• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ತಮಿಳುನಾಡಿನ ಕಾವೇರಿ- ವಗೈ- ಗುಂಡಾರ್ ಯೋಜನೆಗೆ ಕೇಂದ್ರದ ಒಪ್ಪಿಗೆ ಬೇಡ ಎಂದ ಸಿಎಂ

cknewsnow desk by cknewsnow desk
November 15, 2021
in NATION
Reading Time: 1 min read
0
ತಮಿಳುನಾಡಿನ ಕಾವೇರಿ- ವಗೈ- ಗುಂಡಾರ್ ಯೋಜನೆಗೆ ಕೇಂದ್ರದ ಒಪ್ಪಿಗೆ ಬೇಡ ಎಂದ ಸಿಎಂ
960
VIEWS
FacebookTwitterWhatsuplinkedinEmail

ತಿರುಪತಿಯಲ್ಲಿ ದಕ್ಷಿಣ ವಲಯ ಪರಿಷತ್ತಿನ 29ನೇ ಸಭೆ

ತಿರುಪತಿ: ಸುಭದ್ರ ರಾಷ್ಟ್ರ ನಿರ್ಮಾಣಕ್ಕೆ ಸಮರ್ಥ ಕೇಂದ್ರ ಮತ್ತು ರಾಜ್ಯಗಳ ಅಗತ್ಯವಿದೆ. ನಾವು ಪರಸ್ಪರ ಸಹಕಾರದೊಂದಿಗೆ ಕೆಲಸ ಮಾಡಿದರೆ ಹಲವು ವರ್ಷಗಳಿಂದ ಬಾಕಿ ಉಳಿದಿರುವ ಹಲವಾರು ಸಮಸ್ಯೆಗಳನ್ನು ಬಗೆ ಹರಿಸಿಕೊಳ್ಳಬಹುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಆಂಧ್ರ ಪ್ರದೇಶದ ತಿರುಪತಿಯಲ್ಲಿ ಇಂದು ನಡೆದ ದಕ್ಷಿಣ ವಲಯ ಪರಿಷತ್ತಿನ 29 ನೇ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

*ದಕ್ಷಿಣ ಭಾರತದ ರಾಜ್ಯಗಳೆಲ್ಲವೂ ಪ್ರಾಕೃತಿಕವಾಗಿ ಸಂಪರ್ಕಿತವಾಗಿರುವುದರಿಂದ ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡುವುದು ಅನಿವಾರ್ಯ. ದಕ್ಷಿಣದ ರಾಜ್ಯಗಳು ಸ್ವತಂತ್ರವಾಗಿ ಅಲ್ಲದೆ, ಪರಸ್ಪರ ಅವಲಂಬಿತರಾಗಿ ಕಾರ್ಯನಿರ್ವಹಿಸಬೇಕಾದ ಪರಿಸ್ಥಿತಿ ಇದೆ. ರಾಷ್ಟ್ರದ ಒಳಿತಿಗಾಗಿ ಒಮ್ಮತದಿಂದ ಕೆಲಸ ಮಾಡಿದಾಗ ಭಾರತದ ಅಭಿವೃದ್ಧಿ ಸಾಧ್ಯವೆಂದು ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟರು.

ಪ್ರಧಾನ ಮಂತ್ರಿಗಳ ಸಹಕಾರಿ ಸಂಯುಕ್ತ ತತ್ವ ನಮ್ಮ ಮೂಲಮಂತ್ರವಾಗಬೇಕು. ಒಟ್ಟಾಗಿ ಕೆಲಸ ಮಾಡುವ ಮೂಲಕ ಇದನ್ನು ಸಂಪೂರ್ಣವಾಗಿ ಅನುಷ್ಠಾನಕ್ಕೆ ತರುವ ಹೊಣೆ ನಮ್ಮೆಲ್ಲರ ಮೇಲಿದೆ ಎಂದು ಬೊಮ್ಮಾಯಿ ಹೇಳಿದರು.

