• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home GUEST COLUMN

ಅಶಕ್ತರಿಗೆ ಅಕ್ಷರ ಕಲಿಸಿದ ಅಕ್ಷರದವ್ವ

cknewsnow desk by cknewsnow desk
January 3, 2022
in GUEST COLUMN
Reading Time: 2 mins read
0
ಅಶಕ್ತರಿಗೆ ಅಕ್ಷರ ಕಲಿಸಿದ ಅಕ್ಷರದವ್ವ

Photo courtesy: @TribalArmy

1.1k
VIEWS
FacebookTwitterWhatsuplinkedinEmail

ಇಂದು ಸಾವಿತ್ರಿಬಾಯಿ ಪುಲೆ ಜನ್ಮದಿನ

by Dr.Guruprasda hawaldar

ಕೇವಲ ಮೇಲ್ವರ್ಗದವರಿಗೆ ಮಾತ್ರ ಮೀಸಲಾಗಿದ್ದ ಶಿಕ್ಷಣವನ್ನು ಶೋಷಿತ ಸಮುದಾಯಗಳಿಗೆ ಮುಟ್ಟಿಸುವ ಮೂಲಕ ಹೊಸ ಯುಗಕ್ಕೆ ನಾಂದಿ ಹಾಡಿದಂತಹ ಮಹಾನ್ ಚೇತನ ಸಾವಿತ್ರಿಬಾಯಿ ಪುಲೆ ಜನ್ಮದಿನವಿಂದು.

ಜನವರಿ 3, 1831ರಲ್ಲಿ ಮಹಾರಾಷ್ಟ್ರದ ಸತಾರ ಜಿಲ್ಲೆಯ ‘ನೈಗಾಂನ್’ನಲ್ಲಿ ಜನಿಸಿದ ಸಾವಿತ್ರಿಬಾಯಿ ಫುಲೆ ಅವರ ತಂದೆ ನವಸೆ ಪಾಟೀಲ್‌, ತಾಯಿ ಲಕ್ಷ್ಮೀಬಾಯಿ. ಅಂದಿನ ಕಾಲದ ಪದ್ಧತಿಯಂತೆ ಜ್ಯೋತಿಬಾ ಫುಲೆ ಅವರೊಂದಿಗೆ ಸಾವಿತ್ರಿಬಾಯಿ ಅವರ ಬಾಲ್ಯ ವಿವಾಹ ನಡೆಯಿತು. ಬಾಲ್ಯ ವಿವಾಹ ರೂಢಿಯಲ್ಲಿದ್ದ ಕಾಲದಲ್ಲೇ  ಸಾವಿತ್ರಿಬಾಯಿ ಫುಲೆ ಮದುವೆಯಾದಾಗ ಅವರಿಗೆ 8 ವರ್ಷ ವಯಸ್ಸು, ಜ್ಯೋತಿಬಾ ಪುಲೆ ಅವರಿಗೆ 13 ವರ್ಷ ವಯಸ್ಸಾಗಿತ್ತು. ಸಾವಿತ್ರಿಬಾಯಿ ಮನೆಯೇ ಮೊದಲ ಪಾಠಶಾಲೆ, ಪತಿ ಜ್ಯೋತಿಬಾ ಅವರೇ ಗುರುಗಳು.

ಪತಿ ಜ್ಯೋತಿಬಾ ಪುಲೆ ಅವರ ಸಹಾಯದಿಂದಾಗಿ ಪ್ರಾಥಮಿಕ ಶಿಕ್ಷಣವನ್ನು ಮನೆಯಲ್ಲಿಯೇ ಪೂರೈಸಿದ ಸಾವಿತ್ರಿಬಾಯಿ ನಂತರ ಸ್ಕಾಟಿಷ್ ಮಿಷನರಿ ಶಾಲೆಯಲ್ಲಿ ಏಳನೇ ತರಗತಿವರೆಗೆ ಅಧ್ಯಯನ ಕೈಗೊಂಡರು. ಇದಾದ ನಂತರ ಹೆಚ್ಚಿನ ಶಿಕ್ಷಣವನ್ನು ಅವರು ಜ್ಯೋತಿಬಾ ಅವರ ಸ್ನೇಹಿತರಾದ ಸಖರಂ ಯಶ್ವಂತ್ ಪರಂಜಪೆ ಮತ್ತು ಕೇಶವ್ ಶಿವರಾಮ್ ಭಾವಲ್ಕರ್ ಅವರ ಹತ್ತಿರ ಪಡೆದರು. ಇದೇ ವೇಳೆ ಸಾವಿತ್ರಿಬಾಯಿ ಎರಡು ಬೋಧನಾ ಕೋರ್ಸುಗಳನ್ನು ಸಹ ಪೂರ್ಣಗೊಳಿಸಿದರು.

