• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ಗೌಡರ ಮುಂದೆ ಕಣ್ಣೀರಿಟ್ಟ ಫಾರೂಕ್‌ ಅಬ್ದುಲ್ಲಾ

cknewsnow desk by cknewsnow desk
December 13, 2021
in NATION, STATE
Reading Time: 2 mins read
0
ಗೌಡರ ಮುಂದೆ ಕಣ್ಣೀರಿಟ್ಟ ಫಾರೂಕ್‌ ಅಬ್ದುಲ್ಲಾ
1k
VIEWS
FacebookTwitterWhatsuplinkedinEmail

ಹೆಚ್‌.ಡಿ.ದೇವೇಗೌಡರ ಜೀವನಾಧಾರಿತ ಕೃತಿ; ‘ಫರೋಸ್‌ ಇನ್‌ ಎ ಫೀಲ್ಡ್‌: ದಿ ಅನ್‌ಎಕ್ಸ್‌ಫ್ಲೋರ್ಡ್‌ ಲೈಫ್‌ ಆಫ್‌ ಹೆಚ್.ಡಿ.ದೇವೇಗೌಡʼ ಬಿಡುಗಡೆ

ಮಣ್ಣಿನ ಮಗನ ರಾಜಕೀಯ ಜೀವನ ಮೆಲುಕು ಹಾಕಿದ ಖ್ಯಾತ ವಕೀಲ ಫಾಲಿ ಎಫ್‌ ನಾರಿಮನ್‌

ನವದೆಹಲಿ: ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ.ದೇವೇಗೌಡರ ಜೀವನ ಆಧಿರಿಸಿ ಹಿರಿಯ ಪತ್ರಕರ್ತ ಸುಗತಾ ಶ್ರೀನಿವಾಸರಾಜು ಅವರು ಬರೆದಿರುವ ‘ಫರೋಸ್‌ ಇನ್‌ ಎ ಫೀಲ್ಡ್‌: ದಿ ಅನ್‌ಎಕ್ಸ್‌ಫ್ಲೋರ್ಡ್‌ ಲೈಫ್‌ ಆಫ್‌ ಹೆಚ್.ಡಿ.ದೇವೇಗೌಡʼ (Furrows in a Field: The Unexplored Life of H.D. DeveGowda) ಕೃತಿಯನ್ನು ದೇಶದ ಖ್ಯಾತ ನ್ಯಾಯವಾದಿಗಳಾದ ಫಾಲಿ ಎಫ್‌ ನಾರಿಮನ್‌ ಅವರು ಇಂದಿಲ್ಲಿ ಲೋಕಾರ್ಪಣೆ ಮಾಡಿದರು.

ಇಲ್ಲಿನ ಮಲ್ಟಿಪರ್ಪೋಸ್‌ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ನಡೆದ ಸರಳ, ಅರ್ಥಪೂರ್ಣ ಸಮಾರಂಭದಲ್ಲಿ ಆನ್‌ಲೈನ್‌ ವೇದಿಕೆಯ ಮೂಲಕ ನಾರಿಮನ್‌ ಅವರು ಕೃತಿಯನ್ನು ದೇವೇಗೌಡರ ಸಮಕ್ಷಮದಲ್ಲಿ ಬಿಡುಗಡೆ ಮಾಡಿದರು.

  • ಫಾಲಿ ಎಫ್‌ ನಾರಿಮನ್‌

ಈ ಸಂದರ್ಭದಲ್ಲಿ ಮಾತನಾಡಿದ ನಾರಿಮನ್‌ ಅವರು, ದೇವೇಗೌಡರ ಸುದೀರ್ಘ ರಾಜಕೀಯ ಜೀವನದ ಮಜಲುಗಳನ್ನು ಮೆಲುಕು ಹಾಕಿದರು. ಮುಖ್ಯವಾಗಿ ನೆರೆ ರಾಜ್ಯಗಳೊಂದಿಗೆ ಸಂಘರ್ಷಕ್ಕೆ ಕಾರಣವಾಗಿದ್ದ ಕೃಷ್ಣಾ ಮತ್ತು ಕಾವೇರಿ ಕೊಳ್ಳಗಳ ಜಲವಿವಾದಗಳ ಬಗ್ಗೆ ಗೌಡರು ಕೈಗೊಂಡ ಕಠಿಣ ಕ್ರಮಗಳ ಬಗ್ಗೆ ಮುಖ್ಯವಾಗಿ ಉಲ್ಲೇಖ ಮಾಡಿದರು.

