• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home POLITICS

ಮತಾಂತರ ನಿಷೇಧ ಕಾಯ್ದೆಗೆ ಜೆಡಿಎಸ್ ಬೆಂಬಲ ಇಲ್ಲ

P K Channakrishna by P K Channakrishna
December 15, 2021
in POLITICS, STATE
Reading Time: 1 min read
0
ಪ್ರಧಾನಿ ಮೌನವಾಗಿದ್ದಾರೆ ಎಂದಾಕ್ಷಣ ಬಿಟ್ ಕಾಯಿನ್ ಹಗರಣ ಮುಚ್ಚಿ ಹಾಕುತ್ತಾರೆ ಎಂದರ್ಥವಲ್ಲ
946
VIEWS
FacebookTwitterWhatsuplinkedinEmail

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸ್ಪಷ್ಟನೆ

  • 40% ಬಗ್ಗೆ ಮಾತನಾಡಲು ಕಾಂಗ್ರೆಸ್ ನಾಯಕರಿಗೆ ನೈತಿಕತೆ ಇಲ್ಲ
  • ನಾನು ಸಿಎಂ ಆಗಿದ್ದಾಗ ನನ್ನ ಕಚೇರಿಯಲ್ಲಿ ಪರ್ಸಂಟೇಜ್ ಇಟ್ಟಿರಲಿಲ್ಲ
  • ಯಾರಿಗೆ ಪರ್ಸಂಟೇಜ್ ಹೋಗುತ್ತಿತ್ತು ಎನ್ನುವ ಮಾಹಿತಿ ನನಗಿತ್ತು ಎಂದ ಮಾಜಿ ಸಿಎಂ

by PK Channakrishna follow @pkcklb

ನವದೆಹಲಿ: ರಾಜ್ಯದ ಬಿಜೆಪಿ ಸರಕಾರ ಜಾರಿಗೆ ತರಲು ಉದ್ದೇಶಿಸಿರುವ ಮತಾಂತರ ನಿಷೇಧ ಕಾಯ್ದೆಗೆ ಜೆಡಿಎಸ್ ಪಕ್ಷ ಬೆಂಬಲ ನೀಡುವ ಪ್ರಶ್ನೆಯೇ ಇಲ್ಲ. ಇದು ಅಗತ್ಯವಿಲ್ಲದ ವಿಷಯ ಎಂದು ಪಕ್ಷದ ಶಾಸಕಾಂಗ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಸ್ಪಷ್ಟಪಡಿಸಿದ್ದಾರೆ.

ನವದೆಹಲಿಯಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಅವರು; ಬೆಳಗಾವಿಯಲ್ಲಿ ವಿಧಾನಸಭೆ ಅಧಿವೇಶನ ಕರೆದಿರುವುದು ಉತ್ತರ ಕರ್ನಾಟಕ ಸೇರಿದಂತೆ ರಾಜ್ಯ ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಲಿಕ್ಕೆ. ಅಗತ್ಯವಿಲ್ಲದ ಮತಾಂತರ ನಿಷೇಧ ಕಾಯ್ದೆಯ ಬಗ್ಗೆ ಅಲ್ಲ ಎಂದರು.

ಈ ಕಾಯ್ದೆಯನ್ನು ನಮ್ಮ ಪಕ್ಷ ಸ್ಪಷ್ಟವಾಗಿ ವಿರೋಧಿಸುತ್ತದೆ ಹಾಗೂ ಕಲಾಪದಲ್ಲಿ ಭಾಗಿಯಾಗುವ ನಮ್ಮ ಎಲ್ಲ ಶಾಸಕರು ಕೂಡ ಇದನ್ನು ಖಡಾತುಂಡವಾಗಿ ವಿರೋಧ ಮಾಡುತ್ತಾರೆ ಎಂದು ಕುಮಾರಸ್ವಾಮಿ ಅವರು ತಿಳಿಸಿದರು.

