• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಮಳೆ ನೆರೆಗೆ ತತ್ತರಿಸಿದ ಚಿಕ್ಕಬಳ್ಳಾಪುರ

cknewsnow desk by cknewsnow desk
November 19, 2021
in STATE
Reading Time: 4 mins read
1
ಮಳೆ ನೆರೆಗೆ ತತ್ತರಿಸಿದ ಚಿಕ್ಕಬಳ್ಳಾಪುರ

ಶಿಡ್ಲಘಟ್ಟ ರಸ್ತೆ ಸನಿಹ ವಾಪಸಂದ್ರದ ಹರೀಶ್ ಎಂಬುವರಿಗೆ ಸೇರಿದ ದ್ರಾಕ್ಷಿ‌ ತೋಟಕ್ಕೆ ನುಗ್ಗಿದ ಮಳೆ ನೀರು.

1.2k
VIEWS
FacebookTwitterWhatsuplinkedinEmail

ನೀರು ಪಾಲಾದ ಬೆಳೆ, ಕಣ್ಣೀರಿಟ್ಟ ರೈತರು; ಅಯೋಮಯ ಸ್ಥಿತಿ ಸೃಷ್ಟಿಸಿದ ಅಪ್ಪಯ್ಯನಕುಂಟೆ ಕರೆ ನೀರು

by M Krishnappa Chikkaballapura

ಚಿಕ್ಕಬಳ್ಳಾಪುರ: ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಕಳೆದ 10 ದಿನಗಳಿಂದಲೂ ಸುರಿಯುತ್ತಿರುವ ಧಾರಾಕಾರ ಮಳೆ ಕೃಷಿ ಚಟುವಟಿಕೆಗಳನ್ನು ಹಾಗೂ ರೈತರು ಬೆಳೆದ ಬೆಳೆಗಳನ್ನು ಸಂಪೂರ್ಣವಾಗಿ ಬುಡಮೇಲು ಮಾಡಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮಳೆ ಅಬ್ಬರಕ್ಕೆ ಜನರು ನಲುಗಿ ಹೋಗಿದ್ದು, ವಾರದಿಂದೀಚೆಗೆ ಒಬ್ಬರು ಜೀವ ಕಳೆದುಕೊಂಡಿದ್ದರೆ, ಇಬ್ಬರು ಮಳೆ ನೀರಿಗೆ ಕೊಚ್ಚಿಹೋಗುವ ವೇಳೆ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಅಪಾಯದ ಅಂಚಿನಲ್ಲಿರುವ ಮನೆ.

ನಗರದಲ್ಲಂತೂ ತಗ್ಗು ಪ್ರದೇಶದ ಬಹುತೇಕ‌ ಮನೆಗಳಿಗೆ ನೀರು ನುಗ್ಗುತ್ತಿರುವ ಹಿನ್ನಲೆಯಲ್ಲಿ ಜೀವ ಭಯದಲ್ಲಿ ಜನರು ದಿನದೂಡುವಂಥ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನೂ ನಾಲ್ಕೈದು ದಿನಗಳ ಮಟ್ಟಿಗೆ ಜಿಲ್ಲೆ ಸಹಜ ಸ್ಥಿತಿಗೆ ಬರುವ ಸಾಧ್ಯತೆ ಇಲ್ಲ. ಇನ್ನು; ಜಿಲ್ಲೆಯ ಬಹುತೇಕ ಶಾಲೆಗಳು ಶಿಥಿಲಗೊಂಡು ಸೋರುತ್ತಿರುವುದು ಒಂದೆಡೆಯಾದರೆ,  ಶಾಲೆಗಳ ಆವರಣ ಮತ್ತು ಕೊಠಡಿಗಳಲ್ಲಿ ನೀರು ನಿಂತಿದೆ.

ಮಳೆಯ ರೌದ್ರಾವತಾರ ಇನ್ನು ಹೆಚ್ಚಿರುವ ಬಗ್ಗೆ ಹವಾಮಾನ ಇಲಾಖೆ ಈಗಾಗಲೇ ಮುನ್ಸೂಚನೆ ಹಿನ್ನಲೆಯಲ್ಲಿ ಜಿಲ್ಲೆಯಾದ್ಯಂತ ಎರಡು ದಿನಗಳ ಕಾಲ ಶಾಲಾ-ಕಾಲೇಜುಗಳಿಗೆ ಜಿಲ್ಲಾಡಳಿತ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಗಳು ರಜೆ ಘೋಷಿಸಿವೆ.

