• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ಊಟಿ ಬಳಿ ಸೇನಾ ಹೆಲಿಕಾಪ್ಟರ್‌ ದುರಂತ; ಸಿಡಿಎಸ್‌ ಜ.ಬಿಪಿನ್‌ ರಾವತ್‌ ಸೇರಿ 13 ಸೇನಾಧಿಕಾರಿಗಳ ದುರ್ಮರಣ

cknewsnow desk by cknewsnow desk
December 8, 2021
in NATION
Reading Time: 2 mins read
0
ಊಟಿ ಬಳಿ ಸೇನಾ ಹೆಲಿಕಾಪ್ಟರ್‌ ದುರಂತ; ಸಿಡಿಎಸ್‌ ಜ.ಬಿಪಿನ್‌ ರಾವತ್‌ ಸೇರಿ 13 ಸೇನಾಧಿಕಾರಿಗಳ ದುರ್ಮರಣ
1k
VIEWS
FacebookTwitterWhatsuplinkedinEmail

ಅಧಿಕೃತವಾಗಿ ಘೋಷಿಸಿದ ವಾಯುಪಡೆ; ದುರ್ಘಟನೆಯಲ್ಲಿ ರಾವತ್‌ ಪತ್ನಿ ಕೂಡ ಸಾವು

ಊಟಿ: ಸೇನಾ ಪಡೆಗಳಿ ಮುಖ್ಯಸ್ಥ (ಸಿಡಿಎಸ್) ಜನರಲ್ ಬಿಪಿನ್ ರಾವತ್ ಹಾಗೂ ಸೇನೆ ಉನ್ನತ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್‌ ಇಂದು ಬೆಳಗ್ಗೆ ನೀಲಗಿರಿ ಬೆಟ್ಟಗಳ ನಡುವಿನ ಕೂನೂರು ಬಳಿ ದುರಂತಕ್ಕೀಡಾಗಿದ್ದು, ದುರಂತದಲ್ಲಿ ರಾವತ್‌ ಅವರೂ ಸೇರಿದಂತೆ 13 ಮಂದಿ ಸಾವನ್ನಪ್ಪಿದ್ದಾರೆ.

ಈ ದುರ್ಘಟನೆಯಲ್ಲಿ ಜ.ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ರಾವತ್ ಅವರು ಅಸುನೀಗಿದ್ದಾರೆ.

ಈ ಬಗ್ಗೆ ಅಧಿಕೃತವಾಗಿ ಟ್ವೀಟ್‌ ಮಾಡಿರುವ ವಾಯುಪಡೆ; ಹೆಲಿಕಾಪ್ಟರ್ ದುರಂತದಲ್ಲಿ ಜ.ಬಿಪಿನ್ ರಾವತ್ ಮತ್ತು ಅವರ ಪತ್ನಿ ಮಧುಲಿಕಾ ರಾವತ್ ಹಾಗೂ ಇನ್ನಿತರೆ 11 ಸೇನಾ ಸಿಬ್ಬಂದಿ ಮೃತಪಟ್ಟಿದ್ದಾರೆ ಎಂದು ತಿಳಿಸಿದೆ.

With deep regret, it has now been ascertained that Gen Bipin Rawat, Mrs Madhulika Rawat and 11 other persons on board have died in the unfortunate accident.

