• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಬಾಗೇಪಲ್ಲಿ ಜಲಾವೃತ

cknewsnow desk by cknewsnow desk
November 19, 2021
in STATE
Reading Time: 2 mins read
0
ಬಾಗೇಪಲ್ಲಿ ಜಲಾವೃತ
1.1k
VIEWS
FacebookTwitterWhatsuplinkedinEmail

ರಸ್ತೆಯ ಮೇಲೆ ಉಕ್ಕಿ ಹರಿದ ಮುಖ್ಯರಸ್ತೆ; ವರುಣನ ಅಬ್ಬರಕ್ಕೆ ಉಕ್ಕಿ ಹರಿಯುತ್ತಿರುವ ಚಿತ್ರಾವತಿ ನದಿ

by Ra Na Gopala Reddy Bagepalli

ಬಾಗೇಪಲ್ಲಿ: ಶತಮಾನ ಕಂಡರಿಯದ ಕುಂಭದ್ರೋಣ ಮಳೆಗೆ ಬಯಲು ಸೀಮೆ ತತ್ತರಿಸಿ ಹೋಗಿದೆ. ಒಂದೂವರೆ ತಿಂಗಳಿಂದ ಸುರಿದ ಮಳೆ ಒಂದೆಡೆಯಾದರೆ, ಕಳೆದ ರಾತ್ರಿ ಅಬ್ಬರಿಸಿದ ಮಹಾಮಳೆ ರೈತರ ಬದುಕನ್ನೇ ಬರ್ಬಾದ್ ಮಾಡಿಬಿಟ್ಟಿದೆ. ಇದೇ ಚಿತ್ರಾವತಿ ನದಿಯು ಉಕ್ಕಿ ಬಾಗೇಪಲ್ಲಿ ಮುಖ್ಯರಸ್ತೆಯ ಸೇತುವೆಯ ಮೇಲೆ ಉಕ್ಕಿ ಹರಿದಿದ್ದು, ಜನಸಂಪರ್ಕ ಸ್ಥಗಿತವಾಗಿತ್ತು.

ಚಿತ್ರಾವತಿ ಜಲಾನಯನ ಪ್ರದೇಶದಲ್ಲಿ ಕಳೆದ ರಾತ್ರಿ ಮತ್ತೂ ಅದಕ್ಕೂ ಹಿಂದಿನ ದಿನಗಳಿಂದ ನಿರಂತರವಾಗಿ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಪರಗೋಡು ಬಳಿ ಇರುವ ಚಿತ್ರಾವತಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಹೀಗಾಗಿ ನೀರು ಅಣೆಕಟ್ಟು ತುಂಬಿ ಹೊರಗೆ ಹರಿಯುತ್ತಿದ್ದು, ಆ ನೀರು ಬಾಗೇಪಲ್ಲಿ ಮೂಲಕ ಹಾದು ಹೋಗುತ್ತಿದೆ.

ನದಿ ಏಕಾಎಕಿ ಉಕ್ಕಿ ಹರಿದ ಪರಿಣಾಮ ಅಕ್ಕಪಕ್ಕ ಮನೆಗಳಿಗೆ ತೋಟಗಳಿಗೆ ನೀರು ನುಗ್ಗಿದೆ. ಕೆಲ ದಿನಗಳ ಹಿಂದೆ ಪಟ್ಟಣ ತ್ಯಾಜ್ಯ ಕೇಂದ್ರವಾಗಿ ಪರಿವರ್ತನೆಯಾಗಿದ್ದ ನದಿ ಪಾತ್ರವು ಈಗ ಭಾರೀ ಜಲರಾಶಿಯೊಂದಿಗೆ ರುದ್ರನರ್ತನ ಮಾಡುತ್ತಿದೆ.

ಸೇತುವೆ ಮೇಲೆ ಚಿತ್ರಾವತಿ ನದಿ ನೀರು ಉಕ್ಕಿ ಹರಿದ ಪರಿಣಾಮ ನ್ಯಾಯಾಲಯದ ಕಟ್ಟಡದವರೆಗೂ ನೀರು ವ್ಯಾಪಿಸಿತ್ತು. ಹೆಚ್ಚು ರಭಸವಾಗಿ ನೀರು ಹರಿಯುತ್ತಿರುವ ಕಾರಣ ಸೇತುವೆಯ ಎರಡೂ ಬದಿಗಳಲ್ಲಿ ಪೊಲೀಸರು ಸರ್ಪಗಾಲು ಹಾಕಿ, ಬ್ಯಾರಿಕೇಡ್ ನಿಲ್ಲಿಸಲಾಗಿದೆ.

