• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home EDITORS'S PICKS

ಶುಭಾರಂಭದ ಸಂಕ್ರಮಣ

cknewsnow desk by cknewsnow desk
January 15, 2022
in EDITORS'S PICKS, GUEST COLUMN, STATE
Reading Time: 2 mins read
0
ಶುಭಾರಂಭದ ಸಂಕ್ರಮಣ
963
VIEWS
FacebookTwitterWhatsuplinkedinEmail

ಮಕರ ಸಂಕ್ರಾಂತಿಯ ವಿಶೇಷ

by Dr.Guruprasad Rao Hawaldar

ಸೂರ್ಯ ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಪ್ರವೇಶ ಮಾಡುವ ದಿನವನ್ನು ಸಂಕ್ರಾಂತಿ ಎಂದು ಕರೆಯುತ್ತಾರೆ. ಸೂರ್ಯನು ಒಂದು ರಾಶಿಯಲ್ಲಿ ಒಂದು ತಿಂಗಳ ಕಾಲ ಇರುತ್ತಾನೆ. ಸೂರ್ಯ, ಧನಸ್ಸು ರಾಶಿಯಿಂದ ಮಕರ ರಾಶಿಗೆ ಸೇರುವ ಸಮಯವನ್ನು ಮಕರ ಸಂಕ್ರಾಂತಿ ಎನ್ನುತ್ತಾರೆ.

ಸಂಕ್ರಾಂತಿ ಮುಖ್ಯವಾಗಿ ದಕ್ಷಿಣ ಭಾರತದಲ್ಲಿ ಆಚರಿಸಲಾಗುವ ಒಂದು ಹಬ್ಬ. ಪೈರು ತೆಗೆಯುವ ಸಂದರ್ಭದಲ್ಲಿ ಆಚರಿಸಲಾಗುವ ಸಂಕ್ರಾಂತಿ ಹಬ್ಬವು ಸಮೃದ್ಧಿಯ ಸಂಕೇತ. ಸಂಕ್ರಾಂತಿಯನ್ನು ಧಾರ್ಮಿಕ ತತ್ವಗಳಿಂದ ಸ್ವತಂತ್ರವಾಗಿ ಆಚರಿಸಲಾಗುತ್ತದೆಯಾದರೂ ವೇದಾಂಗ ಜ್ಯೋತಿಷಶಾಸ್ತ್ರದ ತಳಹದಿ ಹೊಂದಿರುವುದರಿಂದ ಮುಖ್ಯವಾಗಿ ಹಿಂದೂ ಧರ್ಮದವರಿಂದ ಆಚರಿಸಲ್ಪಡುತ್ತದೆ. ಕರ್ನಾಟಕ, ಆಂಧ್ರ ಪ್ರದೇಶ, ತೆಲಂಗಾಣ ಮತ್ತು ತಮಿಳುನಾಡುಗಳ ಮುಖ್ಯ ಹಬ್ಬಗಳಲ್ಲಿ ಸಂಕ್ರಾಂತಿಯೂ ಒಂದು.

ಪುರಾಣ ಮತ್ತು ಜ್ಯೋತಿಷ್ಯದ ಪ್ರಕಾರ ಉತ್ತರಾಯಣದಲ್ಲಿ ಸ್ವರ್ಗದ ಬಾಗಿಲು ತೆರೆದಿರುತ್ತದೆ ಎಂದು ನಂಬಿಕೆಯಿದೆ. ಈ ಸಮಯದಲ್ಲಿ ಸತ್ತವರು ನೇರವಾಗಿ ಸ್ವರ್ಗಕ್ಕೆ ಹೋಗುತ್ತಾರೆ ಎಂಬ ನಂಬಿಕೆಯೂ ಇದೆ. ಶ್ರೀಕೃಷ್ಣನು ಗೀತೆಯಲ್ಲಿ  ಉತ್ತರಾಯಣ ಕಾಲವು ಅತಿ ಶ್ರೇಷ್ಠ ಎಂದು ಹೇಳಿರುವನು.

ಮಹಾಭಾರತದ ಕಥೆಯಲ್ಲಿ ಇಚ್ಚಾ ಮರಣಿಯಾದ ಭೀಷ್ಮ ಪಿತಾಮಹನು ಬಾಣಗಳ ಮಂಚದ ಮೇಲೆ ಮಲಗಿ ಯಮ ಯಾತನೆಯನ್ನು ಅನುಭವಿಸುತ್ತಿದ್ದರೂ, ದಕ್ಷಿಣಾಯನದಲ್ಲಿ ತನ್ನ ದೇಹವನ್ನು ತ್ಯಜಿಸಲು ಒಪ್ಪದೆ ಉತ್ತರಾಯಣದ ಪುಣ್ಯಕಾಲದ ಅಷ್ಟಮಿ ದಿನ ಸಾವನ್ನು ಬರಮಾಡಿಕೊಳ್ಳುಲು ಕಾದಿದ್ದರು ಎಂಬ ಉಲ್ಲೆಖವಿದೆ.

