• About
  • Advertise
  • Careers
  • Contact
Thursday, October 29, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NEWS IN USE

ಗ್ರಾಮೀಣ ಪತ್ರಕರ್ತರಿಗೆ ಆರೋಗ್ಯ ಕಾರ್ಡು, ಬಸ್‌ಪಾಸ್

cknewsnow desk by cknewsnow desk
January 4, 2022
in NEWS IN USE, STATE
Reading Time: 1 min read
0
ಗ್ರಾಮೀಣ ಪತ್ರಕರ್ತರಿಗೆ ಆರೋಗ್ಯ ಕಾರ್ಡು, ಬಸ್‌ಪಾಸ್
1k
VIEWS
FacebookTwitterWhatsuplinkedinEmail

ಸೌಲಭ್ಯಗಳಿಗೆ ಬಜೆಟ್‌ನಲ್ಲಿ ಆದ್ಯತೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

36ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಉದ್ಘಾಟನೆ / ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ 3,000 ಸಾವಿರ ಕೋಟಿ ರೂ.ಮೀಸಲು

ಕಲಬುರಗಿ: ಸಣ್ಣ ಪತ್ರಿಕೆಗಳು ಪ್ರಸಾರದಲ್ಲಿ ಕಡಿಮೆ ಸಂಖ್ಯೆ ಹೊಂದಿದ್ದರೂ ಕೂಡ ಅಲ್ಲಿನ ಸುದ್ದಿ,ಲೇಖನ,ಅಂಕಣಗಳ ಮೌಲ್ಯ ದೊಡ್ಡದು.ಗ್ರಾಮೀಣ ಪತ್ರಕರ್ತರಿಗೆ ಆರೋಗ್ಯ ಕಾರ್ಡು, ಬಸ್‌ಪಾಸ್ ಸೇರಿದಂತೆ ಇತರ ಸೌಲಭ್ಯಗಳಿಗೆ ಬರುವ ಬಜೆಟ್‌‌ನಲ್ಲಿ ಆದ್ಯತೆ ನೀಡಲಾಗುವುದು.ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಮಂಡಳಿ ಹಾಗೂ ಕೋಶಕ್ಕೆ ವಾರಾಂತ್ಯದೊಳಗೆ ಪೂರ್ಣ ನೇಮಕಾತಿ ಮಾಡಿ 3 ಸಾವಿರ ಕೋಟಿ ರೂ.ಕ್ರಿಯಾ ಯೋಜನೆಯನ್ನು ಒಂದು ವರ್ಷದ ಅವಧಿಯೊಳಗೆ ಅನುಷ್ಠಾನ ಮಾಡಲಾಗುವುದು
ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಇಲ್ಲಿನ ಬಸವರಾಜಪ್ಪ ಅಪ್ಪ ಸ್ಮಾರಕ ಭವನದಲ್ಲಿ ಏರ್ಪಡಿಸಿರುವ 36 ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.