ಧಾರಾಕಾರ ಮಳೆಗೆ ಕೆರೆಕಟ್ಟೆಗಳು, ಸಂಪರ್ಕ ರಸ್ತೆಗಳು ಹಾಳಾಗಿದ್ದರೆ, ಇತ್ತ ರೈತರ ಬೆಳೆಗಳು ಜಲಾವೃತವಾಗಿವೆ. ಕೋಟ್ಯಂತರ ರೂಪಾಯಿ ಮೌಲ್ಯದ ಬೆಳೆ ಹಾನಿಯಾಗಿ ಅನ್ನಧಾತ ಕಂಗಾಲಾಗುವಂತಾಗಿದೆ.

ದಶಕಗಳಿಂದ ಬರಪೀಡಿತವಾಗಿದ್ದ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಒಣಗಿದ್ದ ನದಿಗಳೆಲ್ಲವೂ ವರುಣನ ಅಬ್ಬರದಿಂದ ಉಕ್ಕಿ ಹರಿಯುತ್ತಿವೆ. ಕುಶಾವತಿ, ಉತ್ತರ ಪಿನಾಕಿನಿ, ಪಾಲಾರ್, ಪೆನ್ನಾರ್, ಸ್ವರ್ಣಮುಖಿ ನದಿಗಳು ಕುಂಭದ್ರೋಣ‌ ಮಹಾಮಳೆಗೆ ಧುಮ್ಮಿಕ್ಕಿ ಹರಿಯುತ್ತಿವೆ.

ಮಳೆರಾಯನ ಆರ್ಭಟದಿಂದ ನೀರು ರಭಸವಾಗಿ ಹರಿಯುತ್ತಿರುವ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲ್ಲೂಕಿನ ಅಮಾನಿ ಬೈರಸಾಗರ ಕೆರೆಕಟ್ಟೆ, ಹಂಪಸಂದ್ರ, ಲಕ್ಕೇನಹಳ್ಳಿ, ನವಿಲುಗುರ್ಕಿ ರಸ್ತೆಗಳ ಮೇಲೆ ನೀರು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಇನ್ನೂ ಬಾಗೇಪಲ್ಲಿಯ ಚಿತ್ರಾವತಿ ಜಲಾಶಯ ಮೈದುಂಬಿ ಹರಿಯುತ್ತಿರುವುದರಿಂದ ಬಾಗೇಪಲ್ಲಿ ಪಟ್ಟಣದ ಸಮೀಪ‌ ರಸ್ತೆಯ ಮೇಲೆ‌ ನೀರು ಹರಿಯುತ್ತಿರುವುದರಿಂದ ಸಂಚಾರ ಬಂದ್ ಮಾಡಲಾಗಿದೆ.

ಜತೆಗೆ, ಬಾಗೇಪಲ್ಲಿ ತಾಲೂಕಿನ ಬಹತೇಕ ಕೆರೆಗಳು ಕೋಡಿ ಹೋಗಿದ್ದು, ಎಲ್ಲೆಲ್ಲೂ ನೀರು ಹರಿಯುತ್ತಿದೆ. ಸತತವಾಗಿ ಸುರಿಯುತ್ತಿರುವ ಬಾರಿ ಮಳೆಯಿಂದ ಗ್ರಾಮೀಣ ಪ್ರದೇಶಗಳಲ್ಲಿ ಗುಡಿಸಲು ಕುಸಿದು ಬೀಳುತ್ತಿದ್ದು, ಸರ್ಕಾರ ಪರಿಹಾರ ಧನ ಮಂಜೂರು ಮಾಡಬೇಕೆಂದು ಮನವಿ ಮಾಡಿದ್ದಾರೆ. ತಾಲೂಕಿನ ಯಲ್ಲಂಪಲ್ಲಿಯಲ್ಲಿ ಐದು ಮನೆಗಳು ಬಿದ್ದುಹೋಗಿವೆ ಎಂದು ವರದಿಯಾಗಿದೆ.

ಆಚೇಪಲ್ಲಿ ಗ್ರಾಮದಲ್ಲಿ ವೆಂಕಟೇಶ್ ಮತ್ತು ಶಿವಗಾಮಿ ದಂಪತಿಯ ಗುಡಿಸಲು ಮನೆಯ ಗೋಡೆ ಕುಸಿದು ಬಿದ್ದಿದ್ದು, ಸರ್ಕಾರದಿಂದ ಪರಿಹಾರಕ್ಕಾಗಿ ಎದುರು ನೋಡುತ್ತಿದ್ದಾರೆ.

