• About
  • Advertise
  • Careers
  • Contact
Wednesday, October 28, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಚಿಕ್ಕಬಳ್ಳಾಪುರ: ಶ್ರೀಗಂಧ ಚೋರರ ಸೆರೆ

cknewsnow desk by cknewsnow desk
January 6, 2022
in CHIKKABALLAPUR, CRIME, STATE
Reading Time: 1 min read
0
ಚಿಕ್ಕಬಳ್ಳಾಪುರ: ಶ್ರೀಗಂಧ ಚೋರರ ಸೆರೆ
929
VIEWS
FacebookTwitterWhatsuplinkedinEmail

21.6 ಲಕ್ಷ ಮೌಲ್ಯದ 70 ಕೆಜಿ ಶ್ರೀಗಂಧ ತುಂಡುಗಳ ವಶ

ಚಿಕ್ಕಬಳ್ಳಾಪುರ: ರೈತರು ಬೆಳೆದಿದ್ದ ಶ್ರೀಗಂಧದ ಮರಗಳನ್ನು ಕಳ್ಳತನದಿಂದ ತುಂಡಗಳನ್ನಾಗಿ ಕಟಾವು ಮಾಡಿ ಮಾರಾಟ ಮಾಡುತ್ತಿದ್ದ ಅಂತರ ಜಿಲ್ಲಾ ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ.

ಖದೀಮರಿಂದ ಸುಮಾರು 21.6 ಲಕ್ಷ ಮೌಲ್ಯದ 70 ಕೆಜಿ ಶ್ರೀಗಂಧದ ಸೇಗು ತುಂಡುಗಳ ವಶಕ್ಕೆ ಪಡೆಯುವುದರಲ್ಲಿ ಚಿಕ್ಕಬಳ್ಳಾಪುರ ಪೊಲೀಸರು ಯಶಸ್ವಿಯಾಗಿದ್ದಾರೆ.

ಈ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಆವರಣದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಈ ಬಗ್ಗೆ ಮಾಹಿತಿ ನೀಡಿ; ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಶ್ರೀಗಂಧದ ಮರದ ತುಂಡುಗಳನ್ನು ಮಾರಾಟ ಮಾಡುತ್ತಿದ್ದ 7 ಮಂದಿ ಆರೋಪಿಗಳನ್ನು ಬಂಧಿಸಿ ಅವರಿಂದ 21 ಲಕ್ಷ 6 ಸಾವಿರ ರೂ ಮೌಲ್ಯದ 70 ಕೆಜಿ ಶ್ರೀಗಂಧದ ಸೇಗು ತುಂಡುಗಳ ವಶಕ್ಕೆ ಪಡೆದುಕೊಂಡು 9 ಪ್ರಕರಣಗಳನ್ನು ಇತ್ಯರ್ಥಗೊಳಿಸಿರುವುದಾಗಿ ತಿಳಿಸಿದರು.

ಶ್ರೀಗಂಧದ ಮರಗಳ ತುಂಡಗಳನ್ನು ಕದ್ದು ಮಾರಾಟ ಮಾಡುತ್ತಿದ್ದ ದಬರಗಾನಹಳ್ಳಿಯ ಮುನಿರಾಜು ಬಿನ್ ಆಂಜಿನಪ್ಪ, ಪ್ರಸನ್ನ ಬಿನ್ ಚಿಕ್ಕಪ್ಪಯ್ಯ, ಪ್ರದೀಪ್ ಬಿನ್ ಮುನಿರಾಜು, ಕೃಷ್ಣಮೂರ್ತಿ ಬಿನ್ ಮುನಿಯಪ್ಪ, ಹೊಸಕೋಟೆ ತಾಲೂಕಿನ ಕಟ್ಟಿಗೇನಹಳ್ಳಿಯ ಮೊಹ್ಮದ್ ಇಸ್ಮಾಯೀಲ್ ಹಾಗೂ ಇವರ ಸಹಚರರಾದ ನರಸಿಂಹಮೂರ್ತಿ, ಮುನಿರಾಜು ಎಂಬುವರನ್ನು ಬಂಧಿಸಿ ಮಾಲು ವಶಕ್ಕೆ ಪಡೆಯಲಾಗಿದೆ ಎಂದು ಜಿ.ಕೆ.ಮಿಥುನ್ ಕುಮಾರ್ ವಿವರಿಸಿದರು.

