• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಆಪರೇಷನ್‌ ಕುಶಾವತಿ; 48 ಗಂಟೆ ಕಳೆದರೂ ಗ್ರಾ.ಪಂ. ಸದಸ್ಯ ಗಂಗಾಧರ ಗೌಡರ ಸುಳಿವಿಲ್ಲ

cknewsnow desk by cknewsnow desk
November 14, 2021
in STATE
Reading Time: 2 mins read
0
ಆಪರೇಷನ್‌ ಕುಶಾವತಿ; 48 ಗಂಟೆ ಕಳೆದರೂ ಗ್ರಾ.ಪಂ. ಸದಸ್ಯ ಗಂಗಾಧರ ಗೌಡರ ಸುಳಿವಿಲ್ಲ
1.7k
VIEWS
FacebookTwitterWhatsuplinkedinEmail

ಶೋಧ ಕಾರ್ಯಕ್ಕೆ ಬಿದಿರು, ಹಾವುಗಳ ತೊಡಕು; ಅಗ್ನಿಶಾಮಕ ದಳ, ಎನ್.ಡಿ.ಆರ್.ಎಫ್ ಸಿಬ್ಬಂದಿಯಿಂದ ತೀವ್ರ ಶೋಧ

By GS Bharath Gudibande

ಗುಡಿಬಂಡೆ: ಶುಕ್ರವಾರ ರಾತ್ರಿ ಸುಮಾರು 7.30ರ ಸಮಯದಲ್ಲಿ ಕಮ್ಮಗುಟ್ಟಹಳ್ಳಿ ಗ್ರಾಮ ಪಂಚಾಯತಿ ಸದಸ್ಯ ಗಂಗಾಧರ ಗೌಡ ಅವರು ಕುಶಾವತಿ ನದಿ ನೀರಿನ ರಭಸಕ್ಕೆ ಕೊಚ್ಚಿಕೊಂಡು ಹೋಗಿ 48 ಗಂಟೆಗಳೇ ಕಳೆದರೂ ಇನ್ನೂ ಅವರ ಸುಳಿವು ಸಿಕ್ಕಿಲ್ಲ.

ತಮ್ಮೆಲ್ಲ ಶ್ರಮ, ಬುದ್ಧಿಮತ್ತೆ ಬಳಸಿ ಅಧಿಕಾರಿಗಳು, ಅಗ್ನಿಶಾಮಕ ಸಿಬ್ಬಂದಿ ಶೋಧಿಸುತ್ತಿದ್ದರೂ ಗ್ರಾ,ಪಂ. ಸದಸ್ಯನ ಜಾಡು ಸಿಗದೇ ಸಿಗದೇ ಅಧಿಕಾರಿಗಳು ಚಿಂತಾಕ್ರಾಂತರಾಗಿ ಸ್ಥಳದಲ್ಲೇ ಬೀಡು ಬಿಟ್ಟಿದ್ದಾರೆ.

ಇಂದು ಬೆಳಗ್ಗೆಯಿಂದ ಕುಶಾವತಿ ನದಿ ಸೇತುವೆ ಬಳಿಯಿಂದ ಗುಡಿಬಂಡೆ ತಾಲೂಕಿನ ಅಮಾನಿ ಭೈರಸಾಗರದ ಅಂಗಳದವರೆಗೂ ಶೋಧ ಕಾರ್ಯ ನಡೆಸಲಾಯಿತು. ಅಮಾನಿ ಭೈರಸಾಗರದಲ್ಲಿ ಬೆಂಗಳೂರಿನ ಈಜು ಪರಿಣಿತರ ತಂಡ ಹಾಗೂ ಅಧಿಕಾರಿಗಳು ಹುಡುಕಾಟ ನಡೆಸಿದ್ದಾರಾದರೂ ಯಾವುದೇ ಫಲ ಸಿಕ್ಕಿಲ್ಲ.