— Indian Air Force (@IAF_MCC) December 8, 2021

ದುರಂತ ಸಂಭಿಸಿದ ಕೂಡಲೇ ಸ್ಥಳದಲ್ಲೇ ಕೆಲವರು ಹೆಲಿಕಾಪ್ಟರ್‌ʼನಲ್ಲಿ ಉಂಟಾದ ಬೆಂಕಿಯಲ್ಲಿ ಸ್ಥಳದಲ್ಲೇ ಕೊನೆಯುಸಿರೆಳೆದರೆ, ತೀವ್ರವಾಗಿ ಗಾಯಗೊಂಡಿದ್ದ ಬಿಪಿನ್ ರಾವತ್ ಅವರನ್ನು ವೆಲ್ಲಿಂಗ್ಟನ್ ಸೇನಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ಈ ಸೇನಾ ಹೆಲಿಕಾಪ್ಟರ್ʼನಲ್ಲಿ ಜ.ಬಿಪಿನ್ ರಾವತ್, ಅವರ ಪತ್ನಿ ಮಧುಲಿಕಾ ರಾವತ್, ಬ್ರಿಗೇಡಿಯರ್ ಎಲ್.ಎಸ್.ಲಿಡರ್, ಲೆಫ್ಟಿನೆಂಟ್ ಕರ್ನಲ್ ಹರ್ಜಿಂದರ್ ಸಿಂಗ್, ನಾಯಕ್ ಗುರ್ಸೇವಕ್ ಸಿಂಗ್, ನಾಯಕ್ ಜಿತೇಂದ್ರ ಕುಮಾರ್, ಲ್ಯಾನ್ಸ್ ನಾಯಕ್ ವಿವೇಕ್ ಕುಮಾರ್, ಲ್ಯಾನ್ಸ್ ನಾಯಕ್ ಬಿ.ಸಾಯಿ ತೇಜಾ ಮತ್ತು ಹವಾಲ್ದಾರ್ ಸತ್ಪಾಲ್ ಸೇರಿ 14 ಜನರು ಪ್ರಯಾಣಿಸುತ್ತಿದ್ದರು. ಈ ನತದೃಷ್ಟ ಹೆಲಿಕಾಪ್ಟರ್ ಕೂನೂರು ಬಳಿಯ ವೆಲ್ಲಿಂಗ್ಟನ್‌ ಸೇನಾ ನೆಲೆಗೆ ತಲುಪಬೇಕಾಗಿತ್ತು.

ದುರಂತಕ್ಕೀಡಾದ ಹೆಲಿಕಾಪ್ಟರ್ ( Mi-17V5 helicopter) ಬಗ್ಗೆ ಹಾಗೂ ಘಟನೆಗೆ ಕುರಿತು ಟ್ವೀಟ್ ಮಾಡಿರುವ ಭಾರತೀಯ ವಾಯುಪಡೆ; “ರಕ್ಷಣಾ ಪಡೆ ಮುಖ್ಯಸ್ಥ ಬಿಪಿನ್ ರಾವತ್, ಅವರ ಕುಟುಂಬ ಮತ್ತು ಇತರ ಉನ್ನತ ಮಟ್ಟದ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ದುರಂತಕ್ಕೀಡಾಗಿದ್ದು, ಘಟನೆಗೆ ಸಂಬಂಧಿಸಿದಂತೆ ತನಿಖೆಗೆ ಆದೇಶಿಸಲಾಗಿದೆ” ಎಂದು ಹೇಳಿದೆ.

I am shocked and anguished over the untimely demise of Gen. Bipin Rawat and his wife, Madhulika ji. The nation has lost one of its bravest sons. His four decades of selfless service to the motherland was marked by exceptional gallantry and heroism. My condolences to his family.

— President of India (@rashtrapatibhvn) December 8, 2021

ಇದೇ ವೇಳೆ ರಾಷ್ಟ್ರಪತಿ ರಾಮನಾಥ ಕೋವಿಂದ್‌, ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ಅಮಿತ್‌ ಶಾ, ಗೃಹ ಸಚಿವ ಅಮಿತ್‌ ಶಾ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮುಂತಾದವರು ದುರ್ಘಟನೆ ಬಗ್ಗೆ ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ.