ಕೃತಯುಗದಲ್ಲಿ ಶಿವ ಮತ್ತು ಪಾರ್ವತಿಯರು ವಿವಾಹವಾಗಿದ್ದು, ಈ ಉತ್ತರಾಯಣದಲ್ಲಿ ಬ್ರಹ್ಮ ದೇವನು ಈ ಜಗತ್ತಿನ ಸೃಷ್ಟಿಯನ್ನು ಪ್ರಾರಂಭಿಸಿದ್ದು, ಇಂದ್ರನಿಗೆ ಗೌತಮರು ಶಾಪ ವಿಮೋಚನೆ ಮಾಡಿದ್ದು, ನಾರಾಯಣನು ವರಹಾ ಅವತಾರದಿಂದ ಭೂಮಿಯ ಮೇಲೆ ಪಾದ ಸ್ಪರ್ಶ ಮಾಡಿದ್ದು, ಸಮುದ್ರ ಮಥನದಲ್ಲಿ ಮಹಾಲಕ್ಷ್ಮಿ ಅವತರಿಸಿದ್ದು ಹಾಗೂ ಋಷಿ ಮುನಿಗಳು ತಪಸ್ಸಿಗೆ ಆಯ್ಕೆ ಮಾಡಿಕೊಂಡಿದ್ದು ಸಹ ಈ ಉತ್ತರಾಯಣದಲ್ಲಿಯೇ.

ವೇದದ ಕಾಲದಿಂದಲೂ ಶುಭಕಾರ್ಯಗಳಿಗೆ ಮುಹೂರ್ತಾದಿ ಕಾಲವನ್ನು ನಿರ್ಣಯಿಸಿ, ಗ್ರಹಗಳ ಸ್ಥಿತಿ-ಗತಿ, ರಾಶಿ-ನಕ್ಷತ್ರ, ಗ್ರಹಣ, ಅಸ್ತೋದಯಗಳನ್ನು ನಿರ್ಣಯಿಸಿ, ಶುಭಾಶುಭ ಫಲಗಳನ್ನು ತೋರುತ್ತಾ, ಹಬ್ಬ-ಹರಿದಿನಗಳನ್ನು ಋತುಗಳಿಗನುಸಾರವಾಗಿ ಲೆಕ್ಕಾಚಾರ ಹಾಕಿ ಗುರುತಿಸುತ್ತಿದ್ದ ಶಾಸ್ತ್ರವೇ ಜ್ಯೋತಿಷ. ಈ ಶಾಸ್ತ್ರದಂತೆ, ಸೂರ್ಯನು ನಿರಯಣ ಮಕರರಾಶಿಯನ್ನು ಪ್ರವೇಶಿಸಿದಾಗ, “ಮಕರ ಸಂಕ್ರಾಂತಿ”ಯಾಗುತ್ತದೆ. ಈ ಕಾಲವು ಪ್ರತಿವರ್ಷ ಗ್ರೆಗೋರಿಯನ್ ಪಂಚಾಂಗದ ಜನವರಿ ೧೪ರ ಸುಮಾರಿಗೆ ಬೀಳುತ್ತದೆ. ಹಿಂದೆ ಈ ಕಾಲವೇ ಉತ್ತರಾಯಣ ಅಥವಾ ಸೂರ್ಯನ ಉತ್ತರದಿಕ್ಕಿನ ಪಯಣದ ಆರಂಭವನ್ನು ಸೂಚಿಸುವ ಕಾಲವೂ ಆಗಿತ್ತಾದ್ದರಿಂದ ಭೂಮಿಯ ಉತ್ತರಾರ್ಧಗೋಳದಲ್ಲಿ ಚಳಿ-ಬೆಚ್ಚನೆಯ ವಾತಾವರಣ ಆರಂಭವಾಗಿ, ಬೆಳೆ ಕಟಾವಿನ ಕಾಲವೂ ಆಗಿತ್ತು. ಈಗ ಉತ್ತರಾಯಣ ಡಿಸೆಂಬರ್ ೨೨ಕ್ಕೇ ಆದರೂ, ಹಿಂದಿನಂತೆಯೇ ಜನವರಿ ೧೪ ರಂದು ನಡೆಯುವ ಮಕರಸಂಕ್ರಾಂತಿಯಂದೇ ಉತ್ತರಾಯಣದ ಆಚರಣೆಯೂ ನಡೆಯುತ್ತದೆ.