ನಗರದ ಕಂದವಾರ ಕೆರೆ  ಹೊರತುಪಡಿಸಿ ಈ ಭಾಗದ ಮಂಚನಬಲೆ ಕೆರೆ, ಅಮಾನಿ ಗೋಪಾಲಕೃಷ್ಣ ಕೆರೆ, ದೊಡ್ಡಮರಳಿ ಕೆರೆ ಸೇರಿದಂತೆ ಬಹುಪಾಲು ಕೆರೆಗಳು ತುಂಬಿ ಕೋಡಿ ಹರಿದಿವೆ. ದುರಂತ ಎಂದರೆ; ರಾಜಕಾಲುವೆ ಮುಚ್ಚಿ ಒತ್ತುವರಿ ಮಾಡಿಕೊಂಡ ಕಾರಣ ತುಂಬಿದ ಕೆರೆಗಳ ನೀರು ರಾಜಕಾಲುವೆಗಳ ಮೂಲಕ ಹಾದು ಹೋಗಲು ಸಾದ್ಯವಾಗದ ಹಿನ್ನಲೆಯಲ್ಲಿ ಕೆರೆಯಂಗಳ ಬಹುಪಾಲಿನ ನೀರು ಬೆಳೆಗಳ ಮೇಲೆ ಹರಿಯತೊಡಗಿದೆ.

ಹೀಗಾಗಿ ಬೆಳೆಗಳು ನೆರೆ ನೀರಿನ ರಭಸಕ್ಕೆ ಕೊಚ್ಚಿ ಹೋಗಿವೆ. ಅಲ್ಲದೆ; ಕೆರೆಗಳ ನೀರು ಬೆಳೆಗಳ ಮೇಲೆ ಹರಿದ ಪರಿಣಾಮ ರೈತರಿಗೆ ಕೈಗೆ ಬಂದ ತುತ್ತು ಬಾಯಿಗೆ ಬರದಂಥ ದುಸ್ಥಿತಿ ಎದುರಾಗಿದೆ.

ಜಿಲ್ಲೆಯ ಬಹುಪಾಲು ಮನೆಗಳು ಸೇರಿ ರೆಸಿಡೆನ್ಶಿಯಲ್‌ ಪ್ರದೇಶಗಳು, ಹೊಲ ಗದ್ದೆಗಳು ಸಂಪೂರ್ಣವಾಗಿ ಜಲಾವೃತಗೊಂಡಿವೆ. ರಸ್ತೆಗಳು ನದಿಗಳಾಗಿ ಪರಿವರ್ತನೆಗೊಂಡಿವೆ. ಶಾಲಾ ಮಕ್ಕಳು, ವೃದ್ಧರು ಯಾರೂ ಕೂಡ ಆ ನೀರಿನಲ್ಲಿ ನಡೆದು ಹೋಗಲು ಸಾಧ್ಯವೇ ಇಲ್ಲ ಎನ್ನುವಷ್ಟರ ಮಟ್ಟಿಗೆ ಪರಿಸ್ಥಿತಿ ಅಪಾಯಕಾರಿಯಾಗಿದೆ.

ಹವಾಮಾನ ಇಲಾಖೆ ವರದಿ ಪ್ರಕಾರ ಅವಳಿ ಜಿಲ್ಲೆಗಳಲ್ಲಿ ಇನ್ನೆರಡು ದಿನಗಳ ಕಾಲ ಮಳೆಯ ಅಬ್ಬರ ಇನ್ನಷ್ಟು ಹೆಚ್ಚಲಿದೆ ಎನ್ನುವ ಎಚ್ಚರಿಕೆ ನೀಡಿದೆ. ಜಿಲ್ಲಾಡಳಿತವೂ ಅಗತ್ಯ ಕ್ರಮವಹಿಸಿದೆ.

ಮಳೆಯ ನೀರಿನ ರಭಸಕ್ಕೆ ಸಾಕ್ಷಿಗಳು.

ಬೆಳೆಗಳು ನೀರು ಪಾಲು

ಚಿಕ್ಕಬಳ್ಳಾಪುರ ನಗರದ ರಾಜಕಾಲುವೆಗಳು ಒತ್ತುವರಿಯಾಗಿ ನೀರು ಬೆಳೆಗಳ ಮೇಲೆ ಹರಿದುಹೋಗುತ್ತಿದೆ. ಶಿಡ್ಲಘಟ್ಟ ರಸ್ತೆಯ ವಾಪಸಂದ್ರ ಸಮೀಪದ ಮಳೆ ನೀರಿನ ರುದ್ರನರ್ತನಕ್ಕೆ ದ್ರಾಕ್ಷಿ, ಟೊಮ್ಯಾಟೋ, ರಾಗಿ ಇತ್ಯಾದಿ ಬೆಳೆಗಳು ಕೈಚೆಲ್ಲಿವೆ. ತಮ್ಮ ಕಣ್ಣೆದುರೇ ನೀರುಪಾಲಾದ ಬೆಳೆಗಳನ್ನು ಕಂಡು ಅನ್ನಧಾತರು ಕಣ್ಣೀರು ಹಾಕುತ್ತಿದ್ದಾರೆ.

