• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಚಿಕ್ಕಬಳ್ಳಾಪುರದ 4 ಅವಧಿಯ ಸಂಸದ ಆರ್.ಎಲ್.ಜಾಲಪ್ಪ ಅವರು ಇನ್ನಿಲ್ಲ

P K Channakrishna by P K Channakrishna
December 17, 2021
in STATE
Reading Time: 1 min read
0
ಚಿಕ್ಕಬಳ್ಳಾಪುರದ 4 ಅವಧಿಯ ಸಂಸದ ಆರ್.ಎಲ್.ಜಾಲಪ್ಪ ಅವರು ಇನ್ನಿಲ್ಲ
1.1k
VIEWS
FacebookTwitterWhatsuplinkedinEmail

ಜನತಾ ಪರಿವಾರದ ಕೊಂಡಿ, ಕಾಂಗ್ರೆಸ್‌ಪಕ್ಷದ ಹಿರಿಯ ನಾಯಕ; ಅಂಗಾಂಗಳ ವೈಫಲ್ಯದಿಂದ ಆಸ್ಪತ್ರೆಯಲ್ಲಿ ನಿಧನ

ಚಿಕ್ಕಬಳ್ಳಾಪುರ/ಕೋಲಾರ: ಹಿರಿಯ ರಾಜಕಾರಣಿ ಹಾಗೂ ಕೇಂದ್ರದ ಮಾಜಿ ಸಚಿವ ಆರ್.ಎಲ್.ಜಾಲಪ್ಪ ಅವರು ಇನ್ನಿಲ್ಲ. ಅವರಿಗೆ 96 ವರ್ಷ ವಯಸ್ಸಾಗಿತ್ತು.

ಅನಾರೋಗ್ಯದಿಂದ ಕೋಲಾರದ ದೇವರಾಜ ಅರಸು ವೈದ್ಯ ಕಾಲೇಜಿನಲ್ಲಿ ಅಂಗಾಂಗಳ ವೈಫಲ್ಯದಿಂದ ಚಿಕಿತ್ಸೆ ಫಲಕಾರಿಯಗದೇ ಇಂದು (ಶುಕ್ರವಾರ) ಸಂಜೆ ನಿಧನರಾಗಿದ್ದಾರೆ.

ಶ್ವಾಸಕೋಶ, ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿದ್ದ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಅಲ್ಲದೆ; ಕಳೆದ ಫೆಬ್ರವರಿಯಲ್ಲಿ ಅವರು ಪಾರ್ಶ್ವವಾಯುಗೆ ತುತ್ತಾಗಿದ್ದರು ಹಾಗೂ ಮಿದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ್ದರಿಂದ ಶಸ್ತ್ರ ಚಿಕತ್ಸೆಯನ್ನೂ ಮಾಡಲಾಗಿತ್ತು. ಸುಮಾರು ನಲವತ್ತು ದಿನಗಳ ಕಾಲ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು.

ಡಿ.12ರಂದು ದೇವರಾಜ ಅರಸು ವೈದ್ಯ ಕಾಲೇಜಿಗೆ ಭೇಟಿ ನೀಡಿದ್ದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಜಾಲಪ್ಪ ಅವರ ಆರೋಗ್ಯ ವಿಚಾರಿಸಿದ್ದರು. ರಾಜ್ಯದಲ್ಲಿ ಗೃಹ, ಕಂದಾಯದಂಥ ಮಹತ್ವದ ಖಾತೆಗಳನ್ನು ನಿಭಾಯಿಸಿದ್ದ ಅವರು ಲೋಕಸಭೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರವನ್ನು ನಾಲ್ಕು ಬಾರಿ ಪ್ರತಿನಿಧಿಸಿದ್ದರು. ಹೆಚ್.ಡಿ.ದೇವೇಗೌಡರ ಸಂಯುಕ್ತ ರಂಗ ಸರಕಾರದಲ್ಲಿ ಅವರು ಜವಳಿ ಖಾತೆ ಮಂತ್ರಿಯಾಗಿದ್ದರು.

ವಿಧಾನ ಪರಿಷತ್, ವಿಧಾನಸಭೆ ಹಾಗೂ ಲೋಕಸಭೆ ಸದಸ್ಯರಾಗಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ್ದ ಹಿರಿಯ ಕಾಂಗ್ರೆಸ್ ನಾಯಕ ಆರ್. ಎಲ್ ಜಾಲಪ್ಪಅವರ ನಿಧನವು ಕಾಂಗ್ರೆಸ್ ಪಕ್ಷಕ್ಕೆ ಬಹುದೊಡ್ಡ ನಷ್ಟ.

ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇವೆ. pic.twitter.com/IW9WzVghld

— Karnataka Congress (@INCKarnataka) December 17, 2021

ನೇರ ನಿಷ್ಠುರತೆಯ ರಾಜಕಾರಣಿ

ಡೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆಯಲ್ಲಿ 1925ರ ಅಕ್ಟೋಬರ್‌ 19ರಂದು ಜನಿಸಿದ್ದ ಅವರು ಪ್ರಾಥಮಿಕ ಶಿಕ್ಷಣವನ್ನು ದೊಡ್ಡಬಳ್ಳಾಪುರದಲ್ಲಿ ಪಡೆದಿದ್ದರು. ಬಳಿಕ ಮೈಸೂರು ಮಹಾರಾಜ ಕಾಲೇಜಿನಲ್ಲಿ ಬಿಎ ವ್ಯಾಸಂಗ ಮಾಡಿದ್ದರು. ಅವರು ಜನತಾದಳ, ಕಾಂಗ್ರೆಸ್‌ಪಕ್ಷಗಳಲ್ಲಿದ್ದು, ತಮ್ಮ ಅಗಲಿಕೆವರೆಗೂ ಅವರು ಕಾಂಗ್ರೆಸ್‌ ಸದಸ್ಯರಾಗಿದ್ದರು.

ರಾಜಕೀಯದಲ್ಲಿ ನೇರ ನಿಷ್ಠುರತೆಗೆ ಹೆಸರಾಗಿದ್ದ ಜಾಲಪ್ಪ ಅವರು ರಾಮಕೃಷ್ಣ ಹೆಗಡೆ ಅವರ ಸಂಪುಟದಲ್ಲಿ (1987-88) ಅತ್ಯಂತ ಪ್ರಭಾವವುಳ್ಳ ಗೃಹ ಖಾತೆಯನ್ನು ಹೊಂದಿದ್ದರು. ಅದಾದ ಮೇಲೆ ದೇವೇಗೌಡರ ಸಂಪುಟದಲ್ಲಿಯೂ ಅವರು ಕಂದಾಯ ಸಚಿವರಾಗಿದ್ದರು. ತದನಂತರ ನಡೆದ ಲೋಕಸಭೆ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಆಯ್ಕೆಯಾಗಿದ್ದರು. ಅದುವರೆಗೂ ಸೋಲಿಲ್ಲದ ಸರದಾರನಂತೆ ಮಿಂಚಿದ್ದ ನಕ್ಕಲಹಳ್ಳಿಯ ವಿ.ಕೃಷ್ಣರಾವ್‌ ಅವರನ್ನು ಮಣಿಸಿದ್ದರು.

1996ರಲ್ಲಿ ಅಂದಿನ ಪ್ರಧಾನಿ ದೇವೇಗೌಡರ ಸಂಪುಟದಲ್ಲಿ ಕ್ಯಾಬಿನೇಟ್‌ಬದಲು ರಾಜ್ಯ ಸಚಿವ ಸ್ಥಾನ ನೀಡಿದ್ದಕ್ಕೆ ಪ್ರತಿಭಟಿಸಿ ಪ್ರಮಾಣ ವಚನ ಸಮಾರಂಭವನ್ನು ಬಹಿಷ್ಕರಿಸಿ ಬೆಂಗಳೂರಿಗೆ ವಾಪಸ್ಸಾಗಿದ್ದರು. ಬಳಿಕ ದೇವೇಗೌಡರು ಅವರಿಗೆ ಕ್ಯಾಬಿನೇಟ್‌ದರ್ಜೆಯ ಜವಳಿ ಖಾತೆಯನ್ನೇ ನೀಡಿದ್ದರು.

1998ರಲ್ಲಿ ಜನತಾದಳವನ್ನು ತೊರೆದ ಜಾಲಪ್ಪ ಚಿಕ್ಕಬಳ್ಳಾಪುರ ಕ್ಷೇತ್ರದಿಂದಲೇ ಪುನಾ ಆಯ್ಕೆಯಾದರಲ್ಲದೆ, 2004ರವರೆಗೂ ಅವರು ಕ್ಷೇತ್ರವನ್ನು ಪ್ರತಿನಿಧಿಸಿದ್ದರು. ಒಮ್ಮೆ ಅವರು ಜನತಾ ಪರಿವಾರದ ತಮ್ಮ ಒಡನಾಡಿಯಾಗಿದ್ದ ಸಿ.ಭೈರೇಗೌಡರನ್ನು ಸೋಲಿಸಿದ್ದರು.