ಖಗೋಳ ಶಾಸ್ತ್ರದ ಪ್ರಕಾರ  ಸೂರ್ಯೋದಯ ಪೂರ್ವದಲ್ಲಿ ಮತ್ತು ಸೂರ್ಯಾಸ್ತಮಾನ ಪಶ್ಚಿಮದಲ್ಲಿ ಎಂದು ಹೇಳುವುದಾದರೂ, ಯಾವುದೇ ಸ್ಥಳದಲ್ಲಿ ಕರಾರುವಾಕ್ಕಾಗಿ ಪೂರ್ವದಲ್ಲೇ ಸೂರ್ಯೋದಯವಾಗುವುದು ಮತ್ತು ಪಶ್ಚಿಮದಲ್ಲೇ ಸೂರ್ಯಾಸ್ತಮಾನವಾಗುವುದು ವರ್ಷದಲ್ಲಿ ಎರಡೇ ದಿನಗಳಂದು. ಆ ದಿನಗಳನ್ನು ಈಕ್ವಿನಾಕ್ಸ್ (equinox) ಎಂದು ಕರೆಯುತ್ತಾರೆ. ಅಂದು ಹಗಲಿರುಳುಗಳು ದಿನವನ್ನು ಸಮಪಾಲಾಗಿ, ಅಂದರೆ ೧೨ ಗಂಟೆಗಳಾಗಿ ಹಂಚಿಕೊಳ್ಳುತ್ತವೆ. ವರ್ಷದ ಉಳಿದ ದಿನಗಳಲ್ಲಿ ಹಗಲಿರುಳುಗಳ ಪಾಲು ಸಮವಾಗಿರುವುದಿಲ್ಲ. ಬೇಸಗೆಯಲ್ಲಿ ಹಗಲು ಹೆಚ್ಚು, ಇರುಳು ಕಮ್ಮಿ. ಚಳಿಗಾಲದಲ್ಲಿ ಹಗಲು ಕಮ್ಮಿ, ಇರುಳು ಹೆಚ್ಚು.

ಈಕ್ವಿನಾಕ್ಸ್ ದಿವಸಗಳ ಹೊರತಾಗಿ ಸೂರ್ಯನ ಉದಯ ಪೂರ್ವದ ಬಲಕ್ಕೆ (ಅಂದರೆ ಉತ್ತರಕ್ಕೆ) ಅಥವಾ ಎಡಕ್ಕೆ (ಅಂದರೆ ದಕ್ಷಿಣಕ್ಕೆ) ಆಗುತ್ತದೆ. ಚಳಿಗಾಲ (ಅಂದರೆ ಇರುಳಿನ ಪ್ರಮಾಣ)ಹೆಚ್ಚಾದಂತೆ ಸೂರ್ಯನ ಉದಯ ಹೆಚ್ಚು ದಕ್ಷಿಣ ದಿಕ್ಕಿಗೆ ಚಲಿಸುವುದು ಗೋಚರಿಸುತ್ತದೆ. ಕೊನೆಗೆ ಒಂದು ದಿನ ದಕ್ಷಿಣದ ತುತ್ತ ತುದಿಯ ಹಂತವನ್ನು ತಲುಪಿ, ಅಚಲವೆಂಬಂತೆ ಕಂಡು, ಮರುದಿನದಿಂದ ಸೂರ್ಯನ ಉದಯ ಮರಳಿ ವಿರುಧ್ಧ ದಿಕ್ಕಿನಲ್ಲಿ ಆಗುತ್ತಾ ಚಲಿಸುತ್ತದೆ. ಅಂದರೆ ಸೂರ್ಯ ಇನ್ನು ದಕ್ಷಿಣ ದಿಕ್ಕಿನತ್ತದ ತನ್ನ ಚಲನವನ್ನು ನಿಲ್ಲಿಸಿ ಉತ್ತರಕ್ಕೆ ಚಲಿಸಲು ಪ್ರಾರಂಭಿಸುತ್ತಾನೆ. ಈ ದಿನ ಉತ್ತರಾಯಣದ ದಿನ. ಇದು ಚಳಿಗಾಲ ಮುಗಿದು ಮುಂಬರುವ ಬೇಸಗೆಯ ಮುನ್ಸೂಚನೆ. winter solstice ಎಂದೂ ಕರೆಯಲ್ಪಡುತ್ತದೆ.  ಡಿಸೆಂಬರ್ 22 ಈ ದಿನವನ್ನು ಮಕರ ಸಂಕ್ರಾಂತಿಯೆಂದು ಗುರುತಿಸಬೇಕಾಗಿದ್ದರೂ ಸಾಂಪ್ರದಾಯಿಕವಾಗಿ ಜನವರಿ ತಿಂಗಳ ನಡುವಿನಲ್ಲಿ ಮಕರ ಸಂಕ್ರಾಂತಿಯನ್ನು ಆಚರಿಸುತ್ತೇವೆ.