ಪತ್ರಿಕಾ ರಂಗ ಹಲವಾರು ಸವಾಲುಗಳನ್ನು ಎದುರಿಸುತ್ತಿದೆ. ಖಾಸಗೀಕರಣ,ಉದಾರೀಕರಣ,ಜಾಗತೀಕರಣದ ಮಾರುಕಟ್ಟೆ ಆಧಾರಿತ ವ್ಯವಹಾರದ ನಡುವೆ ಜನಪರ ಆದ್ಯತೆಗಳನ್ನು,ಅಂತಃಕರಣವನ್ನು ಪತ್ರಿಕೆಗಳು ಕಾಯ್ದುಕೊಳ್ಳುವುದು ಬಹಳ ಮುಖ್ಯ. ಸಮಾಜದಲ್ಲಿ ದೊಡ್ಡ ಬದಲಾವಣೆಗಳನ್ನು ತರಲು ಸಾಧ್ಯ. ಪತ್ರಿಆರಂಗ ಸದಾ ಜಾಗೃತವಾಗಿದ್ದರೆ, ಸಮಾಜ, ಸರ್ಕಾರಗಳೂ ಜಾಗೃತವಾಗಿರುತ್ತವೆ. ಪತ್ರಿಕೆಗಳಿಗೆ ಅಗತ್ಯವಿರುವ ಜಾಹೀರಾತು ,ಗ್ರಾಮೀಣ ಪತ್ರಕರ್ತರಿಗೆ ಆರೋಗ್ಯ ಕಾರ್ಡು,ಬಸ್‌ಪಾಸ್ ಸೌಕರ್ಯಗಳನ್ನು ನೀಡಲು ಬರುವ ಬಜೆಟ್‌ನಲ್ಲಿ ಕ್ರಮವಹಿಸಲಾಗುವುದು. ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 3 ಸಾವಿರ ಕೋಟಿ ರೂ.ಗಳ ಕ್ರಿಯಾ ಯೋಜನೆ ತಯಾರಿಸಲಾಗಿದೆ.ತಿಂಗಳಾಂತ್ಯದೊಳಗೆ ಈ ಭಾಗದ ಶಾಸಕರ ಸಭೆ ನಡೆಸಿ ಅಂತಿಮಗೊಳಿಸಲಾಗುವುದು.ಅನುದಾನ ಒದಗಿಸಿ ಒಂದೇ ವರ್ಷದಲ್ಲಿ ಯೋಜನೆಗಳ ಅನುಷ್ಠಾನ ಮಾಡಲಾಗುವುದು‌ ಎಂದರು.

