• About
  • Advertise
  • Careers
  • Contact
Thursday, October 29, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಜೆಡಿಎಸ್’ನಿಂದ ಜನತಾ ಜಲಧಾರೆ

P K Channakrishna by P K Channakrishna
January 7, 2022
in STATE
Reading Time: 1 min read
0
ಜೆಡಿಎಸ್’ನಿಂದ ಜನತಾ ಜಲಧಾರೆ
970
VIEWS
FacebookTwitterWhatsuplinkedinEmail

ಗಂಗಾ ರಥವನ್ನು ಅನಾವರಣಗೊಳಿಸಿದ ಹೆಚ್.ಡಿ.ದೇವೇಗೌಡರು, ಹೆಚ್.ಡಿ.ಕುಮಾರಸ್ವಾಮಿ; ಜನವರಿ 26ಕ್ಕೆ ರಾಜ್ಯಾದ್ಯಂತ ಪವಿತ್ರ ಜಲ ಸಂಗ್ರಹ

ಬೆಂಗಳೂರು: ರಾಜ್ಯದ ಎಲ್ಲಾ ಭಾಗಗಳಿಗೂ ನೀರು ಒದಗಿಸುವ, ಲಭ್ಯ ನೀರನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಹಾಗೂ ನೆನೆಗುದಿಗೆ ಬಿದ್ದಿರುವ ಎಲ್ಲ ನೀರಾವರಿ ಯೋಜನೆಗಳನ್ನು ಜಾರಿ ಮಾಡುವ ಮಹಾ ಸಂಕಲ್ಪದೊಂದಿಗೆ ಜೆಡಿಎಸ್ ಪಕ್ಷದಿಂದ ರಾಜ್ಯವ್ಯಾಪಿ ಇದೇ ಜನವರಿ 26ರಿಂದ ‘ ಜನತಾ ಜಲಧಾರೆ ‘ ಎಂಬ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದರು.

ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಇಂದು ಜನತಾ ಜಲಧಾರೆಗೆ ಹೊರಡಲಿರುವ ಗಂಗಾ ರಥವನ್ನು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ಮತ್ತು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಮಾಧ್ಯಮಗಳ ಮುಂದೆ ಅನಾವರಣಗೊಳಿಸಿದರು.

#ಸಮೃದ್ಧ_ಕರ್ನಾಟಕ_ನಿರ್ಮಾಣ ನಿರ್ಮಾಣಕ್ಕೆ ಶುಭಸಂಕಲ್ಪ.#ಸಸ್ಯ_ಶ್ಯಾಮಲ ; ಕೃಷಿಗೆ ಸಮೃದ್ಧ ನೀರು,#ಜಲ_ಶ್ಯಾಮಲ ; ಕುಡಿಯಲು ಸಮೃದ್ಧ ನೀರು
ಈ ಗುರಿಯೊಂದಿಗೆ ಜೆಡಿಎಸ್ ಪಕ್ಷವು ʼಜನತಾ ಜಲಧಾರೆʼ ಕಾರ್ಯಕ್ರಮ ರೂಪಿಸಿದೆ. ಜ.26ರಿಂದ ರಾಜ್ಯಾದ್ಯಂತ ಪವಿತ್ರ ನದಿ ಜಲ ಸಂಗ್ರಹಕ್ಕೆ ಚಾಲನೆ ಸಿಗಲಿದ್ದು, ಕರುನಾಡಿನಲ್ಲಿ ಜಲಜಾತ್ರೆ ಕಳೆಗಟ್ಟಲಿದೆ. pic.twitter.com/CWuw03t2SQ

