• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home COVID-19

ಕಾಂಗ್ರೆಸ್‌ನಿಂದ ಓಮಿಕ್ರಾನ್‌ ಸಮಾರಾಧನೆ

cknewsnow desk by cknewsnow desk
January 12, 2022
in COVID-19, STATE
Reading Time: 1 min read
0
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ
945
VIEWS
FacebookTwitterWhatsuplinkedinEmail

ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆರೋಪ

ಬೆಂಗಳೂರು: ಮೇಕೆದಾಟು ಹೆಸರಿನಲ್ಲಿ ಕಾಂಗ್ರೆಸ್ ನಡೆಸುತ್ತಿರುವ ಪಾದಯಾತ್ರೆಯ ಬಗ್ಗೆ ಬಗ್ಗೆ ರಾಜ್ಯ ಹೈಕೋರ್ಟ್ ಛೀಮಾರಿ ಹಾಕಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕೂಡಲೇ ಪಾದಯಾತ್ರೆ ನಿಲ್ಲಿಸಬೇಕು. ಒಂದು ವೇಳೆ ಅವರು ನಿಲ್ಲಿಸದಿದ್ದರೆ ಸರಕಾರವೇ ಕಠಿಣ ಕ್ರಮ ಕೈಗೊಂಡು ತಡೆಯಬೇಕು ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಒತ್ತಾಯ ಮಾಡಿದ್ದಾರೆ.

ಕೋವಿಡ್ ಸೋಂಕು ಎಲ್ಲೆಲ್ಲೂ ವಿಜೃಂಭಿಸುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಜನರ ಆರೋಗ್ಯ-ಜೀವದ ಲೆಕ್ಕವಿಲ್ಲದ ರಾಜಕೀಯಕ್ಕಾಗಿ ಈ ಯಾತ್ರೆ ಕೈಗೊಂಡಿದೆ ಎಂದು ಅವರು ಹೇಳಿದ್ದಾರೆ.

ಮೇಕೆದಾಟು ಪಾದಯಾತ್ರೆಯನ್ನು ʼಓಮಿಕ್ರಾನ್ ಜಾತ್ರೆʼಯನ್ನಾಗಿ ಪರಿವರ್ತಿಸಿದ ಕಾಂಗ್ರೆಸ್ ಪಕ್ಷಕ್ಕೆ ರಾಜ್ಯ ಹೈಕೋರ್ಟ್ ಛೀಮಾರಿ ಹಾಕಿದೆ. ಸೋಂಕನ್ನು ನಿರ್ಲಕ್ಷಿಸಿದ ಸರಕಾರಕ್ಕೂ ಚಾಟಿ ಬೀಸಿದೆ. ಕೂಡಲೇ ಈ ಬಗ್ಗೆ ಸರಕಾರ ಕಠಿಣ ಕ್ರಮ ಕೈಗೊಳ್ಳಬೇಕು. ನೀರಿನ ನೆಪದ ಈ ದೊಂಬರಾಟಕ್ಕೆ ಕೊನೆ ಹಾಡಬೇಕು.1/10

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) January 12, 2022

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು ಕಾಂಗ್ರೆಸ್ ಮೇಲೆ ಟೀಕಾಪ್ರಹಾರ ನಡೆಸಿದ್ದಾರೆ. ಟ್ವೀಟ್ʼನ ಸಾರಾಂಶ ಹೀಗಿದೆ.

ಮೇಕೆದಾಟು ಪಾದಯಾತ್ರೆಯನ್ನು ʼಓಮಿಕ್ರಾನ್ ಜಾತ್ರೆʼಯನ್ನಾಗಿ ಪರಿವರ್ತಿಸಿದ ಕಾಂಗ್ರೆಸ್ ಪಕ್ಷಕ್ಕೆ ರಾಜ್ಯ ಹೈಕೋರ್ಟ್ ಛೀಮಾರಿ ಹಾಕಿದೆ. ಸೋಂಕಿನ ಬಗ್ಗೆ ನಿರ್ಲಕ್ಷ್ಯ ತೋರಿದ ಸರಕಾರಕ್ಕೂ ಚಾಟಿ ಬೀಸಿದೆ. ಸರಕಾರವು ಕೂಡಲೇ ಈ ಬಗ್ಗೆ ಕ್ರಮ ಕೈಗೊಳ್ಳಬೇಕು. ನೀರಿನ ಹೆಸರಿನಲ್ಲಿ ನಡೆಯುತ್ತಿರುವ ಈ ದೊಂಬರಾಟ ನಿಲ್ಲಿಸಬೇಕು.

