• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home POLITICS

ಬಿಜೆಪಿ ಕುಟುಂಬ ರಾಜಕಾರಣದ ಪಟ್ಟಿ ಕೊಟ್ಟ ಜೆಡಿಎಸ್‌

cknewsnow desk by cknewsnow desk
November 14, 2021
in POLITICS, STATE
Reading Time: 1 min read
0
ಬಿಜೆಪಿ ಕುಟುಂಬ ರಾಜಕಾರಣದ ಪಟ್ಟಿ ಕೊಟ್ಟ ಜೆಡಿಎಸ್‌
1.1k
VIEWS
FacebookTwitterWhatsuplinkedinEmail

ಆಪರೇಷನ್‌ ಕಮಲ ರಾಷ್ಟ್ರೀಕರಣ ಮಾಡಿದ ಬಿಜೆಪಿ; ಕೇಸರಿ ಪಾಳೆಯಕ್ಕೆ ಟಾಂಗ್‌ ಕೊಟ್ಟ ಜಾತ್ಯತೀತ ಜನತಾದಳ

ಬೆಂಗಳೂರು: ಜೆಡಿಎಸ್‌ ಪಕ್ಷದ್ದು ಕುಟುಂಬ ರಾಜಕಾರಣ ಎಂದು ಹೇಳಿದ್ದ ಬಿಜೆಪಿಗೆ ಅಷ್ಟೇ ತೀವ್ರ ಟಾಂಗ್‌ ಕೊಟ್ಟಿದೆ ಜೆಡಿಎಸ್.‌

ಕುಟುಂಬ ರಾಜಕಾರಣದ ರೆಂಬೆಕೊಂಬೆಗಳು ಎಷ್ಟೊಂದು ಸಮೃದ್ಧವಾಗಿದೆ ಎಂದು ಟ್ವೀಟ್‌ ಮಾಡಿದ್ದ ಬಿಜೆಪಿಗೆ ಟ್ವೀಟ್‌ ಮೂಲಕ ತಿರುಗೇಟು ನೀಡಿರುವ ಜೆಡಿಎಸ್‌, ಕೇಸರಿ ಪಾಳೆಯದಲ್ಲಿರುವ ಕುಟುಂಬ ರಾಜಕಾರಣದ ಪಟ್ಟಿಯನ್ನೇ ಉಲ್ಲೇಖ ಮಾಡಿದೆ. ಜೆಡಿಎಸ್‌ ಟ್ವೀಟ್‌ ಸಾರಾಂಶ ಹೀಗಿದೆ;

ಬಿಜೆಪಿ ಹೇಳುವುದೊಂದು, ಮಾಡುವುದು ಇನ್ನೊಂದು. ಮನೆಯಲ್ಲಿ ಒಂದು ಮುಖ! ಬೀದಿಯಲ್ಲಿ ಇನ್ನೊಂದು ಮುಖ! ಒಡಕು ರಾಜಕಾರಣದ ಪಕ್ಷಕ್ಕೆ ಹೊಲಸು ರಾಜಕಾರಣದಲ್ಲಿ ಹೆಚ್ಚು ನಂಬಿಕೆ ಎನ್ನುವುದು ʼಆಪರೇಷನ್ ಕಮಲʼದ ಮೂಲಕ ರಚನೆ ಮಾಡಿದ ಸರಕಾರಗಳೇ ಸಾಕ್ಷಿ.

ಕುಟುಂಬ ರಾಜಕಾರಣದಲ್ಲಿ ಬಿಜೆಪಿ ದೇಶದ ಎಲ್ಲ ಪಕ್ಷಗಳ ದಾಖಲೆಗಳನ್ನು ಸರಿಗಟ್ಟದೆ. ಕರ್ನಾಟಕದ ಮಟ್ಟಿಗಂತೂ ಕೇಸರಿ ಕಲಿಗಳದ್ದು ಸಾರ್ವಕಾಲಿಕ ದಾಖಲೆಯೇ ಸರಿ. ಪಟ್ಟಿ ಹನುಮಂತನ ಬಾಲದಂತೆ ಬೆಳೆಯುತ್ತಲೇ ಇದೆ.

