• About
  • Advertise
  • Careers
  • Contact
Thursday, October 29, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ಕನ್ನಡದ ಮೇಲೆ ಹಿಂದಿ ಸವಾರಿ; ಬಿಜೆಪಿ ಸರಕಾರ ಬಂದ ಮೇಲೆ ಕನ್ನಡಿಗರ ಮೇಲೆ ದಬ್ಬಾಳಿಕೆ ಹೆಚ್ಚಿದೆ!

cknewsnow desk by cknewsnow desk
December 27, 2021
in NATION, STATE
Reading Time: 2 mins read
0
ಕನ್ನಡದ ಮೇಲೆ ಹಿಂದಿ ಸವಾರಿ; ಬಿಜೆಪಿ ಸರಕಾರ ಬಂದ ಮೇಲೆ ಕನ್ನಡಿಗರ ಮೇಲೆ ದಬ್ಬಾಳಿಕೆ ಹೆಚ್ಚಿದೆ!
928
VIEWS
FacebookTwitterWhatsuplinkedinEmail

ಕನ್ನಡಿಗರಿಗೆ ಅನ್ಯಾಯ ಮಾಡಿದ ಕೇಂದ್ರ ಸರಕಾರ: ಹೆಚ್‌ಡಿಕೆ ಕಿಡಿಕಿಡಿ

ಬಿಡದಿ: ಕೇಂದ್ರದಲ್ಲಿ ಬಿಜೆಪಿ ಸರಕಾರ ಬಂದ ಮೇಲೆ ಕನ್ನಡ ಮತ್ತು ಕನ್ನಡಿಗರ ಮೇಲೆ ಹೆಚ್ಚು ದಬ್ಬಾಳಿಕೆ ನಡೆಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು.

ಬಿಡದಿಯಲ್ಲಿ ಇಂದು ಪುರಸಭೆ ಚುನಾವಣೆಯಲ್ಲಿ ಮತದಾನ ಮಾಡಿದ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು.

ರಾಷ್ಟೀಯ ಪರಿಕ್ಷಾ ಸಂಸ್ಥೆ ಭಾನುವಾರ ನಡೆಸಿರುವ ಯುಜಿಸಿ – ಎನ್ ಇಟಿ ಪರೀಕ್ಷೆಯ ಕನ್ನಡ ಭಾಷಾ ಐಚ್ಛಿಕ ಪ್ರಶ್ನೆ ಪತ್ರಿಕೆಯಲ್ಲಿ ಇದ್ದ 100 ಪ್ರಶ್ನೆಗಳಲ್ಲಿ 90 ಪ್ರಶ್ನೆಗಳು ಹಿಂದಿಯಲ್ಲಿ ಇದ್ದರೆ, ಉಳಿದ ಹತ್ತು ಪ್ರಶ್ನೆಗಳು ಮಾತ್ರ ಕನ್ನಡಲ್ಲಿ ಇದ್ದವು. ಇದು ಅತ್ಯಂತ ಖಂಡನೀಯ ಎಂದರು.

ಪದೇ ಪದೆ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ. ಕೇಂದ್ರ ಸರ್ಕಾರದ ನಿಲುವು ಹಾಗೂ ರಾಜ್ಯ ಸರ್ಕಾರದ ನಿರ್ಲಕ್ಷ್ಯ ಮನೋಭಾವದ ಬಗ್ಗೆ ಮೊದಲಿನಿಂದಲೂ ವಿರೋಧಿಸಿದ್ದೇನೆ. ಕನ್ನಡವನ್ನು ಸಂಪೂರ್ಣವಾಗಿ ಕಡೆಗಣಿಸುವ ಹುನ್ನಾರ ನಡೆಯುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಈ ಬಗ್ಗೆ ರಾಜ್ಯ ಸರ್ಕಾರ ಗಂಭೀರವಾಗಿ ಚಿಂತಿಸಬೇಕು. ರಾಜ್ಯದ ಜನರು ಸಹ ಹಿಂದಿ ಹೇರಿಕೆ ವಿರುದ್ಧ ದನಿ ಎತ್ತಬೇಕಿದೆ.ಕನ್ನಡ ಉಳಿಸುವ ನಿಟ್ಟಿನಲ್ಲಿ ಹೋರಾಟ ಮಾಡಬೇಕಿದೆ. ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಬಂದ ಮೇಲೆ ಇದು ಹೆಚ್ಚುತ್ತಿದೆ. ಹಿಂದಿ ಹೇರಿಕೆ ವಿಚಾರವಾಗಿ ಕೇಂದ್ರದ ನಿಲುವು ಖಂಡಿಸುತ್ತೇನೆ ಎಂದ ಅವರು; ಕನ್ನಡ ಭಾಷೆಯನ್ನು ಅವಮಾನ ಮಾಡಬೇಡಿ. ಕನ್ನಡಿಗರ ಸ್ವಾಭಿಮಾನವನ್ನ ಕೆಣಕಬೇಡಿ ಎಂದು ಕೇಂದ್ರಕ್ಕೆ ಎಚ್ಚರಿಕೆ ನೀಡಿದರು.