ಇಲ್ಲಿಂದ ಸೂರ್ಯೋದಯ ಇನ್ನು ಆರು ತಿಂಗಳು ಉತ್ತರದ ದಿಕ್ಕಿನಲ್ಲಿ ಚಲಿಸುತ್ತಾ ನಡುವೆ ಮತ್ತೆ ಈಕ್ವಿನಾಕ್ಸ್ ದಿನವನ್ನೂ ತಲುಪಿ, ಇನ್ನೂ ಅದೇ ದಿಕ್ಕಿನಲ್ಲಿ (ಉತ್ತರಕ್ಕೆ)ಚಲಿಸುತ್ತಾ ಹೋಗುತ್ತದೆ. ಉತ್ತರಕ್ಕೆ ಹೆಚ್ಚು ಹೋದಂತೆಲ್ಲಾ ಹಗಲಿನ ಪ್ರಮಾಣ ಹೆಚ್ಚಾಗಿ ಇರುಳು ಕಮ್ಮಿಯಾಗುತ್ತಾ ಹೋಗುತ್ತದೆ. ಸೂರ್ಯನ ತಾಪ ಹೆಚ್ಚಾಗುತ್ತಾ ಬೇಸಗೆಯನ್ನು ಅನುಭವಿಸುತ್ತೇವೆ. ಕೊನೆಗೆ ಒಂದು ದಿನ ಉತ್ತರದ ತುತ್ತ ತುದಿಯನ್ನು ತಲುಪಿ, ಅಚಲವೆಂಬಂತೆ ಕಂಡು, ಮರುದಿನದಿಂದ ಸೂರ್ಯನ ಉದಯ ಮರಳಿ ವಿರುದ್ಧ ದಿಕ್ಕಿನಲ್ಲಿ ಆಗುತ್ತಾ ಚಲಿಸುತ್ತದೆ. ಅಂದರೆ ಸೂರ್ಯ ಇನ್ನು ಉತ್ತರ ದಿಕ್ಕಿನತ್ತದ ತನ್ನ ಚಲನೆಯನ್ನು ನಿಲ್ಲಿಸಿ ದಕ್ಷಿಣಕ್ಕೆ ಚಲಿಸಲು ಪ್ರಾರಂಭಿಸುತ್ತಾನೆ. ಇದು ದಕ್ಷಿಣಾಯನದ ದಿನ. ಬೇಸಗೆ ಮುಗಿದು ಮುಂಬರುವ ಚಳಿಗಾಲದ ಮುನ್ಸೂಚನೆ. ಈ ದಿನವನ್ನು ಕರ್ಕಾಟಕ ಸಂಕ್ರಾಂತಿ ಎಂದು ಗುರುತಿಸುತ್ತಾರೆ. summer solstice ಎಂದೂ ಕರೆಯಲ್ಪಡುತ್ತದೆ. ಸುಮಾರು ಜೂನ್ ೨೧ನೇ  ದಿನ.

ಇಷ್ಟೆಲ್ಲಾ ವಿವರಣೆ ಅನ್ವಯಿಸುವುದು ಭೂಮಂಡಲದ ಭೂಮಧ್ಯ ರೇಖೆಯ ಉತ್ತರಾರ್ಧಕ್ಕೆ. ಇದೇ ರೀತಿಯ ಆದರೆ ತದ್ವಿರುದ್ಧವಾದ ವಿವರಣೆ ದಕ್ಷಿಣಾರ್ಧಕ್ಕೆ ಅನ್ವಯಿಸುತ್ತದೆ.

ಹೀಗೆ ಕಾಣುವ ಸೂರ್ಯನ ಚಲನೆಗೆ ಭೂಮಿಯ ಅಕ್ಷರೇಖೆ (axis) ಸುಮಾರು 22 1/2 degree ವಾಲಿರುವುದು ಕಾರಣ.

ಯಾವುದಾದರೂ ಒಂದು ನಿಗದಿತ ಜಾಗದಲ್ಲಿ ದಿನಾಲು ನಿಂತು, ದಿನದ ಒಂದೇ ನಿಗದಿತ ಸಮಯದಲ್ಲಿ, ಆಗಸದಲ್ಲಿ ಸೂರ್ಯನ ಸ್ಥಾನವನ್ನು ಗುರುತು ಹಾಕಿಕೊಂಡು, ಈ ರೀತಿ ವರ್ಷವಿಡೀ ಮಾಡಿದರೆ, ಗುರುತು ಹಾಕಿಕೊಂಡ ಆ ಬಿಂದುಗಳೆಲ್ಲಾ ಸುಮಾರು ‘8’ರ ಆಕೃತಿಯಲ್ಲಿ ಕಾಣುತ್ತವೆ. ಈ ವಿನ್ಯಾಸವನ್ನು analemma ಎನ್ನುತ್ತಾರೆ. ‘8’ರ ಆಕೃತಿಯ ನೆತ್ತಿಯ ಬಿಂದು summer solstice ದಿನದಂದು ಆಗುತ್ತದೆ. ಆ ಆಕೃತಿಯ ಅಡಿಯ ಬಿಂದು winter solstice, ಅಂದರೆ ಮಕರ ಸಂಕ್ರಾಂತಿಯ ದಿನದಂದು ಆಗುತ್ತದೆ. ನಡುವೆ ರೇಖೆಗಳು ಪರಸ್ಪರ ಹಾದುಹೋಗುವ ಬಿಂದು equinox ದಿನಗಳು. 8 ರ ಆಕೃತಿಯ ನೆತ್ತಿಯಿಂದ ಅದರ ಅಡಿಯ ಬಿಂದುವಿನ ತನಕದ ದಿನಗಳು ವರ್ಷದ ದಕ್ಷಿಣಾಯನದ ದಿನಗಳು. ಆ ಆಕೃತಿಯ ಅಡಿಯಿಂದ ಅದರ ನೆತ್ತಿಯ ಬಿಂದುವಿನ ತನಕದ ದಿನಗಳು ಉತ್ತರಾಯಣದ ದಿನಗಳು.

