• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home GUEST COLUMN

ಕನ್ನಡ ಕಾವ್ಯ ಪರಂಪರೆಯ ಮೇರು ಕನಕದಾಸರು

cknewsnow desk by cknewsnow desk
November 22, 2021
in GUEST COLUMN
Reading Time: 1 min read
0
ಕನ್ನಡ ಕಾವ್ಯ ಪರಂಪರೆಯ ಮೇರು ಕನಕದಾಸರು

ಚಿತ್ರ: ಶ್ರೀ ಬಿಕೆಎಸ್‌ ವರ್ಮ

1.2k
VIEWS
FacebookTwitterWhatsuplinkedinEmail

ಇಂದು ಕನಕದಾಸರ ಜಯಂತಿ

ಇಂದು (ನವೆಂಬರ್‌ 22) ಕನಕದಾಸರ ಜಯಂತಿ. ಕನ್ನಡ ಸಾಹಿತ್ಯ ಲೋಕ ಮಾತ್ರವಲ್ಲ ಸಮಸ್ತ ಕನ್ನಡಿಗರಿಗೆ ಇದು ಮಹತ್ವದ ದಿನ. ತಮ್ಮ ಪದಗಳು, ಕಾವ್ಯದ ಮೂಲಕ ಅನನ್ಯತೆಯ ಸಾಕ್ಷಾತ್ಕಾರ ಮಾಡಿಸಿದವರು ಅವರು. ಕನಕರ ಬಗ್ಗೆ ನಮ್ಮ ಅಂಕಣಕಾರ ಡಾ.ಗುರುಪ್ರದಾದ್‌ ರಾವ್‌ ಹವಲ್ದಾರ್‌ ಅವರ ಲೇಖನ.

ಶ್ರೀ ಕನಕದಾಸರು (1509-1609) ಕರ್ನಾಟಕದಲ್ಲಿ 15-16ನೇ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕವಿಗಳು, ಮತ್ತೂ ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದಲ್ಲಿ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.

ಕನಕದಾಸರು ದಂಡನಾಯಕನಾಗಿದ್ದು, ಯಾವುದೋ ಯುಧ್ಧದಲ್ಲಿ ಸೋತ ಅವರಿಗೆ ಉಪರತಿ ಉಂಟಾಗಿ ಹರಿ ಭಕ್ತರಾದರಂತೆ. ಕನಕದಾಸರ ಊರು ಕಾಗಿನೆಲೆ (ಈಗ ಹಾವೇರಿ ಜಿಲ್ಲೆಯಲ್ಲಿದೆ). ಕನಕದಾಸರ ಕೀರ್ತನೆಗಳು ಕಾಗಿನೆಲೆಯ ಕೇಶವನಿಗೆ ಅರ್ಪಿತವಾಗಿರುವುದನ್ನು ಗಮನಿಸಬಹುದು. ಕಾಗಿನೆಲೆಯ ಆದಿಕೇಶವನ ಭಕ್ತರಾದ ಕನಕದಾಸರು ಜಾತಿಪದ್ಧತಿಯ ತಾರತಮ್ಯಗಳನ್ನು ಅಲ್ಲಗಳೆದರು. ಕನಕದಾಸರು ಶ್ರೀ ವ್ಯಾಸರಾಯರ ಮೆಚ್ಚಿನ ಶಿಷ್ಯರು. ವ್ಯಾಸರಾಯದಿಂದ ಮಧ್ವ ತತ್ವಶಾಸ್ತ್ರವನ್ನು ಕಲಿತು ಒಪ್ಪಿಕೊಂಡ ಕನಕದಾಸರು ಉಡುಪಿ ಶ್ರೀ ಕೃಷ್ಣನ ಭಕ್ತರು.