ತೋಟಗಳಿಗೆ ನುಗ್ಗಿದ ಅಪ್ಪಯ್ಯನಕುಂಟೆ ಕರೆ ನೀರು

ನಗರಕ್ಕೆ ಕೇವಲ 0.5 ಕಿ.ಮೀ ದೂರದಲ್ಲಿರುವ ಅಪ್ಪಯ್ಯನಕುಂಟೆ ಕೆರೆ ಬಳಿಯ ಪರಿಸ್ಥಿತಿ ಭೀಕರವಾಗಿದೆ. ಸಿಎಮ್‌ಸಿ ತನ್ನ ಮಿತಿಯಲ್ಲಿದೆ ಎಂದು ಹೇಳಿ ಕೆರೆಗೆ ಮರಳು ತುಂಬಿ ಅಕ್ರಮ ಕ್ಲಬ್ ಹೌಸ್ ಕಟ್ಟಿದ ಪರಿಣಾಮ ರಾಜಕಾಲುವೆಯಲ್ಲಿ ಹರಿಯಬೇಕಿದ್ದ ಮಳೆ ನೀರು ರಸ್ತೆ, ಮನೆಗಳು ಹಾಗೂ ತೋಟಗಳಿಗೆ ನುಗ್ಗಿದೆ.

  • ಕೆರೆಗೆ ಹರಿಯಬೇಕಾದ ನೀರು ಅಕ್ಕಪಕ್ಕದ ತೋಟಗಳಿಗೆ ನುಗ್ಗಿರುವ ದೃಶ್ಯಗಳು

ಯಾವ ಕ್ಷೇಮಾಭಿವೃದ್ಧಿ ಉದ್ದೇಶಕ್ಕೆ ಅಂತ ಕ್ಲಬ್‌ ಹೌಸ್‌ ನಿರ್ಮಿಸಲಾಗುತ್ತಿದೆ? 22 ಎಕರೆ ವಿಸ್ತೀರ್ಣದ ಕೆರೆ ಮುಚ್ಚಿ ಹೋಗಿದ್ದು, ಈ ಅಕ್ರಮ ಯೋಜನೆಯಿಂದ ನೀರು ಹಿಡಿದಿಟ್ಟುಕೊಳ್ಳುವ ಜಾಗವನ್ನೇ ಕಬಳಿಸಲಾಗಿದೆ. ಪರಿಣಾಮ ಬೆಳೆದು ನಿಂತಿದ್ದ ಅಕ್ಕಪಕ್ಕದ ಜಮೀನುಗಳೆಲ್ಲ ನೀರಿನಲ್ಲಿ ಮುಳುಗಿವೆ.

ತಹಸೀಲ್ದಾರ್ ಅವರನ್ನು ಈ ಬಗ್ಗೆ ಸಂಪರ್ಕಿಸಿದರೆ ಅವರು ಇದು ಸಿಎಂಸಿ ಯೋಜನೆ ಎನ್ನುತ್ತಾರೆ. ಸಿಎಂಸಿ ಮತ್ತು ಜಿಲ್ಲಾಡಳಿತ ಮಾತ್ರ ಅನಾಹುತದಿಂದ ಪಾರಾಗುತ್ತಿದೆ. ರೈತರ ಸಂಕಷ್ಟಕ್ಕೆ ಯಾರೂ ಸ್ಪಂದಿಸುತ್ತಿಲ್ಲ. ಅದೊಂದು ಅಕ್ರಮ ಯೋಜನೆಯಾಗಿದೆ. ಅದನ್ನು ಜಿಲ್ಲಾಡಳಿತ ತೆರವುಗೊಳಿಸುವವರೆಗೆ ಈ ಜಲ ಸಂಕಷ್ಟ ದೂರಾಗುವುದಿಲ್ಲ ಎಂದು ಸ್ಥಳೀಯ ನಾಗರೀಕರು ಹೇಳಿದ್ದಾರೆ.