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಚೌಡದೇನಹಳ್ಳಿ ವಾಸಿ ರಮೇಶ್ ಬಿನ್ ಬೈರೆಡ್ಡಿ ಅವರು ತಮ್ಮ ಜಮೀನಿನಲ್ಲಿ ಬೆಳೆದಿರುವ ಶ್ರೀಗಂಧ ಮರಗಳನ್ನು ನ.22 ರ ರಾತ್ರಿ ಯಾರೋ ಕಳ್ಳರು ಕಟಾವು ಮಾಡಿದ್ದಾರೆ ಎಂದು ದೂರು ನೀಡಿದ ಮೇರೆಗೆ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಶ್ರೀಗಂಧ ಕಳವು ಪ್ರಕರಣ ದಾಖಲಿಸಿ ಮುಂದಿನ ಕ್ರಮ ಜರುಗಿದಿದ್ದರು.

ಅದರಂತೆ ಜನವರಿ 3 ರಂದು 6 ಗಂಟೆಯ ಸಮಯದಲ್ಲಿ ಸಿಪಿಐ ವಿಶ್ವಾಸ್ ಎ.ಎಸ್ ಅವರ ಸೂಚನೆ ಮೇರೆಗೆ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್‍ಐ ನಾರಾಯಣಸ್ವಾಮಿ ಅವರು ತಮ್ಮ ತಂಡದ ಸಿಬ್ಬಂದಿಯೊಂದಿಗೆ ಕಡಪ- ಬೆಂಗಳೂರು ರಸ್ತೆಯ ಮಾಡಿಕೆರೆ ಕ್ರಾಸ್ ಬಳಿ ವಾಹನ ತಪಾಸಣೆ ಮಾಡುತ್ತಿದ್ದ ಸಮಯದಲ್ಲಿ ಯಾರೋ ಐದು ಜನ ಎರಡು ದ್ವಿಚಕ್ರ ವಾಹನಗಳಲ್ಲಿ ಮದನಪಲ್ಲಿ ಕಡೆಯಿಂದ ಬರುತ್ತಿದ್ದು, ಪೊಲೀಸರನ್ನು ಕಂಡು ತಮ್ಮ ದ್ವಿಚಕ್ರ ವಾಹನವನ್ನು ಹಿಂದಕ್ಕೆ ತಿರುಗಿಸಿಕೊಂಡು ವಾಪಸ್ಸು ಹೋಗುತ್ತಿದ್ದವರನ್ನು ಹಿಂಬಾಲಿಸಿ ವಾಹನಗಳನ್ನು ತಡೆದು ನಿಲ್ಲಿಸುವಷ್ಟರಲ್ಲಿ ದ್ವಿಚಕ್ರ ವಾಹನದಿಂದ ಒಬ್ಬ ಆಸಾಮಿ ಒಂದು ಗೋಣಿ ಚೀಲವನ್ನು ಕೆಳಗೆ ಬೀಳಿಸಿದ್ದು ಅದರಿಂದ ಕೆಲವು ಮರದ ತುಂಡುಗಳು ಕೆಳಗೆ ಬಿದ್ದಿದ್ದು ಆ ತುಂಡುಗಳನ್ನು ಪರಿಶೀಲನೆ ನಡೆಸಿದಾಗ ಇವು ಶ್ರೀಗಂಧದ ಸೇಗು ತುಂಡುಗಳಾಗಿದೆಯೆಂದು ಖಾತ್ರಿ ಪಡೆಸಿಕೊಂಡು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ವೇಳೆ ಕಳ್ಳತನದ ಕೃತ್ಯವನ್ನು ಬಾಯಿ ಬಿಟ್ಟಿದ್ದಾರೆ.

ಆರೋಪಿಗಳ ಮೇಲೆ ನಂದಿಗಿರಿಧಾಮ ಪೊಲೀಸ್ ಠಾಣೆ, ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ, ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆ 3 ಪ್ರಕರಣ, ಬಟ್ಲಹಳ್ಳಿ ಪೊಲೀಸ್ ಠಾಣೆ 2 ಪ್ರಕರಣ, ಶ್ರೀನಿವಾಸಪುರ ಪೊಲೀಸ್ ಠಾಣೆ ಹಾಗೂ ಕೋಲಾರ ಜಿಲ್ಲೆಯ ನಂಗಲಿ ಪೊಲೀಸ್ ಠಾಣೆಯಲ್ಲಿ ಒಟ್ಟು 9 ಪ್ರಕರಣಗಳನ್ನು ದಾಖಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಇದೇ ವೇಳೆ ಮಾಹಿತಿ ನೀಡಿದರು.