ಕೀರ್ತನೆಗಳು ಮತ್ತು ಕಾವ್ಯಗಳು ಎರಡನ್ನೂ ರಚಿಸಿದ ಕೆಲವೇ ಕೆಲ ಹರಿದಾಸರಲ್ಲಿ ಕನಕದಾಸರು ಒಬ್ಬರು. ಆ ಕಾಲದ ಸಾಹಿತ್ಯ ಸಂದರ್ಭದಲ್ಲಿ ಕನಕದಾಸರಿಗೆ ವಿಶಿಷ್ಟವಾದ ಹಿನ್ನೆಲೆಯಿತ್ತು. ಅವರು ಸಾಮಂತ ರಾಜರೋ ಅಥವಾ ಪಾಳೆಯಗಾರರೋ ಆಗಿದ್ದುದರಿಂದ ಅವರಿಗೆ ಯುದ್ಧ ಮತ್ತು ಆಡಳಿತಗಳ ನೇರ ಅನುಭವವಿತ್ತು. ಅವರ ತವರು ನೆಲವಾದ ಕಾಗಿನೆಲೆಯಲ್ಲಿ ಇಂದಿಗೂ ಇರುವ ಆದಿಕೇಶವನ ಗುಡಿಯ ದೇವರಾದ ಕೇಶವನು ಅವರ ಆರಾಧ್ಯದೈವವಾಗಿದ್ದು, ಅವರ ಅಂಕಿತವಾದ ‘ಕಾಗಿನೆಲೆಯಾದಿಕೇಶವರಾಯ‘ ಎನ್ನುವುದು ಅಲ್ಲಿಂದಲೇ ಬಂದಿದೆ. ಅವರು ಕರ್ನಾಟಕ ಹಾಗೂ ಮಹಾರಾಷ್ಟ್ರಗಳಲ್ಲಿ ಮಾಡಿದ ನಿರಂತರವಾದ ತಿರುಗಾಟಗಳು ಮತ್ತು ಧಾರ್ಮಿಕ ಮುಖಂಡರೊಂದಿಗಿನ ಅವರ ಮುಖಾಮುಖಿಗಳು ಸಾಹಸ-ವಿಷಾದಗಳಿಂದ ಕೂಡಿವೆ.

ಅವರ ಭಾವಗೀತೆಯಂತಹ ಕೀರ್ತನೆಗಳಲ್ಲಿ ಬಹಳ ಸಮರ್ಥವಾದ ಅಭಿವ್ಯಕ್ತಿಯನ್ನು ಪಡೆದಿವೆ. ಕನಕದಾಸರ ಹಿರಿಯರೂ ಸಮಕಾಲೀನರೂ ಆದ ವ್ಯಾಸರಾಯರು, ಪುರಂದರದಾಸರು ಮುಂತಾದವರು ಅವರ ಭಕ್ತಿ ಮತ್ತು ಪ್ರತಿಭೆಗಳನ್ನು ಮೆಚ್ಚಿ ಕೊಂಡಾಡಿದ್ದಾರೆ.

ಅವರು ಶ್ರೀವೈಷ್ಣವ ಸಿದ್ಧಾಂತವನ್ನು ಇಷ್ಟಪಟ್ಟು ದ್ವೈತ ತಾತ್ವಿಕತೆಯ ಮೂಲ ನೆಲೆಗಳಲ್ಲಿ ಕೀರ್ತನೆಗಳು  ರಚಿಸಿದರು. ಅವರು ಅಂತರಂಗದ ಭಾವನೆಗಳಿಗೆ ಕಟ್ಟುಪಾಡಿಲ್ಲದೆ, ನುಡಿಗೊಡುವ ಅನೇಕ ಕೀರ್ತನೆಗಳನ್ನು ಹಾಡಿದ್ದಾರೆ. ಕನಕದಾಸರ ಕೀರ್ತನೆಗಳು ಆರ್ದ್ರವಾಗಿದ್ದು, ಅನೇಕ ಕೀರ್ತನೆಗಳು ದ್ವೈತ ಸಿದ್ಧಾಂತದ ಚೌಕಟ್ಟಿನಿಂದ ಆಚೆಗೆ ಹೋಗುವುದಿಲ್ಲವೆನ್ನುವುದು ನಿಜವಾದರೂ ಅವುಗಳೊಳಗೆ ಆಳವಾದ ವಿಷಾದವೂ ಇದೆ.