ಅಲ್ಲದೆ, ಬೆಳಗ್ಗೆಯೇ ಈ ಬಗ್ಗೆ ಟ್ವೀಟ್‌ ಮಾಡಿದ್ದ ಕುಮಾರಸ್ವಾಮಿ ಅವರು ಕೇಂದ್ರದ ಮೇಲೆ ಪ್ರಹಾರ ನಡೆಸಿದ್ದರು.

"ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ."

ನಾನು ಮೊದಲಿನಿಂದಲೂ ಹೇಳುತ್ತಿರುವ ಮಾತಿದು. ಈ ಮಾತು ಪದೇಪದೆ ಮರುಕಳಿಸುತ್ತಿರುವುದು ನನಗೆ ಬಹಳ ನೋವುಂಟು ಮಾಡಿದೆ. ಕೇಂದ್ರ ಸರಕಾರದ ಉದ್ಯೋಗ ಅವಕಾಶಗಳಲ್ಲಿ ಕನ್ನಡಿಗರನ್ನು ಹತ್ತಿಕ್ಕುವ ಮತ್ತು ಅವಕಾಶಗಳನ್ನು ನಿರಾಕರಿಸುವ ಕುತಂತ್ರ ನಿರಂತರವಾಗಿ ನಡೆಯುತ್ತಲೇ ಇದೆ.1/6 pic.twitter.com/quJpxbr5Mr

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) December 27, 2021

ನಿನ್ನೆ ರಾಷ್ಟ್ರೀಯ ಪರಿಕ್ಷಾ ಸಂಸ್ಥೆ ನಡೆಸಿದ ಪರೀಕ್ಷೆಯಲ್ಲಿ ಯುಜಿಸಿ – ಎನ್ ಇಟಿ ಕನ್ನಡ ಐಚ್ಛಿಕ ಭಾಷಾ ಪಶ್ನೆ ಪತ್ರಿಕೆಯ 100 ಪ್ರಶ್ನೆಗಳಲ್ಲಿ 90 ಪ್ರಶ್ನೆಗಳು ಹಿಂದಿಯಲ್ಲೇ ಇದ್ದವು. ಅದನ್ನು ಕಂಡ ಅಭ್ಯರ್ಥಿಗಳು ಗೊಂದಲಕ್ಕೆ ಒಳಗಾಗಿ ಪರೀಕ್ಷೆಯನ್ನು ಬಹಿಷ್ಕರಿಸಿ, ಪ್ರತಿಭಟನೆ ನಡೆಸಿದ್ದಾರೆ.2/6

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) December 27, 2021

ಇದು ಕನ್ನಡದ ಮೇಲಿನ ತಾತ್ಸಾರ ಹಾಗೂ ಹಿಂದಿ ಹೇರಿಕೆಯ ವಿಪರೀತ. ಅಲ್ಲದೆ, ಪರೀಕ್ಷೆ ನಡೆಸಿದ ಸಂಸ್ಥೆ ಮಾಡಿರುವ ಕನ್ನಡ ದ್ರೋಹ. ಉದ್ದೇಶಪೂರ್ವಕವಾಗಿಯೇ ಇಂಥ ಕೃತ್ಯಗಳನ್ನು ಕನ್ನಡದ ವಿರುದ್ಧ ಎಸಗಲಾಗುತ್ತಿದೆ. ಕನ್ನಡಿಗರ ಬಗ್ಗೆ ಈ ಕಠಿಣತೆ ಏಕೆ?3/6

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) December 27, 2021

ರೈಲ್ವೆ, ಬ್ಯಾಂಕಿಂಗ್ ಸೇರಿದಂತೆ ಕೇಂದ್ರ ಸರಕಾರದ ಇನ್ನು ಹಲವಾರು ಉದ್ಯೋಗ ಅವಕಾಶಗಳಲ್ಲಿ ಕನ್ನಡದ ಪ್ರತಿಭಾವಂತ ಯುವಜನರಿಗೆ ಅನ್ಯಾಯ ಆಗುತ್ತಿದೆ. ಕನ್ನಡಿಗರ ಕಡೆಗಣನೆ ದೇಶಕ್ಕೆ ಒಳ್ಳೆಯದಲ್ಲ. ನಮ್ಮ ಮೌನ ನಮ್ಮ ದೌರ್ಬಲ್ಯವಲ್ಲ ಎಂಬುದು ನೆನಪಿರಲಿ. 4/6

