• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಮಳೆ ಸಂತ್ರಸ್ತರಿಗೆ ಸಚಿವ ಡಾ.ಕೆ.ಸುಧಾಕರ್‌ ಧಮ್ಕಿ; ದುರಂಕಾರದ ವರ್ತನೆ ಎಂದ ಸಿದ್ದರಾಮಯ್ಯ

cknewsnow desk by cknewsnow desk
November 24, 2021
in STATE
Reading Time: 1 min read
0
ಮಳೆ ಸಂತ್ರಸ್ತರಿಗೆ ಸಚಿವ ಡಾ.ಕೆ.ಸುಧಾಕರ್‌ ಧಮ್ಕಿ; ದುರಂಕಾರದ ವರ್ತನೆ ಎಂದ ಸಿದ್ದರಾಮಯ್ಯ
1.3k
VIEWS
FacebookTwitterWhatsuplinkedinEmail

ಚಿಕ್ಕಬಳ್ಳಾಪುರಕ್ಕೆ ಭೇಟಿ ನೀಡಿ ಮಳೆಪೀಡಿತ ಪ್ರದೇಶಗಳ ಪರಿಶೀಲನೆ; ಬಿಬಿ ರಸ್ತೆ ರಾಜ ಕಾಲುವೆ ವೀಕ್ಷಣೆ

by M Krishnappa Chikkaballapura

ಚಿಕ್ಕಬಳ್ಳಾಪುರ: ಮಳೆ ಸಮಸ್ಯೆ ಹಾಗೂ ಕಷ್ಟಗಳನ್ನು ಹೇಳಿಕೊಳ್ಳಲು ಬಂದ ಜನರಿಗೆ ಧಮ್ಕಿ ಹಾಕಿರುವ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್‌ ವರ್ತನೆಯನ್ನು ಮಾಜಿ ಮುಖ್ಯಮಂತ್ರಿ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಖಂಡಿಸಿದ್ದು, ಸಚಿವರದ್ದು ದುರಂಹಕಾರದ ವರ್ತನೆ ಎಂದು ಕಿಡಿಕಾರಿದರು.

ಸಾರ್ವಜನಿಕರ ಸಮಸ್ಯೆಗಳಿಗೆ ಜನಪ್ರತಿನಿಧಿಗಳು ಉತ್ತಮವಾಗಿ, ಸಹನೆಯಿಂದ ಸ್ಪಂದಿಸಬೇಕು. ಅದರಲ್ಲೂ ಮಳೆ, ನೆರೆಯಂಥ ಪ್ರಕೃತಿ ವಿಕೋಪಗಳು ಎದುರಾದಾಗ ತಕ್ಷಣವೇ ಅತ್ಯಂತ ಜವಾಬ್ದಾರಿಯಿಂದ ಸ್ಪಂದಿಸಿ ನೆರವಿಗೆ ಧಾವಿಸಬೇಕು. ಅದನ್ನು ಬಿಟ್ಟು ಬೇಜವಾಬ್ದಾರಿಯಿಂದ ಮಳೆ ಸಂತ್ರಸ್ತರ ಮೇಲೆ ದೌರ್ಜನ್ಯ ಎಸಗಬಾರದು. ಇದನ್ನೇ ದುರಂಹಕಾರ ಎನ್ನುವುದು ಎಂದು ಅವರು ಸಿದ್ದರಾಮಯ್ಯ ಹೇಳಿದರು.

ಚಿಕ್ಕಬಳ್ಳಾಪುರ ನಗರದ 8 ಮತ್ತು 9ನೇ ವಾರ್ಡ್ ಹಾಗೂ ತಾಲೂಕಿನ ನುಗತಿಹಳ್ಳಿ ಬಳಿ ಮಳೆಯಿಂದ ಆಗಿರುವ ಅನಾಹುತ ಪರಿಶೀಲನೆ ನಡೆಸಿದ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು. ಇದೇ ವೇಳೆ ಅವರು ಸಚಿವ ಡಾ.ಕೆ.ಸುಧಾಕರ್ ಹಾಗೂ ಜಿಲ್ಲಾಡಳಿತದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಚಿಕ್ಕಬಳ್ಳಾಪುರ ವಿಧಾನಸಭೆ ಕ್ಷೇತ್ರದಲ್ಲಿ ಮಳೆಯಿಂದ ಹಾನಿಗೀಡಾದ ವಿವಿಧ ಪ್ರದೇಶಗಳಿಗೆ ಇಂದು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿದೆ. ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ, ಮಾಜಿ ಸಚಿವರಾದ ಶಿವಶಂಕರ ರೆಡ್ಡಿ, ವಿ. ಮುನಿಯಪ್ಪ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೇಶವರೆಡ್ಡಿ ಸೇರಿದಂತೆ ಹಲವು ನಾಯಕರು ಹಾಜರಿದ್ದರು. pic.twitter.com/MVNZAsJJEm

