• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಎರಡು ಬಾರಿ ಸ್ಪೀಕರ್‌ ಆಗಿದ್ದವರ ಅಸಭ್ಯ ಹೇಳಿಕೆ; ವಿಕೃತಿಯ ಪರಮಾವಧಿ

cknewsnow desk by cknewsnow desk
December 18, 2021
in STATE
Reading Time: 1 min read
0
#COVID19KARNATAKA : ಆಮ್ಲಜನಕ ಕೊರತೆಯಿಂದ ಸೋಂಕಿತರ ದುರ್ಮರಣ; ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ  ಮನಕಲುಕುವ ಪತ್ರ ಬರೆದ ಮಾಜಿ ಸ್ಪೀಕರ್ ಕೆ.ಆರ್. ರಮೇಶ್‌ ಕುಮಾರ್

ರಮೇಶ್‌ ಕುಮಾರ್‌

1k
VIEWS
FacebookTwitterWhatsuplinkedinEmail

ರಮೇಶ್‌ ಕುಮಾರ್‌ ಮೇಲೆ ಹೆಚ್‌ʼಡಿಕೆ ಟೀಕಾ ಪ್ರಹಾರ; ಮಹಿಳೆಯರಿಗೆ ಅಪಮಾನ ಮಾಡಿದ್ದೇ ಸದನದ ದಾಖಲೆಯೇ?


ನವದೆಹಲಿ: ಎರಡು ಬಾರಿ ಸ್ಪೀಕರ್‌ ಆಗಿದ್ದವರು, ಸಾಂವಿಧಾನಿಕ ಹುದ್ದೆಯಲ್ಲಿದ್ದವರು, ಸ್ವಯಂ ಘೋಷಿತ ಸಂವಿಧಾನ ತಜ್ಞರು ಆಗಿರುವ ರಮೇಶ್‌ ಕುಮಾರ್‌ ಅವರು ಸದನದಲ್ಲಿ ಮಹಿಳೆಯರಿಗೆ ಘೋರ ಅಪಮಾನ ಮಾಡಿದ್ದಾರೆ ಮಾತ್ರವಲ್ಲದೆ; ಮಹಿಳೆಯರ ಜತೆಗೆ ಸಭಾಧ್ಯಕ್ಷ ಪೀಠಕ್ಕೂ ಅಪಮಾನ ಮಾಡಿದ್ದಾರೆ ಎಂದು ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.

ನವದೆಹಲಿಯಲ್ಲಿಂದು ಮಾಧ್ಯಮಗಳ ಜತೆ ಮಾತನಾಡುವಾಗ ಈ ಬಗ್ಗೆ ಕೇಳಲಾದ ಪ್ರಶ್ನೆಗೆ ಖಡಕ್‌ ಆಗಿ ಉತ್ತರಿಸಿದ ಅವರು; ಎರಡೂ ಸಲ ಸ್ಪೀಕರ್‌ ಆಗಿದ್ದ ಮಹಾನುಭಾವರು ಅದೇ ಪೀಠದಲ್ಲಿ ಕುಳಿತಿದ್ದವರ ಕಲಾಪ ನಡೆಸುವ ಕಷ್ಟ, ಒತ್ತಡದ ಬಗ್ಗೆ ಮಾತನಾಡುವಾಗ ಅವರ ಪರಿಸ್ಥಿತಿಯನ್ನು ಅತ್ಯಾಚಾರಕ್ಕೆ ಒಳಗಾಗುವ ಅಸಹಾಯಕ ಮಹಿಳೆಗೆ ಹೋಲಿಸುವ ಮೂಲಕ ಸಂವಿಧಾನದತ್ತವಾದ ಸಭಾಧ್ಯಕ್ಷರ ಪೀಠಕ್ಕೆ ಕ್ಷಮಾರ್ಹವಲ್ಲದ ಅಪಮಾನ ಮಾಡಿದ್ದಾರೆ. ಜತೆಗೆ, ಸದನದಲ್ಲಿ ಮಹಿಳೆಯರಿಗೂ ಅಪಮಾನ ಮಾಡಿದ್ದಾರೆ. ಕೆಟ್ಟ ಶಬ್ದಗಳನ್ನು ಬಳಕೆ ಮಾಡುವ ಮೂಲಕ ಇಡೀ ಸ್ತ್ರೀ ಕುಲವನ್ನೇ ಹಿಯ್ಯಾಳಿಸಿದ್ದಾರೆ. ಬುದ್ಧಿಜೀವಿಯ ಸೋಗಿನಲ್ಲಿ ತಮ್ಮ ವಿಕೃತಿ ಪ್ರದರ್ಶನ ಮಾಡಿದ್ದಾರೆ. ಅವರು ಪದೇ ಪದೆ ಇದನ್ನೇ ಮಾಡುತ್ತಿದ್ದಾರೆ ಎಂದು ಕುಮಾರಸ್ವಾಮಿ ಅವರು ಕುಟುವಾಗಿ ಟೀಕಿಸಿದರು.