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) January 7, 2022

ಬಳಿಕ ಹೆಚ್.ಡಿ.ಕುಮಾರಸ್ವಾಮಿ ಅವರು ಜನತಾ ಜಲಧಾರೆಯ ಪೂರ್ಣ ವಿವರಗಳನ್ನು ಮಾಧ್ಯಮಗಳಿಗೆ ನೀಡಿದರು. ಈ ಸಂದರ್ಭದಲ್ಲಿ ಜನತಾ ಜಲಧಾರೆಯ ಲಾಂಛನ ಬಿಡುಗಡೆ ಮಾಡಿ ಅವರು ಹಂಚಿಕೊಂಡ ಮಾಹಿತಿ ಹೀಗಿದೆ;

ಕರ್ನಾಟಕ ಅತಿವೃಷ್ಟಿ- ಅನಾವೃಷ್ಟಿಗೆ ತುತ್ತಾಗುವ ರಾಜ್ಯ. ಇದು ಪ್ರತೀ ವರ್ಷ ಕಥೆ. ಅಗಾಧವಾಗಿ ಸುರಿಯುವ ಮಳೆ ನೀರನ್ನು ಪೋಲಾಗದಂತೆ ಬಳಕೆ ಮಾಡಿಕೊಳ್ಳುವುದು ಹಾಗೂ ವರುಣನ ಕೃಪೆ ಇಲ್ಲದೆ ಸದಾ ಬರದಿಂದ ತತ್ತರಿಸುವ ಬಯಲುಸೀಮೆಯನ್ನು ಜಲಶ್ಯಾಮಲಗೊಳಿಸುವ ಕನಸು ನಮ್ಮದು.

ಸಸ್ಯಶ್ಯಾಮಲದ ಕನಸಿನೊಂದಿಗೆ ಕೃಷಿಗೆ ಸಮೃದ್ಧ ನೀರು ಹಾಗೂ ಜಲ ಶ್ಯಾಮಲಕ್ಕಾಗಿ ಕುಡಿಯಲು ಸಮೃದ್ಧ ನೀರು ಒದಗಿಸುವುದು ನಮ್ಮ ಗುರಿ. ಆ ನಿಟ್ಟಿನಲ್ಲಿ ಜಾತ್ಯತೀತ ಜನತಾದಳ ಏನು ಮಾಡುತ್ತದೆ? ಯಾವ ಕಾರ್ಯಕ್ರಮಗಳನ್ನು ಹಾಕಿಕೊಂಡಿದೆ? ಎಂಬ ಬಗ್ಗೆ ಜನರಿಗೆ ಹೇಳುತ್ತೇವೆ.

ಗಂಗೆಯನ್ನು ಪರಮ ಪವಿತ್ರವೆಂದು ಭಾವಿಸುವ ಪರಂಪರೆ ನಮ್ಮದು. ಈ ನಂಬಿಕೆಗೆ ಚ್ಯುತಿ ಬಾರದಂತೆ ಶ್ರದ್ಧಾ ಭಕ್ತಿಯಿಂದ ರಾಜ್ಯದ 15 ನದಿಗಳ ಪವಿತ್ರ ಜಲವನ್ನು ಕಲಶಗಳಲ್ಲಿ ಸಂಗ್ರಹ ಮಾಡಿ, ಆ ನೀರನ್ನು ಬೆಂಗಳೂರಿನ ಪಕ್ಷದ ಕೇಂದ್ರ ಕಚೇರಿ ಜೆಪಿ ಭವನಕ್ಕೆ ಬರಮಾಡಿಕೊಂಡು ಗಂಗಾಪೂಜೆ ನೆರೆವೇರಿಸುವುದು.