40%; ಎಲ್ಲರೂ ಗಾಜಿನ ಮನೆಯಲ್ಲಿ ಇದ್ದಾರೆ

ಬಿಟ್ ಕಾಯಿನ್ ಹಗರಣ ಹಾಗೂ ಗುತ್ತಿಗೆದಾರರಿಂದ 40% ಕಮಿಷನ್ ವಸೂಲಿ ಮಾಡುವ ಬಗ್ಗೆ ಜೆಡಿಎಸ್ ಮಾತನಾಡುತ್ತಿಲ್ಲ ಎನ್ನುವ ಆರೋಪವನ್ನು ಸ್ಪಷ್ಟವಾಗಿ ತಳ್ಳಿಹಾಕಿದ ಅವರು, ಗುತ್ತಿಗೆದಾರ ಸಂಘದ ಒಬ್ಬರು ಪ್ರಧಾನ ಮಂತ್ರಿಗಳಿಗೆ ಬರೆದಿರುವ ಪತ್ರ ಇಟ್ಟುಕೊಂಡು ಕಾಂಗ್ರೆಸ್ ನಾಯಕರು 40% ಕಮಿಷನ್ ಅಂತ ಮಾತನಾಡುತ್ತಿದ್ದಾರೆ. ಈ ಪರ್ಸಂಟೇಜ್ ವ್ಯವಹಾರ ಬರಲು ಯಾರು ಕಾರಣ? 10%, 20%, 30%, 40% ಕಮಿಷನ್ ಅಂತ ಹೇಳುವವರಿಗೆ ಆ ಬಗ್ಗೆ ಮಾತನಾಡುವ ನೈತಿಕತೆ ಇದೆಯಾ? ಎಲ್ಲರೂ ಗಾಜಿನ ಮನೆಯಲ್ಲಿ ಇರುವವರೇ. ಗಾಜಿನ ಮನೆಯಲ್ಲಿ ಕೂತು ಕಲ್ಲು ಯಾಕೆ ಹೊಡೆಯುತ್ತಾರೆ? ಎಂದು ಕುಮಾರಸ್ವಾಮಿ ಅವರು ಪ್ರಶ್ನೆ ಮಾಡಿದರು.

ಯಾರು ಇವತ್ತು ಕಮಿಷನ್ ಬಗ್ಗೆ ಮಾತನಾಡುತ್ತಿದ್ದಾರೆ, ಅದೇ ಕಾಂಗ್ರೆಸ್ ಪಕ್ಷದ ನಾಯಕರು ಐದು ವರ್ಷ ಆಡಳಿತ ನಡೆಸಿದರಲ್ಲ, ಅವರ ಕಾಲದಲ್ಲಿ ಏನೇನಾಯ್ತು ಎಂದು ಹೇಳಬೇಕಲ್ಲ. ಅವರ ಕಾಲದಲ್ಲಿ ಎಷ್ಟು ಪರ್ಸಂಟೇಜ್ ಇತ್ತು ಎನ್ನುವುದು ಅವರಿಗೂ ಗೊತ್ತು. ಹೀಗಾಗಿ ಕಾಂಗ್ರೆಸ್ ನಾಯಕರಿಗೆ ಈ ಬಗ್ಗೆ ಮಾತನಾಡುವ ನೈತಿಕತೆ ಖಂಡಿತಾ ಇಲ್ಲ ಎಂದು ಅವರು ಟೀಕಾಪ್ರಹಾರ ನಡೆಸಿದರು.