Gen Bipin Rawat was an outstanding soldier. A true patriot, he greatly contributed to modernising our armed forces and security apparatus. His insights and perspectives on strategic matters were exceptional. His passing away has saddened me deeply. Om Shanti. pic.twitter.com/YOuQvFT7Et

— Narendra Modi (@narendramodi) December 8, 2021

ಬಿಪಿನ್ ರಾವತ್ ಬಾಲ್ಯ ಜೀವನ

1958, ಮಾರ್ಚ್ 16ರಂದು ಉತ್ತರಾಖಂಡ್​ನ ಪೌರಿಯಲ್ಲಿ ಬಿಪಿನ್ ರಾವತ್ ಅವರು ಜನಿಸಿದರು. ಬಿಪಿನ್ ರಾವತ್ ಅವರ ತಂದೆ ಲಕ್ಷ್ಮಣ್ ಸಿಂಗ್ ರಾವತ್ ಅವರು ಕೂಡ ಭಾರತೀಯ ಸೈನ್ಯದಲ್ಲಿ ಲೆಫ್ಟಿನೆಂಟ್ ಜನರಲ್ ಆಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದರು. ಡೆಹರಾಡೂನ್ ನ ಕೇಂಬ್ರಿಡ್ಜ್ ಹಾಲ್ ಸ್ಕೂಲ್ನಲ್ಲಿ ಪ್ರಾಥಮಿಕ ಶಿಕ್ಷಣ, ಶಿಮ್ಲಾದ ಸೆಂಟ್.ಎಡ್ವರ್ಡ್ ಸ್ಕೂಲ್‌ʼನಲ್ಲಿ ಹೈಸ್ಕೂಲ್ ಶಿಕ್ಷಣ ಪಡೆದ ಬಿಪಿನ್ ರಾವತ್ ಅವರು ಡೆಹರಾಡೂನ್ ನಲ್ಲಿ ಮಿಲಿಟರಿ ಅಕಾಡೆಮಿಯಲ್ಲಿ ಸೇರ್ಪಡೆಯಾಗಿ ಸೈನ್ಯದ ಬಗ್ಗೆ ತರಬೇತಿ ಪಡೆದುಕೊಂಡಿದ್ದರು.

ಬಿಪಿನ್ ರಾವತ್ ವೃತ್ತಿಜೀವನ

1978ರಲ್ಲಿ ಗೂರ್ಖಾ ರೆಜಿಮೆಂಟ್ ಮೂಲಕ ಸೇನೆಗೆ ನಿಯುಕ್ತಿಗೊಂಡ ಬಿಪಿನ್ ರಾವತ್ ರಾವತ್ ಬ್ರಿಗೇಡ್ ಕಮಾಂಡರ್, ಜನರಲ್ ಆಫೀಸರ್ ಕಮಾಂಡಿಂಗ್-ಇನ್-ಚೀಫ್ (ಜಿಒಸಿ-ಸಿ) ಸದರ್ನ್ ಕಮಾಂಡ್, ಮಿಲಿಟರಿ ಕಾರ್ಯಾಚರಣೆ ನಿರ್ದೇಶನಾಲಯದಲ್ಲಿ ಜನರಲ್ ಸ್ಟಾಫ್ ಆಫೀಸರ್ ಗ್ರೇಡ್ 2, ಕರ್ನಲ್ ಮಿಲಿಟರಿ ಕಾರ್ಯದರ್ಶಿ ಮತ್ತು ಉಪ ಮಿಲಿಟರಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ. ಮಿಲಿಟರಿ ಕಾರ್ಯದರ್ಶಿಯ ಶಾಖೆ ಮತ್ತು ಜೂನಿಯರ್ ಕಮಾಂಡ್ ವಿಂಗ್‌ನಲ್ಲಿ ಹಿರಿಯ ಬೋಧಕರಾಗಿದ್ರು. ಇನ್ನು ಯುನೈಟೆಡ್ ನೇಷನ್ಸ್ ಪೀಸ್ ಕೀಪಿಂಗ್ ಫೋರ್ಸ್‌ನ ಭಾಗವಾಗಿದ್ದಾರೆ ಮತ್ತು ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋದಲ್ಲಿ ಬಹುರಾಷ್ಟ್ರೀಯ ಬ್ರಿಗೇಡ್‌ಗೆ ಕಮಾಂಡರ್ ಆಗಿ ಭಾರತೀಯ ಸೈನ್ಯಕ್ಕೆ ಸೇವೆ ಸಲ್ಲಿಸಿದ್ರು. ಅಲ್ಲಿಂದ ಮುಂದೆ 2016ರಲ್ಲಿ ಭಾರತೀಯ ಮೂರು ಸೇನಾಪಡೆಗಳ ಮುಖ್ಯಸ್ಥರಾಗಿ ನಿಯೋಜನೆಯ ಗೊಂಡರು..