ಜ.23ಕ್ಕೆ ಗಂಗಾ ರಥಗಳಿಗೆ ಹಸಿರು ನಿಶಾನೆ

ಜನವರಿ 23ರಂದು ರಾಮನಗರದ ಶ್ರೀ ಚಾಮುಂಡೇಶ್ವರಿ ಅಮ್ಮನವರ ದೇಗುಲದಿಂದ ರಾಜ್ಯದ 15 ದಿಕ್ಕುಗಳಿಗೆ ಹೊರಡುವ ಗಂಗಾ ರಥಗಳಿಗೆ (15 ವಾಹನಗಳು) ನಾನು, ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಮತ್ತು ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ.ದೇವೇಗೌಡರು ಹಾಗೂ ನಮ್ಮ ಪಕ್ಷದ ರಾಜ್ಯಾಧ್ಯಕ್ಷರಾದ ಹೆಚ್.ಕೆ.ಕುಮಾರಸ್ವಾಮಿ ಅವರು ಚಾಲನೆ ನೀಡುವರು.

ಜ.26ರಿಂದ ಜಲಧಾರೆ ಆರಂಭ

ಜನವರಿ 26ರಂದು ಇಷ್ಟೂ ವಾಹನಗಳಲ್ಲಿ ಅಳವಡಿಸಲಾಗಿರುವ ಕಲಶಗಳ ಮೂಲಕ ಪೂರ್ವ ನಿಗದಿ ಮಾಡಲಾಗಿರುವ ಸ್ಥಳಗಳಲ್ಲಿ ಬೆಳಗ್ಗೆ 9 ಗಂಟೆಗೆ ಕಾವೇರಿ, ಕಬಿನಿ, ಮೇಕೆದಾಟು, ಹೇಮಾವತಿ, ನೇತ್ರಾವತಿ, ಕುಮಾರಧಾರ, ತುಂಗಭದ್ರಾ, ಶರಾವತಿ, ಅಘನಾಶಿನಿ, ಕೃಷ್ಣಾ, ಘಟಪ್ರಭಾ, ಮಲಪ್ರಭಾ, ಭೀಮಾ, ಅರ್ಕಾವತಿ, ಉತ್ತರ ಪಿನಾಕಿನಿ, ಚಿತ್ರಾವತಿ ಸೇರಿ 15 ಸ್ಥಳಗಳಲ್ಲಿ ಮೊದಲ ದಿನ ಜಲ ಸಂಗ್ರಹ ಮಾಡಲಾಗುವುದು.

ಜಲ ಸಂಗ್ರಹ ಮಾಡುವ ದಿನ ರಾಜ್ಯದ ವಿವಿಧ ಭಾಗಗಳಲ್ಲಿ ನಾನು, ದೇವೇಗೌಡರು, ಹೆಚ್.ಕೆ.ಕುಮಾರಸ್ವಾಮಿ, ಹೆಚ್.ಡಿ.ರೇವಣ್ಣ, ಬಂಡೆಪ್ಪ ಕಾಶೆಂಪೂರ್, ಸಾ.ರಾ.ಮಹೇಶ್, ನಾಡಗೌಡರು, ಅನಿತಾ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ, ಪ್ರಜ್ವಲ್ ರೇವಣ್ಣ, ಸೂರಜ್ ರೇವಣ್ಣ ಸೇರಿದಂತೆ ಪಕ್ಷದ ಎಲ್ಲ ನಾಯಕರು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.

ಒಟ್ಟು 51 ಕಡೆ ಜಲ ಸಂಗ್ರಹ

ಇಡೀ ಜಲಧಾರೆ ಕಾರ್ಯಕ್ರಮದಲ್ಲಿ ಒಟ್ಟು 51 ಸ್ಥಳಗಳಲ್ಲಿ ಪವಿತ್ರ ನದಿಗಳ ಜಲ ಸಂಗ್ರಹ ಮಾಡಲಾಗುವುದು. ರಾಜ್ಯದ 180 ವಿಧಾನಸಭೆ ಕ್ಷೇತ್ರಗಳು, 140 ತಾಲ್ಲೂಕು ಕೇಂದ್ರಗಳಲ್ಲಿ ಈ ಕಲಶಗಳು ಹಾದು ಹೋಗಲಿದ್ದು, ಎಲ್ಲೆಡೆ ಜಲ ತುಂಬಿದ ಕಲಶಗಳ ಮೆರೆವಣಿಗೆ, ಕಲಾ ತಂಡಗಳ ಮೆರಗು, ಮಂಗಳವಾದ್ಯಗಳ ಮೇಳ, ಕಲಶಗಳೊಂದಿಗೆ ಮಹಿಳೆಯರ ನಡಿಗೆ ನಡೆಯಲಿದೆ. ದಿನಂಪ್ರತಿ 15 ಕಡೆ ಇಂಥ ಕಾರ್ಯಕ್ರಮಗಳು ನಡೆಯಲಿವೆ.