ಬಿಜೆಪಿ ಹೇಳುವುದೊಂದು, ಮಾಡುವುದು ಇನ್ನೊಂದು. ಮನೆಯಲ್ಲಿ ಒಂದು ಮುಖ! ಬೀದಿಯಲ್ಲಿ ಇನ್ನೊಂದು ಮುಖ! ಒಡಕು ರಾಜಕಾರಣದ ಪಕ್ಷಕ್ಕೆ ಹೊಲಸು ರಾಜಕಾರಣದಲ್ಲಿ ಹೆಚ್ಚು ನಂಬಿಕೆ ಎನ್ನುವುದು ʼಆಪರೇಷನ್ ಕಮಲʼದ ಮೂಲಕ ರಚನೆ ಮಾಡಿದ ಸರಕಾರಗಳೇ ಸಾಕ್ಷಿ. (1/8)

— Janata Dal Secular (@JanataDal_S) November 14, 2021

1.ಯಡಿಯೂರಪ್ಪ ಕುಟುಂಬ

ಯಡಿಯೂರಪ್ಪ ಮಾಜಿ ಮುಖ್ಯಮಂತ್ರಿ. ಹಿರಿಮಗ ಲೋಕಸಭೆ ಸದಸ್ಯ, ಕಿರಿಮಗ ಪಕ್ಷದ ಉಪಾಧ್ಯಕ್ಷ.

2.ಬಳ್ಳಾರಿ ರೆಡ್ಡಿ ಕುಟುಂಬ

ಕರುಣಾಕರ ರೆಡ್ಡಿ ಶಾಸಕ, ಅವರ ಸಹೋದರ ಸೋಮಶೇಖರ ರೆಡ್ಡಿ ಕೂಡ ಶಾಸಕ. ಇನ್ನೊಬ್ಬ ಸಹೋದರ ಬಿಜೆಪಿ  ನಾಯಕರೇ. ಅವರ ಗೆಳೆಯ ಶ್ರೀರಾಮುಲು ಈಗ ಮಂತ್ರಿ. ಮಾಜಿ ಎಂಪಿ ಶಾಂತಾ ಅವರು ಶ್ರೀರಾಮುಲು ತಂಗಿ. ಸಣ್ಣ ಫಕೀರಪ್ಪ ಕೂಡ ಅವರ ಪೈಕಿಯೇ.

3.ಬಳ್ಳಾರಿ ರೆಡ್ಡಿ ಕುಟುಂಬ

ಕರುಣಾಕರ ರೆಡ್ಡಿ ಶಾಸಕ, ಅವರ ಸಹೋದರ ಸೋಮಶೇಖರ ರೆಡ್ಡಿ ಕೂಡ ಶಾಸಕ. ಇನ್ನೊಬ್ಬ ಸಹೋದರ ಬಿಜೆಪಿ  ನಾಯಕರೇ. ಅವರ ಗೆಳೆಯ ಶ್ರೀರಾಮುಲು ಈಗ ಮಂತ್ರಿ. ಮಾಜಿ ಎಂಪಿ ಶಾಂತಾ ಅವರು ಶ್ರೀರಾಮುಲು ತಂಗಿ. ಸಣ್ಣ ಫಕೀರಪ್ಪ ಕೂಡ ಅವರ ಪೈಕಿಯೇ.

4.ಜಾರಕಿಹೊಳಿ ಕುಟುಂಬ

ರಮೇಶ್ ಜಾರಕಿಹೊಳಿ ಮಾಜಿ ಮಂತ್ರಿ -ಶಾಸಕರು.ಅವರ ಸಹೋದರ ಬಾಲಚಂದ್ರ ಜಾರಕಿಹೊಳಿ ಹಾಲಿ ಶಾಸಕರು, ಕೆಎಂಎಫ್ ಸದಸ್ಯರು.

5.ಲಿಂಬಾವಳಿ ಕುಟುಂಬ

ಅರವಿಂದ ಲಿಂಬಾವಳಿ ಶಾಸಕರು, ಅವರ ಭಾವಮೈದ ರಘು ಕೂಡ ಶಾಸಕರಲ್ಲವೇ?

