking waterhealth ministernewstank water for homes
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

by cknewsnow desk
October 28, 2026
0

ಬೆಂಗಳೂರಿನಲ್ಲಿ 43.13% ಮತದಾರರ ಪ್ರಮಾಣ ಕುಸಿತ

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

by cknewsnow desk
October 25, 2026
0

ಹಾಲಿ ಮುಖ್ಯಮಂತ್ರಿ ವಿರುದ್ಧ ಕೇಂದ್ರ ಸಚಿವರ ಗಂಭೀರ ಆರೋಪ; ಈಗಿನ ಮಹಾನ್ ಮುಖ್ಯಮಂತ್ರಿಗಳೇ ಸ್ಟಿಂಗ್ ಮೂಲಪುರುಷ

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

by cknewsnow desk
October 25, 2026
0

ಸ್ಟಿಂಗ್ ಆಪರೇಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ್ದು ಇಬ್ಬಗೆ ನೀತಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

by cknewsnow desk
October 25, 2026
0

ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ; #kpsc ಹಗರಣದ ದಿಕ್ಕು ತಪ್ಪಿಸಲು ಪ್ರಿಯಾಂಕ್ ಖರ್ಗೆ ಒದ್ದಾಟ

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

by cknewsnow desk
October 22, 2026
0

ಬೇಸತ್ತು ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದ ಕೇಂದ್ರ ಸಚಿವ #HDK

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

by cknewsnow desk
October 22, 2026
0

ಮೈಸೂರು ದಸರಾದಲ್ಲಿ ಅವಮಾನ ಪ್ರಸಂಗ; ಬಾಯಲ್ಲಿ ಜಾತ್ಯತೀತ ತತ್ವ, ಆಚರಣೆಯಲ್ಲಿ ಅಸೃಶ್ಯತೆ!; ಕಾಂಗ್ರೆಸ್ ವಿರುದ್ಧ ಜೆಡಿಎಸ್ ವಾಗ್ದಾಳಿ

Next Post
ನಮ್ಮ ನೀರು ಕುಡಿದು ನಮ್ಮ ನೀರಾವರಿ ಯೋಜನೆಗಳಿಗೇ ಅಡ್ಡಿ

ನಮ್ಮ ನೀರು ಕುಡಿದು ನಮ್ಮ ನೀರಾವರಿ ಯೋಜನೆಗಳಿಗೇ ಅಡ್ಡಿ

Leave a Reply Cancel reply

Your email address will not be published. Required fields are marked *

Recommended

ಖುದಿರಾಮ್‌ ಬೋಸ್‌ ಎಂಬ ಕುದಿಯುವ ಜ್ವಾಲಾಮುಖಿ

ಖುದಿರಾಮ್‌ ಬೋಸ್‌ ಎಂಬ ಕುದಿಯುವ ಜ್ವಾಲಾಮುಖಿ

5 years ago
ಸಿದ್ದರಾಮಯ್ಯ ಅವಧಿಯಲ್ಲಿ 32 ಕೊಲೆಗಳಾಗಿವೆ

ಸಿದ್ದುಗೆ ಸುತ್ತಿಕೊಂಡ ಮಾಂಸಾಹಾರ ಸೇವನೆ ವಿವಾದ

4 years ago

Popular News

  • #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    0 shares
    Share 0 Tweet 0
  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0
  • 10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

October 28, 2026
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

October 25, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