ದಕ್ಷಿಣ ವಲಯ ಪರಿಷತ್ತು ಸಭೆಗಳು ನೀರು ಹಂಚಿಕೆ, ಸಾರಿಗೆ ಸಂಪರ್ಕ, ಆರೋಗ್ಯ ಮತ್ತು ವ್ಯವಹಾರಗಳನ್ನು ಒಮ್ಮತದಿಂದ ಬಗೆಹರಿಸಿಕೊಳ್ಳು ಉತ್ತಮ ವೇದಿಕೆಯಾಗಿದೆ. ದಕ್ಷಿಣದ ರಾಜ್ಯಗಳು ಎಲ್ಲ ವಲಯಗಳಲ್ಲಿಯೂ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವುದು ಹೆಮ್ಮೆಯ ಸಂಗತಿ ಎಂದು ತಿಳಿಸಿದರು.

Attended the Southern Zonal Council meeting held today in Tirupati, Andhra Pradesh. The meeting was inaugurated by Union Home Minister @AmitShah ji. #SouthernZonalCouncilMeet pic.twitter.com/K4TqZNLUaI

— Basavaraj S Bommai (Modi Ka Parivar) (@BSBommai) November 14, 2021

ಇತರೆ ರಾಜ್ಯಗಳೊಂದಿಗೆ ಕರ್ನಾಟಕದ ಸಮನ್ವಯಕ್ಕೆ ಸಂಬಂಧಿಸಿದಂತೆ ಈ ಕೆಳಕಂಡ ಅಂಶಗಳನ್ನು ಮುಖ್ಯಮಂತ್ರಿಗಳು ಪ್ರಸ್ತಾಪಿಸಿದರು:

• ಗೋದಾವರಿ, ಕಾವೇರಿ ಮತ್ತು ಇತರೆ ನದಿಗಳ ಲಿಂಕ್ ಯೋಜನೆ ಬಗ್ಗೆ ರಾಜ್ಯ ತನ್ನ ಅಭಿಪ್ರಾಯವನ್ನು ಈಗಾಗಲೇ ರಾಷ್ಟ್ರೀಯ ಜಲ ಅಭಿವೃದ್ಧಿ ಸಂಸ್ಥೆಗೆ ತಿಳಿಸಿದೆ. ಕಾವೇರಿ, ಕೃಷ್ಣಾ ಮತ್ತು ಪೆನ್ನಾರ್ ಜಲಾನಯನ ಪ್ರದೇಶದಲ್ಲಿ ರಾಜ್ಯಕ್ಕೆ ತನ್ನ ಪಾಲಿನ ನೀರು ಹಂಚಿಕೆಯಾಗಬೇಕೆಂಬ ವಾದವನ್ನು ಸಿಎಂ ಸ್ಪಷ್ಟಪಡಿಸಿದರು.

• ಸಹ ಜಲಾನಯನ ಪ್ರದೇಶಗಳನ್ನು ಹೊಂದಿರುವ ರಾಜ್ಯಗಳ ಪಾಲನ್ನು ನಿರ್ಧರಿಸಲಾಗಿಲ್ಲದಿದ್ದರೂ ತಮಿಳುನಾಡು ಕಾವೇರಿ- ವಗೈ- ಗುಂಡಾರ್ ಸಂಪರ್ಕ ಕಾಮಗಾರಿಯನ್ನು ಮುಂದುವರೆಸಿದೆ. ಇದಕ್ಕೆ ಕಾನೂನಿನಲ್ಲಿ ಅವಕಾಶವಿರುವುದಿಲ್ಲ. ಆದ್ದರಿಂದ ಕಾವೇರಿ- ವಗೈ- ಗುಂಡಾರ್ ಸಂಪರ್ಕದ ಪ್ರಸ್ತಾವನೆಯನ್ನು ಅನುಮೋದಿಸಬಾರದು ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದರು.

• ಜಲ ನ್ಯಾಯ ಮಂಡಳಿ ತೀರ್ಪನ್ನು ಉಲ್ಲಂಘಿಸಿ  ಹೆಚ್ಚುವರಿ ನೀರಿನ ಬಳಕೆಗೆ ಯೋಜಿಸಿರುವ ಬೃಹತ್ ಮಟ್ಟದ ಶಾಶ್ವತ ಯೋಜನೆಗಳಿಗೆ ಶಾಸನಬದ್ಧ ಅನುಮೋದನೆಯನ್ನು ನೀಡಬಾರದು ಎಂದು ಮುಖ್ಯಮಂತ್ರಿಗಳು ಪುನರುಚ್ಛರಿಸಿದರು.