ಪರಕರಣಗಳನ್ನು ಪತ್ತೆ ಹಚ್ಚಲು ಚಿಂತಾಮಣಿ ಸಹಾಯಕ ಪೊಲೀಸ್ ಅಧೀಕ್ಷಕ ಕುಶಲ್ ಚೌಕ್ಷೆ (ಐಪಿಎಸ್) ಅವರ ನೇತೃತ್ವದಲ್ಲಿ ವಿಶ್ವಾಸ್ ಎ.ಎಸ್. ಪೊಲೀಸ್ ಇನ್ಸ್‍ಪೆಕ್ಟರ್ ಚಿಂತಾಮಣಿ ಗ್ರಾಮಾಂತರ ಠಾಣೆ, ಪುರುಷೋತ್ತಮ್ ಸಿ.ಪಿ.ಐ ಕೆಂಚಾರಹಳ್ಳಿ ವೃತ್ತ, ನಾರಾಯಣಸ್ವಾಮಿ ಅಲ್, ಪಿ.ಎಸ್.ಐ ಬತ್ತಿಹಳ್ಳಿ ಠಾಣೆ, ನಾರಾಯಣಸ್ವಾಮಿ ಸಿ ಪೊಲೀಸ್ ಸಬ್ ಇನ್ಸ್‍ಪೆಕ್ಟರ್, ಸಂದೀಪ್ ಕುಮಾರ ಹೆಚ್.ಸಿ, ಜಗದೀಶ್ ಹೆಚ್.ಸಿ, ವೆಂಕಟರವಣ ಪಿ.ಸಿ, ಮಣಿಕಂಠ ಪಿ.ಸಿ, ಪದ್ಮ ಎಲ್ ಮಹಿಳಾ ಎ.ಎಸ್.ಐ, ಸತೀಶ ಪಿ.ಸಿ, ಶ್ರೀನಿವಾಸಪ್ಪ ಎ.ಹೆಚ್.ಸಿ ಚಾಲಕ, ಸುರೇಶ್ ಹೆಚ್.ಸಿ,ರವಿಕುಮಾರ್ ಸಿ.ಹೆಚ್.ಸಿ ಡಿ.ಪಿ.ಓ ಗಣಕ ಯಂತ್ರ ವಿಭಾಗ, ಅವರಗಳನ್ನೊಳಗೊಂಡ ತಂಡವನ್ನು ರಚಿಸಿ ಪತ್ತೆ ಕಾರ್ಯದಲ್ಲಿ ತೊಡಗಿದ್ದರು.
ಸುದ್ದಿಗೋಷ್ಠಿಯಲ್ಲಿ ಸಹಾಯಕ ಪೊಲೀಸ್ ಅಧೀಕ್ಷಕ ಕುಶಲ್ ಚೌಕ್ಷೆ(ಐಪಿಎಸ್) ಹಾಗೂ ಪೊಲೀಸ್ ಅಧಿಕಾರಿಗಳ ತಂಡ ಉಪಸ್ಥಿತರಿದ್ದರು.

Tags: chandanachikkaballapuracknewsnowcrimekarnatakanewspoliceSandalSandal theftsmuggling
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

by cknewsnow desk
October 25, 2026
0

ಹಾಲಿ ಮುಖ್ಯಮಂತ್ರಿ ವಿರುದ್ಧ ಕೇಂದ್ರ ಸಚಿವರ ಗಂಭೀರ ಆರೋಪ; ಈಗಿನ ಮಹಾನ್ ಮುಖ್ಯಮಂತ್ರಿಗಳೇ ಸ್ಟಿಂಗ್ ಮೂಲಪುರುಷ

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

by cknewsnow desk
October 25, 2026
0

ಸ್ಟಿಂಗ್ ಆಪರೇಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ್ದು ಇಬ್ಬಗೆ ನೀತಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

by cknewsnow desk
October 25, 2026
0

ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ; #kpsc ಹಗರಣದ ದಿಕ್ಕು ತಪ್ಪಿಸಲು ಪ್ರಿಯಾಂಕ್ ಖರ್ಗೆ ಒದ್ದಾಟ