ಜಾಲಪ್ಪ ರಾಜಕೀಯ ಪ್ರೊಫೈಲ್‌

  • 1980-83: ಸದಸ್ಯರು, ಕರ್ನಾಟಕ ವಿಧಾನ ಪರಿಷತ್ತು
  • 1983-96: ಸದಸ್ಯರು, ಕರ್ನಾಟಕ ವಿಧಾನಸಭೆ
  • 1983-84 & 1985-86: ಸಹಕಾರ ಸಚಿವರು, ಕರ್ನಾಟಕ ಸರ್ಕಾರ
  • 1986-87: ಗೃಹ ಸಚಿವರು, ಕರ್ನಾಟಕ ಸರ್ಕಾರ
  • 1995-96: ಕಂದಾಯ ಸಚಿವರು, ಕರ್ನಾಟಕ ಸರ್ಕಾರ
  • 1996: 11ನೇ ಲೋಕಸಭೆಗೆ ಚುನಾಯಿತ ಜವಳಿ
  • 1996-98: ಕೇಂದ್ರ ಜವಳಿ ಸಚಿವ
  • 1998: 12ನೇ ಲೋಕಸಭೆಗೆ ಆಯ್ಕೆ
  • 1998-99: ಸದಸ್ಯರು, ಹಣಕಾಸು ಸಮಿತಿ ಸದಸ್ಯ, ಸಂಸತ್ತಿನ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಸದಸ್ಯರು ಸಮಿತಿ, ಸಲಹಾ ಸಮಿತಿಯ ಸದಸ್ಯರು ಕೃಷಿ ಸಚಿವಾಲಯ.
  • 1999: 13ನೇ ಲೋಕಸಭೆಗೆ ಆಯ್ಕೆ
  • 1999-2000: ನಗರ ಮತ್ತು ಗ್ರಾಮೀಣ ಅಭಿವೃದ್ಧಿ ಸಮಿತಿ ಸದಸ್ಯರು.
  • 2004: 14ನೇ ಲೋಕಸಭೆಗೆ ಆಯ್ಕೆ
  • 2006: ಮಾನವ ಸಂಪನ್ಮೂಲ ಅಭಿವೃದ್ಧಿ ಸಮಿತಿಯ ಸದಸ್ಯರು

ನಾಳೆ ಅವರ ಹುಟ್ಟೂರು ತೂಬಗೆರೆಯಲ್ಲಿ ಜಾಲಪ್ಪ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಅವರ ಮೊಮ್ಮಗ ವಿನಯ್‌ ಶ್ಯಾಂ ತಿಳಿಸಿದ್ದಾರೆ.

Tags: chikkaballapuracknewsnowcongressmanformer central ministerindiakarnatakakolarnewsno morepasses awayrl jalappa
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಎಂಜಿನಿಯರಿಂಗ್ ಪ್ರವೇಶ: ಡಿ.31ರವರೆಗೂ ಅವಕಾಶ

ಎಂಜಿನಿಯರಿಂಗ್ ಪ್ರವೇಶ: ಡಿ.31ರವರೆಗೂ ಅವಕಾಶ

Leave a Reply Cancel reply

Your email address will not be published. Required fields are marked *

Recommended

ಬಾಂಬ್ ಇಟ್ಟ ಕಿರಾತಕ ಹೇಗಿದ್ದ? ಮಹತ್ವದ ಮಾಹಿತಿ ಕೊಟ್ಟ ಮುಖ್ಯಮಂತ್ರಿ

ಬಾಂಬ್ ಇಟ್ಟ ಕಿರಾತಕ ಹೇಗಿದ್ದ? ಮಹತ್ವದ ಮಾಹಿತಿ ಕೊಟ್ಟ ಮುಖ್ಯಮಂತ್ರಿ

2 years ago
ಅಧಿಕಾರದ ಕುರ್ಚಿಗೆ ವಿದಾಯ ಹೇಳಲು ಸಿದ್ಧರಾದರಾ ʼಬಲಶಾಲಿʼ ಯಡಿಯೂರಪ್ಪ! ಟೆಂಪಲ್‌ ರನ್‌ ಶುರುವಿಟ್ಟುಕೊಂಡ ಪುತ್ರ ವಿಜಯೇಂದ್ರ: ಹಾಗಾದರೆ, NEXT ಸಿಎಂ ಯಾರಪ್ಪ?

ಕೊರೊನ ಲಸಿಕೆ ಅಕ್ರಮ ಮಾರಾಟ ಮಾಡಿದರೆ ಜೈಲೇ ಗತಿ: ಗೃಹ ಸಚಿವ ಬಸವರಾಜ ಬೊಮ್ಮಾಯಿ ವಾರ್ನಿಂಗ್

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