— Siddaramaiah (@siddaramaiah) November 24, 2021

ಈ ಸಂದರ್ಭದಲ್ಲಿ ಅವರು ಹೇಳಿದ್ದಿಷ್ಟು;

ಜನಪ್ರತಿನಿಧಿಗಳು ಅಧಿಕಾರದಲ್ಲಿ ಇರುವುದೇ ಜನರ ಕಷ್ಟ ಕೇಳಲಿಕ್ಕೆ ಹೊರತು ದರ್ಪ ತೋರಿಸಲಿಕ್ಕಲ್ಲ. ಜನರ ಕಷ್ಟ ಕೇಳಿ ಅವರ ಸಮಸ್ಯೆಗಳನ್ನು ತಕ್ಷಣವೇ ನಿವಾರಿಸಬೇಕು. ಒಂದು ವೇಳೆ ಆ ಕೆಲಸ ಮಾಡಲು ಸಾಧ್ಯವಾಗದಿದ್ದಲ್ಲಿ ಅಧಿಕಾರದಿಂದ ತೊಲಗಬೇಕು. ಅಂಥವರು ಒಂದು ಕ್ಷಣವೂ ಅಧಿಕಾರದಲ್ಲಿರಲು ಅರ್ಹರಾಗಿರುವುದಿಲ್ಲ. ಮಳೆ ನೀರು ಹರಿದು ಸಾಕಷ್ಟು ಹಾನಿಯಾಗಿದೆ. ನೀರು ನುಗ್ಗಿದ್ದರಿಂದ ಜನರು ಮನೆಗಳನ್ನು ಖಾಲಿ ಮಾಡಿದ್ದಾರೆ. ಅಂಥ ಜನರು ಕಷ್ಟ ಹೇಳಲು ಹೋದರೆ ಜಿಲ್ಲಾ ಉಸ್ತುವಾರಿ ಸಚಿವರು ಧಮ್ಕಿ ಹಾಕಿ ಅಪಮಾನ ಮಾಡುವುದು ಸರಿಯಲ್ಲ. ಇದು ದುರಂಹಕಾರದ ವರ್ತನೆ.

ಜಿಲ್ಲಾ ಉಸ್ತುವಾರಿ ಮಂತ್ರಿಗಳಿಗೆ ಸರಕಾರ ಅಧಿಕಾರವನ್ನೇ ಕೊಟ್ಟಿಲ್ಲ. ಬೆಂಗಳೂರಿನಲ್ಲೇ ಕೂತಿರುತ್ತಾರೆ. ನಾನು ಟೀಕೆ ಮಾಡಿದ ಮೇಲೆ ಮುಖ್ಯಮಂತ್ರಿಗಳು ಕೆಲ ಕಡೆ ಮಳೆ ಹಾನಿ ಪರಿಶೀಲನೆ ನಡೆಸಿದ್ದಾರೆ. ಈ ರೀತಿ ಕಾಟಾಚಾರದ ಪರಿಶೀಲನೆ ನಡೆಸುವುದು ಸರಿಯಲ್ಲ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸಾಕಷ್ಟು ಬೆಳೆ ಹಾನಿಯಾಗಿದೆ. ಆದಷ್ಟು ಬೇಗ ಸಂತ್ರಸ್ತ ರೈತರಿಗೆ ಪರಿಹಾರ ನೀಡಲು ಕ್ರಮಕೈಗೊಳ್ಳಬೇಕು.

ಮಳೆ ಈಗ ಬಂದಿಲ್ಲ. ಮಳೆ ಬಂದು ಸಾಕಷ್ಟು ದಿನಗಳೇ ಕಳೆದಿವೆ. ಇಷ್ಟೊತ್ತಿಗಾಗಲೇ ಸಮೀಕ್ಷೆ ನಡೆಸಿ ರೈತರಿಗೆ ಬೆಳೆ ಪರಿಹಾರ ಕೊಡಬೇಕಿತ್ತು. ಈ ಭಾಗದ ಪ್ರಮುಖ ಬೆಳೆಯಾಗಿರುವ ರಾಗಿ ಶೇ.೬೦ರಷ್ಟು ಹಾಳಾಗಿದೆ. ಹಿಪ್ಪು ನೇರಳೆ, ಹೂವಿನ ಬೆಳೆಗಳು ಹಾಳಾಗಿವೆ. ಹೀಗಾಗಿ ಸರಕಾರ ಎನ್‌ಡಿಆರ್‌ಎಫ್ ನಿಯಮಗಳನ್ನು ಅನುಸರಿಸಿ ಅರೆಕಾಸಿನ ಪರಿಹಾರ ಕೊಡುವುದು ಬೇಡ. ನಮ್ಮ ಸರಕಾರ ನೀಡಿದಂತೆ ಪ್ರತಿ ಹೆಕ್ಟೇರ್‌ಗೆ ೨೫ ಸಾವಿರ ರೂಪಾಯಿ ಪರಿಹಾರ ನೀಡಲು ಈ ತಕ್ಷಣ ಕ್ರಮ ಕೈಗೊಳ್ಳಬೇಕು.

