• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home POLITICS

ರಾಜ್ಯದಲ್ಲಿ ಕಾಂಗ್ರೆಸ್‌ ಅಲೆ ಎದ್ದಿದೆ ಎಂದ ಸಿದ್ದು

cknewsnow desk by cknewsnow desk
December 30, 2021
in POLITICS, STATE
Reading Time: 1 min read
0
ರಾಜ್ಯದಲ್ಲಿ ಕಾಂಗ್ರೆಸ್‌ ಅಲೆ ಎದ್ದಿದೆ ಎಂದ ಸಿದ್ದು
932
VIEWS
FacebookTwitterWhatsuplinkedinEmail

“ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶ ಗಮನಿಸಿದರೆ ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ಅಲೆಯಿದೆ ಎಂಬುದು ಸ್ಪಷ್ಟವಾಗಿ ಕಾಣುತ್ತಿದೆ”

ಬೆಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾವಣೆಯ ಬಗ್ಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಖುಷಿಯಾಗಿದ್ದಾರೆ. ಅವರು ಈ ಬಗ್ಗೆ ಮಾತನಾಡಿದ್ದಾರೆ. ಅವರು ಹೇಳಿರುವುದಿಷ್ಟು;

ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಇಂದು ತಮ್ಮ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಾ ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ಗಾಳಿ ಬೀಸುತ್ತಿದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತ ಪಡೆದು ಅಧಿಕಾರ ಹಿಡಿಯುವುದು ನೂರಕ್ಕೆ ನೂರು ಖಚಿತ ಎಂದರು.

ಸ್ಥಳೀಯ ಸಂಸ್ಥೆಗಳ ಚುನಾವಣೆಯ ಜನರ ತೀರ್ಪು ಇಂದು ಹೊರಬಿದ್ದಿದೆ. ಚುನಾವಣೆಯಾದ 1187 ಸ್ಥಾನಗಳ ಪೈಕಿ 500 ಕ್ಕೂ ಅಧಿಕ ಸ್ಥಾನಗಳನ್ನು ಕಾಂಗ್ರೆಸ್ ಪಕ್ಷ ಗೆದ್ದಿದೆ. ಫಲಿತಾಂಶದಿಂದ ಜನಾಭಿಪ್ರಾಯ ನಮ್ಮ ಪರವಾಗಿದೆ ಎಂಬುದು ಕಂಡು ಬರುತ್ತದೆ. ಈ ಫಲಿತಾಂಶ ನಮಗೆ ಖುಷಿ ಕೊಟ್ಟಿದೆ.

ಚುನಾವಣೆಯಲ್ಲಿ ಹಣ ಖರ್ಚು ಮಾಡಿ ಗೆಲ್ಲುತ್ತೇವೆ ಎಂದು ಬಿಜೆಪಿಯವರು ಜಂಭದಿಂದ ವರ್ತಿಸುತ್ತಾರೆ, ಆದರೆ ಬರೀ ಹಣವೊಂದೆ ಚುನಾವಣೆಯಲ್ಲಿ ಗೆಲ್ಲಲು ಸಾಕಾಗಲ್ಲ. ಜನರ ಪರವಾಗಿ ಕೆಲಸ ಮಾಡಬೇಕು, ಪ್ರಾಮಾಣಿಕ ಆಡಳಿತ ಕೊಡಬೇಕು. ಆಗ ಜನ ಮತ ನೀಡುತ್ತಾರೆ.

ಈ ಹಿಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ನಾವು ಮತ್ತು ಬಿಜೆಪಿ ಎರಡೂ ಪಕ್ಷಗಳು ತಲಾ ಹನ್ನೊಂದು ಸ್ಥಾನಗಳನ್ನು ಗೆದ್ದಿದ್ದರೂ ಕೂಡ ಶೇಕಡಾವಾರು ಮತಗಳ ಪ್ರಮಾಣ ನಮಗೆ ಹೆಚ್ಚು ಬಂದಿದೆ. ನಮಗೆ 48% ಮತ ಬಂದಿದ್ದರೆ, ಬಿಜೆಪಿ ಗೆ 41% ಬಂದಿತ್ತು. ಡಿಸೆಂಬರ್ 27 ರಂದು 1187 ಸ್ಥಾನಗಳಿಗೆ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ನಮ್ಮ ಪಕ್ಷ 500 ಕ್ಕೂ ಅಧಿಕ ಸ್ಥಾನಗಳನ್ನು ಗೆದ್ದಿದೆ. ಬಿಜೆಪಿ 430, ಜೆ.ಡಿ.ಎಸ್ 45, ಇತರೆ 207 ಸ್ಥಾನಗಳನ್ನು ಗೆದ್ದಿದ್ದಾರೆ. ಈ ಫಲಿತಾಂಶದಿಂದ ಬಿಜೆಪಿಯ ವಿರುದ್ಧ ಜನಾಭಿಪ್ರಾಯ ಇದೆ ಎಂಬುದು ಸ್ಪಷ್ಟವಾಗಿ ಗೊತ್ತಾಗುತ್ತದೆ. ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಬೇಕು ಎಂದು ಜನ ಭಾವಿಸಿರುವುದು ಕಾಣುತ್ತದೆ.

ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶವನ್ನು ನಾನು ಯಾವಾಗಲೂ ಮುಂದಿನ ಚುನಾವಣೆಗಳ ದಿಕ್ಸೂಚಿ ಎಂದು ಹೇಳಲ್ಲ. ಆದರೆ ಇದರಿಂದ ಜನರ ಒಲವು ಯಾರ ಕಡೆಗಿದೆ ಎಂದು ತಿಳಿಯುತ್ತೆ ಎಂಬುದು ನನ್ನ ಅಭಿಪ್ರಾಯ. ರಾಜ್ಯ ಬಿಜೆಪಿ ಸರ್ಕಾರದ ದುರಾಡಳಿತದಿಂದ ಜನ ರೋಸಿ ಹೋಗಿದ್ದಾರೆ. ಭ್ರಷ್ಟಾಚಾರ ಮಿತಿಮೀರಿದೆ, ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ ಇದರಿಂದ ಜನರ ನಿರೀಕ್ಷೆ ಹುಸಿಯಾಗಿದೆ. ಹೀಗಾಗಿ ಕಾಂಗ್ರೆಸ್ ಪರವಾದ ಗಾಳಿ ಬೀಸುತ್ತಿದೆ.

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳನ್ನು ಬೆಂಬಲಿಸಿ, ಮತ ನೀಡಿದ ಎಲ್ಲಾ ಮತದಾರರಿಗೆ ಮತ್ತು ಅಭ್ಯರ್ಥಿಗಳ ಪರವಾಗಿ ದುಡಿದ ಎಲ್ಲಾ ನಾಯಕರು, ಕಾರ್ಯಕರ್ತರಿಗೆ ವೈಯಕ್ತಿಕವಾಗಿ ಮತ್ತು ಪಕ್ಷದ ಪರವಾಗಿ ಧನ್ಯವಾದ ಅರ್ಪಿಸುತ್ತೇನೆ. ಗೆದ್ದಿರುವ ಅಭ್ಯರ್ಥಿಗಳಿಗೆ ಅಭಿನಂದನೆಗಳು.

ಪಕ್ಷ ಇಂದು ಪ್ರಬಲ ಸಂಘಟನೆಯಾಗಿ ಬೆಳೆಯುತ್ತಿದೆ. ಇದನ್ನು ನಾವು ಹೀಗೆಯೇ ಮುಂದುವರೆಸಿಕೊಂಡು ಹೋಗುತ್ತೇವೆ ಜೊತೆಗೆ ಕಾಂಗ್ರೆಸ್ ಪಕ್ಷ ನಮಗೆ ಬೇಕು ಎಂದು ಜನರೇ ಬಯಸುತ್ತಿದ್ದಾರೆ. ಹೀಗಾಗಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಪಕ್ಷ ನೂರಕ್ಕೆ ನೂರು ಬಹುಮತ ಪಡೆದು ಅಧಿಕಾರ ಹಿಡಿಯುತ್ತದೆ.