ಶಿಕ್ಷಣವನ್ನು ಪೂರ್ಣಗೊಳಿಸಿದ ನಂತರ ಸಾವಿತ್ರಿಬಾಯಿ ಅವರು ಪುಣೆಯಲ್ಲಿ ಜ್ಯೋತಿಬಾ ಅವರ ಮಾರ್ಗದರ್ಶಕ ಸಗುನಾಬಾಯ್ ಅವರೊಂದಿಗೆ ಮಕ್ಕಳಿಗೆ ಕಲಿಸಲು ಪ್ರಾರಂಭಿಸಿದರು. ನಂತರ ಈ ಮೂವರು ಭೀಡೆ ವಾಡಾದಲ್ಲಿ ಶಾಲೆಯನ್ನು ಪ್ರಾರಂಭಿಸಿದರು, ಫುಲೆ ದಂಪತಿಗಳ ಕಾರ್ಯಕ್ಕೆ ಯಾವಾಗಲೂ ಬೆಂಬಲಿಸುತ್ತಿದ್ದ ತಾತ್ಯಾ ಸಾಹೇಬ್ ಬಿಡೆ ಅವರ ಮನೆಯಲ್ಲಿ ಶಿಕ್ಷಣ ಕಾರ್ಯಕ್ಕೆ ಚಾಲನೆ ನೀಡಲಾಯಿತು.

1847ರಲ್ಲಿ ತಮ್ಮ 17ನೇ ವಯಸ್ಸಿನಲ್ಲಿ ಸಾವಿತ್ರಿಬಾಯಿ ಶ್ರೀಮತಿ ಮಿಚಲ್ ಅವರ ನಾರ್ಮಲ್ ಶಾಲೆಯಲ್ಲಿ ಶಿಕ್ಷಕರ ತರಬೇತಿ ಪಡೆದರು. ಸಾವಿತ್ರಿಬಾಯಿ ಅವರು ಭಿಡೆಯವರ ಮನೆಯಲ್ಲಿ ಆರಂಭಗೊಂಡ ಕನ್ಯಾಶಾಲೆಯ ಪ್ರಧಾನ ಶಿಕ್ಷಕಿಯಾದರು. ಆ ಕಾಲದಲ್ಲಿ ಹಿಂದೂ ಸ್ತ್ರೀಯೊಬ್ಬಳು ಶಿಕ್ಷಕಿಯಾಗುವುದು ಧರ್ಮಕ್ಕೂ, ಸಮಾಜಕ್ಕೂ ವಿರುದ್ಧವಾಗಿತ್ತು. ಅವರು ಪಾಠಶಾಲೆಗೆ ಹೋರಟಾಗ ಕೆಲವರು ಕೇಕೇ ಹಾಕಿ ನಗುತ್ತಿದ್ದರು, ಅವರ ಮೇಲೆ ಕೆಸರು, ಸಗಣಿ ಎರಚಿ, ಕಲ್ಲೂ ಹೊಡೆಯುತ್ತಿದ್ದರು. ಇದರಿಂದ ಧೃತಿಗೆಡದ ಸಾವಿತ್ರಿ ಬಾಯಿಯವರು ಯಾವಾಗಲೂ ಒಂದು ಸೀರೆಯೊಂದನ್ನು ತಮ್ಮ ಬ್ಯಾಗಿನಲ್ಲಿ ಇಟ್ಟುಕೊಳ್ಳುತ್ತಿದ್ದರು.

ದಾರಿಯಲ್ಲಿ ಕೆಸರು, ಸಗಣಿ ಎರಚಿಸಿಕೊಂಡಾಗ, ಬೇಸರಗೊಳ್ಳದೆ- ನಮ್ಮ ಮೇಲೆ ಎರಚುವ ಸೆಗಣಿ, ಬೀಳುವ ಕಲ್ಲುಗಳನ್ನು ಹೂಗಳೆಂದು ಪರಿಭಾವಿಸಿ, ಶಾಲೆಯಲ್ಲಿ ಮಕ್ಕಳು ಬರುವುದರೊಳಗೆ ಬ್ಯಾಗಿನಲ್ಲಿ ಇಟ್ಟುಕೊಂಡಿರುತ್ತಿದ್ದ ಮತ್ತೊಂದು ಸೀರೆಯನ್ನು ಉಟ್ಟುಕೊಂಡು ಪಾಠಕ್ಕೆ ಅಣಿಯಾಗುತ್ತಿದ್ದರು.

1851ರ ಹೊತ್ತಿಗೆ ಬಾಲಕಿಯರಿಗೆ ಪುಲೆ ದಂಪತಿಗಳು ಮೂರು ಶಾಲೆಗಳನ್ನು ತೆರೆದರು. ಇದರಲ್ಲಿ ಸುಮಾರು 150 ವಿದ್ಯಾರ್ಥಿಗಳಿಗೆ ಶಿಕ್ಷಣವನ್ನು ನೀಡಲಾಗುತ್ತಿತ್ತು. ವಿಶೇಷವೆಂದರೆ ಕಡಿಮೆ ದಿನಗಳಲ್ಲಿ ಈ ಶಾಲೆಗಳು ಸರಕಾರಿ ಶಾಲೆಗಳಿಗಿಂತಲೂ ಹೆಚ್ಚಿನ ಖ್ಯಾತಿ ಪಡೆದವು. ವಿಶೇಷವೇನೆಂದರೆ ಈ ಶಾಲೆಗಳು ಪುರುಷ ವಿದ್ಯಾರ್ಥಿಗಳಿಗಿಂತ ಹೆಚ್ಚಿನ ಮಹಿಳಾ ವಿದ್ಯಾರ್ಥಿಗಳನ್ನು ನೋಂದಣಿ ಮಾಡಿಕೊಳ್ಳಲಾಯಿತು. ಆದರೆ ಸಾವಿತ್ರಿಬಾಯಿ ಇಂತಹ ಸಮಾಜಪರ ಕಾರ್ಯಗಳು ಆಗಿನ ಸಂಪ್ರದಾಯವಾದಿಗಳಿಗೆ ಹಿಡಿಸಲಿಲ್ಲ. ಬಹುಶಃ ಇದೇ ಕಾರಣಕ್ಕಾಗಿ ಅವರು ವಿದ್ಯಾರ್ಥಿಗಳಿಗೆ ಕಲಿಸಲು ಹೋದಾಗ ಆಗಾಗ್ಗೆ ಸಗಣಿ ಹಾಗೂ ಕಲ್ಲುಗಳನ್ನು ಅವರಿಗೆ ಎಸೆಯುತ್ತಿದ್ದರು. ಇನ್ನೊಂದೆಡೆ ಸ್ವತಃ ದಂಪತಿಗಳ ಪೋಷಕರು ಕೂಡ ಪ್ರೋತ್ಸಾಹ ನೀಡಲಿಲ್ಲ. ಇದರಿಂದಾಗಿ ಅವರು ಮನೆಯಿಂದ ಹೊರಗೆ ಉಳಿಯಬೇಕಾಗಿ ಬಂತು.