ಬೆಳೆ ಪರಿಹಾರ ನೀಡುವ ಸಂಬಂಧ ಸರಕಾರಕ್ಕೆ ಪತ್ರ ಬರೆಯತ್ತೇನೆ. ಸರಕಾರ ಆ ಪತ್ರವನ್ನು ಗಂಭೀರವಾಗಿ ಪರಿಗಣಿಸಿ ತಕ್ಷಣ ಪರಿಹಾರ ಒದಗಿಸಬೇಕು. ಇಲ್ಲವಾದಲ್ಲಿ ಸದನದಲ್ಲಿ ಪ್ರಶ್ನಿಸಲಾಗುವುದು. ಸರಕಾರದ ವಿರುದ್ಧ ಅವಿಶ್ವಾಸ ನಿರ್ಣಯವನ್ನು ಕೂಡ ಮಂಡಿಸಲಾಗುಗುವುದು. ಸರಕಾರ ಇರುವುದು ಜನರ ಕಷ್ಟ ಕೇಳಲೇ ಹೊರತು ದೌರ್ಜನ್ಯ ಮಾಡುವುದಕ್ಕಲ್ಲ.

ದೇನಾ ಬ್ಯಾಂಕ್‌ ರೈತರಿಗೆ ನಾನಾ ರೀತಿಯ ನೋಟಿಸ್‌ಗಳನ್ನು ನೀಡಿ ಕಿರುಕುಳ ನೀಡುತ್ತಿದೆ ಎಂದು ಜನರು ಹೇಳುತ್ತಿದ್ದಾರೆ. ಈ ತಕ್ಷಣ ಬ್ಯಾಂಕ್ ಅಧಿಕಾರಿಗಳನ್ನು ಕರೆದು ಜಿಲ್ಲಾಡಳಿತ ಚರ್ಚಿಸಬೇಕು. ರೈತರ ಮೇಲಾಗುತ್ತಿರುವ ದೌರ್ಜನ್ಯವನ್ನು ನಿಲ್ಲಿಸಬೇಕು. ರೈತರ ಮೇಲೆ ಈ ರೀತಿಯ ದೌರ್ಜನ್ಯ ನಡೆಯಬಾರದು.

ಅಕಾಲಿಕ ಮಳೆಯಿಂದ ಹಾನಿಗೊಳಗಾಗಿರುವ ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಹಲವು ಜಮೀನುಗಳಿಗೆ ಇಂದು ಭೇಟಿ ನೀಡಿ, ಸಂಕಷ್ಟದಲ್ಲಿರುವ ರೈತರ ಕಷ್ಟನಷ್ಟಗಳನ್ನು ಆಲಿಸಿದ್ದೇನೆ. 1/6#ಮಳೆಹಾನಿ pic.twitter.com/AsKadqOSUM

— Siddaramaiah (@siddaramaiah) November 24, 2021

ಸಚಿವರು ವೀಕ್ಷಿಸಿದ್ದ ರಾಜಕಾಲುವೆ ಬಳಿಗೆ ಭೇಟಿ

ಸಂಜೆ ಸುಮಾರು 4 ಗಂಟೆ ಹೊತ್ತಿಗೆ ಚಿಕ್ಕಬಳ್ಳಾಪುರಕ್ಕೆ ಆಗಮಿಸಿದ ಸಿದ್ದರಾಮಯ್ಯ ಅವರು, ನಗರದ ಶನಿ ಮಹಾತ್ಮ ಸ್ವಾಮಿ ದೇವಾಲಯ ಮುಂಭಾಗದ ರಾಜ ಕಾಲುವೆ ಪ್ರದೇಶವನ್ನು ಪರಿಶೀಲಿಸಿ ಸಂತ್ರಸ್ತರ ಸಮಸ್ಯೆ ಆಲಿಸಿದರು. ಇದೇ ಜಾಗಕ್ಕೆ ಮೊದಲು ಸಚಿವ ಡಾ.ಕೆ.ಸುಧಾಕರ್‌ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಡಿ ಪರಿಶೀಲನೆ ಮಾಡಿದ್ದರು.