ತಾಲೂಕಿನಲ್ಲಿ ಮಳೆಯ ಅಬ್ಬರದಿಂದ ಬಿದ್ದು ಹೋಗಿರುವ ಮನೆಗಳ ಪುನಾ ನಿರ್ಮಾಣಕ್ಕಾಗಿ ಸರ್ಕಾರ ಸಹಾಯ ಹಸ್ತ ನೀಡಬೇಕೆಂದು ಅವರು ಮನವಿಸುತ್ತಿದ್ದಾರೆ.

ಪರಗೋಡು ಬಳಿಯ ಚಿತ್ರಾವತಿ ಅಣೆಕಟ್ಟೆಗೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ.

ನದಿ ನೀರು ಮುಖ್ಯ ರಸ್ತೆಯ ಸೇತುವೆ ಮೇಲೆ  ರಭಸವಾಗಿ ಹರಿಯುತ್ತಿದೆ. ಹಲವೆಡೆ ಭತ್ತದ ಗದ್ದೆಗಳಿಗೆ ನೀರು ನುಗ್ಗಿ ಬೆಳೆ ನೆಲಕಚ್ಚಿದೆ. ಪೊಲೀಸರ ಸಹಕಾರದಿಂದ ಸೇತುವೆಯ ಎರಡೂ ಬದಿಗಳಲ್ಲಿ ಬ್ಯಾರಿಕೇಡ್ ಹಾಕಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.

ದಿವಾಕರ್, ತಹಸೀಲ್ದಾರ್ ಬಾಗೇಪಲ್ಲಿ
ಬಾಗೇಪಲ್ಲಿ ತಾಲೂಕಿನ ಬಿಳ್ಳೂರಿಗೆ ಸಂಪರ್ಕ ಕಲ್ಪಿಸುವ ರಸ್ತೆಯು ಕುಸಿದು ಬಿದ್ದಿದೆ.
Tags: bagepalliChikkaballapura rainschitravati rivercknewsnowheavy rainkarnatakanewsrain disaster
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಮಳೆಯಿಂದ ಜನ ಸಂಕಷ್ಟದಲ್ಲಿದ್ದಾರೆ, ಇಂಥ ಸಮಯದಲ್ಲಿ ಶಂಖ ಊದಿಕೊಂಡು ಹೋದರೆ ಸ್ವರಾಜ್ಯ ಸಿಗುತ್ತದಾ?

ಮಳೆಯಿಂದ ಜನ ಸಂಕಷ್ಟದಲ್ಲಿದ್ದಾರೆ, ಇಂಥ ಸಮಯದಲ್ಲಿ ಶಂಖ ಊದಿಕೊಂಡು ಹೋದರೆ ಸ್ವರಾಜ್ಯ ಸಿಗುತ್ತದಾ?

Leave a Reply Cancel reply

Your email address will not be published. Required fields are marked *

Recommended

ಎಂಜಿನಿಯರಿಂಗ್ ಸಂಶೋಧನೆ ಮತ್ತು ಅಭಿವೃದ್ಧಿ ನೀತಿ-2021 ಪ್ರಕಟ: ವೈಮಾನಿಕ-ರಕ್ಷಣೆ ಸೇರಿ 5 ಆದ್ಯತಾ ವಲಯಗಳಲ್ಲಿ ಕ್ರಾಂತಿಕಾರಿ ಮುನ್ನಡೆ ಸಾಧಿಸಲು ಕರ್ನಾಟಕ ಸಜ್ಜು

ಶೈಕ್ಷಣಿಕ ಸಂಸ್ಥೆಗಳಾಗಿಯೇ ಉಳಿದರೆ ಉಪಯೋಗವಿಲ್ಲ, ಕೈಗಾರಿಕೆ-ಉದ್ಯೋಗ ಪೂರಕ ಶಿಕ್ಷಣ; ರಾಜ್ಯದ 150 ಐಟಿಐಗಳ ಆಮೂಲಾಗ್ರ ಅಭಿವೃದ್ಧಿಗೆ 5,000 ಕೋಟಿ ರೂ. ವೆಚ್ಚ

5 years ago
ಮುಳಬಾಗಿಲು: ವಿದ್ಯುತ್ ಬಿಲ್‌ನಲ್ಲಿ ಅಕ್ರಮ ಎಸಗಿದ ಮೂವರ ಸಸ್ಪೆಂಡ್

ಶಿವಾರಪಟ್ಟಣದಲ್ಲಿ 10 ಕೋಟಿ ವೆಚ್ಚದ ಅಮರಶಿಲ್ಪಿ ಜಕಣಾಚಾರಿ ಶಿಲ್ಪಕಲಾ ಕೇಂದ್ರ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