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) December 27, 2021

ಈ ಅನ್ಯಾಯವನ್ನು ಸಹಿಸುವ ಪ್ರಶ್ನೆಯೇ ಇಲ್ಲ. ಕೂಡಲೇ ಪರಿಕ್ಷಾ ಸಂಸ್ಥೆಯು ಆಗಿರುವ ಲೋಪ ಸರಿಮಾಡಿ ಪುನಾ ಪರೀಕ್ಷೆ ನಡೆಸಬೇಕು. ಎರಡು ವರ್ಷಗಳಿಂದ ಪರಿಕ್ಷೆಗಾಗಿ ತಯಾರಿ ನಡೆಸಿರುವ ಅಭ್ಯರ್ಥಿಗಳಿಗೆ ನ್ಯಾಯ ಸಿಗುವಂತೆ ಕ್ರಮ ವಹಿಸಬೇಕು.5/6

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) December 27, 2021

ಪರೀಕ್ಷೆ ಅವ್ಯವಸ್ಥೆ ಆಗರವಾಗಿತ್ತು ಎನ್ನುವುದು ತಿಳಿದುಬಂದಿದೆ. ಅದನ್ನು ಸರಿಪಡಿಸಿ ಉತ್ತಮ ರೀತಿಯಲ್ಲಿ ಪರೀಕ್ಷೆ ನಡೆಸಬೇಕು. 6/6#ಹಿಂದಿ_ಹೇರಿಕೆ_ನಿಲ್ಲಿಸಿ

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) December 27, 2021

ರಾತ್ರಿ ಕರ್ಫ್ಯೂ ನಿರುಪಯುಕ್ತ

ಕೋವಿಡ್ ಹೊಸ ತಳಿ ಒಮಿಕ್ರಾನ್ ನಿಯಂತ್ರಣಕ್ಕೆ ಸರಕಾರ ಹೇರುತ್ತಿರುವ ರಾತ್ರಿ ಕರ್ಫ್ಯೂ ನಿರುಪಯುಕ್ತ ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.

ನೈಟ್ ಕರ್ಫ್ಯೂ ಹಾಗೂ ಶೇ.50ರಷ್ಟು ನಿರ್ಬಂಧದಿಂದ ಯಾವುದೇ ಪ್ರಯೋಜನ ಇಲ್ಲ. ಕಳೆದ 2 ವರ್ಷದಿಂದ ವ್ಯಾಪಾರಸ್ಥರು ಪೆಟ್ಟು ತಿಂದಿದ್ದಾರೆ. ಈಗಾಗಲೇ ವ್ಯಾಪಾರಸ್ಥರು ಸರಕಾರಕ್ಕೆ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಆದರೂ ರಾಜ್ಯ ಸರ್ಕಾರ ಇಬ್ಬಗೆಯ ನೀತಿ ಹೊಂದಿದೆ. ರಾಜಕೀಯ ಸಭೆಗೆ ಏಕೆ ನಿರ್ಬಂಧವಿಲ್ಲ. ರಾಜಕೀಯ ಸಭೆಗೆ ಎಷ್ಟು ಜನ ಬೇಕಾದರೂ ಸೇರಬಹುದಾ? ಎಂದು ಅವರು ಪ್ರಶ್ನಿಸಿದರು.

ಜೆಡಿಎಸ್ ಪಕ್ಷಕ್ಕೆ 20ಕ್ಕಿಂತ ಅಧಿಕ ಸ್ಥಾನ

ಬಿಡದಿ ಪುರಸಭೆ ಚುನಾವಣೆಯಲ್ಲಿ ಜೆಡಿಎಸ್ 20ಕ್ಕಿಂತ ಅಧಿಕ ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಕುಮಾರಸ್ವಾಮಿ ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ಈ ಬಾರಿ ಚುನಾವಣೆಗೆ ಭಾರೀ ಪೈಪೋಟಿ ಇತ್ತು. ಈ ಚುನಾವಣೆಯಲ್ಲಿ ನಮ್ಮ ಪಕ್ಷದ ಹೆಚ್ಚಿನ ಅಭ್ಯರ್ಥಿಗಳು ಗೆಲ್ಲುತ್ತಾರೆ. ಎರಡು ದಿನಗಳ ಕಾಲ ಪ್ರಚಾರ ನಡೆಸಿದ್ದೇನೆ. ಈ ಭಾಗದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇವೆ. ಹೀಗಾಗಿ ಮತದಾರರು ಕೈ ಹಿಡಿಯುತ್ತಾರೆ. 20ಕ್ಕಿಂತ ಅಧಿಕ ಸ್ಥಾನದಲ್ಲಿ ಜೆಡಿಎಸ್​ ಗೆಲುವು ಸಾಧಿಸಲಿದೆ ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಮಾಗಡಿ ಶಾಸಕರಾದ ಮಂಜುನಾಥ್ ಮುಂತಾದವರು ಜತೆಯಲ್ಲಿದ್ದರು.