ಕನಕದಾಸರು ಸಾಹಿತ್ಯದ ವಿವಿಧ ಪ್ರಕಾರಗಳಾದ ಕೀರ್ತನೆಗಳು, ಸುಳಾದಿಗಳು, ಉಗಾಭೋಗಗಳು ಕನ್ನಡ ಸಾಹಿತ್ಯ ಲೋಕಕ್ಕೆ ಅರ್ಪಿಸಿರುವುದಲ್ಲದೆ, ಸಂಗೀತ ಪ್ರಪಂಚಕ್ಕೆ ತನ್ನದೇ ಆದಂತಹ ಕೊಡುಗೆಯನ್ನು ಮುಂಡಿಗೆಗಳ ರೂಪದಲ್ಲಿ ನೀಡಿದ್ದಾರೆ. ಸುಮಾರು 316 ಕೀರ್ತನೆಗಳು ಹಾಗೂ ಇನ್ನಿತರೆ ಸಾಹಿತ್ಯ ಮಾತ್ರ ಲಭ್ಯವಾಗಿರುವುದನ್ನು ಕಾಣಬಹುದಾಗಿದೆ.

ಭಾಮಿನಿ ಷಟ್ಪದಿಯಲ್ಲಿ ರಚಿತವಾಗಿರುವ ‘ನಳಚರಿತೆ‘ ಕನ್ನಡದ ಜನಪ್ರಿಯ ಕಾವ್ಯಗಳಲ್ಲಿ ಒಂದು. ಇದರಲ್ಲಿ ಒಂಬತ್ತು ಅಧ್ಯಾಯಗಳಿದ್ದು, ಅವು ಸುಮಾರು 480 ಪದ್ಯಗಳನ್ನು ಒಳಗೊಂಡಿವೆ. ಒಂದು ನೆಲೆಯಲ್ಲಿ ಇದು ನಿಜವಾದ ಪ್ರೇಮಿಗಳು ಎದುರಿಸುವ ಪಡಿಪಾಟಲುಗಳನ್ನು ನಿರೂಪಿಸುವುದರಿಂದಲೇ ಆತ್ಮೀಯವಾಗುತ್ತದೆ. ಮಹಾಭಾರತದಿಂದ ತೆಗೆದುಕೊಳ್ಳಲಾಗಿರುವ ಈ ಉಪಾಖ್ಯಾನವು ನಳ-ದಮಯಂತಿಯರ ಜೀವನವನ್ನು ಸರಳವಾದರೂ ಶಕ್ತಿಶಾಲಿಯಾದ ಶೈಲಿಯಲ್ಲಿ ನಿರೂಪಿಸುತ್ತದೆ. ಈ ದಂಪತಿಗಳು ಎದುರಿಸಿದ ಕಾಡು ಮತ್ತು ಕಾಳ್ಗಿಚ್ಚುಗಳ ವರ್ಣನೆಯು ಬಹಳ ಸಹಜವಾಗಿದೆ. ಈ ಕಾವ್ಯವು ತನ್ನ ಅನೇಕ ಆಶಯಗಳನ್ನು ಜಾನಪದದಿಂದ ತೆಗೆದುಕೊಂಡಿದೆ. ‘ನಳಚರಿತೆ‘ ಮುಖ್ಯವಾಗಿ ಮನುಷ್ಯಜೀವಿಗಳ ಕಷ್ಟಸುಖಗಳ ಹಂಚಿಕೊಳ್ಳುವಿಕೆಯೇ ವಿನಾ ತಾತ್ವಿಕವಾದ ಉಪದೇಶವಲ್ಲ.