ರಾಜ್ಯವ್ಯಾಪಿ ಕೋವಿಡ್ ವಿಜೃಂಭಿಸುತ್ತಿದೆ. ಸೋಂಕು ವೇಗವಾಗಿ ಹರಡುತ್ತಿದೆ. ಪಾದಯಾತ್ರೆಯಲ್ಲಿ ಭಾಗವಹಿಸಿದ್ದ ಅನೇಕ ನಾಯಕರಿಗೆ ಪಾಸಿಟವ್ ಆಗಿ ಅವರು ಆಸ್ಪತ್ರೆ ಸೇರಿಕೊಳ್ಳುತ್ತಿದ್ದಾರೆ. ಪರೀಕ್ಷೆ ನಡೆಸಿದರೆ ದೊಡ್ಡ ಸಂಖ್ಯೆಯ ಜನರು ಸೋಂಕಿತರಾಗಿರುವುದು ಪತ್ತೆಯಾಗುತ್ತದೆ.

ಕಳೆದ 4 ದಿನಗಳಿಂದ ಜಿಲ್ಲೆಗಳಿಂದ ಬಸ್ಸುಗಳಲ್ಲಿ ಜನರಿಗೆ ಹಣ ಕೊಟ್ಟು ಕರೆಸಿಕೊಂಡು ನಡೆಸುತ್ತಿರುವ ಈ ಜಾತ್ರೆಯಿಂದ ಮೇಕೆದಾಟು ಸಾಕಾರ ಅಸಾಧ್ಯ. ಇದು ʼಸೋಂಕಿನ ಸಮಾರಾಧನೆʼಯಷ್ಟೇ ಹೊರತು ಹೋರಾಟವಲ್ಲ. ಸರಕಾರ ಜಿಲ್ಲೆಗಳಿಂದ ಬರುವ ಜನರನ್ನು ಅಲ್ಲಲ್ಲಿಯೇ ತಡೆಯುವ ಕೆಲಸ ಮಾಡಬೇಕು.4/10

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) January 12, 2022

ನ್ಯಾಯಾಲಯದಿಂದ ಮತ್ತೆ ಛೀಮಾರಿ ಹಾಕಿಸಿಕೊಳ್ಳುವುದು ಬೇಡ. ಪರಿಸ್ಥಿತಿ ಕೈಮೀರಿದೆ. ಎಚ್ಚರ ತಪ್ಪಿದರೆ ಇರುವ ಆಸ್ಪತ್ರೆಗಳು, ವೈದ್ಯ ವ್ಯವಸ್ಥೆ ಸಾಲುವುದಿಲ್ಲ. ಕಳೆದ 4 ದಿನಗಳಿಂದ ಬಸ್ಸುಗಳಲ್ಲಿ ಜನರನ್ನು ಕರೆಸಿಕೊಂಡು ನಡೆಸುತ್ತಿರುವ ಈ ಜಾತ್ರೆಯಿಂದ ಮೇಕೆದಾಟು ಸಾಕಾರ ಅಸಾಧ್ಯ. ಇದು ʼಸೋಂಕಿನ ಸಮಾರಾಧನೆʼಯಷ್ಟೇ!

ಮೇಕೆದಾಟು ಬಗ್ಗೆ ಏನೇನು ಮಾಡಲಾಗಿದೆ ಎಂದು ಸರಕಾರ ಜಾಹೀರಾತು ನೀಡಿದೆ. ಬಿಜೆಪಿ-ಕಾಂಗ್ರೆಸ್ ಪಕ್ಷಗಳೂ ಜಾಹೀರಾತು ಕೊಟ್ಟುಕೊಂಡು ಸಮಜಾಯಿಷಿ ನೀಡಿವೆ. ಯಾವುದು ಸತ್ಯ? ಯಾವುದು ಸುಳ್ಳು? ಎನ್ನುವ ಲೆಕ್ಕವನ್ನು ನಾನು ಜನರ ಮುಂದೆ ಇಡುತ್ತೇನೆ. 1924ರಿಂದ ಕಾವೇರಿ ವಿಷಯದಲ್ಲಿ ಏನೆಲ್ಲಾ ನಡೆಯಿತು? ರಾಜ್ಯಕ್ಕೆಷ್ಟು ಅನ್ಯಾಯ ಆಯಿತು ಎಂಬುದನ್ನು ಮುಂದೆ ಚರ್ಚೆ ಮಾಡುತ್ತೇನೆ.

ಕಾಂಗ್ರೆಸ್ ಪಾದಯಾತ್ರೆಯಿಂದ ನಮ್ಮ ಪಕ್ಷಕ್ಕೇನು ಆತಂಕವಿಲ್ಲ. ಆದರೆ ಜನ ಆರೋಗ್ಯದ ಆತಂಕದಲ್ಲಿದ್ದಾರೆ. ಹಾಗಂತ, ಇವರ ಯಾತ್ರೆ ಬಗ್ಗೆ ಅಥವಾ ನಾಡಿನ ಪರ ದನಿಯೆತ್ತುವ ಬಗ್ಗೆ ನನ್ನ ತಕರಾರಿಲ್ಲ. ಆದರೆ, ಕೋವಿಡ್ ಅಟ್ಟಹಾಸದ ಹೊತ್ತಿನಲ್ಲಿ ಇದು ಖಂಡಿತಾ ಬೇಕಿರಲಿಲ್ಲ.