ಕಳೆದ 48 ಗಂಟೆಗಳಿಂದ ವಿಶ್ರಾಂತಿ ಇಲ್ಲದೇ ಎನ್.ಡಿ‌.ಆರ್.ಎಫ್, ಎಸ್.ಡಿ.ಆರ್.ಎಫ್, ಅಗ್ನಿಶಾಮಕ ದಳ, ಪೊಲೀಸ್ ಸಿಬ್ಬಂದಿ, ಆರಕ್ಷಕ ವೃತ್ತ ನಿರೀಕ್ಷಕರು, ತಹಸೀಲ್ದಾರ್, ಕಂದಾಯ ಇಲಾಖೆ ಹಾಗೂ ವಿವಿಧ ಅಧಿಕಾರಿಗಳು ಘಟನೆ ನಡೆದ ಸ್ಥಳದಿಂದ ಗುಡಿಬಂಡೆ ಅಮಾನಿ ಭೈರಸಾಗರ ಕೆರೆವರೆಗೂ ನಡೆಯುತ್ತಿರುವ ಶೋಧ ಕಾರ್ಯದಲ್ಲಿ ಭಾಗಿಯಾಗಿದ್ದಾರೆ.

  • ಗಂಗಾಧರ ಗೌಡ

ಹುಡುಕಾಟದಲ್ಲಿ ಎದುರಿಸುತ್ತಿರುವ ಸಮಸ್ಯೆಗಳು

ಎರಡು ದಿನಗಳಿಂದ ಅಧಿಕಾರಿಗಳು ಗ್ರಾ.ಪಂ.ಸದಸ್ಯನ ಹುಡುಕಾಟದಲ್ಲಿದ್ದಾರೆ. ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಯುತ್ತಿರುವುದು, ಕುಶಾವತಿ ನದಿ ಹರಿವಿನ ಹಾದಿಯಲ್ಲಿ ಮರಗಿಡಗಳು, ಬಿದರಿನ ಗಿಡಗಳು ದಟ್ಟವಾಗಿವೆ. ಜತೆಗೆ,  ಹಾವುಗಳ ಕಾಟವೂ ಇದೆ. ಗ್ರಾ.ಪಂ. ಸದಸ್ಯ ಕೊಚ್ಚಿಕೊಂಡು ಹೋದ ಸ್ಥಳದಿಂದ ಗುಡಿಬಂಡೆ ಅಮಾನಿ ಭೈರಸಾಗರ ಕೆರೆ ಆರಂಭದ ಕಾಲುವೆವರೆಗೂ ಬಿದಿರು ಬೆಳದುನಿಂತಿದೆ. ಅಲ್ಲೆಲ್ಲ ನದಿಯು 10ರಿಂದ 15 ಅಡಿ ಆಳವಿದೆ. ಆ ಭಾಗದಲ್ಲಿ ದೇಹ ಸಿಲುಕಿಕೊಂಡಿರಬಹುದು ಎಂದು ಅಧಿಕಾರಿಗಳು ಹಾಗೂ ಪರಿಣಿತರ ತಂಡ ಅಂದಾಜಿಸಿ ರಾಫ್ಟ್‌ (raft) ಬಳಸಿಕೊಂಡು ಶೋಧ ಕಾರ್ಯ ನಡೆಸುತ್ತಿದ್ದಾರೆ.

