• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಭಾರತ ವಿಶ್ವಗುರು ಆಗಬೇಕಂತೆ! ಆದರೆ, ಅತಿಥಿ ಉಪನ್ಯಾಸಕರು ಬೀದಿಯಲ್ಲಿದ್ದಾರೆ!!

cknewsnow desk by cknewsnow desk
December 13, 2021
in CHIKKABALLAPUR, STATE
Reading Time: 1 min read
0
ಭಾರತ ವಿಶ್ವಗುರು ಆಗಬೇಕಂತೆ! ಆದರೆ, ಅತಿಥಿ ಉಪನ್ಯಾಸಕರು ಬೀದಿಯಲ್ಲಿದ್ದಾರೆ!!
1.3k
VIEWS
FacebookTwitterWhatsuplinkedinEmail

ರಾಜ್ಯಾದ್ಯಂತ ಅಹೋರಾತ್ರಿ ಪ್ರತಿಭಟನೆ ಶುರು ಮಾಡಿದ ಅತಿಥಿಗಳು

by GS Bharath Gudibande

ಗುಡಿಬಂಡೆ: ಹೇಳುವುದು ಭಾರತ ವಿಶ್ವಗುರುವಾಗಬೇಕು ಎಂದು. ಮಾತನಾಡುವುದು ಭಾರತ ಜ್ಞಾನ ಕಣಜ ಆಗಬೇಕೆಂದು. ಅದಕ್ಕೆ ರಾಷ್ಟ್ರೀಯ ಶಿಕ್ಷಣ ನೀತಿ ಎಂಬ ಹೆಸರು ಬೇರೆ! ಆದರೆ ಪಾಠ ಮಾಡುವವರಿಗೆ ಮಾರು ಕಾಸಿನ ಬೆಲೆ ಇಲ್ಲ.

ಹೀಗೆಂದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ ರಾಜ್ಯದಲ್ಲಿ ಕೆಲಸ ಮಾಡುತ್ತಿರುವ ಸಾವಿರಾರು ಸಂಖ್ಯೆಯಷ್ಟು ಅತಿಥಿ ಉಪನ್ಯಾಸಕರು.

ರಾಜ್ಯದ ಸರಕಾರಿ ಪದವಿ ಕಾಲೇಜುಗಳಲ್ಲಿ ಕೆಲಸ ಮಾಡುತ್ತಿರುವ ಅತಿಥಿ ಉಪನ್ಯಾಸಕರನ್ನು ತೆಗೆದು ಹಾಕಿ ಕಾಲೇಜು ನಡೆಸಲಿ. ಕನಿಷ್ಠ ಗೌರವ, ನ್ಯಾಯಯುತ ವೇತನ, ಸೇವಾ ಭದ್ರತೆ ನೀಡದೇ ನಮ್ಮ ಜತೆ ಜೊತೆ ಸರಕಾರ ಆಟವಾಡುತ್ತಿದೆ ಎಂದು ಅತಿಥಿ ಉಪನ್ಯಾಸಕರು ನೇರ ಆರೋಪ ಮಾಡುತ್ತಿದ್ದಾರೆ.

ರಾಜ್ಯ ಸರಕಾರಿ ಪದವಿ ಕಾಲೇಜುಗಳಲ್ಲಿ 10–15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಹಾಗೂ ವೇತನ ಹೆಚ್ಚಳ ಮಾಡಬೇಕು ಎಂದು ರಾಜ್ಯಾದ್ಯಂತ ತರಗತಿಗಳನ್ನು  ಬಹಿಷ್ಕರಿಸಿ ಅತಿಥಿ ಉಪನ್ಯಾಸಕರು ಅಹೋರಾತ್ರಿ ಪ್ರತಿಭಟನೆ ಮಡುತ್ತಿದ್ದಾರೆ.

ಪಟ್ಟಣದ ಸರಕಾರಿ ಪದವಿ ಕಾಲೇಜಿನಲ್ಲಿ ಒಟ್ಟು 14 ಅತಿಥಿ ಉಪನ್ಯಾಸಕರು ಕೆಲಸ ಮಾಡುತ್ತಿದ್ದು, ಎಲ್ಲರೂ ಪ್ರಾಂಶುಪಾಲರಾಗಿ ಮನವಿ ಪತ್ರಕೊಟ್ಟು ತರಗತಿ ಬಹಿಷ್ಕರಿಸಿದ್ದಾರೆ.