ಬೆಂಗಳೂರಿನಲ್ಲಿ ಬೃಹತ್ ಕಾರ್ಯಕ್ರಮ

ರಾಜ್ಯದ ಉದ್ದಗಲಕ್ಕೂ ಸಾಗಿ ಬರುವ ಈ ಹದಿನೈದೂ ವಾಹನಗಳು 15-20 ದಿನಗಳ ಒಳಗಾಗಿ ಬೆಂಗಳೂರು ತಲುಪುತ್ತವೆ. ಅಂದು ಇಡೀ ಬೆಂಗಳೂರನ್ನು ಪ್ರದಕ್ಷಿಣೆ ಹಾಕುವ ಇಷ್ಟೂ ವಾಹಗಳು ಅದೇ ದಿನ ಸಂಜೆ ಅರಮನೆ ಮೈದಾನದಲ್ಲಿ ಸೇರಲಿವೆ. ಆ ನಂತರ ಎರಡು ದಿನಗಳಲ್ಲಿ ಒಂದು ಬೃಹತ್ ಕಾರ್ಯಕ್ರಮ ನಡೆಯಲಿದ್ದು, ರಾಜ್ಯದ ಉದ್ದಗಲಕ್ಕೂ ಸಂಗ್ರಹಿಸಲಾದ ಜಲವನ್ನು ದೊಡ್ಡ ಕಲಶಕ್ಕೆ ತುಂಬಿಸಿ ಗಂಗಾ ಪೂಜೆ, ಗಂಗಾ ಆರತಿ ಕಾರ್ಯಕ್ರಮಗಳನ್ನು ನೆರವೇರಿಸಲಾಗುವುದು. ಆ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ.ದೇವೇಗೌಡರು, ನಾಡಿನ ಧರ್ಮಗುರುಗಳು, ಗುರು ಹಿರಿಯರು ಸೇರಿ ಅನೇಕ ಗಣ್ಯರು ಭಾಗಿಯಾಗಲಿದ್ದಾರೆ.

ವರ್ಷವಿಡೀ ಗಂಗಾ ಪೂಜೆ

ಆ ಕಾರ್ಯಕ್ರಮ ಮುಗಿದ ನಂತರ ಪೂಜಿಸಲ್ಪಟ್ಟಿದ್ದ ಪವಿತ್ರ ಜಲವುಳ್ಳ ಕಲಶವನ್ನು ಬೆಂಗಳೂರಿನ ವಿವಿಧೆಡೆಗಳಿಂದ ಮೆರವಣಿಗೆ ಮೂಲಕ ಪಕ್ಷದ ರಾಜ್ಯ ಕಚೇರಿ ಜೆಪಿ ಭವನಕ್ಕೆವಿದ್ಯುಕ್ತವಾಗಿ ಬರ ಮಾಡಿಕೊಂಡು ಆ ಕಲಶ ಪ್ರತಿಷ್ಠಾಪನೆ ಮಾಡಲಾಗುವುದು. ಅಂದಿನಿಂದ ಮುಂದಿನ 391 ದಿನಗಳ ಕಾಲ ಗಂಗಾ ಪೂಜೆ, ಗಂಗಾ ಆರತಿ ನಿರಂತರವಾಗಿ ನಡೆಯಲಿದೆ. ಆ ನಿತ್ಯ ಪೂಜೆಯಲ್ಲಿ ಪಕ್ಷದ ಎಲ್ಲ ಮುಖಂಡರು, ಕಾರ್ಯಕರ್ತರು ಹಾಗೂ ಮಹಿಳಾ ಕಾರ್ಯಕರ್ತರು ಭಾಗಿಯಾಗಲಿದ್ದಾರೆ.