ಕರ್ನಾಟಕ: ಕರ್ನಾಟಕದಲ್ಲಿ ಮಕರ ಸಂಕ್ರಾಂತಿಗೆ ಸಂಬಂಧಪಟ್ಟ ಆಚರಣೆಗಳಲ್ಲಿ ಮುಖ್ಯವಾಗಿ ಕಂಡುಬರುವುದು “ಎಳ್ಳು ಬೆಲ್ಲ”. ಮನೆಯಲ್ಲಿ ಎಳ್ಳ್ಳು ಬೆಲ್ಲನ್ನು ತಯಾರಿಸಿ ಸುತ್ತಲಿನ ಮನೆಗಳಿಗೆ “ಎಳ್ಳುಹಂಚುವುದು” ಸಂಕ್ರಾಂತಿಯ ಸಂಪ್ರದಾಯಗಳು. ಎಳ್ಳಿನ ಜೊತೆಗೆ ಸಕ್ಕರೆ ಅಚ್ಚುಗಳು,ಹಣ್ಣು,ಮತ್ತು ಕಬ್ಬಿನ ತುಂಡುಗಳನ್ನು ಸಹ ಬೀರುವುದುಂಟು.ಸಣ್ಣ ಸಣ್ಣ ಚೂರುಗಳಾಗಿ ಕತ್ತರಿಸಿದ ಬೆಲ್ಲ, ಒಣ ಕೊಬ್ಬರಿ, ಹುರಿಗಡಲೆ,ಸಿಪ್ಪೆ ತೆಗೆದ ಕಡಲೇಕಾಯಿ ಬೀಜ ಹಾಗೂ ಹುರಿದ ಬಿಳಿ ಎಳ್ಳನ್ನು ಸೇರಿಸಿ “ಎಳ್ಳು ಬೆಲ್ಲ” ತಯಾರಿಸಲಾಗುತ್ತದೆ. ಕರ್ನಾಟಕದ ರೈತರಿಗೆ ಸುಗ್ಗಿ (ಸುಗ್ಗಿ) ಅಥವಾ ಸುಗ್ಗಿಯ ಹಬ್ಬ. ಈ ಮಂಗಳಕರ ದಿನದಂದು, ಯುವ ಹೆಣ್ಣು (ಮಕ್ಕಳು ಮತ್ತು ಹದಿಹರೆಯದವರು) ಒಂದು ತಟ್ಟೆಯಲ್ಲಿ ಸಂಕ್ರಾಂತಿ ಬೇಡಿಕೆಗಳು ಬಳಿ ಭೇಟಿ ಹೊಸ ಬಟ್ಟೆಗಳನ್ನು ಮತ್ತು ಪ್ರಿಯ ಪದಗಳಿಗಿಂತ ಧರಿಸುತ್ತಾರೆ, ಮತ್ತು ಇತರ ಕುಟುಂಬಗಳು ಅದೇ ವಿನಿಮಯ. ಈ ಧಾರ್ಮಿಕ “ಸೇಸಮೆ ಬಿರೋದು.” ಎಂದು ಕರೆಯಲಾಗುತ್ತದೆ.

ಇಲ್ಲಿ ಪ್ಲೇಟ್ ಸಾಮಾನ್ಯವಾಗಿ ಹುರಿದ ಕಡಲೆಕಾಯಿ ಮಿಶ್ರಣ “ಸೇಸಮೆ” (ಬಿಳಿ ಎಳ್ಳು) ಹೊಂದಿರಬೇಕು ಅಂದವಾಗಿ ಒಣ ತೆಂಗಿನ ಮತ್ತು ಉತ್ತಮ ಕಟ್ ಬೆಲ್ಲಾ (ಬೆಲ್ಲ) ಕತ್ತರಿಸಿ. ಮಿಶ್ರಣವನ್ನು “ಸೇಸಮೆ-ಬೆಲ್ಲಾ” (ಎಳ್ಳು ಬೆಲ್ಲ) ಎಂದು ಕರೆಯಲಾಗುತ್ತದೆ. ಪ್ಲೇಟ್ ಸಹ ಕಬ್ಬಿನ ತುಂಡು ವಿವಿಧ ಆಕಾರಗಳು (ಸಕ್ಕರೆ ಅಚ್ಚು) ನ ಸಕ್ಕರೆ ಜೀವಿಗಳು ಹೊಂದಿದೆ. ಭಾಷಾಂತರಿಸಿದರೆ ಕನ್ನಡ “ಎಳ್ಳು ಬೆಲ್ಲಾ ತಿಂದು ಒಳ್ಳೆ ಮಾತಾಡಿ ” ಎಂಬ ಗಾದೆಯಿದೆ ‘ಎಳ್ಳಿನ ಬೀಜಗಳು ಮಿಶ್ರಣವನ್ನು ತಿಂದು ಬೆಲ್ಲ ಮತ್ತು ಕೇವಲ ಉತ್ತಮ ಮಾತನಾಡಲು. ‘ ಕಬ್ಬು ಈ ಭಾಗಗಳಲ್ಲಿ ಪ್ರಧಾನ ಏಕೆಂದರೆ ಹಬ್ಬದ ಋತುವಿನ ಸುಗ್ಗಿಯ ಸೂಚಿಸುತ್ತದೆ.