ಇದಾದ ನಂತರ ಜ್ಯೋತಿಬಾ ಅವರ ಸ್ನೇಹಿತ ಉಸ್ಮಾನ್ ಶೇಖ್ ಅವರ ಮನೆಗೆ ತೆರಳಿದರು. ಉಸ್ಮಾನ್‌ʼಗೆ ಫಾತಿಮಾ ಬೇಗಂ ಶೇಖ್ ಎಂಬ ಸಹೋದರಿ ಇದ್ದಳು, ಆಗಲೇ ಶಿಕ್ಷಣ ಪಡೆದಿದ್ದ ಮತ್ತು ಸಾವಿತ್ರಿಬಾಯಿಯ ಜೀವಮಾನದ ಒಡನಾಡಿಯಾಗಿದ್ದಳು. ಶೇಖ್ ಅವರನ್ನು ಭಾರತದ ಮೊದಲ ಮಹಿಳಾ ಮುಸ್ಲಿಂ ಶಿಕ್ಷಕಿ ಎಂದು ಪರಿಗಣಿಸಲಾಗಿದೆ, ಮತ್ತೂ ಅವರು ಸಾವಿತ್ರಿಬಾಯಿ ಅವರೊಂದಿಗೆ ಸೇರಿ 1849ರಲ್ಲಿ ಶೇಖ್ ಅವರ ಮನೆಯಲ್ಲಿ ಶಾಲೆಯನ್ನು ಪ್ರಾರಂಭಿಸಿದರು. ಎರಡು ಶೈಕ್ಷಣಿಕ ಟ್ರಸ್ಟ್‌ʼಗಳು, ಸ್ಥಳೀಯ ಸ್ತ್ರೀ ಶಾಲೆ, ಪುಣೆ ಮತ್ತು ಸೊಸೈಟಿ ಫಾರ್ ಪ್ರೋಮೋಟಿಂಗ್ ದಿ ಎಜುಕೇಶನ್ ಆಫ್ ಮಹರ್ಸ್, ಮಾಂಗ್ಸ್, ಮತ್ತು ಎಟ್ಸೆಟೆರಾಸ್ʼನ್ನು 1850ರ ದಶಕದಲ್ಲಿ ದಂಪತಿಗಳು ಪ್ರಾರಂಭಿಸಿದರು. ಪುಲೆ ದಂಪತಿಗಳಿಬ್ಬರು ಸೇರಿ ತಮ್ಮ ಜೀವಿತಾವಧಿಯಲ್ಲಿ ಒಟ್ಟು 18 ಶಾಲೆಗಳನ್ನು ತೆರೆದರು. ಮುಂದೆ ಪುಲೆ ದಂಪತಿಗಳ ಅಕಾಲಿಕ ಮರಣದ ನಂತರ ಶಾಲೆಗಳನ್ನು ಫಾತಿಮಾ ಬೇಗಂ ನೋಡಿಕೊಂಡರು.