ಮೋಹನ ತರಂಗಿಣಿ‘ ಸಾಂಗತ್ಯವೆಂಬ ಛಂದೋಪ್ರಕಾರವನ್ನು ಬಳಸಿಕೊಂಡಿರುವ ದೊಡ್ಡ ಗಾತ್ರದ ಕಾವ್ಯ. ಈ ಕಾವ್ಯವು ಕೃಷ್ಣನ ಮೊಮ್ಮಗನಾದ ಅನಿರುದ್ಧ ಮತ್ತು ಬಾಣಾಸುರನ ಮಗಳಾದ ಉಷಾರ ಪ್ರಣಯ ಕಥೆಯನ್ನು ವಸ್ತುವಾಗಿ ಹೊಂದಿದೆ. ಈ ಕಾವ್ಯವು ಕೂಡ ಯಾವುದೇ ಕೃಷ್ಣ ಕಥೆಯ ಮೂಲ ಆಕರಗಳಾದ ಭಾಗವತ, ಹರಿವಂಶ, ವಿಷ್ಣುಪುರಾಣ ಮತ್ತು ಮಹಾಭಾರತಗಳಿಂದ ತನಗೆ ಅಗತ್ಯವಾದ ವಿವರಗಳನ್ನು ತೆಗೆದುಕೊಂಡಿದೆ. ಮನ್ಮಥನ ಹುಟ್ಟು, ಶಂಬರಾಸುರನ ವಧೆ, ಉಷಾ ಮತ್ತು ಅನಿರುದ್ಧರ ಪ್ರಣಯ, ಬಾಣಾಸುರ ವಧೆ ಮುಂತಾದವು ಈ ಕಾವ್ಯದ ಮುಖ್ಯ ಘಟನೆಗಳು. ಅದೆಲ್ಲಕ್ಕಿಂತ ಮುಖ್ಯವಾಗಿ ಮೋಹನ ತರಂಗಿಣಿಯು ತನ್ನ ಕಾಲದ ಕರ್ನಾಟಕದ ಜೀವನಶೈಲಿಯ ಮೇಲೆ ಬೆಳಕು ಚೆಲ್ಲುತ್ತದೆ. ನಿಧಾನಗತಿಯ ಹಾಗೂ ಗೇಯತೆಯ ಕಡೆಗೆ ಒಲಿಯುವ ಸಾಂಗತ್ಯದ ಛಂದಸ್ಸು, ಈ ಕಾವ್ಯದ ವಸ್ತುವಿಗೆ ಚೆನ್ನಾಗಿ ಹೊಂದಿಕೊಳ್ಳುತ್ತದೆ.

ರಾಮಧಾನ್ಯ ಚರಿತ್ರೆ‘ಯು ಇಡೀ ಕನ್ನಡ ಸಾಹಿತ್ಯಚರಿತ್ರೆಯಲ್ಲಿಯೇ ಬಹಳ ಅನನ್ಯವಾದ ಕಾವ್ಯ. ಜಾತಿ ಪದ್ಧತಿ ಮತ್ತು ಜನಾಂಗಿಕ ಭೇದದಿಂದ ಉಂಟಾಗುವ ಧಾರುಣ ಯಾತನೆಯನ್ನು ಬಹಳ ಸಾಂಕೇತಿಕವಾಗಿ ಮತ್ತು ಅನುಪಮವಾದ ಕಲ್ಪನಾಶಕ್ತಿಯ ಬಲದಿಂದ ಕಟ್ಟಿಕೊಡುವುದು ಈ ಕಾವ್ಯದ ಹೆಗ್ಗಳಿಕೆ. ಅದು ಅಹಂಕಾರಿಯಾದ ಬತ್ತ ಮತ್ತು ವಿನಯದಿಂದ ತಲೆಬಾಗಿದ, ಜನಸಾಮಾನ್ಯರ ಆಹಾರವಾದ ನರೆದಲೆಗಳ ನಡುವೆ ನಡೆಯುವ ಕಾಲ್ಪನಿಕವಾದ ಮುಖಾಮುಖಿಯ ಕಥನ. ಅವರಿಬ್ಬರ ನಡುವೆ ಯಾರು ಶ್ರೇಷ್ಠರೆನ್ನುವ ವಿಷಯದಲ್ಲಿ ಜಗಳ ನಡೆಯುತ್ತದೆ. ಕೊನೆಯ ತೀರ್ಮಾನವನ್ನು ಕೊಡುವ ಕೆಲಸವನ್ನು ರಾಮನು ನಿರ್ವಹಿಸಬೇಕಾಗುತ್ತದೆ. ಅವನು ಒಂದು ಪರೀಕ್ಷೆಯನ್ನು ಮಾಡಿ, ನರೆದಲೆಯ  ಪರವಾದ ತೀರ್ಮಾನವನ್ನು ಕೊಡುತ್ತಾನೆ. ಅದನ್ನು ರಾಗಿ ಎಂದು ಕರೆಯುತ್ತಾನೆ. (ರಾಘವ ಧಾನ್ಯ)  ಈ ಕಾವ್ಯಕ್ಕೆ ಇರುವ ಸಾಂಕೇತಿಕ ಹಾಗೂ ಸಾಮಾಜಿಕವಾದ ಮಹತ್ವವನ್ನು ಕನ್ನಡ ಸಾಹಿತ್ಯದ ಪ್ರಧಾನಧಾರೆಯು ಗುರುತಿಸಿದ್ದು ಈಚೆಗೆ. ಹಿಂದುಳಿದ ವರ್ಗಗಳು ಮುಂದೆ ಬಂದಿದ್ದಕ್ಕೂ ಈ ಕಾವ್ಯದ ಮರುಹುಟ್ಟಿಗೂ ಇರುವ ಸಂಬಂಧವು ಕಾಕತಾಳೀಯವಲ್ಲ. ಈ ಕಾವ್ಯವನ್ನು ಅಂಚಿಗೆ ತಳ್ಳಿ,  ಕಡಿಮೆ ಆಸ್ಫೋಟಕವಾದ ಕಾವ್ಯಗಳನ್ನು ಹೊಗಳಿರುವುದು, ಕನ್ನಡ ಸಾಹಿತ್ಯವಿಮರ್ಶೆಯ ಮಾನದಂಡಗಳ ಬಗ್ಗೆ, ಮುಖ್ಯವಾದ ಸತ್ಯಗಳನ್ನು ಹೇಳುತ್ತದೆ.