ಬಳಿಕ ತಾಲೂಕಿನ ನುಗತಿಹಳ್ಳಿ ಸಮೀಪ ಕೆರೆ ನೀರು ಕಾಲುವೆಗಳಲ್ಲಿ ಹರಿದು ತೋಟದ ಜಮೀನುಗಳಲ್ಲಿ ತುಂಬಿರುವುದನ್ನು ಅವರು ಪರಿಶೀಲಿಸಿದರು. ಮಳೆ ಬರುವ ಮೊದಲೇ ಈ ಕಾಲುವೆಗಳನ್ನು ಸರಿಪಡಿಸಿ ತೋಟಗಳಿಗೆ ನೀರು ಹರಿಯದಂತೆ ತಡೆಯಬೇಕಿತ್ತು. ಜಿಲ್ಲಾಡಳಿತ ಈ ತಕ್ಷಣ ಹಾನಿಯಾಗಿರುವ ರೈತರಿಗೆ ಪರಿಹಾರ ಕೊಟ್ಟು ಮುಂದೆ ಹೀಗೆ ಆಗದಂತೆ ಎಚ್ಚರ ವಹಿಸಬೇಕು ಎಂದು ಜಿಲ್ಲಾಡಳಿತವನ್ನು ಒತ್ತಾಯಿಸಿದರು.

ಮಳೆ ಹಾನಿ ಪರಿಶೀಲನೆ ವೇಳೆ ಮಾಜಿ ಸಿಎಂ ವೀರಪ್ಪ ಮೊಯಿಲಿ, ಗೌರಿಬಿದನೂರು ಶಾಸಕ ಎನ್.ಎಚ್.ಶಿವಶಂಕರರೆಡ್ಡಿ, ಶಿಡ್ಲಘಟ್ಟ ಶಾಸಕ ವಿ.ಮುನಿಯಪ್ಪ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೇಶವರೆಡ್ಡಿ, ಕೆಪಿಸಿಸಿ ಸದಸ್ಯ ವಿನಯ್ ಶ್ಯಾಮ್, ಪುರದಗಡ್ಡೆ ಮುನೇಗೌಡ, ಮಾಜಿ ಶಾಸಕ ನಜೀರ್ ಅಹಮದ್, ಮಮತಾ ಮೂರ್ತಿ, ನಗರಸಭೆ ಸದಸ್ಯ ಅಂಬರೀಶ್, ಮುನೀಂದ್ರ ಸೇರಿದಂತೆ ಹಲವು ಮುಖಂಡರು ಹಾಜರಿದ್ದರು.

ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಲ್ಲ

ವಿಧಾನ ಪರಿಷತ್ ಚುನಾವಣೆ ಸಂಬಂಧ ಕಾಂಗ್ರೆಸ್ ವಿರುದ್ಧದ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆಗಳಿಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ; ಕುಮಾರಸ್ವಾಮಿ ಹೇಳಿಕೆಗಳಿಗೆ ನಾನು ಯಾವುದೇ ಪ್ರತಿಕ್ರಿಯೆ ನೀಡಲ್ಲ” ಎಂದು ಸಿದ್ದರಾಮಯ್ಯ ಹೇಳಿದರು.

Tags: chikkaballapuracknewsnowCongressfloodsheavy rainkarnatakakolarnewsopposition party leadersiddaramaiah
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಕೆಸರುಗದ್ದೆಯಲ್ಲಿ ಓಡುವಿರಾ..? ಹಾಗಾದರೆ  ಕರಿಗಾಂತಮ್ಮನಹಳ್ಳಿಗೆ ಬನ್ನಿ!!

ಕೆಸರುಗದ್ದೆಯಲ್ಲಿ ಓಡುವಿರಾ..? ಹಾಗಾದರೆ ಕರಿಗಾಂತಮ್ಮನಹಳ್ಳಿಗೆ ಬನ್ನಿ!!

Leave a Reply Cancel reply

Your email address will not be published. Required fields are marked *

Recommended

ಬರಪೀಡಿತ ಬಾಗೇಪಲ್ಲಿಯಲ್ಲಿ ವರುಣ ಅಬ್ಬರ

ಬರಪೀಡಿತ ಬಾಗೇಪಲ್ಲಿಯಲ್ಲಿ ವರುಣ ಅಬ್ಬರ

5 years ago
ವ್ಯಕ್ತಿಪೂಜೆಗಲ್ಲ, ಪಕ್ಷಪೂಜೆಗೆ ಮಾತ್ರ ಅವಕಾಶ: ಶಾಸಕ ಜಮೀರ್‌ ಅಹಮದ್‌ಗೆ ನೇರವಾಗಿ ಟಾಂಗ್‌ ಕೊಟ್ಟ ಡಿ.ಕೆ.ಶಿವಕುಮಾರ್

ಆತ ನಮ್ಮ ಮನೆ ಹುಡುಗ, ತಪ್ಪು ಮಾಡಿದಾಗ ಹೊಡೆದೆ, ಅದು ನಮ್ಮ ಪ್ರೀತಿಯ ಸಂಬಂಧ ಎಂದ ಡಿಕೆಶಿ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