ಕೋವಿಡ್ ಬಗ್ಗೆ ಮುನ್ನೆಚ್ಚರಿಕೆ ವಹಿಸುತ್ತೇವೆ

ನಮಗೆ ಧಾವಂತವಿಲ್ಲ. ವೈರಸ್ ನಿಯಂತ್ರಣಕ್ಕೆ ಸರಕಾರ ಜಾರಿ ಮಾಡುವ ಎಲ್ಲಾ ನಿಯಮಗಳಿಗೆ ಬದ್ಧರಾಗಿ ಜಲಧಾರೆ ಕಾರ್ಯಕ್ರಮ ನಡೆಸುತ್ತೇವೆ. ಕಾಂಗ್ರೆಸ್ ನಾಯಕರಂತೆ ಅನುಮತಿ ಕೊಡದಿದ್ದರೆ ಪ್ರಾಣ ಬಿಡುತ್ತೇವೆ ಎಂದು ನಾವು ಬೆದರಿಕೆ ಹಾಕುವುದಿಲ್ಲ ಎಂದರು ಕುಮಾರಸ್ವಾಮಿ ಅವರು.

ರಾಜ್ಯಕ್ಕೆ ನಿರಂತರ ಅನ್ಯಾಯ

ನೀರಿನ ಬಗ್ಗೆ ಇಡೀ ದೇಶದಲ್ಲೇ ಅತ್ಯಂತ ಕಿರುಕುಳಕ್ಕೆ ಒಳಗಾದ, ಅಷ್ಟೇ ಅನ್ಯಾಯಕ್ಕೆ ಒಳಗಾದ ರಾಜ್ಯ ಕರ್ನಾಟಕ. ಒಕ್ಕೂಟ ವ್ಯವಸ್ಥೆಯಲ್ಲೇ ಇದ್ದರೂ ಭಾಷೆ, ನೆಲ, ಜಲ, ಅಭಿವೃದ್ಧಿ, ಅನುದಾನ; ಇತ್ಯಾದಿಗಳಲ್ಲಿ ಇನ್ನಿಲ್ಲದ ಅವಗಣನೆಗೆ ಒಳಗಾದ ರಾಜ್ಯವೂ ಕರ್ನಾಟಕವೇ ಎಂದು ಮಾಜಿ ಸಿಎಂ ಹೇಳಿದರು.

ದಕ್ಷಿಣದ ಇತರೆ ರಾಜ್ಯಗಳಂತೆ ಕರ್ನಾಟಕದಲ್ಲಿ ಪ್ರಾದೇಶಿಕ ಶಕ್ತಿಗಳಿಗೆ ಜನರು ಉತ್ತೇಜನ ನೀಡಲಿಲ್ಲ. ಸದಾ ಕಾಲ ರಾಷ್ಟ್ರೀಯ ಪಕ್ಷಗಳೆಂಬ ಮಾಯಾಜಿಂಕೆಗಳನ್ನು ಬೆನ್ಹತ್ತಿದ ಪರಿಣಾಮ ಇಂದಿಗೂ ನಾವು ನೀರಿಗಾಗಿ ಮಹಾರಾಷ್ಟ್ರ, ಗೋವಾ, ತೆಲಂಗಾಣ, ಆಂಧ್ರ ಪ್ರದೇಶ, ತಮಿಳುನಾಡು, ಕೇರಳ ರಾಜ್ಯಗಳ ಜತೆ ಗುದ್ದಾಡುತ್ತಿದ್ದೇವೆ. ಈಗ ಮೇಕೆದಾಟು ಯೋಜನೆ ಆ ಒದ್ದಾಟದ ಹೊಸ ಹೆಸರು ಎಂದು ಅವರು ಟಾಂಗ್ ನೀಡಿದರು.