‘ಕನಕನ ಮುಂಡಿಗೆಗಳು‘, ಒಗಟಿನ ಹೊರ ಆವರಣದೊಳಗೆ, ಮಹತ್ವದ ತಾತ್ವಿಕ ಸಂಗತಿಗಳನ್ನು ಹೊಂದಿರುವ, ಚಿಕ್ಕ ಗೇಯ ಕವಿತೆಗಳನ್ನು ಒಳಗೊಳ್ಳುತ್ತವೆ. ಇವುಗಳನ್ನು ಅರ್ಥ ಮಾಡಿಕೊಳ್ಳುವ ತಾಂತ್ರಿಕವಾದ ಪರಿಭಾಷೆಯ ನಿಕಟ ಪರಿಚಯ ಇರಬೇಕು. ‘ಹರಿಭಕ್ತಸಾರ‘ದಲ್ಲಿ ಭಾಮಿನಿ ಷಟ್ಪದಿಯಲ್ಲಿ ರಚಿತವಾಗಿರುವ 110 ಪದ್ಯಗಳಿವೆ. ಅವು ಕನಕದಾಸರ ಜೀವನದೃಷ್ಟಿ ಮತ್ತು ನೈತಿಕ ನೆಲೆಗಟ್ಟನ್ನು ಬಹಳ ಭಾವನಾತ್ಮಕವೂ ಸರಳವೂ ಆದ ಶೈಲಿಯಲ್ಲಿ ಹೇಳುತ್ತದೆ.

‘ಡೊಂಕು ಬಾಲದ ನಾಯಕರೇ  ನೀವೇನೂಟವ ಮಾಡಿದಿರಿ?’ ಎಂದು ನೈತಿಕತೆ ಇಲ್ಲದ ನಾಯಕರನ್ನು ತರಾಟೆಗೂ ತೆಗೆದುಕೊಂಡ ಕನಕದಾಸರು, ‘ಇವರು ಧರ್ಮಕ್ಕೂ, ಮಾನವೀಯತೆಗೂ ದೂರ ನಿಲ್ಲವವರು. ಯಾವುದಕ್ಕೂ ಹೇಸದ, ಒಳಿತನ್ನು ಮಾಡದ ಇವರು ಸಮಾಜಕ್ಕೆ ಕಂಟಕರು’ ಎಂದೂ ಕರೆದಿದ್ದರು.