ಕಲ್ಯಾಣದ ಪುಣ್ಯಭೂಮಿ ಕಲಬುರಗಿಯಲ್ಲಿ ಕಾರ್ಯನಿರತ ಪತ್ರಕರ್ತರ ಸಮ್ಮೇಳನ ನಡೆಯುತ್ತಿರುವುದು ಸಂತಸದ ಸಂಗತಿಯಾಗಿದೆ.ಪತ್ರಕರ್ತರಿಗೆ,ಪತ್ರಿಕೋದ್ಯಮಿಗೆ ಸಮಾಜದಲ್ಲಿ ಮಹತ್ವದ ಸ್ಥಾನವಿದೆ.ಸ್ವಾತಂತ್ರ್ಯ ಚಳುವಳಿಗೆ ಕೈಬರಹದ ಹಾಗೂ ಮೊಳೆ ಜೋಡಣೆ ಮುದ್ರಣ ಆಧಾರಿತ ಹಲವಾರು ಪತ್ರಿಕೆಗಳು ಭೂಗತವಾಗಿ ಕಾರ್ಯ ಮಾಡಿ,ದೇಶಭಕ್ತಿ,ಹೋರಾಟದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿವೆ.ಪಾಶ್ಚಿಮಾತ್ಯ ಪತ್ರಿಕೋದ್ಯಮ ಪ್ರಭಾವದ ನಡುವೆಯೂ ವಸಾಹತೋತ್ತರ ಕಾಲದಲ್ಲಿ ಭಾರತೀಯ ಪತ್ರಿಕೆಗಳು ಸ್ವಂತಿಕೆ ರೂಢಿಸಿಕೊಂಡಿವೆ.ತುರ್ತು ಪರಿಸ್ಥಿತಿ ಹೇರಿದ ಸಂದರ್ಭದಲ್ಲಿ ಪತ್ರಿಕೆಗಳ ಮೇಲೆ ದೊಡ್ಡ ಪ್ರಹಾರ ನಡೆಯಿತು.ಪತ್ರಕರ್ತರು ಅದನ್ನು ಗಟ್ಟಿಯಾಗಿ ಎದುರಿಸಿದರು.ಪತ್ರಿಕೋದ್ಯಮಿ ಸದಾ ಜಾಗೃತವಾಗಿ ಕೆಲಸ ಮಾಡಿದರೆ ಸರ್ಕಾರ,ಸಮಾಜ ಎಚ್ಚರವಾಗಿರುತ್ತದೆ.ಕೋವಿಡ್ ಸಂದರ್ಭದಲ್ಲಿ ಆರೋಗ್ಯ,ಅಂಗನವಾಡಿ,ಆಶಾ,ಪೊಲೀಸ್,ಪೌರಕಾರ್ಮಿಕರೊಂದಿಗೆ ಪತ್ರಕರ್ತರು ಕೂಡ ಮುಂಚೂಣಿಯಲ್ಲಿ ನಿಂತು ಹೋರಾಟ ಮಾಡಿ ಕಾರ್ಯನಿರ್ವಹಿಸಿದ್ದಾರೆ.ಹಲವಾರು ಜನ ಪ್ರಾಣ ಕಳೆದುಕೊಂಡಿದ್ದಾರೆ,ಬಹುತೇಕ ಕುಟುಂಬದವರಿಗೆ ಈಗಾಗಲೇ ತಲಾ 5 ಲಕ್ಷ ರೂ.ಪರಿಹಾರ ನೀಡಲಾಗಿದೆ.ಇನ್ನೂ ಬಾಕಿ ಇರುವ ವ್ಯಕ್ತಿಗಳ ಕುಟುಂಬಕ್ಕೂ ಒದಗಿಸಲಾಗುವುದು.ಪತ್ರಕರ್ತರು-ರಾಜಕಾರಣಿಗಳು ಪರಸ್ಪರ ಅವಿನಾಭಾವ ಸಂಬಂಧ ಹೊಂದಿರುತ್ತಾರೆ.ಸಮಾಜದ ಒಳಿತಿಗೆ ಅದು ಬಳಕೆಯಾಗಬೇಕು.ಕಲ್ಯಾಣ ಕರ್ನಾಟಕ ಸಮಗ್ರ ಅಭಿವೃದ್ಧಿ ಕುರಿತು ಈ ಸಮ್ಮೇಳನದಲ್ಲಿ ಚರ್ಚೆಗಳಾಗಲಿ ಅವುಗಳ ನಿರ್ಣಯಗಳ ಕರಡನ್ನು ಸರಕಾರಕ್ಕೆ ಕಳುಹಿಸಿಕೊಡಿ ಅವುಗಳ ಜಾರಿಗೆ ಆದ್ಯತೆ ನೀಡಲಾಗುವುದು ಎಂದು ಮುಖ್ಯಮಂತ್ರಿಯವರು ಹೇಳಿದರು.

ಪತ್ರಕರ್ತರಿಗೂ ರಾಜಕಾರಣಿಗಳಿಗೆ ಬಿಡಿಸಲಾಗದ ನಂಟಿದೆ. ಒಳ್ಳೆಯ ಉದ್ದೇಶಕ್ಕಾಗಿ ನಾವು ಒಟ್ಟಾಗಿ ಕೆಲಸ ಮಾಡಿದರೆ ಜನಕಲ್ಯಾಣ ಸಾಧ್ಯ ಎಂದರು.

ಮುಖ್ಯಮಂತ್ರಿ @BSBommai ಅವರು ಇಂದು ಕಲಬುರಗಿಯಲ್ಲಿ 36ನೇ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು ಉದ್ಘಾಟಿಸಿದರು. (1/2) pic.twitter.com/Xb6Xq64JTk