ಕಲಾಪ ನಡೆಸುವ ಒತ್ತಡದಲ್ಲಿರುವ ಸಭಾಧ್ಯಕ್ಷರ ಪೀಠದ ಎದುರೇ ಈ ರೀತಿ ಅಸಭ್ಯವಾಗಿ ಮಾತನಾಡುವುದು ಸರಿಯಲ್ಲ, ಇದು ಸಂಸದೀಯ ವ್ಯವಸ್ಥೆಗೆ ಭೂಷಣವಲ್ಲ ಎಂದು ಅವರು ಅಭಿಪ್ರಾಯಪಟ್ಟರು.

ಮಾಜಿ ಸಿಎಂ ಆಗಿ, ಶಾಸಕರಾಗಿ ಸದನ ನಡೆಯುವ ಸಂದರ್ಭದಲ್ಲಿ ದೆಹಲಿಯಲ್ಲಿ ಇರುವ ಕುರಿತು ಮಾಧ್ಯಮಗಳ ಪ್ರಶ್ನೆಗೆ ಮಾಜಿ ಮುಖ್ಯಮಂತ್ರಿಗಳು ಉತ್ತರಿಸಿದ್ದು ಹೀಗೆ;

ಸದನದ ಕಲಾಪದಲ್ಲಿ ರಾಜ್ಯದ ಅಭಿವೃದ್ಧಿಗೆ ಸಂಬಂಧಿಸಿದ ಯಾವ ವಿಚಾರಗಳು ಚರ್ಚೆಯಾಗಿವೆ. ಕಲಾಪದಲ್ಲಿ ಏನೆಲ್ಲಾ ಚರ್ಚೆ ಆಗಿದೆ ಎನ್ನುವುದನ್ನು ನಾನು ಗಮನಿಸಿದ್ದೇನೆ.

ನನ್ನ ತಂದೆಯವರ ಜೀವನ ಚರಿತ್ರೆ ಪುಸ್ತಕ ಬಿಡುಗಡೆ ಹಾಗೂ ನನ್ನ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ನಾನು ಮೊದಲೇ ಸ್ಪೀಕರ್ ಅವರ ಬಳಿ ಅನುಮತಿ ಪಡೆದು ದೆಹಲಿಗೆ ಬಂದಿದ್ದೇನೆ.

ಕಲಾಪದಲ್ಲಿ ನಡೆಯುತ್ತಿರುವ ಪ್ರತಿಯೊಂದನ್ನು ನಾನು ನೋಡುತ್ತಿದ್ದೇನೆ. ರಾಜ್ಯದ ಅನುಭವಿ ರಾಜಕಾರಣಿ, ಸ್ಪೀಕರ್ ಆಗಿದ್ದವರು ಮಹಿಳೆಯರ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ಈ ವಿಚಾರದಲ್ಲಿ ರಮೇಶ್ ಕುಮಾರ್ ಅವರ ಮಾತು, ಸ್ಪೀಕರ್ ನಡೆದುಕೊಂಡ ರೀತಿ ಖಂಡನೀಯ. ಮಹಿಳೆಯರ ಬಗ್ಗೆ ಮಾತನಾಡುವಾಗ ಆ ಪದ ಬಳಕೆ ಅಗತ್ಯ ಏನಿತ್ತು? ಮೊದಲು ಮಾತನಾಡಿ ನಂತರ ಕ್ಷಮೆ ಕೋರಿದರೆ ಮುಗಿಯುವುದಿಲ್ಲ. ಇವರೆಲ್ಲಾ ಪಾರ್ಲಿಮೆಂಟರಿ ವ್ಯವಸ್ಥೆಯನ್ನು ಕುಲಗೆಡಿಸುತ್ತಿದ್ದಾರೆ. ಮಹಿಳೆಯರ ಬಗ್ಗೆ ಹಗುರವಾಗಿ ಮಾತನಾಡಿರುವುದೇ ಸದನದ ದಾಖಲೆಯೇ?