6.ಉದಾಸಿ ಕುಟುಂಬ:

ದಿವಂಗತ ಉದಾಸಿ ಅವರು ಮಂತ್ರಿಗಳಾಗಿದ್ದರು. ಅವರ ಮಗ ಈಗ ಸಂಸತ್ ಸದಸ್ಯರಾಗಿದ್ದಾರೆ.

ಪಟ್ಟಿ ಇನ್ನೂ ಇದೆ. ರಾಜ್ಯವಾರು ಬರೆಯುತ್ತಾ ಹೋದರೆ ಪುಟಗಳೇ ಸಾಲುವುದಿಲ್ಲ. ಕುಟುಂಬ ರಾಜಕಾರಣದ  ರೆಂಬೆಕೊಂಬೆಗಳು ಸಮೃದ್ಧವಾಗಿರುವುದು ಎಲ್ಲಿ? ಯಾವ ಪಕ್ಷದಲ್ಲಿ? ಕುಟುಂಬ ರಾಜಕಾರಣದ ವಿರಾಟ ದರ್ಶನ ಆಗುತ್ತಿರುತ್ತಿರುವುದು ಎಲ್ಲಿ?

ರಾಷ್ಟ್ರ ನಿರ್ಮಾಣ ಬಿಜೆಪಿಯ ಗುರಿಯಲ್ಲ. ಆಪರೇಷನ್ ಕಮಲ ಅದರ ಗರಿ. ಆಪರೇಷನ್ ಕಮಲವನ್ನು ರಾಷ್ಟ್ರೀಕರಣ ಮಾಡಿ ರಾಷ್ಟ್ರಪ್ರೇಮ ಮೆರೆದ ಕುಖ್ಯಾತಿ ಅದರದ್ದು. ಒಡಕು ರಾಜಕಾರಣ ಬಿಜೆಪಿ ನಿತ್ಯ ಕಾಯಕ. ಆಪರೇಷನ್ ಕಮಲ ಅದರ ಅಧಿಕೃತ ರಾಜಧರ್ಮ. ಕುಟುಂಬ ರಾಜಕಾರಣ ಅದರ ಅಧಿಕಾರದ ಸೋಪಾನ.

ಸವಕಲು ಹೇಳಿಕೆಗಳಿಂದ ಬೇಳೆ ಬೇಯಿಸಿಕೊಳ್ಳುವುದು ಬಿಟ್ಟು ಜನರ ಕೆಲಸ ಮಾಡಿ. ಬೇರೆಯವರ ತಟ್ಟೆಯತ್ತ ನೋಡುವ ಚಾಳಿ ಬಿಟ್ಟರೆ ಉತ್ತಮ.

Tags: bjpcknewsnowfamily politicsjdskarnatakanewsPolitics
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ತಮಿಳುನಾಡಿನ ಕಾವೇರಿ- ವಗೈ- ಗುಂಡಾರ್ ಯೋಜನೆಗೆ ಕೇಂದ್ರದ ಒಪ್ಪಿಗೆ ಬೇಡ ಎಂದ ಸಿಎಂ

ತಮಿಳುನಾಡಿನ ಕಾವೇರಿ- ವಗೈ- ಗುಂಡಾರ್ ಯೋಜನೆಗೆ ಕೇಂದ್ರದ ಒಪ್ಪಿಗೆ ಬೇಡ ಎಂದ ಸಿಎಂ

Leave a Reply Cancel reply

Your email address will not be published. Required fields are marked *

Recommended

ಆಫ್ಘಾನ್‌ನಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ನೋಡೆಲ್‌ ಅಧಿಕಾರಿ

ಆಫ್ಘಾನ್‌ನಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ನೋಡೆಲ್‌ ಅಧಿಕಾರಿ

5 years ago
ಬೊಮ್ಮಾಯಿ ಸಂಪುಟದಲ್ಲಿ 7 ವಲಸಿಗರಿಗೆ ಅವಕಾಶ ಅನುಮಾನ

ಬೊಮ್ಮಾಯಿ ಸಂಪುಟದಲ್ಲಿ 7 ವಲಸಿಗರಿಗೆ ಅವಕಾಶ ಅನುಮಾನ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