ಹಿಂದೂ ದೇವಾಲಯಗಳನ್ನು ಸರ್ಕಾರ ಅಭಿವೃದ್ಧಿ ಪಡಿಸುವ ಕೆಲಸ ಮಾಡಿದರೆ ನಮ್ಮ ತಕರಾರು ಖಂಡಿತಾ ಇಲ್ಲ. ಸಾರಾಸಗಟಾಗಿ ಎಲ್ಲಾ ದೇವಾಲಯಗಳನ್ನು ಸ್ವತಂತ್ರಗೊಳಿಸುವ ಮೊದಲು ದೇವಾಲಯಗಳ ಆರ್ಥಿಕ ಪರಿಸ್ಥಿತಿಯನ್ನು ಒಮ್ಮೆ ಪರಿಶೀಲಿಸಬೇಕು. ಕಾರಣ ರಾಜ್ಯದ ಸಾಕಷ್ಟು ದೇವಾಲಯಗಳು ಆರ್ಥಿಕವಾಗಿ ಸಂಕಷ್ಟದಲ್ಲಿವೆ, ಅವುಗಳನ್ನು ಸ್ವತಂತ್ರಗೊಳಿಸಿದರೆ ದೇವಾಲಯ ನಡೆಸಿಕೊಂಡು ಹೋಗುವುದು ಕಷ್ಟವಾಗಿ ಉಪಕಾರಕ್ಕಿಂತ ತೊಂದರೆಯೇ ಹೆಚ್ಚಾಗುತ್ತದೆ.

ಜನರನ್ನು ಭಾವನಾತ್ಮಕವಾಗಿ ಹಾದಿ ತಪ್ಪಿಸಲು ಸರ್ಕಾರ ಎಷ್ಟೇ ಪ್ರಯತ್ನ ಮಾಡಿದರೂ ಜನರು ಬುದ್ದಿವಂತರಿದ್ದಾರೆ. ತಾವೇನು ತೀರ್ಮಾನ ಮಾಡಬೇಕು ಅದನ್ನೇ ಜನ ಮಾಡುತ್ತಾರೆ.

ಚುನಾವಣೆಯಲ್ಲಿ ಹಣ ಖರ್ಚು ಮಾಡಿದರೆ ಗೆಲ್ಲಬಹುದು ಎಂಬ @BJP4Karnataka ಅವರ ಸೊಕ್ಕನ್ನು ರಾಜ್ಯದ ಜನ ಮುರಿದಿದ್ದಾರೆ. ಈ ಫಲಿತಾಂಶ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆ, ಭ್ರಷ್ಟಾಚಾರ ಮತ್ತು ದುರಾಡಳಿತಕ್ಕೆ ಜನತೆ ನೀಡಿರುವ ಸಂದೇಶ. 2/3#LocalBodyElection

— Siddaramaiah (@siddaramaiah) December 30, 2021

Tags: bjpcknewsnowCongressjdskarnatakaLocal Body electionsnewsPoliticssiddaramaiah
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಕರ್ನಾಟಕ ಬಂದ್ ಇಲ್ಲ

ಕರ್ನಾಟಕ ಬಂದ್ ಇಲ್ಲ

Leave a Reply Cancel reply

Your email address will not be published. Required fields are marked *

Recommended

ಗುಡಿಬಂಡೆ ಅರಣ್ಯದ 284 ಎಕರೆ ನುಂಗಿದ ಗೌರಿಬಿದನೂರು ಕಂದಾಯ ಇಲಾಖೆ

ಪೋಡಿ, ಭೂ ಪರಿವರ್ತನೆ ಸ್ಕೆಚ್, ಹದ್ದುಬಸ್ತ್ ನಕ್ಷೆಗಳಿಗೆ ಕಂದಾಯ ಕಚೇರಿಗೆ ಅಲೆಯಬೇಕಿಲ್ಲ

4 years ago
ಗುಡಿಬಂಡೆ ಕೋಚಿಮುಲ್‌ ಉಪ ಚುನಾವಣೆಯಲ್ಲಿ 40 ವರ್ಷಗಳ ಬಳಿಕ ಕಾಂಗ್ರೆಸ್‌ ಸ್ಥಾನವನ್ನು ಕಿತ್ತುಕೊಂಡ ಜೆಡಿಎಸ್‌ ಅಭ್ಯರ್ಥಿ ಆದಿನಾರಾಯಣ ರೆಡ್ಡಿ

ಗುಡಿಬಂಡೆ ಕೋಚಿಮುಲ್‌ ಉಪ ಚುನಾವಣೆಯಲ್ಲಿ 40 ವರ್ಷಗಳ ಬಳಿಕ ಕಾಂಗ್ರೆಸ್‌ ಸ್ಥಾನವನ್ನು ಕಿತ್ತುಕೊಂಡ ಜೆಡಿಎಸ್‌ ಅಭ್ಯರ್ಥಿ ಆದಿನಾರಾಯಣ ರೆಡ್ಡಿ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