ಮನುಷ್ಯ ಸದಾಕಾಲ ಹಲವು ಹಸಿವುಗಳಿಂದ ಕೊರಗುತ್ತಿರುತ್ತಾನೆ. ತನ್ನ ಹಸಿವು ಪೂರೈಸಿಕೊಳ್ಳುವುದು, ಪರರ ಹಸಿವನ್ನು ಪೂರೈಸುವ ಜೀವಪರ ಕಾಳಜಿಬೇಕು. ಅದು ಆಗದಿದ್ದಾಗ, ನೀತಿ ಮಾರ್ಗ ಬಿಟ್ಟು ಅನೀತಿ ಮಾರ್ಗದ ಮೂಲಕ ಅವುಗಳನ್ನು ಪೂರೈಸಿಕೊಳ್ಳಲು ಇಚ್ಛಿಸುತ್ತಾನೆ. ಈ ಕುರಿತು ಕನಕದಾಸರು ಮುಂಚಿವಾಗಿಯೇ ಆಲೋಚನೆಯ ಎಚ್ಚರಿಕೆಯನ್ನು ಕೊಡುತ್ತಾರೆ.

ಕನಕದಾಸರ ಸಾಹಿತ್ಯದಲ್ಲಿ ನೈತಿಕ ಮೌಲ್ಯಗಳು ಬೀಜ ಮಂತ್ರದಂತೆ ಬಿತ್ತರಗೊಂಡಿವೆ. ಇಂತಹ ಅನೇಕ ಮೌಲ್ಯಗಳ ಸಂದೇಶ ಹೊತ್ತ ಕನಕದಾಸರು, ‘ಹೃದಯ ಹೊಲವನು ಮಾಡಿ, ತನುವ ನೇಗಿಲು ಮಾಡಿ, ನಾಲಗೆಯ ಕೊರಿಗೆ ಮಾಡಿ ಬಿತ್ತಿರಯ್ಯ’ ಎನ್ನುವ ಚಿಂತನೆಯ ನೆಲೆಯಲ್ಲಿ ಲೋಕದ ಒಳಿತನ್ನು ಬಯಸಿದ್ದಾರೆ.

ಕನಕದಾಸರು ತಾವು ಕಂಡದ್ದನ್ನು, ಅನುಭವಕ್ಕೆ ಬಂದುದನ್ನು ಅಭಿವ್ಯಕ್ತಿಸಿದ್ದಾರೆ. ಅಂದು ಅವರು ಹೇಳಿದ ಸಂದೇಶಗಳು ಸಾರ್ವಕಾಲಿಕ ಪ್ರಸ್ತುತತೆಯನ್ನು ಪಡೆದಂತವು. ಯವುದೇ ಒಂದು ಜಾತಿ, ಮತ, ಪ್ರದೇಶ, ಭಾಷೆಗೆ ಸೀಮಿತವಾಗದ ವಿಶ್ವ ಮಾನವ ಪರಿಕಲ್ಪನೆಯ ಸಂದೇಶಗಳು. ಹಾಗಾಗಿ ಇಂದಿನ ಆಧುನಿಕ ಸಮಾಜಕ್ಕೆ ಕನಕದಾಸರ ತತ್ವ ಸಂದೇಶಗಳ ಅವಶ್ಯಕತೆ ಇದೆ.


ಡಾ.ಗುರುಪ್ರಸಾದ ಹವಲ್ದಾರ್

  • ಮೂಲತಃ ಉಪನ್ಯಾಸಕರು. ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲ್ಲೂಕಿನ ಮರಿಯಮ್ಮನ ಹಳ್ಳಿಯವರು. ಪ್ರಸ್ತುತ ಹಗರಿಬೊಮ್ಮನಹಳ್ಳಿ ಜಿವಿಪಿಪಿ ಪದವಿ ಕಾಲೇಜನಲ್ಲಿ ಕನ್ನಡ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತ ಜೊತೆಗೆ ಪತ್ರಿಕೆಗಳಿಗೆ ವೆಬ್ ನ್ಯೂಸ್ ಪೋಟ್೯ಲ್ ಗಳಿಗೆ ಲೇಖನ ಬರೆಯುತ್ತಿದ್ದಾರೆ.
Tags: cknewsnowguest columnkanakadasakanakadasa jayantikannadakarnatakapurandaradasa
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಒಬ್ಬರೇ ಒಬ್ಬರು! ಅವರೇ ಭಾರತರತ್ನ ಕರ್ಪೂರಿ ಠಾಕೂರ್.., ಹರಿದ ಕೋಟು, ಹರಿದ ಚಪ್ಪಲಿಯೊಂದಿಗೆ ಸಾಗಿದ ಮಹಾನ್‌ ದಂತಕಥೆ!!