P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

by cknewsnow desk
October 28, 2026
0

ಬೆಂಗಳೂರಿನಲ್ಲಿ 43.13% ಮತದಾರರ ಪ್ರಮಾಣ ಕುಸಿತ

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

by cknewsnow desk
October 25, 2026
0

ಹಾಲಿ ಮುಖ್ಯಮಂತ್ರಿ ವಿರುದ್ಧ ಕೇಂದ್ರ ಸಚಿವರ ಗಂಭೀರ ಆರೋಪ; ಈಗಿನ ಮಹಾನ್ ಮುಖ್ಯಮಂತ್ರಿಗಳೇ ಸ್ಟಿಂಗ್ ಮೂಲಪುರುಷ

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

by cknewsnow desk
October 25, 2026
0

ಸ್ಟಿಂಗ್ ಆಪರೇಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ್ದು ಇಬ್ಬಗೆ ನೀತಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

by cknewsnow desk
October 25, 2026
0

ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ; #kpsc ಹಗರಣದ ದಿಕ್ಕು ತಪ್ಪಿಸಲು ಪ್ರಿಯಾಂಕ್ ಖರ್ಗೆ ಒದ್ದಾಟ

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

by cknewsnow desk
October 22, 2026
0

ಬೇಸತ್ತು ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದ ಕೇಂದ್ರ ಸಚಿವ #HDK

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

by cknewsnow desk
October 22, 2026
0

ಮೈಸೂರು ದಸರಾದಲ್ಲಿ ಅವಮಾನ ಪ್ರಸಂಗ; ಬಾಯಲ್ಲಿ ಜಾತ್ಯತೀತ ತತ್ವ, ಆಚರಣೆಯಲ್ಲಿ ಅಸೃಶ್ಯತೆ!; ಕಾಂಗ್ರೆಸ್ ವಿರುದ್ಧ ಜೆಡಿಎಸ್ ವಾಗ್ದಾಳಿ

Next Post
11 ಸಲ ಕಾಲ್‌ ಮಾಡಿದ  ಮಾಜಿ ಸಿಎಂ! ಜೆಡಿಎಸ್‌ ಶಾಸಕರ ಬ್ರೈನ್‌ವಾಶ್!!

ಇಲ್ಲಿ ಮೇಕೆದಾಟು ಹೋರಾಟ, ತಮಿಳುನಾಡಿನಲ್ಲಿ ಡಿಎಂಕೆ ಜತೆ ಒಡನಾಟ

Leave a Reply Cancel reply

Your email address will not be published. Required fields are marked *

Recommended

ರಸಪ್ರಶ್ನೆ: ಗುಡಿಬಂಡೆ ಶಾಲೆಗಳ ಮೂವರು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ರಸಪ್ರಶ್ನೆ: ಗುಡಿಬಂಡೆ ಶಾಲೆಗಳ ಮೂವರು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

3 years ago
ಮಾ.೨ಕ್ಕೆ ಬಾಗೇಪಲ್ಲಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ; ಸಮ್ಮೇಳನಾಧ್ಯಕ್ಷರಾಗಿ ಉದಯಕುಮಾರ್.ಎಸ್

ಮಾ.೨ಕ್ಕೆ ಬಾಗೇಪಲ್ಲಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ; ಸಮ್ಮೇಳನಾಧ್ಯಕ್ಷರಾಗಿ ಉದಯಕುಮಾರ್.ಎಸ್

3 years ago

Popular News

  • #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    0 shares
    Share 0 Tweet 0
  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0
  • 10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

October 28, 2026
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

October 25, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