Tags: central governamentcknewsnowhd kumaraswamykannadakannadigaruNational Eligibility TestNETnewsUGC
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

by cknewsnow desk
October 28, 2026
0

ಬೆಂಗಳೂರಿನಲ್ಲಿ 43.13% ಮತದಾರರ ಪ್ರಮಾಣ ಕುಸಿತ

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

by cknewsnow desk
October 25, 2026
0

ಹಾಲಿ ಮುಖ್ಯಮಂತ್ರಿ ವಿರುದ್ಧ ಕೇಂದ್ರ ಸಚಿವರ ಗಂಭೀರ ಆರೋಪ; ಈಗಿನ ಮಹಾನ್ ಮುಖ್ಯಮಂತ್ರಿಗಳೇ ಸ್ಟಿಂಗ್ ಮೂಲಪುರುಷ

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

by cknewsnow desk
October 25, 2026
0

ಸ್ಟಿಂಗ್ ಆಪರೇಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ್ದು ಇಬ್ಬಗೆ ನೀತಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

by cknewsnow desk
October 25, 2026
0

ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ; #kpsc ಹಗರಣದ ದಿಕ್ಕು ತಪ್ಪಿಸಲು ಪ್ರಿಯಾಂಕ್ ಖರ್ಗೆ ಒದ್ದಾಟ

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

by cknewsnow desk
October 22, 2026
0

ಬೇಸತ್ತು ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದ ಕೇಂದ್ರ ಸಚಿವ #HDK

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

by cknewsnow desk
October 22, 2026
0

ಮೈಸೂರು ದಸರಾದಲ್ಲಿ ಅವಮಾನ ಪ್ರಸಂಗ; ಬಾಯಲ್ಲಿ ಜಾತ್ಯತೀತ ತತ್ವ, ಆಚರಣೆಯಲ್ಲಿ ಅಸೃಶ್ಯತೆ!; ಕಾಂಗ್ರೆಸ್ ವಿರುದ್ಧ ಜೆಡಿಎಸ್ ವಾಗ್ದಾಳಿ

Next Post
ಸಿಎಂ ಮಂಡಿ ನೋವಿಗೆ ನಾಟಿ ವೈದ್ಯರಿಂದ ಚಿಕಿತ್ಸೆ

ಸಿಎಂ ಮಂಡಿ ನೋವಿಗೆ ನಾಟಿ ವೈದ್ಯರಿಂದ ಚಿಕಿತ್ಸೆ

Leave a Reply Cancel reply

Your email address will not be published. Required fields are marked *

Recommended

ಪ್ರಧಾನಿಯನ್ನು ಭೇಟಿಯಾಗೋಕೆ ಸಿದ್ದರಾಮಯ್ಯನ ಪರ್ಮಿಷನ್‌ ಬೇಕಾ? ನಾನ್‌ಸೆನ್ಸ್‌ ಎಂದ ದೇವೇಗೌಡರು

ಪ್ರಧಾನಿಯನ್ನು ಭೇಟಿಯಾಗೋಕೆ ಸಿದ್ದರಾಮಯ್ಯನ ಪರ್ಮಿಷನ್‌ ಬೇಕಾ? ನಾನ್‌ಸೆನ್ಸ್‌ ಎಂದ ದೇವೇಗೌಡರು

5 years ago
ಜೆಡಿಎಸ್ ಅಧಿಕಾರಕ್ಕೆ ಬಂದರೆ ಕೃಷಿ ಪಂಪುಸೆಟ್ಟುಗಳಿಗೆ 24/7 ಉಚಿತ ವಿದ್ಯುತ್

ಚಲುವರಾಯಸ್ವಾಮಿ ಪಾಪದ ದುಡ್ಡಿನಲ್ಲಿ ವಿದೇಶಕ್ಕೆ ಹೋಗಲಾ?

3 years ago

Popular News

  • #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    0 shares
    Share 0 Tweet 0
  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0
  • 10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

October 28, 2026
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

October 25, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