ಮಂಗಳವಾರದಿಂದ ನಾನು ಸದನದಲ್ಲಿ ಭಾಗವಹಿಸುತ್ತಿದ್ದೇನೆ. ಒಂದು ವೇಳೆ ಈ ವಿಚಾರ ಬಂದರೆ ನಾನು ಮಾತನಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.

Tags: abuse words against womenBelagavi assembly sessioncknewsnowCongressformer speakerhd kumaraswamyjdskr Rameshkumarnews
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಉದ್ಧವ್‌ ಠಾಕ್ರೆ ಉದ್ಧಟತನಕ್ಕೆ ತಿರುಗೇಟು ಕೊಟ್ಟ ಹೆಚ್‌ಡಿಕೆ

ಉದ್ಧವ್‌ ಠಾಕ್ರೆ ಉದ್ಧಟತನಕ್ಕೆ ತಿರುಗೇಟು ಕೊಟ್ಟ ಹೆಚ್‌ಡಿಕೆ

Leave a Reply Cancel reply

Your email address will not be published. Required fields are marked *

Recommended

20,000 ಕೋಟಿ ರೂ. ಟೆಂಡರ್‌ ಬಗ್ಗೆ ಶಾಸಕ ಹೆಚ್‌.ವಿಶ್ವನಾಥ್ ಆರೋಪಕ್ಕೆ ಸ್ಪಷ್ಟನೆ ಕೊಟ್ಟ ಜಲ ಸಂಪನ್ಮೂಲ ಇಲಾಖೆ ಕಾರ್ಯದರ್ಶಿ!!

20,000 ಕೋಟಿ ರೂ. ಟೆಂಡರ್‌ ಬಗ್ಗೆ ಶಾಸಕ ಹೆಚ್‌.ವಿಶ್ವನಾಥ್ ಆರೋಪಕ್ಕೆ ಸ್ಪಷ್ಟನೆ ಕೊಟ್ಟ ಜಲ ಸಂಪನ್ಮೂಲ ಇಲಾಖೆ ಕಾರ್ಯದರ್ಶಿ!!

5 years ago
ಆಪಲ್‌ ಐಫೋನ್-‌12 ತಯಾರಿಸುತ್ತಿದ್ದ ಕೋಲಾರದ ವಿಸ್ಟ್ರಾನ್‌ ಕಂಪನಿಯಲ್ಲಿ ದಂಗೆ ಎದ್ದ 8,000 ಕಾರ್ಮಿಕರು; ವಾಹನಗಳಿಗೆ ಬೆಂಕಿ, ಕಾರ್ಖಾನೆ ಧ್ವಂಸ

ಕಾರ್ಮಿಕರಿಗೆ ತೊಂದರೆಯಾಗಿದ್ದು ನಿಜ ಎಂದು ಒಪ್ಪಿಕೊಂಡ ಕೋಲಾರದ ವಿಸ್ಟ್ರಾನ್;‌ ‌ಕಷ್ಟ ಹೇಳಿಕೊಳ್ಳಲು ಕಾರ್ಮಿಕರಿಗೆ ಹೆಲ್ಪ್‌ಲೈನ್‌, ಕಂಪನಿಯ ಭಾರತೀಯ ಉಪಾಧ್ಯಕ್ಷರ ತಲೆದಂಡ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