ಸಾವಿತ್ರಿಬಾಯಿಯವರ ಈ ಎಲ್ಲ ಸಾಮಾಜಿಕ ಕಾರ್ಯಗಳ ನಡುವೆಯೂ ಕವಿಯತ್ರಿ ಕೂಡ ಆಗಿದ್ದರು. 1854ರಲ್ಲಿ ಕಾವ್ಯ ಫಲೆ (ಕಾವ್ಯ ಅರಳಿದೆ) ಕವನ ಸಂಕಲನದ ಮೂಲಕ 19ನೇ ಶತಮಾನದ ಸಮಾಜವನ್ನು ಚಿತ್ರಿಸುವ ಪ್ರಯತ್ನ ಮಾಡಿದರು. 1891ರಲ್ಲಿ ಭವನ ಕಾಶಿ ಸುಬೋಧ ರತ್ನಾಕರ (ಅಪ್ಪಟ ಮುತ್ತುಗಳ ಸಾಗರ) ಜ್ಯೋತಿಬಾ ಅವರನ್ನು ಒಳಗೊಂಡು ಬರೆದ ಆತ್ಮಕತೆ, 1892ರಲ್ಲಿ ಜ್ಯೋತಿಬಾ ಅವರ ಭಾಷಣಗಳ ಸಂಪಾದಿತ ಕೃತಿ ಹಾಗೂ ಕರ್ಜ್ (ಸಾಲ) ಸಾವಿತ್ರಿ ಬಾಯಿಯವರ ಸಾಹಿತ್ಯ ರಚನೆಯಿಂದ ಹೊರಹೊಮ್ಮಿದ ಸಾಮಾಜಿಕ ಕೃತಿಗಳು.‌ ಗೋ, ಗೆಟ್ ಎಜುಕೇಶನ್ ಎಂಬ ಕವಿತೆ ಕೆಳ ಜಾತಿಯವರು ತಮ್ಮನ್ನು ದಬ್ಬಾಳಿಕೆಯಿಂದ ಮುಕ್ತಗೊಳಿಸಲು ಶಿಕ್ಷಣ ಒಂದೇ ಮಾರ್ಗ ಎನ್ನುವ ಸಂದೇಶವನ್ನು ಸಾರಿದರು.

ಸಾಮಾಜಿಕ ಬದಲಾವಣೆಯನ್ನು ತಳಮಟ್ಟದಿಂದಲೇ ಬದಲಾಗಬೇಕೆಂದು ಬಯಸಿದ್ದ ಅವರು, ಆಗಿನ ಕಟು ಸಂಪ್ರದಾಯ ನೀತಿ ಪದ್ಧತಿಗಳನ್ನು ತಿರಸ್ಕರಿಸಿದರು. ಅವರ  ಕಾರ್ಯಗಳಿಗೆ ಪತಿ ಜ್ಯೋತಿ ಬಾಫುಲೆ ಬೆಂಬಲವಾಗಿ ನಿಂತರು. ಸಾವಿತ್ರಿಬಾಯಿಯವರು ಹಳೆಯ ಸಂಪ್ರದಾಯಗಳಿಗೆ ಅಂತ್ಯಹಾಡಿ, ಅಂತರ್ಜಾತಿ  ವಿವಾಹವನ್ನು ಪ್ರೋತ್ಸಾಹಿಸಿ ಅಂತ ದಂಪತಿಗಳಿಗೆ ಆಶ್ರಯವನ್ನು ನೀಡಿದರು. ಇಂದು ಭಾರತದ ಮಹಿಳೆಯರ ಸಮಾಜದ ಎಲ್ಲಾ ಕ್ಷೇತ್ರದಲ್ಲಿ ಸಮಾನತೆಯ ಹಕ್ಕಿಗೆ ಕಾರಣರಾದವರು ಮಾತೆ ಸಾವಿತ್ರಿ ಬಾಪುಲೆ. ಇವರು ಸಮಾಜದ ಅನಿಷ್ಟ ಪದ್ದತಿಗಳಾದ ಬಾಲ್ಯ ವಿವಾಹ, ಸತಿಸಹಗಮನ ಪದ್ದತಿ, ಕೇಶ ಮುಂಡನೆ ವಿರುದ್ದ ಹೋರಾಟ ಮಾಡಿ, ಮಹಿಳೆಯರಿಗೋಸ್ಕರ ಪ್ರ ಪ್ರಥಮವಾಗಿ ಶಾಲೆಗಳು, ಅಬಲಾಶ್ರಮ ಸ್ಥಾಪನೆ ಮಾಡಿದ ಕೀರ್ತಿ ಇವರಿಗೆ ಸಲ್ಲುತ್ತದೆ.

ಇಂದು ಭಾರತದ ಮಹಿಳೆಯರ ಸಮಾಜದ ಎಲ್ಲಾ ಕ್ಷೇತ್ರದಲ್ಲಿ ಸಮಾನತೆಯ ಹಕ್ಕಿಗೆ ಕಾರಣರಾದವರು ಮಾತೆ ಸಾವಿತ್ರಿ ಬಾಪುಲೆ. ಇವರು ಸಮಾಜದ ಅನಿಷ್ಠ  ಪದ್ದತಿಗಳಾದ ಬಾಲ್ಯ ವಿವಾಹ, ಸತಿಸಹಗಮನ ಪದ್ದತಿ, ಕೇಶ ಮುಂಡನೆ ವಿರುದ್ದ ಹೋರಾಟ ಮಾಡಿ, ಮಹಿಳೆಯರಿಗೋಸ್ಕರ ಪ್ರ ಪ್ರಥಮವಾಗಿ ಶಾಲೆಗಳು, ಅಬಲಾಶ್ರಮ ಸ್ಥಾಪನೆ ಮಾಡಿದ ಕೀತಿ೯ ಇವರಿಗೆ ಸಲ್ಲುತ್ತದೆ.

