• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

62 ಗಂಟೆಗಳ ನಂತರ ಗ್ರಾಮ ಪಂಚಾಯಿತಿ ಸದಸ್ಯ ಗಂಗಾಧರ ಗೌಡರ ಮೃತದೇಹ ಪತ್ತೆ

cknewsnow desk by cknewsnow desk
November 15, 2021
in CHIKKABALLAPUR, STATE
Reading Time: 1 min read
0
62 ಗಂಟೆಗಳ ನಂತರ ಗ್ರಾಮ ಪಂಚಾಯಿತಿ ಸದಸ್ಯ ಗಂಗಾಧರ ಗೌಡರ ಮೃತದೇಹ ಪತ್ತೆ

ಗ್ರಾಮ ಪಂಚಾಯಿತಿ ಸದಸ್ಯ ಗಂಗಾಧರ ಗೌಡ

2.2k
VIEWS
FacebookTwitterWhatsuplinkedinEmail

ಗುಡಿಬಂಡೆ ಅಮಾನಿಭೈರ ಸಾಗರ ಹಿನ್ನೀರಿನ ಬಿದಿರು ಪೊದೆಯಲ್ಲಿ ತೇಲಿದ್ದ ಮೃತದೇಹ

by GS Bharath Gudibande

ಗುಡಿಬಂಡೆ: ಕಳೆದ ಶುಕ್ರವಾರ ರಾತ್ರಿ ಕುಶಾವತಿ ನದಿ ನೀರುಪಾಲಾಗಿದ್ದ ಕಮ್ಮಗುಟ್ಟಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಗಂಗಾಧರ ಗೌಡ ಅವರ ಮೃತದೇಹ ಇಲ್ಲಿನ ಅಮಾನಿಭೈರ ಸಾಗರದ ಹಿನ್ನೀರಿನಲ್ಲಿ ಸೋಮವಾರ ಬೆಳಗ್ಗೆ ಪತ್ತೆಯಾಗಿದೆ.

ಅಗ್ನಿಶಾಮಕ ದಳ ಹಾಗೂ ಎನ್‌ಡಿಆರ್‌ಎಫ್‌ ಶೋಧನಾ ತಂಡಗಳು ನಡೆಸಿದ ಅವಿರತ ಶೋಧ ಕಾರ್ಯವು ಇಂದು ಬೆಳಗ್ಗೆ 9-9.30 ಗಂಟೆ ಹೊತ್ತಿಗೆ ಫಲಕಾರಿಯಾಗಿದ್ದು, ಅಮಾನಿಭೈರ ಸಾಗರಕ್ಕೆ ಕುಶಾವತಿ ನದಿ ಸೇರುವ ಜಾಗದಲ್ಲಿ ದಟ್ಟವಾಗಿ ಬೆಳೆದಿರುವ ಬಿದಿರು ಪೊದೆಗಳ ನಡುವಿನ ಆಳವಾದ ನದಿಭಾಗದಲ್ಲಿ ಅವರ ದೇಹ ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಂದರೆ; ಸುಮಾರು 62 ಗಂಟೆಗಳ ನಂತರ ಅವರ ದೇಹ ಪತ್ತೆಯಾಗಿದ್ದು, ಅವರ ಕುಟುಂಬ ಸದಸ್ಯರ ರೋಧನ ಮುಗಿಲುಮುಟ್ಟಿದೆ. ಘಟನಾ ಸ್ಥಳದಿಂದ ನದಿ ಹರಿವಿನ ಉದ್ದಗಲಕ್ಕೂ ಇಂಚಿಂಚೂ ಶೋಧಿಸುತ್ತಾ ಬಂದ ಸಿಬ್ಬಂದಿಗೆ ಬಿದಿರು ಪೊದೆಗಳ ನಡುವೆ ತೇಲುತ್ತಿದ್ದ ಗಂಗಾಧರ ಗೌಡರ ಮೃತದೇಹ ಕಣ್ಣಿಗೆ ಬಿದ್ದಿದೆ.

ಕಳೆದ ಶುಕ್ರವಾರ ರಾತ್ರಿ ಸುಮಾರು ೭.೩೦ರ ಸುಮಾರಿನಲ್ಲಿ ಚಿಕ್ಕಬಳ್ಳಾಪುರ ತಾಲೂಕಿನ ರಾಮಪಟ್ಟಣ-ನವಿಲುಗುರ್ಕಿ ಮಾರ್ಗದ ನಡುವಿನ ಕುಶಾವತಿ ನದಿ ರಭಸವಾಗಿ ಹರಿಯುತ್ತಿರುವಾಗ ನೀರಿಗೆ ಸಿಕ್ಕಿ ಗಂಗಾಧರ ಗೌಡರು  ಕೊಚ್ಚಿಕೊಂಡು ಹೋಗಿದ್ದರು.