• ಕೃಷ್ಣಾ ಜಲಾಶಯದ ಮೂಲಕ ಶ್ರೀಶೈಲಂ ಜಲಾಶಯದಲ್ಲಿ ಅಪಾರ ಮೊತ್ತದ ಹೆಚ್ಚುವರಿ ನೀರನ್ನು ಬಳಸಿಕೊಂಡು ಪಲಮುರು ರಂಗಾರೆಡ್ಡಿ  ಮತ್ತು ನಕ್ಕಲಗಂಡಿಯಲ್ಲಿ ಏತನೀರಾವರಿ ಯೋಜನೆಗಳನ್ನು ಕೈಗೊಳ್ಳಲು ತೆಲಂಗಾಣ ಅಥವಾ ಅಪೆಕ್ಸ್ ಮಂಡಳಿಗೆ ಅಧಿಕಾರವಿಲ್ಲ ಎಂದರು.

• 2050 ರಲ್ಲಿ ಪರಿಶೀಲನೆಗೆ ಒಳಪಡುವ ನೆಪದಲ್ಲಿ ಉಳಿಕೆ ನೀರನ್ನು ಬಳಸುವ ತೆಲಂಗಾಣ ರಾಜ್ಯದ ರಾಜೀವ್ ಗಾಂಧಿ ಸಂಗಮ ಬಂಡಾ ಬ್ಯಾರೇಜ್ ನಿರ್ಮಾಣಕ್ಕೆ  ಕರ್ನಾಟಕದ ವಿರೋಧವಿದೆ. ಶಾಶ್ವತ ಯೋಜನೆಗಳಿಂದಾಗಿ ಉಳಿಕೆ ನೀರನ್ನು ಬಳಸಲು ಅನುಮತಿ ನೀಡಿದರೆ ಕರ್ನಾಟಕ ತನಗೆ ದೊರೆಯಬೇಕಾದ ಸಮಪಾಲಿನಿಂದ ವಂಚಿತವಾಗಲಿದೆ. ಈ ಬಗ್ಗೆ ಜಂಟಿ ಸಮೀಕ್ಷೆಯಲ್ಲಿ ರಾಜ್ಯ ಕೈಜೋಡಿಸಲು ಸಿದ್ಧವಿದೆ ಎಂದರು.

• ತುಂಗಭದ್ರಾ ನದಿಗೆ ಅಡ್ಡಲಾಗಿ ಆಂದ್ರಪ್ರದೇಶ ನಿರ್ಮಿಸುತ್ತಿರುವ ಗುಂದ್ರವುಲು ಯೋಜನೆಗೆ ಸಂಬಂಧಿಸಿದಂತೆ, ಕರ್ನಾಟಕದಲ್ಲಿ ಮುಳುಗಡೆಯಾಗಲಿರುವ ಗ್ರಾಮಗಳು ಮತ್ತು ಭೂ ಪ್ರದೇಶದ ಕುರಿತು ಜಂಟಿ ಸಮೀಕ್ಷೆಯಾಗಬೇಕು. ನ್ಯಾಯಮಂಡಳಿಗೆ ಸಲ್ಲಿಸಿರುವಂತೆ ನೀರು ಹಂಚಿಕೆಯ ವಿವರಗಳನ್ನು ಹಾಗೂ ಕೇಂದ್ರ ಸರ್ಕಾರದಿಂದ ಪಡೆದಿರುವ ಅನುಮೋದನೆಗಳ ವಿವರಗಳನ್ನು ಸಲ್ಲಿಸುವಂತೆ ಕೋರಿದರು.

• ಹಂಚಿಕೆಯ ಹೊರತಾಗಿ ಕೃಷ್ಣಾ ನೀರಿಗೆ ಸಂಬಂಧಿಸಿದಂತೆ ಆಂದ್ರ ಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳ ಯಾವುದೇ ಯೋಜನೆಗಳಿಗೆ ಅನುಮತಿಯಿಲ್ಲ.