ಕರ್ನಾಟಕದ ಕೆಲವು ಭಾಗಗಳಲ್ಲಿ, ಹೊಸದಾಗಿ ಮದುವೆಯಾದ ಮಹಿಳೆ ತನ್ನ ಮದುವೆಯ ಮೊದಲ ವರ್ಷ ವಿವಾಹಿತ ಮಹಿಳೆಯರು ಗೆ ಐದು ವರ್ಷಗಳ ಕಾಲ ಬಾಳೆಹಣ್ಣುಗಳು ಬಿಟ್ಟುಬಿಡುತ್ತದೆಂದು, ಆದರೆ ಐದು ಗುಣಾತ್ಮಕವಾಗಿ ಬಾಳೆಹಣ್ಣುಗಳು ಸಂಖ್ಯೆಯನ್ನು ಹೆಚ್ಚಿಸಲು ಅಗತ್ಯವಿದೆ. ಮೇಲಿನ ಜೊತೆಗೆ “ಎಲಚಿ ಕೈ” ಕೆಂಪು ಹಣ್ಣುಗಳು ನೀಡುತ್ತಿದ್ದು ಕೆಲವು ಕುಟುಂಬಗಳಲ್ಲಿ ಸಂಪ್ರದಾಯವನ್ನು ಸಹ ಇದೆ. ಉತ್ತರ ಕರ್ನಾಟಕದಲ್ಲಿ, ಸಮುದಾಯದ ಸದಸ್ಯರೊಂದಿಗೆ ಗಾಳಿಪಟ ಹಾರಿಸುವ ಒಂದು ಸಂಪ್ರದಾಯವಾಗಿದೆ,ಅಲ್ಲದೇ ಗುಂಪುಗಳಲ್ಲಿ ರಂಗೋಲಿ ಬಿಡಿಸಿ ಸಂಕ್ರಾಂತಿಯ ಸಮಯದಲ್ಲಿ ಮಹಿಳೆಯರಲ್ಲಿನ ಉತ್ಸಾಹದಿಂದ ಇರುವುದನ್ನು ನೋಡಬಹುದು.

ಪ್ರಮುಖ ಧಾರ್ಮಿಕ ಮುಕ್ತ ಕ್ಷೇತ್ರ ಹಸುಗಳು ಮತ್ತು ಬಣ್ಣಬಣ್ಣದ ವೇಷಭೂಷಣಗಳು ದನ ಪ್ರದರ್ಶನ,ಮೆರವಣಿಗೆ ಮಾಡಲಾಗುತ್ತದೆ ಜೊತೆಗೆ ಈ ಸಂದರ್ಭದಲ್ಲಿ  ಹುಲ್ಲುಗಳನ್ನು ರಸ್ತೆ ಮೇಲೆ ಹರಡಿ ಅದಕ್ಕೆ ಬೆಂಕಿ ಹಚ್ಚಿ ಹಸುಗಳನ್ನು ನಡೆಸಿಕೊಂಡು ಹೋಗುತ್ತಾರೆ.  ಇದನ್ನು ಗ್ರಾಮೀಣ ಕರ್ನಾಟಕದಲ್ಲಿ ಕಿಚ್ಚು ಹಾಯಿಸುವುದು ಕರೆಯಲಾಗುತ್ತದೆ.

ತಮಿಳುನಾಡು: ತಮಿಳುನಾಡಿನಲ್ಲಿ ಈ ಹಬ್ಬವನ್ನು “ಪೊಂಗಲ್” ಎಂದು ಕರೆಯಲಾಗುತ್ತದೆ. ಇಲ್ಲಿ ಇದು ನಾಲ್ಕು ದಿನಗಳ ಹಬ್ಬ – ಈ ನಾಲ್ಕು ದಿನಗಳು ಮತ್ತು ಆ ದಿನಗಳಲ್ಲಿನ ಆಚರಣೆಗಳು ಹೀಗಿವೆ:

ಭೋಗಿ: ಹೊಸ ಬಟ್ಟೆಗಳು

ಪೊಂಗಲ್: ಸಮೃದ್ಧಿಯ ಸಂಕೇತವಾಗಿ ಹಾಲು-ಬೆಲ್ಲಗಳನ್ನು ಪಾತ್ರೆಯಲ್ಲಿ ಕುದಿಸಿ ಉಕ್ಕಿಸಲಾಗುತ್ತದೆ

ಮಾಟ್ಟು ಪೊಂಗಲ್: ಗೋಪೂಜೆ

ಕೆಲವು ಕಡೆಗಳಲ್ಲಿ “ಜಲ್ಲಿಕಟ್ಟು” ಎಂಬ ಗೂಳಿಯನ್ನು ಪಳಗಿಸುವ ಆಟ ನಡೆಯುತ್ತದೆ

ಕಾಣುಮ್ ಪೊಂಗಲ್

ಕೇರಳದ ಶಬರಿಮಲೆ: ಮಕರ ಸಂಕ್ರಾಂತಿಯಂದು ಕೇರಳದ ಶಬರಿಮಲೆಯಲ್ಲಿ ಕಾಣುವ ಮಕರಜ್ಯೋತಿಗೆ ಹೆಚ್ಚಿನ ಪ್ರಾಧಾನ್ಯತೆ ಇದೆ. ಅಯ್ಯಪ್ಪ ವೃತಾಧಾರಿಗಳಾದ ಜನರು ಶಬರಿಮಲೆಗೆ ತೆರಳಿ ತಮ್ಮ ಸ್ವಾಮಿಯ ಪಾದಕ್ಕೆರಗಿ ಮಕರ ಜ್ಯೋತಿಯ ದರ್ಶನವನ್ನು ಪಡೆದರೆ ಜನ್ಮ ಸಾರ್ಥಕವಾಗುವುದೆಂಬ ನಂಬಿಕೆಯಿಂದಾಗಿ ಲಕ್ಷೋಪಲಕ್ಷ ಜನರು ಈ ಜ್ಯೋತಿಯ ದರ್ಶನಕ್ಕಾಗಿ ವರ್ಷಂಪ್ರತಿ ಶಬರಿಮಲೆ ಸನ್ನಿಧಾನಕ್ಕಾಗಮಿಸುತ್ತಾರೆ.

”ಮಕರ ವಿಳಕ್ಕು“ಎಂದು ಕರೆಯಲ್ಪಡುವ ಈ ಜ್ಯೋತಿಯು ಶಬರಿಮಲೆಯ ಬೆಟ್ಟದಿಂದ ಮೂರು ಬಾರಿ ಗೋಚರವಾಗುತ್ತಿದ್ದು, ಅಂತೂ ಇದು ವೈಜ್ಞಾನಿಕವಾಗಿಸಾಬೀತಾಗಿಲ್ಲವಾದರೂ, ಪ್ರಸ್ತುತ ಕಾಲದಲ್ಲಿಯೂ ಆಧ್ಯಾತ್ಮಿಕತೆಯ ಕುರುಹನ್ನು ತೋರಿಸುತ್ತದೆ ಎನ್ನುತ್ತಾರೆ ಭಕ್ತರು.ನಮನ ಒಟ್ಟಿನಲ್ಲಿ ಸೂರ್ಯನು ಮಕರ ರಾಶಿಗೆ ಪ್ರವೇಶಿಸಿ ಲೋಕದ ಕಾರಿರುಳನ್ನು ಹೋಗಲಾಡಿಸುವಂತೆ ಜನರು ಈ ಕಾಲದಲ್ಲಿ ಪುಣ್ಯ ಕಾರ್ಯಗಳಲ್ಲಿಯೂ ಆಧ್ಯಾತ್ಮಿಕ ಚಿಂತೆಗಳಲ್ಲಿಯೂ ತಮ್ಮನ್ನು ತೊಡಗಿಸಿಕೊಂಡು ಮುಕ್ತಿ ಮಾರ್ಗದಲ್ಲಿ ಸಾಗುವಂತೆ ಈ ಆಚರಣೆಯು ಪ್ರೇರಣೆಯನ್ನು ನೀಡುತ್ತದೆ.

ಮುಖ್ಯವಾಗಿ ದಕ್ಷಿಣ ಭಾರತದ ಹಬ್ಬವಾದರೂ, ಇತರ ಸ್ಥಳಗಳಲ್ಲಿ ಸಹ ಬೇರೆ ಬೇರೆ ಹೆಸರುಗಳಲ್ಲಿ ಸಂಕ್ರಾಂತಿಯನ್ನು ಆಚರಿಸಲಾಗುತ್ತದೆ.

ಗುಜರಾತ್ ಮತ್ತು ಮಹಾರಾಷ್ಟ್ರಗಳಲ್ಲಿ ಸಂಕ್ರಾಂತಿಯ ದಿನದಂದು ಗಾಳಿಪಟಗಳನ್ನು ಹಾರಿಬಿಡುವ ಸಂಪ್ರದಾಯವುಂಟು. ಮಹಾರಾಷ್ಟ್ರದಲ್ಲಿಯೂ, ಎಳ್ಳು ಮತ್ತು ಸಕ್ಕರೆಯ ಕುಸುರಿಕಾಳನ್ನು ಬಂಧು ಮಿತ್ರರಿಗೆ ಹಂಚುವ ರೂಢಿ ಇದೆ. ಪ್ರಮುಖವಾಗಿ ಅವರು, ಎಳ್ಳಿನ ಉಂಡೆ ಗಳನ್ನು ಹಂಚುತ್ತಾರೆ. ಅದಕ್ಕೆ ಅವರು ಲಡ್ಡು ಎನ್ನುತ್ತಾರೆ. ಕರ್ನಾಟಕದ ಸಂಪ್ರದಾಯದ ತರಹ ಬಿಡಿಕಾಳುಗಳನ್ನು ಹಂಚುವ ಪದ್ಧತಿಯಿಲ್ಲ. ಹಾ. ಎಳ್ಳುಂಡೆ ಕೊಡುವಾಗ ತಪ್ಪದೆ, “ತಿಳ್ಗುಳ್ ಘ್ಯಾ, ಅಣಿ ಗೋಡ್ ಗೋಡ್ ಬೋಲ“, ಎನ್ನುವ ಮಾತು ಹೇಳುವುದನ್ನು ಮರೆಯುವುದಿಲ್ಲ !