ಸದ್ಯಕ್ಕೆ ಮೃತದೇಹವನ್ನು ಪೊಲೀಸರು ಆಸ್ಪತ್ರೆಗೆ ಸಾಗಿಸಿದ್ದು, ಶವಪರೀಕ್ಷೆ ನಡೆಸಿದ ನಂತರ ದೇಹವನ್ನು ಅವರ ಕುಟುಂಬ ಸದಸ್ಯರಿಗೆ ಹಸ್ತಾಂತರ ಮಾಡಲಿದ್ದಾರೆ. ಇಂದೇ ಅವರ ಅಂತ್ಯಕ್ರಿಯೆ ನಡೆಯಲಿದೆ. ಸ್ಥಳದಲ್ಲಿ ಗುಡಿಬಂಡೆ ತಹಸೀಲ್ದಾರ್‌ ಸಿಗ್ಬತ್ತುಲ್ಲಾ, ಪೊಲೀಸ್‌ ಇನಸ್ಪೆಕ್ಟರ್‌ ಲಿಂಗರಾಜು ಸೇರಿದಂತೆ ಮುಂತಾದವರು ಹಾಜರಿದ್ದರು.

ಇದೇ ವೇಳೆ ಗುಡಿಬಂಡೆ ಕರೆ ಏರಿ ಕೋಡಿ ಬಳಿ ಭಾರೀ ಜನಸಂದಣಿ ಸೇರಿದ್ದರಿಂದ ಟ್ರಾಫಿಕ್‌ ಜಾಂ ಉಂಟಾಗಿತ್ತು.

ಸಚಿವ ಡಾ.ಸುಧಾಕರ್ ಶೋಕ

ಆಪ್ರ ಗಂಗಾಧರ ಗೌಡ ದುರ್ಮರಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್‌ ತೀವ್ರ ಶೋಕ ವ್ಯಕ್ತಪಡಿದ್ದಾರೆ. ಘಟನೆ ನಡೆದ ಮರುದಿನವೇ ಸ್ಥಳಕ್ಕೆ ಭೇಟಿ ನೀಡಿದ್ದ ಸಚಿವರು ಗೌಡರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ್ದರು. ಈಗ ಆಪ್ತನ ಅಗಲಿಕೆಗೆ ಅವರು ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ.

Tags: chikkaballapuracknewsnowdr k sudhakargrama panchayati membergudibandeheavy rainskarnatakakushavati riverman goes missing in flood waters
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಬಾಗೇಪಲ್ಲಿಯಲ್ಲಿ ಕಾಣಿಸಿಕೊಂಡ ಯಡಿಯೂರಪ್ಪ ಕಿರಿಯ ಪುತ್ರ

ಬಾಗೇಪಲ್ಲಿಯಲ್ಲಿ ಕಾಣಿಸಿಕೊಂಡ ಯಡಿಯೂರಪ್ಪ ಕಿರಿಯ ಪುತ್ರ

Leave a Reply Cancel reply

Your email address will not be published. Required fields are marked *

Recommended

ವರಲಕೊಂಡ ಶಾಲೆ ಕಟ್ಟಡಕ್ಕೆ ಫಿನಿಶಿಂಗ್ ಟಚ್

ವರಲಕೊಂಡ ಶಾಲೆ ಕಟ್ಟಡಕ್ಕೆ ಫಿನಿಶಿಂಗ್ ಟಚ್

5 years ago
ಜೆಡಿಎಸ್ ಅಧಿಕಾರಕ್ಕೆ ಬಂದರೆ ಕೃಷಿ ಪಂಪುಸೆಟ್ಟುಗಳಿಗೆ 24/7 ಉಚಿತ ವಿದ್ಯುತ್

ಜೆಡಿಎಸ್ ಅಧಿಕಾರಕ್ಕೆ ಬಂದರೆ ಕೃಷಿ ಪಂಪುಸೆಟ್ಟುಗಳಿಗೆ 24/7 ಉಚಿತ ವಿದ್ಯುತ್

4 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