ಕೆರೆಯನ್ನು ಮರಳಿ ಜೀರ್ಣೋದ್ಧಾರ ಮಾಡಬೇಕು ಹಾಗೂ ಚಿಕ್ಕಬಳ್ಳಾಪುರ ಪಟ್ಟಣ ವ್ಯಾಪ್ತಿಯಲ್ಲಿ ಆಗುತ್ತಿರುವ ಶೇ.50ರಷ್ಟು ನೀರಿನ ಸಮಸ್ಯೆಗೆ ಆ ಒಂದು ಕೆರೆಯ ಸಮರ್ಪಕ ನಿರ್ವಹಣೆ, ರಾಜಕಾಲುವೆಗಳ ಒತ್ತುವರಿ ತೆರವು  ಪರಿಹಾರವಾಗಲಿದೆ ಎಂದು ಸಾರ್ವಜನಿಕರು ಹೇಳಿದ್ದಾರೆ.

Tags: chikkaballapuraChikkaballapura rainscknewsnowfloodsheavy rainkarnatakalakes breaknewsrain disaster
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಬಾಗೇಪಲ್ಲಿ ಜಲಾವೃತ

ಬಾಗೇಪಲ್ಲಿ ಜಲಾವೃತ

Comments 1

  1. Vivek says:
    4 years ago

    ನಮ್ಮಲ್ಲಿ ಇರುವ ನೂರಾರು , ಹಳ್ಳಿಗಳು, ಕಟ್ಟೆಗಳು 5000,….1000,..2000 ..,500 .. ವರ್ಷ ಹಳೆಯವು,…. ನಮ್ಮ ಪೂರ್ವಿಕರು ಭದ್ರವಾದ ಅಡಿಪಾಯ,. ಬೃಹತ್ ಬಂಡೆ, ಗಾರೆ ಹಾಕಿ, ಕೆರೆಗಳನ್ನು ನಿರ್ಮಾಣ ಮಾಡಿದ್ದಾರೆ,… ಮಳೆ ನೀರು ಜಾಸ್ತಿ ಆದರೆ ಕೆರೆ ಕಟ್ಟೆಗಳು ನಿಸ್ಸಂದೇಹವಾಗಿ ಹಾಳು ಆಗುವವು,… ಅದನ್ನು ಪುನಃ ನಿರ್ಮಿಸಿ, ಸಂರಕ್ಷಿಸಿ ಉಳಿಸಿ ರುವರು,…. ಆದರೆ ಈಗ ನಮ್ಮ ಬಳಿ ಸನಾತನ ಕೆರೆ ನಿರ್ಮಾಣ ಶಾಸ್ತ್ರ ಉಪಲಬ್ಧ ಇಲ್ಲ ವಾದಾರಿಂದ,……. ಸ್ಪಲ್ಪ ಜಾಗರೂಕರಾಗಿ ಇರಬೇಕು,….60 ಸಂವತ್ಸರಗಳು ಒಂದೇ ರೀತಿ ಹವಾಮಾನ ಇರುದಿಲ್ಲ,…. ಕಾಲಕ್ಕೆ ತಕ್ಕ ಹಾಗೆ ಸಾಗಬೇಕು ಅಷ್ಟೆ,…… ಬರಗಾಲದ ಸಂದರ್ಭವೂ, ಒದಗಿ ಬರುತ್ತದೆ,…

    Reply

Leave a Reply Cancel reply

Your email address will not be published. Required fields are marked *

Recommended

ರಾಜರಾಜೇಶ್ವರಿ ನಗರದಲ್ಲಿ ಹೆಚ್ಚಿದ ರಗಳೆ; ಕಾಂಗ್ರೆಸ್‌ ಮತದಾರರ ಚೀಟಿ ಸಂಗ್ರಹಿಸುತ್ತಿದೆ ಎಂದು ನೇರ ಆರೋಪ ಮಾಡಿದ ಬಿಜೆಪಿ

ಕಾಂಗ್ರೆಸ್ಸಿಗೆ ಬಿಜೆಪಿ ಟಕ್ಕರ್

4 years ago
ಅರಣ್ಯಾಧಿಕಾರಿಗಳ ವಶಕ್ಕೆ ಪುತ್ರನ ಪೆಂಡೆಂಟ್‌ ಕೊಟ್ಟ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ

ಅರಣ್ಯಾಧಿಕಾರಿಗಳ ವಶಕ್ಕೆ ಪುತ್ರನ ಪೆಂಡೆಂಟ್‌ ಕೊಟ್ಟ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ

3 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