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

by cknewsnow desk
October 22, 2026
0

ಬೇಸತ್ತು ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದ ಕೇಂದ್ರ ಸಚಿವ #HDK

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

by cknewsnow desk
October 22, 2026
0

ಮೈಸೂರು ದಸರಾದಲ್ಲಿ ಅವಮಾನ ಪ್ರಸಂಗ; ಬಾಯಲ್ಲಿ ಜಾತ್ಯತೀತ ತತ್ವ, ಆಚರಣೆಯಲ್ಲಿ ಅಸೃಶ್ಯತೆ!; ಕಾಂಗ್ರೆಸ್ ವಿರುದ್ಧ ಜೆಡಿಎಸ್ ವಾಗ್ದಾಳಿ

ದಸರಾದಲ್ಲಿ ದಲಿತ ಮಂತ್ರಿಗಳಿಗೆ ಅವಮಾನ; ಪ್ರಿಯಾಂಕ್ ಖರ್ಗೆ ನೈತಿಕ ಹೊಣೆ ಹೊರಬೇಕು ಎಂದ JDS

ದಸರಾದಲ್ಲಿ ದಲಿತ ಮಂತ್ರಿಗಳಿಗೆ ಅವಮಾನ; ಪ್ರಿಯಾಂಕ್ ಖರ್ಗೆ ನೈತಿಕ ಹೊಣೆ ಹೊರಬೇಕು ಎಂದ JDS

by cknewsnow desk
October 22, 2026
0

ಜೂನಿಯರ್ ಖರ್ಗೆ ರಾಜೀನಾಮೆಗೆ ಜೆಡಿಎಸ್ ದಲಿತ ನಾಯಕರ ಅಗ್ರಹ; ಶಿಷ್ಟಾಚಾರ ಲೋಪಕ್ಕೆ ಗೃಹ ಇಲಾಖೆ ಕಾರಣ

Next Post
ಲಸಿಕೆ: ಗುಜರಾತ್‌ಗೆ ಬೆಣ್ಣೆ! ಕರ್ನಾಟಕಕ್ಕೆ ಸುಣ್ಣ!!

ನಾನು ಹಾಗೂ ಸಿದ್ದರಾಮಯ್ಯ ಇಬ್ಬರೇ ನಡೆಯುತ್ತೇವೆ ಎಂದ ಡಿಕೆಶಿ

Leave a Reply Cancel reply

Your email address will not be published. Required fields are marked *

Recommended

ಆಮ್ಲಜನಕ, ರೆಮಿಡಿಸ್ವೀರ್‌ ಕೃತಕ ಅಭಾವ ಸೃಷ್ಟಿ!! ಸೋಂಕಿತರ ಸಂಖ್ಯೆಗೂ-ಬೇಡಿಕೆಗೂ ತಾಳ-ಮೇಳವಿಲ್ಲ, ಸಪ್ಲೈ ಆಗುತ್ತಿರುವುದೆಲ್ಲ ಎಲ್ಲಿ ಹೋಗುತ್ತಿದೆ ಎಂದು ಪ್ರಶ್ನಿಸಿದ ಡಿಸಿಎಂ

ಇನ್ನು 10 ದಿನದಲ್ಲಿ ರಾಜ್ಯದ ಎಲ್ಲ ಉನ್ನತ ಶಿಕ್ಷಣ ವಿದ್ಯಾರ್ಥಿಗಳಿಗೂ ಕೋವಿಡ್‌ ವ್ಯಾಕ್ಸಿನ್‌

5 years ago
ಗಡಿನಾಡಿನಲ್ಲೊಬ್ಬ ಫುಕುವೋಕಾ! ಅರತ್ತೈದರ ಪ್ರಾಯದಲ್ಲೂ ಸಾವಯವ ಕೃಷಿ ಮೇಲೆ ವ್ಯಾಮೋಹ; ಬರಪೀಡಿತ ಗಡಿ ಪ್ರದೇಶದಲ್ಲಿ ವರ್ಷಕ್ಕೆರಡು ಭತ್ತದ ಬೆಳೆ

ಪಿಎಂ ಕಿಸಾನ್: ಚಿಕ್ಕಬಳ್ಳಾಪುರಕ್ಕೆ 1,47,466, ಕೋಲಾರಕ್ಕೆ 1,55,284 ಕೋಟಿ ರೂ. ಬಿಡುಗಡೆ

5 years ago

Popular News

  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0
  • 10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

    0 shares
    Share 0 Tweet 0
  • ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

October 25, 2026
ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

October 22, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