ಈ ಬಗ್ಗೆ ಸಿಕೆನ್ಯೂಸ್‌ ನೌ ಜತೆ ಮಾತನಾಡಿದ ಅತಿಥಿ ಉಪನ್ಯಾಸಕರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಯಚಂದ್ರ ಅವರು; ನಮ್ಮ ಭವಿಷ್ಯದ ಜತೆ ಸರಕಾರ ಚೆಲ್ಲಾಟವಾಡುತ್ತಿದೆ. ಅತ್ಯಂತ ಕೆಟ್ಟದಾಗಿ ಸರಕಾರ ನಮ್ಮನ್ನು ನಡೆಸಿಕೊಳ್ಳುತ್ತಿದೆ ಎಂದು ಕಿಡಿಕಾರಿದರು.

ರಾಜ್ಯದಲ್ಲಿ ಸುಮಾರು 14 ಸಾವಿರ ಅತಿಥಿ ಉಪನ್ಯಾಸಕರು ಕೆಲಸ ಮಾಡುತ್ತಿದ್ದಾರೆ. ಕೆಲವರಿಗೆ ವಯೋಮಿತಿ ಮೀರಿದೆ. ನಿರಂತರವಾಗಿ ಕೆಲಸ ಮಾಡುತ್ತಿದ್ದರೂ ಅವರ ಬದುಕು ಚಿಂತಾಜನಕ ಸ್ಥಿತಿಯಲ್ಲಿದೆ. ಸರಕಾರ ಕೆಲ  ಸಂದರ್ಭದಲ್ಲಿ ವೇತನ ಹೆಚ್ಚಳ ಮಾಡಿ ಸೇವಾ ಭದ್ರತೆ ನೀಡುತ್ತೇವೆ ಎನ್ನುತ್ತಿದೆ. ಆದರೆ ಇದುವರೆಗೂ ಸಮಸ್ಯೆ ಬಗೆ ಹರಿಸಲು ಸೂಕ್ತ ಕ್ರಮ ವಹಿಸಿಲ್ಲ ಎಂದು ಅವರು ದೂರಿದರು.

ಕೋವಿಡ್ ಸಂಕಷ್ಟದಲ್ಲೂ ಕೆಲಸ

ಕೋವಿಡ್–19 ಪರಿಣಾಮದಿಂದಾಗಿ ಆ ಕುಟುಂಬಗಳು ಬೀದಿಪಾಲಾಗುವ ದುಃಸ್ಥಿತಿ ಬಂದೊದಗಿದೆ. ಅನೇಕರು ಸಾವಿಗೀಡಾಗಿದ್ದಾರೆ. ಇದರಿಂದಾಗಿ, ಅವರನ್ನೇ ನಂಬಿದ್ದ ಕುಟುಂಬಗಳ ಸದಸ್ಯರು ಅತಂತ್ರವಾಗಿವೆ. ಆದರೂ ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಕಡಿಮೆ ವೇತನಕ್ಕೆ ಕೆಲಸ ಮಾಡಿದರೂ ಸರಕಾರ ಕುರುಡುತನದಿಂದ ನಡೆದುಕೊಳ್ಳುತ್ತಿರುವುದು ಶೋಚನೀಯ ಎಂದು ಜಯಚಂದ್ರ ಹೇಳಿದ್ದಾರೆ.

ರಾಜ್ಯಾದ್ಯಂತ ಅಹೋರಾತ್ರಿ ಪ್ರತಿಭಟನೆ

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆದ ವಿಧಾನ ಮಂಡಲ ಅಧಿವೇಶನದ ವೇಳೆಯೂ ತೀವ್ರ ಹೋರಾಟ ಮಾಡಲಾಗಿತ್ತು. ಆಗ ವಿಧಾನಸಭೆ ವಿರೋಧ ಪಕ್ಷದ ನಾಯಕರಾಗಿದ್ದ ಬಿ.ಎಸ್.ಯಡಿಯೂರಪ್ಪ ಅವರು, ‘ನಮ್ಮ ಸರಕಾರ ಬಂದರೆ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ನೀಡಲಾಗುವುದು’ ಎಂದು ಭರವಸೆ ಕೊಟ್ಟಿದ್ದರು. ಅದಾದ ನಂತರ ಬಿಜೆಪಿ ಸರಕಾರವೇ ಬಂತು. ಆದರೆ, ಯಡಿಯೂರಪ್ಪ ಅವರು ಭರವಸೆ ಈಡೇರಿಸಲಿಲ್ಲ. ನಂತರ ಬಂದ ಮುಖ್ಯಮಂತ್ರಿಗಳು ಕೂಡ ನಮ್ಮ ಕಷ್ಟಕ್ಕೆ ಸ್ಪಷಂದಿಸಲಿಲ್ಲ’ ಎಂದು ಅಸಮಾಧಾನ ಅವರು ವ್ಯಕ್ತಪಡಿಸಿದರು.