— CM of Karnataka (@CMofKarnataka) January 4, 2022

ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ಅವರು ಛಾಯಾಚಿತ್ರ ಪ್ರದರ್ಶನ ಉದ್ಘಾಟಿಸಿದರು. ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ಡಾ.ಅಜಯ್‌ಸಿಂಗ್ ವಸ್ತುಪ್ರದರ್ಶನ ಉದ್ಘಾಟಿಸಿದರು.ಸಂಸದ ಡಾ.ಉಮೇಶ ಜಾಧವ ವ್ಯಂಗ್ಯಚಿತ್ರ ಪ್ರದರ್ಶನ ಉದ್ಘಾಟಿಸಿದರು. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಅಧ್ಯಕ್ಷ,ಶಾಸಕ ದತ್ತಾತ್ರೇಯ ಪಾಟೀಲ ರೇವೂರ,ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆ ಅಧ್ಯಕ್ಷ ,ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ಅವರು ಕೆಯುಡಬ್ಲುಜೆ 2022 ರ ಕ್ಯಾಲೆಂಡರ್ ಬಿಡುಗಡೆ ಮಾಡಿದರು.

ಇದೇ ಸಂದರ್ಭದಲ್ಲಿ ಪತ್ರಿಕಾ ಭವನದ ಮೊದಲ ಮಹಡಿ ಉದ್ಘಾಟನೆ, ಕೋವಿಡ್ ಕತೆಗಳು ,ಮಾಧ್ಯಮ ಅವಲೋಕನ ಹಾಗೂ ಮಾಧ್ಯಮ ಹೆಜ್ಜೆಗಳು ಕೃತಿಗಳನ್ನು
ಮುಖ್ಯಮಂತ್ರಿಯವರು ಬಿಡುಗಡೆ ಮಾಡಿದರು.ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿಗಳ ಪ್ರದಾನ ಮಾಡಲಾಯಿತು.
ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ತಾರಾ ಅನೂರಾಧ ಮಾತನಾಡಿದರು.

ಶರಣಬಸವೇಶ್ವರ ಸಂಸ್ಥಾನದ ಪೀಠಾಧಿಪತಿ ಡಾ.ಶರಣಬಸಪ್ಪ ಅಪ್ಪ ದಿವ್ಯ ಸಾನಿಧ್ಯವಹಿಸಿದ್ದರು. ಕೇಂದ್ರ ಸಚಿವ ಭಗವಂತ ಖೂಬಾ ,ಶಾಸಕರಾದ ಸುಭಾಷ ಗುತ್ತೇದಾರ,ಡಾ.ಅವಿನಾಶ ಜಾಧವ,ಬಸವರಾಜ ಮತ್ತಿಮುಡ,ಶರಣು ಸಲಗರ,ವಿಧಾನಪರಿಷತ್ ಸದಸ್ಯರಾದ ಬಿ.ಜಿ.ಪಾಟೀಲ,ಶಶಿಲ್ ನಮೋಶಿ,ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಡಾ.ಪಿ.ಎಸ್.ಹರ್ಷ ,ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರ ಮತ್ತಿತರರು ವೇದಿಕೆಯಲ್ಲಿದ್ದರು.ವಿಜಯ ಕರ್ನಾಟಕ ಸಂಪಾದಕ ಹರಿಪ್ರಕಾಶ ಕೋಣೆಮನೆ ಮೊದಲ ಮಾತುಗಳನ್ನಾಡಿದರು.ವಿಜಯವಾಣಿ ಸಂಪಾದಕ ಕೆ.ಎನ್.ಚನ್ನೇಗೌಡ ಪ್ರಾಸ್ತಾವಿಕ ನುಡಿಗಳನ್ನಾಡಿದರು.

ಮಹೇಶ ಬಡಿಗೇರ ಮತ್ತು ತಂಡದ ಕಲಾವಿದರು ಪ್ರಾರ್ಥಿಸಿದರು.ಕಲಬುರಗಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಭವಾನಿಸಿಂಗ್ ಎಂ ಠಾಕೂರ ಸ್ವಾಗತಿಸಿದರು.ಕೆ.ಜಿ.ಬೋಪಯ್ಯ ಕಾರ್ಯಕ್ರಮ ನಿರೂಪಿಸಿದರು.