1860ರ ದಶಕದಲ್ಲಿ ವಿಧವೆಯರ ತಲೆಬೋಳಿಸುವ ಪದ್ಧತಿಯನ್ನು ಪ್ರಬಲವಾಗಿ ವಿರೋಧಿಸಿದರು. ವಿಧವೆಯರಿಗೆ, ವಿವಾಹಬಾಹಿರವಾಗಿ ಗರ್ಭಿಣಿಯರಾಗುವ ಮಹಿಳೆಯರಿಗಾಗಿ ಪುನರ್ವಸತಿ ಕೇಂದ್ರಗಳನ್ನು ಸ್ಥಾಪಿಸಿದರು. ಸಾವಿತ್ರಿಬಾಯಿ ಅವರು ಗರ್ಭಿಣಿ ವಿಧವೆಯರು ಮತ್ತು ಅತ್ಯಾಚಾರಕ್ಕೊಳಗಾದವರಿಗೆ ಸಹಾಯ ಮಾಡಲು ಬಲ್ಹತ್ಯಾ  ಪ್ರತಿಬಂಧಕ್ ಗೃಹವನ್ನು ಪ್ರಾರಂಭಿಸಿದರು,  ಒಂದು ವೇಳೆ ತಾಯಂದಿರು ಬಯಸದಿದ್ದರೆ ಅಥವಾ ಮಗುವನ್ನು ಉಳಿಸಿಕೊಳ್ಳಲು ಸಾಧ್ಯವಾಗದಿದ್ದರೆ ಸಾವಿತ್ರಿಬಾಯಿ ಮತ್ತು ಜ್ಯೋತಿಬಾ ಮಕ್ಕಳನ್ನು ಸಹ ನೋಡಿಕೊಳ್ಳುತ್ತಿದ್ದರು. ಸಾಮಾಜಿಕ ಸಂಘಟನೆಗಳ ಮೂಲಕ ನೂರಾರು ಮಹಿಳೆಯರ ಮತ್ತು ಮಕ್ಕಳ ಬದುಕಿಗೊಂದು ನೆಲೆ ಕೊಟ್ಟರು.

ಮುಂದೆ ಜೀವನವನ್ನು ಬಹುಸಂಖ್ಯಾತ ಸಮುದಾಯದ ದಲಿತರು, ಮಹಿಳೆಯರು, ಆದಿವಾಸಿಗಳು, ಹಿಂದುಳಿದವರು, ಅಲ್ಪಸಂಖ್ಯಾತರ ಹಕ್ಕುಗಳಿಗಾಗಿ ಮುಡಿಪಾಗಿಟ್ಟರು. ಆದರೆ ಅವರ ಈ ಎಲ್ಲ ಶೋಷಿತ ಸಮುದಾಯಗಳಿಗೆ ನೀಡಿರುವ ಕೊಡುಗೆಯನ್ನು ಸಾರ್ವಜನಿಕ ವಲಯ ಕಡೆಗಣಿಸಿದೆ ತಮ್ಮ ಪತಿ ಜೋತಿಭಾ ಫುಲೆ ಜೊತೆ ಸೇರಿ ಪ್ರಾರಂಭಿಸಿದ ಮೊದಲ ಹೆಣ್ಣು ಮಕ್ಕಳ ಶಾಲೆಗೆ ಮೊದಲ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸಿದರು. ಆದ್ದರಿಂದ ಅವರನ್ನು ಭಾರತದ ಮೊದಲ ಶಿಕ್ಷಕಿ ಎಂದು ಕರೆಯುತ್ತಾರೆ. 1848 ರಿಂದ 1852ರ ಅವಧಿಯಲ್ಲಿ 18 ಪಾಠಶಾಲೆಗಳನ್ನು ಪುಲೆ ದಂಪತಿಗಳು ತೆರೆದರು.

ಈ ಪಾಠಶಾಲೆಗಳ ಆಡಳಿತದ ಜವಾಬ್ದಾರಿಯನ್ನು ಸಾವಿತ್ರಿಬಾಯಿ ನಿರ್ವಹಿಸಬೇಕಾಗಿತ್ತು. ಶಿಕ್ಷಕಿ, ಸಂಚಾಲಕಿ, ಮುಖ್ಯೋಪಾಧ್ಯಾಯಿನಿ ಮುಂತಾದ ಕೆಲಸಗಳನ್ನು ಇವರು ಸಮರ್ಪಕವಾಗಿ ನಿಭಾಯಿಸುವುದರ ಮೂಲಕ ಜ್ಯೋತಿಬಾಪುಲೆ ಅವರಿಗೆ ನೆರವಾದರು.

ಸತ್ಯಶೋಧಕ ಸಮಾಜದ ಅಧ್ಯಕ್ಷೆಯಾದ ಸಾವಿತ್ರಿಯವರು ಪೂಜಾರಿಗಳಿಲ್ಲದೆ ವಿವಾಹಗಳನ್ನು ನಡೆಸಿ ಕ್ರಾಂತಿಗೆ ಮುನ್ನುಡಿ ಬರೆದರು. 1848ರಲ್ಲಿ ಸಮಾಜದ ತಳ ವರ್ಗದ ಹೆಣ್ಣುಮಕ್ಕಳಿಗಾಗಿ ಶಾಲೆ, 1855ರಲ್ಲಿ ಕೂಲಿ ಕಾರ್ಮಿಕರಿಗಾಗಿ ರಾತ್ರಿ ಪಾಳಿ ಶಾಲೆ, 1878ರಲ್ಲಿ ದಲಿತರಿಗಾಗಿ ಕುಡಿಯುವ ನೀರಿನ ಟ್ಯಾಂಕ್‌ ಸ್ಥಾಪನೆ ಮಾಡಿದರು.