ಮುಖ್ಯಮಂತ್ರಿ ನಿರ್ಧಾರ ಕೈಗೊಳ್ಳಬೇಕು

ಬೇಡಿಕೆ ಈಡೇರಿಕೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತ್ವರಿತವಾಗಿ ಕ್ರಮ ವಹಿಸಬೇಕು. ಶೈಕ್ಷಣಿಕ ವರ್ಷದ ಹಲವು ತಿಂಗಳಿನಿಂದ ಇದುವರೆಗೂ ಗೌರವಧನ ನೀಡಿಲ್ಲ. ತುರ್ತಾಗಿ ಬಿಡುಗಡೆ ಮಾಡಬೇಕು. ಅತಿಥಿ ಉಪನ್ಯಾಸಕರ ಸೇವೆಯನ್ನು ಕಾಯಂ ಮಾಡಬೇಕು, ಅತಿಥಿ ಉಪನ್ಯಾಸಕರ ಸಂಕಷ್ಟಕ್ಕೆ ಸಿಎಂ ಸಕಾರಾತ್ಮಕವಾಗಿ ಸ್ಪಂದಿಸಬೇಕು ಎಂದು ಅವರು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಅತಿಥಿ ಉಪನ್ಯಾಸಕರಾದ ಅಶ್ವತ್ಥಪ್ಪ, ಶಿವಶಂಕರಪ್ಪ, ರಮೇಶ್, ಉಮಾ, ರಮೇಶ್ ರೆಡ್ಡಿ, ಸೌಭಾಗ್ಯ, ಕಾಂತರಾಜ್, ಪ್ರಕಾಶ್ ಒಂಟೆ ಸೇರಿದಂತೆ ಮುಂತಾದವರು ಭಾಗವಹಿಸಿದ್ದರು.

Tags: cknewsnowdemand for good salaryguest lecturerkarnatakakarnataka educationnepnep2020newswages
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಪಾರ್ಟಿ ಫಂಡ್‌ ಹೆಸರಿನಲ್ಲಿ ಹಣಕ್ಕೆ ಬೇಡಿಕೆ ಇಟ್ಟರಾ ಸಚಿವ ಡಾ.ಸುಧಾಕರ್

ಪಾರ್ಟಿ ಫಂಡ್‌ ಹೆಸರಿನಲ್ಲಿ ಹಣಕ್ಕೆ ಬೇಡಿಕೆ ಇಟ್ಟರಾ ಸಚಿವ ಡಾ.ಸುಧಾಕರ್

Leave a Reply Cancel reply

Your email address will not be published. Required fields are marked *

Recommended

ಬಾಂಬ್ ಇಟ್ಟ ಕಿರಾತಕ ಹೇಗಿದ್ದ? ಮಹತ್ವದ ಮಾಹಿತಿ ಕೊಟ್ಟ ಮುಖ್ಯಮಂತ್ರಿ

ಬಾಂಬ್ ಇಟ್ಟ ಕಿರಾತಕ ಹೇಗಿದ್ದ? ಮಹತ್ವದ ಮಾಹಿತಿ ಕೊಟ್ಟ ಮುಖ್ಯಮಂತ್ರಿ

2 years ago
ಅಧಿಕಾರದ ಕುರ್ಚಿಗೆ ವಿದಾಯ ಹೇಳಲು ಸಿದ್ಧರಾದರಾ ʼಬಲಶಾಲಿʼ ಯಡಿಯೂರಪ್ಪ! ಟೆಂಪಲ್‌ ರನ್‌ ಶುರುವಿಟ್ಟುಕೊಂಡ ಪುತ್ರ ವಿಜಯೇಂದ್ರ: ಹಾಗಾದರೆ, NEXT ಸಿಎಂ ಯಾರಪ್ಪ?

ಕೊರೊನ ಲಸಿಕೆ ಅಕ್ರಮ ಮಾರಾಟ ಮಾಡಿದರೆ ಜೈಲೇ ಗತಿ: ಗೃಹ ಸಚಿವ ಬಸವರಾಜ ಬೊಮ್ಮಾಯಿ ವಾರ್ನಿಂಗ್

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