ಗಾಂಧೀಜಿ ಅವರ ಪಾದಯಾತ್ರೆ ಬಗ್ಗೆ ಓದಿದ್ದೇನೆ. ವಿನೋಬಾ ಭಾವೆ ಅವರ ಪಾದಯಾತ್ರೆ ಬಗ್ಗೆ ಅರಿತಿದ್ದೇನೆ. ದೇವೇಗೌಡರ ಪಾದಪಾತ್ರೆಯನ್ನು ಕಣ್ಣಾರೆ ಕಂಡಿದ್ದೇನೆ. ಆದರೆ, ಇಂಥ ʼಹೈಟೆಕ್ ಪಾದಯಾತ್ರೆʼಯನ್ನು ನೋಡಿರಲಿಲ್ಲ. ಇಂಥ ದೊಂಬರಾಟದಿಂದ ಕಾನೂನಿನ ವ್ಯಾಪ್ತಿಯಲ್ಲಿರುವ ಮೇಕೆದಾಟು ಯೋಜನೆ ಜಾರಿ ಸಾಧ್ಯವಿಲ್ಲ.

ಚುನಾವಣೆ ಹತ್ತಿರದಲ್ಲಿದೆ. ಕಾಂಗ್ರೆಸ್ ನಾಯಕರು ಪಕ್ಷದ ಸಂಘಟನೆ ಮಾಡಿಕೊಳ್ಳಲಿ. ಕೋವಿಡ್ ಇಳಿಮುಖವಾದ ನಂತರ ಅದನ್ನು ಮಾಡಲಿ. ಅದನ್ನು ಬಿಟ್ಟು ಜನರ ಜೀವದ ಜತೆ ಚೆಲ್ಲಾಟ ಆಡುವುದು ಸರಿಯಲ್ಲ. ಕಾಂಗ್ರೆಸ್ ಒಂದು ಜವಾಬ್ದಾರಿ ಪಕ್ಷವಾಗಿದ್ದರೆ ತಕ್ಷಣ ಪಾದಯಾತ್ರೆ ನಿಲ್ಲಿಸಲಿ. ಗಂಡಸ್ತನ ತೋರಿಸುವುದಕ್ಕೆ ಹೋಗಿ ʼಮೇಕೆದಾಟನ್ನು ಮಸಣʼ ಮಾಡುವುದು ಬೇಡ.

ಕಳೆದ 4 ದಿನಗಳಿಂದ ಸರಕಾರ ತೋರಿದ ಉದಾರತೆ ಸಾಕು. ಇನ್ನೂ ಔದಾರ್ಯ ತೋರಿದರೆ ರಾಜ್ಯದ ಅವನತಿಗೆ ದಾರಿಯಾದೀತು. ಕೋವಿಡ್ ನಿಯಮ ಪಾಲಿಸುವಂತೆ ಜನರಿಗೆ ಹಿಂಸೆ ಕೊಟ್ಟು, ರಾಜಕಾರಣಿಗಳಿಗೆ ವಿನಾಯಿತಿ ಕೊಡುವುದು ಉತ್ತಮ ಆಡಳಿತದ ಲಕ್ಷಣವಲ್ಲ. ಸರಕಾರ ಕೆಚ್ಚೆದೆಯ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯ ಮಾಡಿದ್ದಾರೆ.

cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಗೆ ಹೈಕೋರ್ಟ್ ಛೀಮಾರಿ

ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಗೆ ಹೈಕೋರ್ಟ್ ಛೀಮಾರಿ

Leave a Reply Cancel reply

Your email address will not be published. Required fields are marked *

Recommended

ಬರಪೀಡಿತ ಗುಡಿಬಂಡೆ ಈಗ ಜಲಪೀಡಿತ!

ಚಿಕ್ಕಬಳ್ಳಾಪುರ ಜನರಿಗೆ ಎಚ್ಚರಿಕೆ ಕೊಟ್ಟ ಎಸ್ಪಿ

4 years ago
ಕನ್ನಡ ಬಿಗ್‌ಬಾಸ್ ಸೀಸನ್ 3 ಸ್ಪರ್ಧಿ, ಕನ್ನಡ್ ಗೊತ್ತಿಲ್ಲ, ಉಪ್ಪು ಹುಳಿ ಖಾರ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಇನ್ನಿಲ್ಲ; ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ನಟಿ

ಕನ್ನಡ ಬಿಗ್‌ಬಾಸ್ ಸೀಸನ್ 3 ಸ್ಪರ್ಧಿ, ಕನ್ನಡ್ ಗೊತ್ತಿಲ್ಲ, ಉಪ್ಪು ಹುಳಿ ಖಾರ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಇನ್ನಿಲ್ಲ; ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ನಟಿ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