ಬ್ರಿಟಿಷ್ ಸರ್ಕಾರದವರು ಅವರ ಕೆಲಸ ಕಾರ್ಯಗಳನ್ನು ಕೂಲಂಕುಷವಾಗಿ ಅವಲೋಕಿಸಿ ಮೆಚ್ಚುಗೆ ವ್ಯಕ್ತಪಡಿಸಿ ಮತ್ತು  ಈ ಎಲ್ಲಾ ಸಾಧನೆನ್ನು ಪರಿಗಣಿಸಿದ  ಬ್ರಿಟಿಷ್ ಸರಕಾರ ಇವರಿಗೆ “ಇಂಡಿಯಾಸ್ ಫಸ್ಟ್ ಲೇಡಿ ಟೀಚರ್” ಎಂದು ಬಿರುದು ಕೊಟ್ಟಿದ್ದಾರೆ.

ಪುಲೆ ದಂಪತಿಗೆ ಮಕ್ಕಳಿರಲಿಲ್ಲ ಎನ್ನುವುದಕ್ಕಿಂತಲೂ ಅಸಹಾಯಕ ಸಮುದಾಯವನ್ನೇ ತಮ್ಮ ಸಂತತಿಯನ್ನಾಗಿ ಭಾವಿಸಿದ್ದ ಅವರಿಗೆ, ಸ್ವಂತ ಮಕ್ಕಳ ಅಗತ್ಯ ಕಂಡುಬಂದಿರಲಿಲ್ಲ ಎಂದು ಹೇಳುವುದೇ ಸರಿ. ಈ ದಂಪತಿಗೆ ಮಕ್ಕಳಾಗಲಿಲ್ಲ, ಈ ಹಿನ್ನಲೆಯಲ್ಲಿ ಆ ದಂಪತಿಗಳು ಮುಂದೆ ಬಾಲಹತ್ಯಾ ಪ್ರತಿಬಂಧಕ ಗೃಹದಲ್ಲಿ ಬ್ರಾಹ್ಮಣ ವಿಧವೆಗೆ ಜನಿಸಿದ ಯಶವಂತರಾವ್ ಎನ್ನುವ ಬಾಲಕನ್ನು ದತ್ತು ಪಡೆದರು. ಜ್ಯೋತಿಬಾ ಅವರ ಸಾವಿನ ಸಂದರ್ಭದಲ್ಲಿ, ಅಂತ್ಯಸಂಸ್ಕಾರ ಯಾರು ಮಾಡಬೇಕೆನ್ನುವ ಗೊಂದಲ ಎದುರಾದಾಗ, ಸಾವಿತ್ರಿ ಅವರೇ ಗಂಡನ ಅಂತಿಮಸಂಸ್ಕಾರ ನಡೆಸಿದ್ದು ಅವರ ವ್ಯಕ್ತಿತ್ವದ ಗಟ್ಟಿತನಕ್ಕೆ ಉದಾಹರಣೆಯಂತಿತ್ತು.

ಇನ್ನು ಮಹಾರಾಷ್ಟ್ರದಲ್ಲಿ ಪ್ಲೇಗ್ ಸಾಂಕ್ರಾಮಿಕ ರೋಗ ಕಾಣಿಸಿಕೊಂಡಾಗ, ಸಾವಿತ್ರಿಬಾಯಿ ಮತ್ತು ಅವರ ಮಗ ಯಶ್ವಂತ್ ಅವರೊಂದಿಗೆ 1897 ರಲ್ಲಿ ಪೀಡಿತರನ್ನು ನೋಡಿಕೊಳ್ಳಲು ಕ್ಲಿನಿಕ್ ತೆರೆದರು. ಕ್ಲಿನಿಕ್ ಪ್ಲೇಗ್ ನಿಂದ ಮುಕ್ತವಾದ ಪುಣೆಯ ಹೊರವಲಯ ಪ್ರದೇಶದಲ್ಲಿತ್ತು. ಆದರೆ ಪ್ಲೇಗ್‌ ರೋಗಿಗಳ ಶುಶ್ರೂಷೆ ಮಾಡುತ್ತಾ ಆ ಸೋಂಕು ತಗುಲಿ ದುರದೃಷ್ಟವಶಾತ್ ತಗುಲಿ ಮಾರ್ಚ್ 10, 1897 ರಂದು ನಿಧನರಾದರು.

ಶಿಕ್ಷಣ, ಆರೋಗ್ಯ ಮತ್ತು ಸಾಮಾಜಿಕ ಸುಧಾರಣೆಗಳನ್ನು ಮಾಡುತ್ತಾ  ತಳ ಸಮುದಾಯದವರು ಮತ್ತು ಮಹಿಳೆಯರ ಉನ್ನತಿಗಾಗಿ ತಮ್ಮದೇ ಕೊಡುಗೆ ನೀಡಿದರು. ಕೇವಲ ಇಷ್ಟೇ ಅಲ್ಲದೆ ಸಾವಿತ್ರಿಬಾಯಿ ವಿಧವೆಯರ ಪುನರ್ವಿವಾಹದ ಪರವಾಗಿ ಧ್ವನಿ ಎತ್ತಿದರು ಮತ್ತು ಬಾಲ್ಯವಿವಾಹವನ್ನು ರದ್ದುಗೊಳಿಸಲು ಹೋರಾಡಿದರು. ಆ ಮೂಲಕ ಮಹಿಳೆಯರ ಶಿಕ್ಷಣ ಮತ್ತು ಉನ್ನತಿಗಾಗಿ ಅವರು ನೀಡಿದ ಕೊಡುಗೆ ಭಾರತೀಯ ಇತಿಹಾಸದಲ್ಲಿ ಚಿರಸ್ಥಾಯಿಯಾಗಿದೆ.