ಪಂಜಾಬ್ ಮತ್ತು ಹರಿಯಾಣಗಳಲ್ಲಿ ಸಂಕ್ರಾಂತಿಗೆ “ಲೋಹರಿ” ಎಂದು ಹೆಸರು.

ಕಳೆದ ವರ್ಷ ಕೋವಿಡ್ ಯಿಂದಾಗಿ ಜನರ ಹಬ್ಬಗಳ ಮೇಲೆ ಕರಿಛಾಯೆ ಬಿದ್ದಿತ್ತು. ಮತ್ತೆ ಸಹಜ ಸ್ಥಿತಿಯತ್ತ ಮರಳುತ್ತಿದ್ದಾರೆ, ಈ ಸಂಕ್ರಾಂತಿಯಿಂದ ನೆಮ್ಮದಿ ಪಡೆಯುವಂತಾಗಲಿ ಎಂದು ಆಶಿಸುತ್ತಾ ಎಲ್ಲರಿಗೂ ಮಕರ ಸಂಕ್ರಾಂತಿಯ ಶುಭಾಶಯಗಳು.


ಡಾ.ಗುರುಪ್ರಸಾದ ಹವಲ್ದಾರ್

  • ಮೂಲತಃ ಉಪನ್ಯಾಸಕರು. ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲ್ಲೂಕಿನ ಮರಿಯಮ್ಮನ ಹಳ್ಳಿಯವರು. ಪ್ರಸ್ತುತ ಹಗರಿಬೊಮ್ಮನಹಳ್ಳಿ ಜಿವಿಪಿಪಿ ಪದವಿ ಕಾಲೇಜನಲ್ಲಿ ಕನ್ನಡ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತ ಜೊತೆಗೆ ಪತ್ರಿಕೆಗಳಿಗೆ ವೆಬ್ ನ್ಯೂಸ್ ಪೋಟ್೯ಲ್ ಗಳಿಗೆ ಲೇಖನ ಬರೆಯುತ್ತಿದ್ದಾರೆ.
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಕೋವಿಡ್ ಲಸಿಕೆ ಅಭಿಯಾನಕ್ಕೆ ಒಂದು ವರ್ಷ; ಕೈ ಮುಗಿದ ಸಚಿವ ಡಾ.ಸುಧಾಕರ್

ಕೋವಿಡ್ ಲಸಿಕೆ ಅಭಿಯಾನಕ್ಕೆ ಒಂದು ವರ್ಷ; ಕೈ ಮುಗಿದ ಸಚಿವ ಡಾ.ಸುಧಾಕರ್

Leave a Reply Cancel reply

Your email address will not be published. Required fields are marked *

Recommended

ಶಿರಾ ಗೆದ್ದು ರಾಜ್ಯವನ್ನು ಗೆಲ್ಲುತ್ತೇವೆ; ಆದರೆ, ಉಪ ಚುನಾವಣೆಯಿಂದ ಸರಕಾರ ಬೀಳಲ್ಲ ಎಂದ ಡಿಕೆಶಿ

ಲಸಿಕೆ ವಿರೋಧಿಸಿದ್ದರೆ ನಾವೇಕೆ ಅದನ್ನು ತೆಗೆದುಕೊಳ್ಳುತ್ತಿದ್ದೆವು? ಪ್ರಧಾನಿ ಮೊದಲು ತೆಗೆದುಕೊಳ್ಳದೆ ವಾರಿಯರ್ಸ್ ಮೇಲೆ ಪ್ರಯೋಗಿಸಿದ್ದು ಏಕೆ ಎಂದು ಪ್ರಶ್ನಿಸಿದ ಡಿಕೆಶಿ

4 years ago
ಪ್ಲ್ಯಾಸ್ಟಿಕ್‌ ಮುಕ್ತ ನಂದಿಬೆಟ್ಟ; ಬೆಂಗಳೂರು ದಂಪತಿಯ ಪರಿಸರ ಸೇವೆ

ಪ್ಲ್ಯಾಸ್ಟಿಕ್‌ ಮುಕ್ತ ನಂದಿಬೆಟ್ಟ; ಬೆಂಗಳೂರು ದಂಪತಿಯ ಪರಿಸರ ಸೇವೆ

3 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