ನಿಮ್ಮ ಸರಕಾರ ಇದ್ದಾಗ ಈ ಪರ್ಸಂಟೇಜ್ ವ್ಯವಹಾರದ ವಿರುದ್ಧ ಯಾಕೆ ಕ್ರಮ ಜರುಗಿಸಲು ಆಗಲಿಲ್ಲ ಎಂದು ಕೆಲವರು ಕೇಳುತ್ತಿದ್ದಾರೆ. ಸ್ವತಂತ್ರ ಸರಕಾರ ನನಗೆಂದೂ ಬರಲಿಲ್ಲ. ಆದರೆ ಯಾವುದೇ ಕಾರಣಕ್ಕೂ ಪರ್ಸಂಟೇಜ್ ವ್ಯವಸ್ಥೆಯನ್ನು ನನ್ನ ಕಚೇರಿಯಲ್ಲಿ ಇಟ್ಟಿರಲಿಲ್ಲ. ನನ್ನ ಕಾಲದಲ್ಲೂ ಎಲ್ಲೆಲ್ಲಿ ಪರ್ಸಂಟೇಜ್ ಹೋಗ್ತಾ ಇತ್ತು ಎನ್ನುವ ಮಾಹಿತಿ ನನಗೆ ಇತ್ತು. ಮುಂದೆ ನಮ್ಮ ಪಕ್ಷಕ್ಕೆ ಜನರು ಸ್ವತಂತ್ರ ಸರಕಾರ ಕೊಟ್ಟರೆ ಆಗ ಈ ಬಗ್ಗೆ ಚರ್ಚೆ ಮಾಡಬಹುದು ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.

ಬಿಜೆಪಿ, ಕಾಂಗ್ರೆಸ್ ಆತ್ಮಕ್ಕೆ ಪ್ರಶ್ನೆ ಹಾಕಿಕೊಳ್ಳಲಿ

ಪರ್ಸಂಟೇಜ್ ಬಗ್ಗೆ ಮಾತನಾಡುವ ನೈತಿಕತೆ ರಾಜ್ಯದ ಎರಡೂ ಪಕ್ಷಗಳಿಗೆ ಇಲ್ಲ ಎಂದು ಅವರು ಹೇಳಿದರಲ್ಲದೆ, ಪ್ರತಿ ಯೋಜನೆಗೆ ಹಣಕಾಸು ಇಲಾಖೆ ಹೊಂದಿದ್ದ ನನ್ನ ಕಚೇರಿಯಿಂದ ಎಂದೂ ಪರ್ಸಂಟೇಜ್ ವ್ಯವಸ್ಥೆ ಇರಲಿಲ್ಲ. ಅಂತದ್ದಕ್ಕೆ ಪ್ರೋತ್ಸಾಹ ಕೊಟ್ಟಿಲ್ಲ. ಆಗ ನಡೆದಿರುವ ಪರ್ಸಂಟೇಜ್ ವ್ಯವಹಾರದಲ್ಲಿ ನನ್ನ ಪಾತ್ರ ಇಲ್ಲ. ಆದರೆ ಇವತ್ತು ಪರ್ಸಂಟೇಜ್ ಬಗ್ಗೆ ಯಾರು ಯಾರು ಮಾತನಾಡುತ್ತಿದ್ದಾರೆ ಅವರು ತಮ್ಮ ಆತ್ಮಕ್ಕೆ ಪ್ರಶ್ನೆ ಹಾಕಿಕೊಂಡರೆ ಉತ್ತರ ಸಿಗುತ್ತದೆ ಎಂದು ಕುಮಾರಸ್ವಾಮಿ ಅವರು ತಿಳಿಸಿದರು.

ಎಲ್ಲರೂ ಗಾಜಿನ ಮನೆಯಲ್ಲಿ ಇದ್ದೇ ಮಾತನಾಡುತ್ತಿದ್ದಾರೆ. ಇವರಿಗೆ ಹಾಗೆ ಮಾತನಾಡಲು ಯಾವ ನೈತಿಕತೆ ಇದೆ. ದೇವರಾಜ ಅರಸು ಅವರ ನಂತರ ಐದು ವರ್ಷ ಮುಖ್ಯಮಂತ್ರಿ ಆಗಿದ್ದ ಸಿದ್ದರಾಮಯ್ಯ ಅವರ ಸರಕಾರದಲ್ಲಿ ಪರ್ಸಂಟೇಜ್ ವ್ಯವಹಾರ ಇರಲಿಲ್ಲವಾ? ಅವರು ಆತ್ಮ ಮುಟ್ಟಿಕೊಂಡು ಹೇಳ್ತಾರಾ? ಇಂತದ್ದನ್ನು ತಡೆಯಲು ಎಲ್ಲ ಪಕ್ಷಗಳು ಮಾತ್ರ ಅಲ್ಲ, ಜನಪ್ರತಿನಿಧಿಗಳ ಪಾತ್ರ ತುಂಬಾ ಇದೆ ಎಂದು ಅವರು ಅಭಿಪ್ರಾಯಪಟ್ಟರು.