ಒಬ್ಬರೇ ಒಬ್ಬರು! ಅವರೇ ಭಾರತರತ್ನ ಕರ್ಪೂರಿ ಠಾಕೂರ್.., ಹರಿದ ಕೋಟು, ಹರಿದ ಚಪ್ಪಲಿಯೊಂದಿಗೆ ಸಾಗಿದ ಮಹಾನ್‌ ದಂತಕಥೆ!!

by cknewsnow desk
January 27, 2024
0

"ಒಬ್ಬರ ಜನನವು ಅವರ ಹಣೆಬರಹವನ್ನು ನಿಶ್ಚಯಿಸುವುದಿಲ್ಲ" ಎಂದ ಜನ ನಾಯಕ; ಅಪ್ಪಟ ಭಾರತರತ್ನ, ಮೀಸಲು ಕೊಟ್ಟು ಬದುಕು ಕಟ್ಟಿಕೊಟ್ಟ ಭಾರತದ ಭಾಗ್ಯವಿದಾತ

ಸರ್ದಾರ್ ಪಟೇಲರ ದೃಢ ಸಂಕಲ್ಪ, ಮುನ್ಷಿ ಅವರ ಪ್ರಚಂಡ ಧೈರ್ಯ ಮತ್ತು ಬಾಬು ರಾಜೇಂದ್ರ ಪ್ರಸಾದರ ರಾಜಿ ಇಲ್ಲದ ನಿಲುವು

ಸರ್ದಾರ್ ಪಟೇಲರ ದೃಢ ಸಂಕಲ್ಪ, ಮುನ್ಷಿ ಅವರ ಪ್ರಚಂಡ ಧೈರ್ಯ ಮತ್ತು ಬಾಬು ರಾಜೇಂದ್ರ ಪ್ರಸಾದರ ರಾಜಿ ಇಲ್ಲದ ನಿಲುವು

by cknewsnow desk
January 21, 2024
0

ಅಯೋಧ್ಯಾ ಆಂದೋಲನ ಭಾರತದ ಅಂತರಾತ್ಮದ ಧ್ವನಿ; ಎಲ್.ಕೆ.ಆಡ್ವಾಣಿ ಅವರು ತಮ್ಮ ಆತ್ಮಕಥೆ My Country My Life ಕೃತಿಯಲ್ಲಿ ಬರೆದಿರುವ ಮಹತ್ವದ ಲೇಖನ ಸಿಕೆನ್ಯೂಸ್‌ ನೌ ನಲ್ಲಿ..

ಶ್ರೀರಾಮಪ್ರಭುವೇ ಕ್ಷಮಿಸು! ನಿನ್ನ ಹೆಸರಿಟ್ಟುಕೊಂಡವರೆಲ್ಲ ನಿನ್ನವರಲ್ಲ!!

ಅಯೋಧ್ಯಾ ಆಂದೋಲನ ಭಾರತದ ಅಂತರಾತ್ಮದ ಧ್ವನಿ; ಮಂದಿರಕ್ಕೆ ಅಂಕುರಾರ್ಪಣೆ ಆಗಿದ್ದು ಹೇಗೆ?

by cknewsnow desk
January 19, 2024
0

ಎಲ್.ಕೆ.ಆಡ್ವಾಣಿ ಅವರು ತಮ್ಮ ಆತ್ಮಕಥೆ My Country My Life ಕೃತಿಯಲ್ಲಿ ಬರೆದಿರುವ ಮಹತ್ವದ ಲೇಖನ ಸಿಕೆನ್ಯೂಸ್‌ ನೌ ನಲ್ಲಿ..