ಶುಕ್ರವಾರ ರಾತ್ರಿ ರಾಮಪಟ್ಟಣದಿಂದ ಮಂಕಡಿಲ್ಲು ರಸ್ತೆ ಮಾರ್ಗವಾಗಿ ಮನೆಗೆ ಹೋಗುವಾಗ ರಸ್ತೆಯ ಸೇತುವೆ ಮೇಲೆ ಕುಶಾವತಿ ನದಿ ನೀರು ರಭಸವಾಗಿ ಹರಿಯುತ್ತಿದ್ದನ್ನು ಕಂಡ ಗಂಗಾಧರ್‌ ತನ್ನ ಜತೆಯಲ್ಲಿದ್ದ ವೃದ್ದರೊಬ್ಬರನ್ನು  ಸುರಕ್ಷಿತವಾಗಿ ದಡಕ್ಕೆ ತಲುಪಿಸಿ ನಂತರ ದ್ವಿಚಕ್ರ ವಾಹನ ತಳ್ಳಿಕೊಂಡು ಹೋಗಲು ವಾಪಸು ಬಂದು ಆ ವಾಹನವನ್ನು ತಳ್ಳಿಕೊಂಡು ಹೋಗುವಾಗ ನೀರಿನ ರಭಸಕ್ಕೆ ಮತ್ತು ಪಾಚಿಯಿಂದ ಕಾಲು ಜಾರಿ ಬಿದ್ದಿದ್ದಾರೆ ಎಂದು ಹೇಳಲಾಗುತ್ತಿದೆ.

ಮುನ್ನೆಚ್ಚರಿಕೆಯಿಂದ ವೃದ್ಧರೊಬ್ಬರ ಜೀವ ಉಳಿಸಿ ತಮ್ಮ ಜೀವವನ್ನು ಅಪಾಯಕ್ಕೆ ಒಡ್ಡಿಕೊಂಡ ಗಂಗಾಧರ ಗೌಡರ ಬಗ್ಗೆ ಸ್ಥಳೀಯರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಅವರ ಮನೆಯವರು ತೀವ್ರ ದುಃಖದಲ್ಲಿದ್ದರೆ, ಜನರು ಗಂಗಾಧರ ಗೌಡರ ಕ್ಷೇಮಕ್ಕಾಗಿ ಪ್ರಾರ್ಥನೆ ಮಾಡುತ್ತಿದ್ದಾರೆ.

ಶೋಧ ಕಾರ್ಯಚರಣೆಯಲ್ಲಿ ಸ್ವತಃ ಚಿಕ್ಕಬಳ್ಳಾಪುರ ತಹಸೀಲ್ದಾರ್ ಗಣಪತಿ ಶಾಸ್ತ್ರಿ ಹಾಗೂ ಗುಡಿಬಂಡೆ ಆರಕ್ಷಕ ವೃತ್ತ ನಿರೀಕ್ಷಕ ಲಿಂಗರಾಜು ಅವರು ಸಿಬ್ಬಂದಿ ಜತೆ ಹೋಗಿ ಹುಡುಕಾಟ ನಡೆಸಿದ್ದಾರೆ.

  • ಅಮಾನಿಭೈರ ಸಾಗರಕ್ಕೆ ಕುಶಾವತಿ ಸೇರುವ ಜಾಗದಲ್ಲಿ ಶೋಧ.

ಎನ್.ಡಿ.ಆರ್.ಎಫ್, ಎಸ್.ಡಿ.ಆರ್.ಎಫ್, ಅಗ್ನಿಶಾಮಕ ದಳ, ಆರ್.ಡಿ.ಪಿ.ಆರ್, ಪೊಲೀಸ್ ಸಿಬ್ಬಂದಿ, ಕಂದಾಯ ಇಲಾಖೆ, ತಹಸೀಲ್ದಾರ್ ಹೀಗೆ ಅಧಿಕಾರಿಗಳು ಹುಡುಕಾಟದಲ್ಲಿದ್ದಾರೆ. ಘಟನೆ ನಡೆದ ಸ್ಥಳದಿಂದ ಗುಡಿಬಂಡೆ ಅಮಾನಿ ಭೈರಸಾಗರ ಕೆರೆ ಸೇರುವ ಆರಂಭದವರಗೂ ಹುಡುಕಾಟ ನಡೆಸಲಾಗುತ್ತಿದೆ. ಆರಂಭದಲ್ಲಿ ಗಿಡಮರಗಳು, ಬಿದಿರು ಹೆಚ್ಚಾಗಿದೆ. ಶೋಧಕ್ಕೆ ಬಳಸಲಾಗುವ ರಾಫ್ಟ್‌ (raft) ಹೊಗಲು ದಾರಿ ಇರಲಿಲ್ಲ. ಅವುಗಳನ್ನು ಕಡಿದು ಮುಂದಕ್ಕೆ ಹೊದೆವು. ಹಾವುಗಳ ಕಾಟ ಜಾಸ್ತಿ ಇತ್ತು. ಕೆಲ ಭಾಗದಲ್ಲಿ ನದಿ 10-15 ಅಡಿ ಆಳವಾಗಿದೆ. ಬಹುಶಃ ಈ ಪ್ರದೇಶದಲ್ಲಿ ಗಂಗಾಧರ ಗೌಡರು ಸಿಲುಕಿ ಕೊಂಡಿರಬಹುದು. ಹಾಗಾಗಿ ಎಲ್ಲಾ ತಂಡಗಳು ನಿರಂತರವಾಗಿ ಕಾರ್ಯಚರಣೆ ನಡೆಸುತ್ತಿವೆ.