ಮೆಟ್ರೋ ಉದಾಹರಣೆ ಕೊಟ್ಟ ಹೆಚ್ ಡಿಕೆ

ನಾನು ಮುಖ್ಯಮಂತ್ರಿ ಆಗಿದ್ದಾಗ ಯಾವುದೇ ಕಡತ ವಿಲೇವಾರಿ ಮಾಡಬೇಕಾದ ಸಂದರ್ಭದಲ್ಲಿ ನಾನು ಪರ್ಸಂಟೇಜ್ ಇಟ್ಟಿರಲಿಲ್ಲ. ಉದಾಹರಣೆಗೆ, ನಮ್ಮ ಮೆಟ್ರೋ ಯೋಜನೆಗೆ, ರಾಜ್ಯದಲ್ಲಿ ಮೊದಲ ಬಾರಿಗೆ 19 ಕಿ.ಮೀ. ದೂರದ ಪ್ರಥಮ ಹಂತಕ್ಕೆ ಚಾಲನೆ ನೀಡಿದ್ದು 2006ರ ನಾನು ಮುಖ್ಯಮಂತ್ರಿ ಆಗಿದ್ದಾಗ. ಆಗ ಟೆಂಡರ್ ಗೆ ಒಪ್ಪಿಗೆ ಕೊಟ್ಟೆ. ಒಂದು ಕ್ಷಣವೂ ತಡ ಮಾಡದೇ ಫೈಲ್ ಕ್ಲಿಯರ್ ಮಾಡಿದೆ. ಆ ಗುತ್ತಿಗೆದಾರ ಯಾರೂ ಅನ್ನೋದು ನನಗೆ ಗೊತ್ತಿರಲಿಲ್ಲ. ನಾನು ಇಟ್ಟ ಷರತ್ತು ಏನೆಂದರೆ, ನಿಗದಿತ ಸಮಯದಲ್ಲಿ ಕಾಮಗಾರಿ ಮುಗಿಸಬೇಕು ಎಂತಾ ಹೇಳಿದ್ದು ಮಾತ್ರ. 2018ರಲ್ಲಿ ಕೂಡ ನಾನು ಸಿಎಂ ಆಗಿದ್ದಾಗ ಗುತ್ತಿಗೆದಾರರನ್ನು ಕರೆದು ನಿಮ್ಮ ಕಡತಕ್ಕೆ ಸಹಿ ಹಾಕುತ್ತಿದ್ದೇನೆ, ಇಷ್ಟು ಹಣ ಕೊಡಬೇಕು ಎಂದು ಕೇಳಿದವನಲ್ಲ. ಹೀಗಾಗಿ ಎಲ್ಲರೂ ಗಾಜಿನ ಮನೆಯಲ್ಲಿ ಇದ್ದಿರಪ್ಪ, ಇದರ ಬಗ್ಗೆ ಮಾತನಾಡುವ ನೈತಿಕತೆ ಎಲ್ಲಿ ಉಳಿಸಿಕೊಂಡಿದ್ದಿರಿ ಎನ್ನುವುದೇ ನನ್ನ ಪ್ರಶ್ನೆ ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.

ಅದಕ್ಕೆ ಜನತೆಗೆ ನಾನು ಕೇಳುತ್ತಿದ್ದೇನೆ, ಒಮ್ಮೆ ನನಗೆ ಸ್ವತಂತ್ರ ಸರಕಾರ ನೀಡಲಿ, ಅದರಲ್ಲಿ ನಾನು ವಿಫಲ ಆದರೆ ಅವತ್ತು ನಂಗೇನೂ ಶಿಕ್ಷೆ ಕೊಡಬೇಕೋ ಕೋಡಿ. ಅದು ಬಿಟ್ಟು ಪರ್ಸಂಟೇಜ್ ಹೊಡೆಯುವ ಇಂಥ ಕೆಲಸ ಮಾಡುವವರಿಗೆ ಮತ್ತೆ ಮತ್ತೆ ಅವಕಾಶ ಕೊಟ್ಟರೆ ನಾವು ಹೋರಾಟ ಮಾಡುವುದು ಹೇಗೆ? ಎಂದು ಪ್ರಶ್ನೆ ಮಾಡಿದರು.