• ಕರ್ನಾಟಕ ಹಾಗೂ ನೆರೆರಾಜ್ಯಗಳ ನಡುವೆ ಅಂತರ ರಾಜ್ಯ ಪರಸ್ಪರ ಸಾರಿಗೆ ಒಪ್ಪಂದಕ್ಕೆ ಸಂಬಂಧಿಸಿದಂತೆ ತೆಲಂಗಾಣ, ಪುದುಚೆರಿ, ತಮಿಳುನಾಡು, ಆಂಧ್ರಪ್ರದೇಶ ಮತ್ತು ಕೇರಳ ರಾಜ್ಯಗಳ ಒಪ್ಪಿಗೆಯನ್ನು ನಿರೀಕ್ಷಿಸಲಾಗಿದ್ದು, ಈ ಬಗ್ಗೆ ತ್ವರಿತ ಕ್ರಮಕ್ಕೆ ಮನವಿ ಮಾಡಿದರು.

• ಅಂತರರಾಜ್ಯ ಗೃಹ ಇಲಾಖೆಗಳ ಸಮನ್ವಯ ಹಲವು ಅಪರಾಧಗಳನ್ನು ತಡೆಗಟ್ಟಲು ಅಗತ್ಯವಾಗಿದೆ. ಗಡಿಗಳಲ್ಲಿ ಸಂಪರ್ಕಜಾಲಗಳನ್ನು ಬಲಪಡಿಸಲು ಕೋರಿದರು.

• ಕರ್ನಾಟಕ ನವೀಕರಿಸಬಹುದಾದ ಇಂಧನ ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿರುವ ರಾಜ್ಯವಾಗಿದ್ದು, ಕೇಂದ್ರ ಸರ್ಕಾರದ ನವೀಕರಿಸಬಹುದಾದ ಖರೀದಿ ಬದ್ಧತೆ ಗುರಿಗಳನ್ನು ಸಾಧಿಸಿರುವ ಏಕೈಕ ರಾಜ್ಯ ಕರ್ನಾಟಕ. ಹೂಡಿಕೆದಾರರ ದೃಷ್ಟಿಯಿಂದ ಅಂತರರಾಜ್ಯ ದರಪಟ್ಟಿಯಲ್ಲಿನ ವ್ಯತ್ಯಾಸವನ್ನು ತೆಗೆದುಹಾಕುವಂತೆ ಬೊಮ್ಮಾಯಿ  ಮನವಿಮಾಡಿದರು.

• ರಾಜ್ಯ ಸರ್ಕಾರ ಕೋರ್ ಡಿಬಿಟಿ ವೇದಿಕೆಯನ್ನು ಸೃಜಿಸಿದ್ದು, ಫಲಾನುಭವಿಗಳ ನಿಖರ ಗುರುತನ್ನು ಖಾತ್ರಿಪಡಿಸುತ್ತದೆ. ನಂಬಲರ್ಹವಲ್ಲದ ಡಾಟಾಬೇಸ್ ಸೃಜನೆ ತಡೆಗಟ್ಟುವುದರಿಂದ ಯುಎಡಿಎಐ ಮತ್ತು ಎನ್‍ಪಿಸಿಐ ಸಂಪರ್ಕಿಸಿ ನಕಲಿ ದಾಖಲೆಗಳ ಸೃಷ್ಟಿಗೆ ಕಾರಣವಾಗಿದೆ. ಆದ್ದರಿಂದ  ಕರ್ನಾಟಕ ಸರ್ಕಾರ ತನ್ನ ಎಲ್ಲಾ ಫಲಾನುಭವಿ ಕೇಂದ್ರಿತ ಯೋಜನೆಗಳನ್ನು ರಾಜ್ಯ ಕೋರ್ ಡಿಬಿಟಿ ವೇದಿಕೆಗೆ ಅಳವಡಿಸುವುದಾಗಿ ತನ್ನ ಆಯವ್ಯಯದಲ್ಲಿ ಘೋಷಿಸಿದೆ ಎಂದರು.