ಗಣಪತಿ ಶಾಸ್ತ್ರಿ, ತಹಸೀಲ್ದಾರ್, ಚಿಕ್ಕಬಳ್ಳಾಪುರ
ಗಂಗಾಧರ ಗೌಡರು ನೀರಿನಲ್ಲಿ ಕೊಚ್ಚಿಕೊಂಡ ಜಾಗದಲ್ಲಿ ಶೋಧ ಸಿಬ್ಬಂದಿ.

Tags: chikkaballapuracknewsnowdr k sudhakargudibandeheavy rainskarnatakakushavati riverman goes missing in flood watersoparation kushavati
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಬಿಜೆಪಿ ಕುಟುಂಬ ರಾಜಕಾರಣದ ಪಟ್ಟಿ ಕೊಟ್ಟ ಜೆಡಿಎಸ್‌

ಬಿಜೆಪಿ ಕುಟುಂಬ ರಾಜಕಾರಣದ ಪಟ್ಟಿ ಕೊಟ್ಟ ಜೆಡಿಎಸ್‌

Leave a Reply Cancel reply

Your email address will not be published. Required fields are marked *

Recommended

ಮುಜರಾಯಿ ಇಲಾಖೆ ಅರ್ಚಕರು, ದೇವಾಲಯ ನೌಕರರಿಗೆ ದಸರಾ ಬಂಪರ್

ಮುಜರಾಯಿ ಇಲಾಖೆ ಅರ್ಚಕರು, ದೇವಾಲಯ ನೌಕರರಿಗೆ ದಸರಾ ಬಂಪರ್

5 years ago
ನಮ್ಮ ದೇಶದಲ್ಲೇ ತಯಾರಾದ ಕೊರೊನಾ ಲಸಿಕೆ ಕುರಿತು ಅಗೌರವ ಬೇಡ; ಭಾರತ್ ಬಯೋಟೆಕ್ ನಂಬಿಕೆಗೆ ಅರ್ಹವಾದ ಕಂಪನಿ ಎಂದ ಡಾ.ಕೆ.ಸುಧಾಕರ್

ಕೋಲಾರದ ಮಾಲೂರಿನಲ್ಲಿ 100 ಎಕರೆ ಜಾಗದಲ್ಲಿ ಕೊವ್ಯಾಕ್ಸಿನ್ ಲಸಿಕೆ ತಯಾರಿಕಾ ಘಟಕ I ದೃಢಪಡಿಸಿದ ಡಿಸಿಎಂ I ಐದು ಪಟ್ಟು ಹೆಚ್ಚು ಲಸಿಕೆ ತಯಾರಿಕೆ, ರಾಜ್ಯದಲ್ಲಿ ನೀಗುತ್ತಾ ವ್ಯಾಕ್ಸಿನ್‌ ಕೊರತೆ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