ಸಾವಿಲ್ಲದ ಮನೆಯಲ್ಲಿ ಸಾಸಿವೆ ತನ್ನಿ ಎಂದು ಗೌತಮ ಬುದ್ಧ ಹೇಳಿದ ಮಾತನ್ನು ಉಲ್ಲೇಖಿಸಿದ ಅವರು, ಅದೇ ಪರಿಸ್ಥಿತಿ ಈಗ ಎಲ್ಲ ಕಡೆ ಇದೆ. ಇಂಥ ಪರಿಸ್ಥಿಯಲ್ಲಿ ಯಾರ ಬಗ್ಗೆ ಚರ್ಚೆ ಮಾಡ್ತಾರೆ ಕಾಂಗ್ರೆಸ್ ನಾಯಕರು? ಎಂದು ಮಾಜಿ ಮುಖ್ಯಮಂತ್ರಿಗಳು ಪ್ರಶ್ನಿಸಿದರು.

Tags: anti conversion bill KarnatakabelagavibjpcknewsnowCongressjdskarnatakanewsPolitics
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
Cknewsnow impact | ಚಿಕ್ಕಬಳ್ಳಾಪುರ ಮೇಲೆ ವಿಷದಾಳಿ; ಆರೋಪಿಗಳಿಗೆ ತೀವ್ರ ಶೋಧ, ಲ್ಯಾಬ್‌ಗೆ ವಿಷನೀರು

Cknewsnow impact | ಚಿಕ್ಕಬಳ್ಳಾಪುರ ಮೇಲೆ ವಿಷದಾಳಿ; ಆರೋಪಿಗಳಿಗೆ ತೀವ್ರ ಶೋಧ, ಲ್ಯಾಬ್‌ಗೆ ವಿಷನೀರು

Leave a Reply Cancel reply

Your email address will not be published. Required fields are marked *

Recommended

ಮುಜರಾಯಿ ಇಲಾಖೆ ಅರ್ಚಕರು, ದೇವಾಲಯ ನೌಕರರಿಗೆ ದಸರಾ ಬಂಪರ್

ಮುಜರಾಯಿ ಇಲಾಖೆ ಅರ್ಚಕರು, ದೇವಾಲಯ ನೌಕರರಿಗೆ ದಸರಾ ಬಂಪರ್

5 years ago
ನಮ್ಮ ದೇಶದಲ್ಲೇ ತಯಾರಾದ ಕೊರೊನಾ ಲಸಿಕೆ ಕುರಿತು ಅಗೌರವ ಬೇಡ; ಭಾರತ್ ಬಯೋಟೆಕ್ ನಂಬಿಕೆಗೆ ಅರ್ಹವಾದ ಕಂಪನಿ ಎಂದ ಡಾ.ಕೆ.ಸುಧಾಕರ್

ಕೋಲಾರದ ಮಾಲೂರಿನಲ್ಲಿ 100 ಎಕರೆ ಜಾಗದಲ್ಲಿ ಕೊವ್ಯಾಕ್ಸಿನ್ ಲಸಿಕೆ ತಯಾರಿಕಾ ಘಟಕ I ದೃಢಪಡಿಸಿದ ಡಿಸಿಎಂ I ಐದು ಪಟ್ಟು ಹೆಚ್ಚು ಲಸಿಕೆ ತಯಾರಿಕೆ, ರಾಜ್ಯದಲ್ಲಿ ನೀಗುತ್ತಾ ವ್ಯಾಕ್ಸಿನ್‌ ಕೊರತೆ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