ಕಳೆದ ಮೂರು ವರ್ಷಗಳಿಂದ ಸಾವಿತ್ರಿ ಬಾಯಿ ಫುಲೆ ಅವರ ಜಯಂತಿಯನ್ನು ಪ್ರತಿ ವರ್ಷವೂ ಜ.3 ರಂದು ಶಾಲಾ ಕಾಲೇಜುಗಳಲ್ಲಿ  ಆಚರಿಸುವಂತೆ ಸರ್ಕಾರ ಅಧಿಕೃತ ಆದೇಶ ಹೊರಡಿಸಿ ಗೌರವ ಸಲ್ಲಿಸಿದೆ.

ಈ ಮೂಲಕ ಅಕ್ಷರದವ್ವರನ್ನು ನೆನೆಯೋಣ..


ಡಾ.ಗುರುಪ್ರಸಾದ ಹವಲ್ದಾರ್

  • ಮೂಲತಃ ಉಪನ್ಯಾಸಕರು. ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲ್ಲೂಕಿನ ಮರಿಯಮ್ಮನ ಹಳ್ಳಿಯವರು. ಪ್ರಸ್ತುತ ಹಗರಿಬೊಮ್ಮನಹಳ್ಳಿ ಜಿವಿಪಿಪಿ ಪದವಿ ಕಾಲೇಜನಲ್ಲಿ ಕನ್ನಡ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತ ಜೊತೆಗೆ ಪತ್ರಿಕೆಗಳಿಗೆ ವೆಬ್ ನ್ಯೂಸ್ ಪೋಟ್೯ಲ್ ಗಳಿಗೆ ಲೇಖನ ಬರೆಯುತ್ತಿದ್ದಾರೆ.

Tags: birth anniversarycknewsnoweducationindiaJyoti Rao Phulemaharashtranewssavitribai phule
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಒಬ್ಬರೇ ಒಬ್ಬರು! ಅವರೇ ಭಾರತರತ್ನ ಕರ್ಪೂರಿ ಠಾಕೂರ್.., ಹರಿದ ಕೋಟು, ಹರಿದ ಚಪ್ಪಲಿಯೊಂದಿಗೆ ಸಾಗಿದ ಮಹಾನ್‌ ದಂತಕಥೆ!!

ಒಬ್ಬರೇ ಒಬ್ಬರು! ಅವರೇ ಭಾರತರತ್ನ ಕರ್ಪೂರಿ ಠಾಕೂರ್.., ಹರಿದ ಕೋಟು, ಹರಿದ ಚಪ್ಪಲಿಯೊಂದಿಗೆ ಸಾಗಿದ ಮಹಾನ್‌ ದಂತಕಥೆ!!

by cknewsnow desk
January 27, 2024
0

"ಒಬ್ಬರ ಜನನವು ಅವರ ಹಣೆಬರಹವನ್ನು ನಿಶ್ಚಯಿಸುವುದಿಲ್ಲ" ಎಂದ ಜನ ನಾಯಕ; ಅಪ್ಪಟ ಭಾರತರತ್ನ, ಮೀಸಲು ಕೊಟ್ಟು ಬದುಕು ಕಟ್ಟಿಕೊಟ್ಟ ಭಾರತದ ಭಾಗ್ಯವಿದಾತ

ಸರ್ದಾರ್ ಪಟೇಲರ ದೃಢ ಸಂಕಲ್ಪ, ಮುನ್ಷಿ ಅವರ ಪ್ರಚಂಡ ಧೈರ್ಯ ಮತ್ತು ಬಾಬು ರಾಜೇಂದ್ರ ಪ್ರಸಾದರ ರಾಜಿ ಇಲ್ಲದ ನಿಲುವು

ಸರ್ದಾರ್ ಪಟೇಲರ ದೃಢ ಸಂಕಲ್ಪ, ಮುನ್ಷಿ ಅವರ ಪ್ರಚಂಡ ಧೈರ್ಯ ಮತ್ತು ಬಾಬು ರಾಜೇಂದ್ರ ಪ್ರಸಾದರ ರಾಜಿ ಇಲ್ಲದ ನಿಲುವು

by cknewsnow desk
January 21, 2024
0

ಅಯೋಧ್ಯಾ ಆಂದೋಲನ ಭಾರತದ ಅಂತರಾತ್ಮದ ಧ್ವನಿ; ಎಲ್.ಕೆ.ಆಡ್ವಾಣಿ ಅವರು ತಮ್ಮ ಆತ್ಮಕಥೆ My Country My Life ಕೃತಿಯಲ್ಲಿ ಬರೆದಿರುವ ಮಹತ್ವದ ಲೇಖನ ಸಿಕೆನ್ಯೂಸ್‌ ನೌ ನಲ್ಲಿ..

