ಕೂಡಲೇ ಸ್ಪಂದಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ; ಇದು ಸಿಕೆನ್ಯೂಸ್ ನೌ ಕಾಳಜಿ
By GS Bharath Gudibande.
ಗುಡಿಬಂಡೆ: ಹಲವು ದಿನಗಳಿಂದ ಚಿಕ್ಕಬಳ್ಳಾಪುರ ಹೊರವಲಯದ ರಾಷ್ಟ್ರೀಯ ಹೆದ್ದಾರಿ 7 ರಲ್ಲಿ ರಸ್ತೆ ಕುಸಿದು ಬಿದ್ದಿದ್ದ ಪರಿಣಾಮ ವಾಹನ ಸವಾರರಿಗೆ ತೊಂದರೆಯಾಗಿತ್ತು. ಈ ಬಗ್ಗೆ ಸಿಕೆನ್ಯೂಸ್ ನೌ ವೆಬ್‌ತಾಣವು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಅವರ ಗಮನಕ್ಕೆ ತಂದಾಗ ಅವರು ಕೂಡಲೇ ಅವರು ಸ್ಪಂದಿಸಿ ಹೆದ್ದಾರಿ ದುರಸ್ಥಿಗೆ ಮುಂದಾಗಿದ್ದಾರೆ.
ಎಸ್ ಪಿ ಅವರ ಸ್ಪಂದನೆಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಹಲವು ದಿನಗಳಿಂದ ರಾಷ್ಟ್ರೀಯ ಹೆದ್ದಾರಿ ರಸ್ತೆಯಿಂದ ಚಿಕ್ಕಬಳ್ಳಾಪುರಕ್ಕೆ ಕಡೆ ತೆರಳು ಅಂಡರ್ ಪಾಸ್ ಬಳಿ ಹೆದ್ದಾರಿ ಕುಸಿದು ಬಿದ್ದು, ರಾತ್ರಿಯಲ್ಲಿ ವಾಹನ ಸವಾರರಿಗೆ ತೊಂದರೆ ಆಗುತ್ತಿತ್ತು. ಆ ಜಾಗದಲ್ಲಿ ಅಪಘಾತಗಳು ಆಗುತ್ತಿದ್ದವು.
ಇದನ್ನು ಗಮನಿಸಿದ ಸಿಕೆನ್ಯೂಸ್ ನೌ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಅವರ ಗಮನಕ್ಕೆ ತಂದಾಗ ಕೂಡಲೇ ಸ್ಪಂದಿಸಿದರು. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ಹೆದ್ದಾರಿ ದುರಸ್ಥಿ ಮಾಡುವಂತೆ ಸೂಚಿಸಿದರಲ್ಲದೆ, ಭೇಟಿ ನೀಡಿ ಪರಿಶೀಲಿಸಿದರು.
ಸುಮಾರು ನಲವತ್ತೈದು ದಿನಗಳಿಂದ ಎಡೆಬಿಡದೇ ಸುರಿದ ಮಳೆಯಿಂದ ಹೆದ್ದಾರಿಯಲ್ಲಿ ಡಾಂಬರು ಕಿತ್ತುಹೋಗಿ ಗುಂಡಿಗಳು ಬಿದ್ದಿವೆ. ಚಿಕ್ಕಬಳ್ಳಾಪುರ ಜಿಲ್ಲೆ ವ್ಯಾಪ್ತಿಯ ಹೆದ್ದಾರಿಯಲ್ಲಿ ಅನೇಕ ಕಡೆ ಗುಂಡಿಗಳು ಬಿದ್ದಿದ್ದು, ಭಾರೀ ವಾಹನಗಳ ಸಂಚಾರದಿಂದ ಹೆದ್ದಾರಿ ಮತ್ತಷ್ಟು ಹಾಳಾಗಿದೆ.