ಸಭೆಯ ಅಧ್ಯಕ್ಷತೆಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ವಹಿಸಿದ್ದರು. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ, ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ, ಜಲ ಸಂಪನ್ಮೂಲ ಇಲಾಖೆ ಎಸಿಎಸ್ ರಾಕೇಶ್ ಸಿಂಗ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ, ಇಂಟೆಲಿಜೆನ್ಸ್ ವಿಭಾಗದ ಎಡಿಜಿಪಿ ದಯಾನಂದ ಅವರು ಸಭೆಯಲ್ಲಿ ಉಪಸ್ಥಿತರಿದ್ದರು.

ಆಂಧ್ರ ಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ, ಲಕ್ಷ್ಯದ್ವೀಪದ ಆಡಳಿತಗಾರ ಪ್ರಫುಲ್ ಪಟೇಲ್, ಪುದುಚೆರಿ ಲೆಫ್ಟಿನೆಂಟ್ ಗವರ್ನರ್ ಡಾ. ತಮಿಲಿಸಾಯಿ ಸೌಂದರಾಜನ್, ಪುದುಚೆರಿ ಮುಖ್ಯಮಂತ್ರಿ ಎನ್ ರಂಗಸ್ವಾಮಿ ಸಭೆಯಲ್ಲಿ ಉಪಸ್ಥಿತರಿದ್ದರು.

Tags: 29th south zonal meetingamit shahbasaraj bommaicknewsnowindianewssouth statetirupati
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ರಾಜ್ಯದಲ್ಲಿ ಕಾಂಗ್ರೆಸ್‌ ಅಲೆ ಎದ್ದಿದೆ ಎಂದ ಸಿದ್ದು

ರಾಜ್ಯದಲ್ಲಿ HMPV ವೈರಸ್ಸಿನ ಎರಡು ಪ್ರಕರಣ ಪತ್ತೆ

by cknewsnow desk
January 6, 2025
0

ಸೋಂಕು ಹರಡದಂತೆ ಸರ್ಕಾರದಿಂದ ಸೂಕ್ತ ಮುಂಜಾಗ್ರತಾ ಕ್ರಮ; ಮುಖ್ಯಮಂತ್ರಿ ಸಿದ್ದರಾಮಯ್ಯ

Next Post
ಕಸಾಪ ಚುನಾವಣೆ: ಚಿಕ್ಕಬಳ್ಳಾಪುರದಲ್ಲಿ ಅಂಬರ ಮುಟ್ಟಿದ ಪ್ರಚಾರ

ಕಸಾಪ ಚುನಾವಣೆ: ಚಿಕ್ಕಬಳ್ಳಾಪುರದಲ್ಲಿ ಅಂಬರ ಮುಟ್ಟಿದ ಪ್ರಚಾರ

Leave a Reply Cancel reply

Your email address will not be published. Required fields are marked *

Recommended

ಚೋಳಮಂಡಲಂ ಫೈನಾನ್ಸ್‌ಗೇ ಖದೀಮರ ಟೋಪಿ

ಮಗಳಿಗಾಗಿ ಸೋದರ ಮಾವನನ್ನೇ ಮುಗಿಸಿದ ಪೊಲೀಸ್ ಪೇದೆ

1 year ago
ಮುನಿರತ್ನ ಇಲ್ಲದೆ ಏಳು ಸಚಿವರು ಪ್ರಮಾಣ ಸ್ವೀಕರಿಸಿದ್ದೇನೋ ಸರಿ! ಆದರೆ, ನಾಗೇಶ್ ವಿಕೆಟ್ ಪತನವಾಗಿದ್ದೇಕೆ? ಅನ್ಯಾಯ ಆಗಿದ್ದು ಕೋಲಾರಕ್ಕೆ, ಖುಷಿಯಾಗಿದ್ದು ವಿರೋಧಿಗಳಿಗೆ

ಮುನಿರತ್ನ ಇಲ್ಲದೆ ಏಳು ಸಚಿವರು ಪ್ರಮಾಣ ಸ್ವೀಕರಿಸಿದ್ದೇನೋ ಸರಿ! ಆದರೆ, ನಾಗೇಶ್ ವಿಕೆಟ್ ಪತನವಾಗಿದ್ದೇಕೆ? ಅನ್ಯಾಯ ಆಗಿದ್ದು ಕೋಲಾರಕ್ಕೆ, ಖುಷಿಯಾಗಿದ್ದು ವಿರೋಧಿಗಳಿಗೆ

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