ಶ್ರೀರಾಮಪ್ರಭುವೇ ಕ್ಷಮಿಸು! ನಿನ್ನ ಹೆಸರಿಟ್ಟುಕೊಂಡವರೆಲ್ಲ ನಿನ್ನವರಲ್ಲ!!

ಅಯೋಧ್ಯಾ ಆಂದೋಲನ ಭಾರತದ ಅಂತರಾತ್ಮದ ಧ್ವನಿ; ಮಂದಿರಕ್ಕೆ ಅಂಕುರಾರ್ಪಣೆ ಆಗಿದ್ದು ಹೇಗೆ?

by cknewsnow desk
January 19, 2024
0

ಎಲ್.ಕೆ.ಆಡ್ವಾಣಿ ಅವರು ತಮ್ಮ ಆತ್ಮಕಥೆ My Country My Life ಕೃತಿಯಲ್ಲಿ ಬರೆದಿರುವ ಮಹತ್ವದ ಲೇಖನ ಸಿಕೆನ್ಯೂಸ್‌ ನೌ ನಲ್ಲಿ..

ನಿಡುಮಾಮಿಡಿ ಶ್ರೀಗಳು: ಕಾವಿಯೊಳಗೆ ನಿಗಿನಿಗಿ ಹೊಳೆಯುವ ಕೆಂಪುಸೂರ್ಯ

ನಿಡುಮಾಮಿಡಿ ಶ್ರೀಗಳು: ಕಾವಿಯೊಳಗೆ ನಿಗಿನಿಗಿ ಹೊಳೆಯುವ ಕೆಂಪುಸೂರ್ಯ

by cknewsnow desk
December 28, 2023
0

ನಿಜದ ಜಾಡು ಹಿಡಿದು ಹೊರಟ ನಿಡುಮಾಮಿಡಿ ಶ್ರೀಗಳ ಹೋರಾಟಕ್ಕೆ 33 ವರ್ಷ

ಅಖಂಡ ಭಾರತದ ಅಷ್ಟದಿಕ್ಕುಗಳ ಆಮೂಲಾಗ್ರ ಅಭಿವೃದ್ಧಿಗೆ ಸುವರ್ಣ ಅಧ್ಯಾಯ ಬರೆದವರೇ ಅಜಾತಶತ್ರು ಅಟಲ್‌ ಬಿಹಾರಿ ವಾಜಪೇಯಿ

ಅಟಲ್ ಎಂದರೆ ಅಜಾತಶತ್ರು

by cknewsnow desk
December 25, 2023
0

ಇಂದು ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನ, ಉತ್ತಮ ಆಡಳಿತ ದಿನ by Dr.Gurupeasad Hawaldar ಜಾಗತಿಕ ಮಟ್ಟದ ಶ್ರೇಷ್ಠ ನಾಯಕರ ಸಾಲಿನಲ್ಲಿ ಗೌರವಿಸಲ್ಪಡುವ  ನಿಸ್ವಾರ್ಥ ರಾಜಕಾರಣಿ,...

ಶಿಕ್ಷಣ, ಶಿಕ್ಷಕ ಮತ್ತು ಬದಲಾವಣೆ; ನೂತನ ಶಿಕ್ಷಣ ನೀತಿಯ ಹೊತ್ತಿನಲ್ಲಿ ಓಶೋ ಜೋಶ್..

ಓಶೋ: ಬೆರಗು, ಬೆಡಗು ಮತ್ತು ವಿಸ್ಮಯ

by cknewsnow desk
December 11, 2023
0

ಇಂದು ಓಶೋ ಜನ್ಮದಿನ

Next Post
ನಾಯಿ ಬೊಗಳಿದರೆ ಆನೆ ತಲೆ ಕೆಡಿಸಿಕೊಳ್ಳಲ್ಲ; ಸಿದ್ದರಾಮಯ್ಯ ಅವರದ್ದು ಯಾವ ಪಕ್ಷ? ʼಎಸ್ಎಫ್ʼ ಪಕ್ಷವೇ?

"ಕಲ್ಲು ಬಂಡೆಗಳನ್ನೇ ನುಂಗಿ ಜೀರ್ಣ ಮಾಡಿಕೊಂಡವರಿಗೆ ನನ್ನ ಟೀಕೆಗಳನ್ನು ಜೀರ್ಣ ಮಾಡಿಕೊಳ್ಳುವುದು ಕಷ್ಟವೇ?"

Leave a Reply Cancel reply

Your email address will not be published. Required fields are marked *

Recommended

ಪ್ರೊ.ಬಿ.ಗಂಗಾಧರಮೂರ್ತಿ ಇನ್ನಿಲ್ಲ

ಪ್ರೊ.ಬಿ.ಗಂಗಾಧರಮೂರ್ತಿ ಇನ್ನಿಲ್ಲ

3 years ago
ಗುಡಿಬಂಡೆ ತಾಲೂಕು ಜೆಡಿಎಸ್‌ ಅಧ್ಯಕ್ಷರಾಗಿ ಹೆಚ್.ಎನ್. ಮಂಜುನಾಥ್

ಗುಡಿಬಂಡೆ ತಾಲೂಕು ಜೆಡಿಎಸ್‌ ಅಧ್ಯಕ್ಷರಾಗಿ ಹೆಚ್.ಎನ್. ಮಂಜುನಾಥ್

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