ಬಿಪಿನ್ ರಾವತ್ ವೈಯಕ್ತಿಕ ಜೀವನ

ಮಧುಲಿಕಾ ರಾವತ್ ಅವರೊಂದಿಗೆ ವಿವಾಹ ಬಂಧನಕ್ಕೆ ಒಳಗಾದ ಬಿಪಿನ್ ರಾವತ್ ಅವರಿಗೆ ಬರು ಪುತ್ರಿಯರು ಹಾಗೂ ಓರ್ವ ಪುತ್ರನಿದ್ದಾನೆ.. ಬಿಪಿನ್ ರಾವತ್ ಪತ್ನಿ ಮಧುಲಿಕಾ ರಾವತ್, ಭಾರತೀಯ ಸೈನ್ಯದಲ್ಲಿ ಮಹಿಳಾ ಕಲ್ಯಾಣ ಸಂಘದ ಅಧ್ಯಕ್ಷೆಯಾಗಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದರು.

ಸೈನಿಕರ ಹಿನ್ನೆಲೆ ಹೊಂದಿದ್ದ ರಾವತ್ ಕುಟುಂಬ

ಇನ್ನು ರಾವತ್ ಅವರು ಮಾತ್ರವಲ್ಲದೆ ಅವರ ಇಡೀ ಕುಟುಂಬವೇ ಭಾರತೀಯ ಸೈನ್ಯಕ್ಕೆ ಸೇವೆಸಲ್ಲಿಸಿತ್ತು. ಬಿಪಿನ್ ರಾವತ್ ತಂದೆಯ ಲಕ್ಷ್ಮಣ ಸಿಂಗ್ ರಾವತ್ ಸಹ ಭಾರತೀಯ ಸೈನ್ಯದಲ್ಲಿ ಲೆಫ್ಟಿನೆಂಟ್ ಜನರಲ್ ಆಗಿ ಕರ್ತವ್ಯ ನಿರ್ವಹಣೆ ಮಾಡಿದರು. ಇಷ್ಟೇ ಅಲ್ಲದೆ ಬಿಪಿನ್ ರಾವತ್ ಅವರ ಚಿಕ್ಕಪ್ಪ ಹರಿನಂದನ್, ಭರತ್ ಸಿಂಗ್ ರಾವತ್ ಅವರು ಭಾರತೀಯ ಸೈನ್ಯದಲ್ಲಿ ಹವಾಲ್ದಾರ್ ಆಗಿ ಕರ್ತವ್ಯ ನಿರ್ವಹಣೆ ಮಾಡಿ ನಿವೃತ್ತಿ ಗೊಂಡಿದ್ದರು.. ಅಲ್ಲದೇ ಇವರ ಮಕ್ಕಳು ಸಹ ಭಾರತೀಯ ಸೈನ್ಯದಲ್ಲಿ ಪ್ರಸ್ತುತ ಸೇವೆ ಸಲ್ಲಿಸುತ್ತಿದ್ದಾರೆ.