ನಿಡುಮಾಮಿಡಿ ಶ್ರೀಗಳು: ಕಾವಿಯೊಳಗೆ ನಿಗಿನಿಗಿ ಹೊಳೆಯುವ ಕೆಂಪುಸೂರ್ಯ

ನಿಡುಮಾಮಿಡಿ ಶ್ರೀಗಳು: ಕಾವಿಯೊಳಗೆ ನಿಗಿನಿಗಿ ಹೊಳೆಯುವ ಕೆಂಪುಸೂರ್ಯ

by cknewsnow desk
December 28, 2023
0

ನಿಜದ ಜಾಡು ಹಿಡಿದು ಹೊರಟ ನಿಡುಮಾಮಿಡಿ ಶ್ರೀಗಳ ಹೋರಾಟಕ್ಕೆ 33 ವರ್ಷ

ಅಖಂಡ ಭಾರತದ ಅಷ್ಟದಿಕ್ಕುಗಳ ಆಮೂಲಾಗ್ರ ಅಭಿವೃದ್ಧಿಗೆ ಸುವರ್ಣ ಅಧ್ಯಾಯ ಬರೆದವರೇ ಅಜಾತಶತ್ರು ಅಟಲ್‌ ಬಿಹಾರಿ ವಾಜಪೇಯಿ

ಅಟಲ್ ಎಂದರೆ ಅಜಾತಶತ್ರು

by cknewsnow desk
December 25, 2023
0

ಇಂದು ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನ, ಉತ್ತಮ ಆಡಳಿತ ದಿನ by Dr.Gurupeasad Hawaldar ಜಾಗತಿಕ ಮಟ್ಟದ ಶ್ರೇಷ್ಠ ನಾಯಕರ ಸಾಲಿನಲ್ಲಿ ಗೌರವಿಸಲ್ಪಡುವ  ನಿಸ್ವಾರ್ಥ ರಾಜಕಾರಣಿ,...

ಶಿಕ್ಷಣ, ಶಿಕ್ಷಕ ಮತ್ತು ಬದಲಾವಣೆ; ನೂತನ ಶಿಕ್ಷಣ ನೀತಿಯ ಹೊತ್ತಿನಲ್ಲಿ ಓಶೋ ಜೋಶ್..

ಓಶೋ: ಬೆರಗು, ಬೆಡಗು ಮತ್ತು ವಿಸ್ಮಯ

by cknewsnow desk
December 11, 2023
0

ಇಂದು ಓಶೋ ಜನ್ಮದಿನ

Next Post
ಗಡಿ ಜಿಲ್ಲೆ ಚಿಕ್ಕಬಳ್ಳಾಪುರ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸ್ಥಾನ ಚುನಾವಣೆಗೆ ಹೊಸ ತಿರುವು; ಕೋಡಿ ರಂಗಪ್ಪ ಆಯ್ಕೆಗೆ ಸಹಮತ, ಒಮ್ಮತ ಆದರೆ ಸರಿ ಎಂದ ಪ್ರೊಫೆಸರ್‌

ಚಿಕ್ಕಬಳ್ಳಾಪುರ ಕಸಾಪ ಚುನಾವಣೆಯಲ್ಲಿ ಕೋಡಿ ರಂಗಪ್ಪ ಗೆಲುವಿಗೆ ಕಾರಣಗಳು

Leave a Reply Cancel reply

Your email address will not be published. Required fields are marked *

Recommended

ಪುಣೆಯಂತೆಯೇ ಬೆಳಗಾವಿ ಶೈಕ್ಷಣಿಕ ನಗರ

ಪುಣೆಯಂತೆಯೇ ಬೆಳಗಾವಿ ಶೈಕ್ಷಣಿಕ ನಗರ

3 years ago
ಸಚಿವರಿಗೆ ಝೀರೋ ಟ್ರಾಫಿಕ್‌ ಸೇವೆ! ಸಿಡಿದೆದ್ದ ಕಾಂಗ್ರೆಸ್‌

ಸಚಿವರಿಗೆ ಝೀರೋ ಟ್ರಾಫಿಕ್‌ ಸೇವೆ! ಸಿಡಿದೆದ್ದ ಕಾಂಗ್ರೆಸ್‌

3 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