Tags: basavaraj bommaibus passchief ministercknewsnowhealth cardjournalistskalaburagikarnatakanewsworking journalists
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

by cknewsnow desk
October 28, 2026
0

ಬೆಂಗಳೂರಿನಲ್ಲಿ 43.13% ಮತದಾರರ ಪ್ರಮಾಣ ಕುಸಿತ

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

by cknewsnow desk
October 25, 2026
0

ಹಾಲಿ ಮುಖ್ಯಮಂತ್ರಿ ವಿರುದ್ಧ ಕೇಂದ್ರ ಸಚಿವರ ಗಂಭೀರ ಆರೋಪ; ಈಗಿನ ಮಹಾನ್ ಮುಖ್ಯಮಂತ್ರಿಗಳೇ ಸ್ಟಿಂಗ್ ಮೂಲಪುರುಷ

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

by cknewsnow desk
October 25, 2026
0

ಸ್ಟಿಂಗ್ ಆಪರೇಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ್ದು ಇಬ್ಬಗೆ ನೀತಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

by cknewsnow desk
October 25, 2026
0

ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ; #kpsc ಹಗರಣದ ದಿಕ್ಕು ತಪ್ಪಿಸಲು ಪ್ರಿಯಾಂಕ್ ಖರ್ಗೆ ಒದ್ದಾಟ

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

by cknewsnow desk
October 22, 2026
0

ಬೇಸತ್ತು ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದ ಕೇಂದ್ರ ಸಚಿವ #HDK

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

by cknewsnow desk
October 22, 2026
0

ಮೈಸೂರು ದಸರಾದಲ್ಲಿ ಅವಮಾನ ಪ್ರಸಂಗ; ಬಾಯಲ್ಲಿ ಜಾತ್ಯತೀತ ತತ್ವ, ಆಚರಣೆಯಲ್ಲಿ ಅಸೃಶ್ಯತೆ!; ಕಾಂಗ್ರೆಸ್ ವಿರುದ್ಧ ಜೆಡಿಎಸ್ ವಾಗ್ದಾಳಿ

Next Post
ಕಲ್ಯಾಣ ಕರ್ನಾಟಕದಲ್ಲಿ 14,000 ಹುದ್ದೆಗಳ ನೇಮಕಾತಿ

ಕಲ್ಯಾಣ ಕರ್ನಾಟಕದಲ್ಲಿ 14,000 ಹುದ್ದೆಗಳ ನೇಮಕಾತಿ

Leave a Reply Cancel reply

Your email address will not be published. Required fields are marked *

Recommended

ಟೆಂಪಲ್ ಟೂರಿಸಂಗೆ ಆದ್ಯತೆ ಎಂದ ಸಿಎಂ

ಟೆಂಪಲ್ ಟೂರಿಸಂಗೆ ಆದ್ಯತೆ ಎಂದ ಸಿಎಂ

5 years ago
ಕಾಂಗ್ರೆಸ್ ಸುಳ್ಳು ಗ್ಯಾರಂಟಿಗಳ ವಿರುದ್ಧ ಹೋರಾಟಕ್ಕೆ ಮುಖಂಡರಿಗೆ ರಣವೀಳ್ಯ ನೀಡಿದ ಹೆಚ್.ಡಿ.ಕುಮಾರಸ್ವಾಮಿ

ಕಾಂಗ್ರೆಸ್ ಸುಳ್ಳು ಗ್ಯಾರಂಟಿಗಳ ವಿರುದ್ಧ ಹೋರಾಟಕ್ಕೆ ಮುಖಂಡರಿಗೆ ರಣವೀಳ್ಯ ನೀಡಿದ ಹೆಚ್.ಡಿ.ಕುಮಾರಸ್ವಾಮಿ

3 years ago

Popular News

  • #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    0 shares
    Share 0 Tweet 0
  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0
  • 10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

October 28, 2026
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

October 25, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