ಭಾರತೀಯ ಸೈನ್ಯಕ್ಕೆ ರಾವತ್ ಕೊಡುಗೆ

1987ರಲ್ಲಿ ಅರುಣಾಚಲ ಪ್ರದೇಶದ ಸುಮದೊರೋಂಗ್ ಚು ಕಣಿವೆಯಲ್ಲಿ ಚೀನಾ ಮತ್ತು ಭಾರತ ಸೇನೆ ಮುಖಾಮುಖಿಯಾದಾಗ ಬಿಪಿನ್ ರಾವತ್ ನೇತೃತ್ವದ ಬಟಾಲಿಯನ್ ಪ್ರಮುಖ ಪಾತ್ರ ವಹಿಸಿತ್ತು. 2015ರಲ್ಲಿ ಮಯನ್ಮಾರ್​ನಲ್ಲಿ ಭಯೋತ್ಪಾದಕರ ವಿರುದ್ಧ ನಡೆದ ಕ್ಷಿಪ್ರ ಕಾರ್ಯಾಚರಣೆಯಲ್ಲೂ ಬಿಪಿನ್ ರಾವತ್ ಅವರ ಪಾತ್ರವಿತ್ತು. ಕಾಂಗೋದಲ್ಲಿ ವಿಶ್ವಸಂಸ್ಥೆಯ ಪರವಾಗಿ ಹೋದ ಭಾರತೀಯ ಸೇನಾ ಪಡೆಯ ನೇತೃತ್ವವನ್ನು ರಾವತ್ ಅವರೇ ವಹಿಸಿದ್ದರು. ಹಲವು ಸೇನಾನುಭವ ಮತ್ತು ಯುದ್ಧಾನುಭವ ಹೊಂದಿರುವ ಬಿಪಿನ್ ರಾವತ್ ಬಗ್ಗೆ ಮೋದಿ ಸರ್ಕಾರ ಸಹಜ ಒಲವು ಹೊಂದಿದೆ. ಇತ್ತೀಚಿನ ದಿನಗಳಲ್ಲಿ ಸರ್ಕಾರದ ನಿಲುವಿಗೆ ಪೂರಕವಾದ ಹೇಳಿಕೆಗಳನ್ನೂ ರಾವತ್ ನೀಡುತ್ತಾ ಬಂದಿದ್ದರು.

Tags: 1st Chief of Defence StaffBipin RawatcoonoorGeneral Bipin Rawathelicopter crashindian armytamilnaduwellington
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಥೂ! ಅಸಹ್ಯ!! ಹಣಕ್ಕಾಗಿ ಮತ! ತಿರುಪತಿ ಲಡ್ಡು, ಕೈ ತುಂಬಾ ದುಡ್ಡು!!

ಥೂ! ಅಸಹ್ಯ!! ಹಣಕ್ಕಾಗಿ ಮತ! ತಿರುಪತಿ ಲಡ್ಡು, ಕೈ ತುಂಬಾ ದುಡ್ಡು!!

Leave a Reply Cancel reply

Your email address will not be published. Required fields are marked *

Recommended

ಮಕ್ಕಳ ದಿನಾಚರಣೆಯಲ್ಲಿ ಪರಿಸರ ಧ್ಯಾನ

ಮಕ್ಕಳ ದಿನಾಚರಣೆಯಲ್ಲಿ ಪರಿಸರ ಧ್ಯಾನ

2 years ago
ಮಹಿಳಾ ಅಧಿಕಾರಿಗಳಿಗೆ ಸೇವಾವಧಿ ಆಧರಿತ ಕರ್ನಲ್ ಶ್ರೇಣಿ ನೀಡಿದ ಭಾರತೀಯ ಸೇನೆ

ಮಹಿಳಾ ಅಧಿಕಾರಿಗಳಿಗೆ ಸೇವಾವಧಿ ಆಧರಿತ ಕರ್ನಲ್ ಶ್ರೇಣಿ ನೀಡಿದ ಭಾರತೀಯ ಸೇನೆ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