60 ವರ್ಷಗಳ ಸುದೀರ್ಘ ರಾಜಕೀಯ ಜೀವನವುಳ್ಳ ದೇವೇಗೌಡರನ್ನು ಪುಸ್ತಕದಲ್ಲಿ ದೊಡ್ಡ ಜೀವ ಎಂದು ಕರೆಯಲಾಗಿದೆ. ದೊಡ್ಡ ಜೀವದ ಜತೆ ಸಂಭ್ರಮಿಸುತ್ತುದ್ದೇವೆ ಎಂದು ಬರೆಯಲಾಗಿದೆ. ಆದರೆ, ಅವರು ತಾವು ರಾಜಕೀಯ ಜೀವನ ಆರಂಭಿಸಿದಾಗ ಅವರಿಗೆ ತಾವೊಬ್ಬ ದೊಡ್ಡ ಜೀವ ಆಗುತ್ತೇನೆಂಬ ಕಲ್ಪನೆಯೇ ಇರಲಿಲ್ಲ. ಆದರೆ ದೇವೇಗೌಡರು ಹಾಗೆ ಬೆಳೆದು ಸಾಧಿಸಿದರು ಎಂದು ನಾರಿಮನ್‌ ಅವರು ಅಭಿಪ್ರಾಯಪಟ್ಟರು.

1962ರಲ್ಲಿ ಪಕ್ಷೇತರ ಶಾಸಕರಾಗಿ ಗೌಡರು ರಾಜ್ಯ ವಿಧಾನಸಭೆಗೆ ಕಾಲಿಟ್ಟ ಕೂಡಲೇ ಅವರು ಪ್ರಸ್ತಾಪ ಮಾಡಿದ್ದು, ರಾಜ್ಯಕ್ಕೆ ಹಂಚಿಕೆಯಾಗಿರುವ ಕಾವೇರಿ ನೀರನ್ನು ಸದ್ಬಳಕೆ ಮಾಡಿಕೊಳ್ಳುವ ಬಗ್ಗೆ. ಜತೆಗೆ ಒಂದು ನಿರ್ಣಯವನ್ನೂ ಮಂಡಿಸಿದರು. ಅದಾದ ಮೇಲೆ ಕರ್ನಾಟಕ ಸರಕಾರವು ಕಾವೇರಿ ಕೊಳ್ಳದ ತನ್ನ ಪಾಲಿನ ನೀರನ್ನು ಸಮರ್ಪಕವಾಗಿ ಬಳಿಸಿಕೊಳ್ಳುವ ನಿರ್ಧಾರ ಕೈಗೊಂಡಿತು ಎಂದು ಅವರು ವಿವರಿಸಿದರು.

ಆ ನಿರ್ಣಯ ಮಂಡಿಸಿ ಗೌಡರು ಮಾಡಿದ ಭಾಷಣವನ್ನು ಉಲ್ಲೇಖಿಸಿದ ನಾರಿಮನ್‌ ಅವರು; ಹಾಸನ, ಮೈಸೂರು, ಕೊಡಗು, ಮಂಡ್ಯ, ಚಿತ್ರದುರ್ಗ, ಬೆಂಗಳೂರು ಮುಂತಾದ ಜಿಲ್ಲೆಗಳ ನೀರಿನ ಬವಣೆಯನ್ನು ಹಾಗೂ ಕಾವೇರಿ ನೀರನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳುವ ಅಗತ್ಯವನ್ನು ಒತ್ತಿ ಹೇಳಿದ್ದರು. ಅವರ ಮಾತುಗಳನ್ನು ಹಿರಿಯ ನಾಯಕರಾದ ನಿಜಲಿಂಗಪ್ಪ, ವೀರೇಂದ್ರ ಪಾಟೀಲ್‌ ಅವರುಗಳೆಲ್ಲ ಆಲಿಸಿ ನೀರಿನ ಬಳಕೆ ಬಗ್ಗೆ ನಿರ್ಧಾರ ಕೈಗೊಂಡಿದ್ದರು ಎಂದರು.

ಇಷ್ಟೇ ಅಲ್ಲದೆ, ರಾಜ್ಯದಲ್ಲಿ ಬಲಿಷ್ಠ ಸಮುದಾಯಗಳ ನಡುವೆ ನಡೆಯುತ್ತಿದ್ದ ರಾಜಕೀಯ ಮೇಲಾಟ, ಕೊನೆಗೆ ಹೋರಾಟಕ್ಕೆ ಮನ್ನಣೆ ಸಿಕ್ಕಿ ದೇವೇಗೌಡರು ರಾಜ್ಯದ ಮುಖ್ಯಮಂತ್ರಿಗಳಾದ ಘಟನಾವಳಿಗಳ ಬಗ್ಗೆ ನಾರಿಮನ್‌ ಅವರು ಪ್ರಸ್ತಾಪ ಮಾಡಿದರು.

ಫಾರೂಕ್‌ ಅಬ್ದುಲ್ಲಾ ಕಂಬನಿ

ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್‌ ಅಬ್ದುಲ್ಲಾ ಅವರು; ಕಣೆವೆಯಲ್ಲಿ ಬಹಳ ದುಸ್ತರ ಸಂದರ್ಭವಿದ್ದ ವೇಳೆಯಲ್ಲಿ ಗೌಡರು ಈ ದೇಶದ ಪ್ರಧಾನಿ ಆಗಿದ್ದರು. ಆಗ ನಮ್ಮ ರಾಜ್ಯದಲ್ಲಿ ಪರಿಸ್ಥಿತಿ ವಿಪರೀತ ವಿಷಮವಾಗಿತ್ತು ಎಂದರು.

ಕಾಶ್ಮೀರದ ಸಮಸ್ಯೆಯನ್ನು ಬಗೆಹರಿಸಲು ಗೌಡರು ಬಹುದೊಡ್ಡ ರಿಸ್ಕ್‌ ತೆಗೆದುಕೊಂಡಿದ್ದರು. ಆ ಸಂದರ್ಭದಲ್ಲಿ ಅನೇಕ ಸಲ ಅವರನ್ನು ಪ್ರಧಾನಿ ಕಚೇರಿಯಲ್ಲಿ ಭೇಟಿಯಾಗಿದ್ದೆ. ಅಂಥ ಕಠಿಣ ಸಂದರ್ಭದಲ್ಲಿ ಕಣಿವೆ ರಾಜ್ಯವನ್ನು ಗೌಡರು ನಿರ್ವಹಿಸಿದ ರೀತಿ ಕೆಚ್ಚೆದೆಯಿಂದ ಕೂಡಿತ್ತು. ಆಗ ದೇವೇಗೌಡರು ಜಮ್ಮು ಕಾಶ್ನೀರಕ್ಕೆ ಭೇಟಿ ನೀಡಿದರು. ಅದು ನನ್ನ ಪಾಲಿಗೆ ಹೊಸ ಆರಂಭ. ಆಗ ಗೌಡರ ದೃಢ ನಿರ್ಧಾರದಿಂದ ಅಷ್ಟು ವಿಷಮ ಸ್ಥಿತಿಯಲ್ಲಿದ್ದ ಜಮ್ಮು ಕಾಶ್ಮೀರದಲ್ಲಿ ಚುನಾವಣೆ ನಡೆದು ನಾನು ಅಧಿಕಾರಕ್ಕೆ ಬಂದೆ ಎಂದು ಫಾರೂಕ್‌ ಅಬ್ದುಲ್ಲಾ ಅವರು ಗದ್ಗದಿತರಾದರು.

ಈ ಕಾರಣಕ್ಕೆ ಜಮ್ಮು, ಕಾಶ್ಮೀರ, ಲಡಾಖ್‌ ಜನರು ಎಂದೆಂದಿಗೂ ದೇವೇಗೌಡರಿಗೆ ಋಣಿಯಾಗಿರುತ್ತಾರೆಂದು ಅವರು ಕಣ್ಣಂಚಿನಲ್ಲಿ ನೀರು ತುಂಬಿಕೊಂಡೇ ಹೇಳಿದರು.

ಕೇಂದ್ರದ ಮಾಜಿ ಸಚಿವ ಜೈರಾಂ ರಮೇಶ್‌ ಗೌಡರು ಮತ್ತು ಕೃತಿಯ ಬಗ್ಗೆ ಮಾತನಾಡಿದರು. ಸಿಪಿಎಂ ಮುಖಂಡ ಸೀತಾರಾಂ ಯೆಚೂರಿಯವರು ಗೌಡರ ಜತೆಗಿನ ತಮ್ಮ ಬಾಂಧವ್ಯವನ್ನು ಮೆಲುಕು ಹಾಕಿದರು. ಲೇಖಕ ಸುಗತಾ ಶ್ರೀನಿವಾಸ ರಾಜು ಪ್ರಾಸ್ತಾವಿಕವಾಗಿ ಮಾತನಾಡಿದರು.

ದೇವೇಗೌಡರ ಸಂಪುಟದಲ್ಲಿ ವಿತ್ತ ಸಚಿವರಾಗಿದ್ದ ಪಿ.ಚಿದಂಬರಂ, ಜನರಲ್‌ ಧಿಲ್ಲೋನ್‌, ರಾಜ್ಯದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಶ್ರೀಮತಿ ಚನ್ನಮ್ಮ ದೇವೇಗೌಡರು ಸೇರಿದಂತೆ ಅನೇಕ ಗಣ್ಯರು, ಹೀತೈಷಿಗಳು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

ದೆಹಲಿಯಲ್ಲಿಂದು ಮಾಜಿ ಪ್ರಧಾನಿ ಶ್ರೀ @H_D_Devegowda ಅವರ ಜೀವನ ಆಧಾರಿತವಾಗಿ ಹಿರಿಯ ಪತ್ರಕರ್ತ @sugataraju ರಚಿಸಿದ "Furrows in a Field: The Unexplored Life of H.D.DeveGowda" ಕೃತಿ ಬಿಡುಗಡೆಯ ಆವಿಸ್ಮರಣಿಯ ಕ್ಷಣಕ್ಕೆ ನಾನೂ ಸಾಕ್ಷಿಯಾಗಿದ್ದೆ ಎನ್ನುವುದೇ ನನ್ನಲ್ಲಿನ ಧನ್ಯತಾ ಭಾವ. 1/3 pic.twitter.com/7bm3IVOggR

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) December 13, 2021
Tags: cknewsnowformer prime minister of IndiaFurrows in a Fieldhd devegowdaLaunch of Furrows in a Fieldnewssugata srinivasaraju
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಕಸಾಪ ಚುನಾವಣೆ: ಚಿಕ್ಕಬಳ್ಳಾಪುರದಲ್ಲಿ ಅಂಬರ ಮುಟ್ಟಿದ ಪ್ರಚಾರ

ಗುಡಿಬಂಡೆ ಕಸಾಪ ಅಧ್ಯಕ್ಷಗಿರಿಗೆ ಅರ್ಜಿ; ಬೇಕಿದೆಯಾ ಯಾರದ್ದೋ ಮರ್ಜಿ?

Leave a Reply Cancel reply

Your email address will not be published. Required fields are marked *

Recommended

ಬಾಂಬ್ ಇಟ್ಟ ಕಿರಾತಕ ಹೇಗಿದ್ದ? ಮಹತ್ವದ ಮಾಹಿತಿ ಕೊಟ್ಟ ಮುಖ್ಯಮಂತ್ರಿ

ಬಾಂಬ್ ಇಟ್ಟ ಕಿರಾತಕ ಹೇಗಿದ್ದ? ಮಹತ್ವದ ಮಾಹಿತಿ ಕೊಟ್ಟ ಮುಖ್ಯಮಂತ್ರಿ

2 years ago
ಅಧಿಕಾರದ ಕುರ್ಚಿಗೆ ವಿದಾಯ ಹೇಳಲು ಸಿದ್ಧರಾದರಾ ʼಬಲಶಾಲಿʼ ಯಡಿಯೂರಪ್ಪ! ಟೆಂಪಲ್‌ ರನ್‌ ಶುರುವಿಟ್ಟುಕೊಂಡ ಪುತ್ರ ವಿಜಯೇಂದ್ರ: ಹಾಗಾದರೆ, NEXT ಸಿಎಂ ಯಾರಪ್ಪ?

ಕೊರೊನ ಲಸಿಕೆ ಅಕ್ರಮ ಮಾರಾಟ ಮಾಡಿದರೆ ಜೈಲೇ ಗತಿ: ಗೃಹ ಸಚಿವ ಬಸವರಾಜ ಬೊಮ್ಮಾಯಿ ವಾರ್ನಿಂಗ್

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