ಶಾಂತವಾಗಿದ್ದ ಕುಂದಾನಗರಿಯಲ್ಲಿ ಉದ್ರಿಕ್ತ ಸ್ಥಿತಿ
ಬೆಳಗಾವಿ: ಶಾಂತವಾಗಿದ್ದ ಬೆಳಗಾವಿಯಲ್ಲಿ ಈಗ ಮತ್ತೆ ಕಿಡಿಗೇಡಿಗಳು ಶಾಂತಿ ಕದಡುವ ಕೆಲಸ ಮಾಡಿದ್ದು, ಕನ್ನಡ ನಾಮಫಲಕಕ್ಕೆ ಮಸಿ ಬಳಿಯುವ ಮೂಲಕ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಕೆಲಸ ಮಾಡಿದ್ದಾರೆ.
ತಾಲೂಕಿನ ಕಂಗ್ರಾಳಿ ಕೆ.ಎಚ್. ಗ್ರಾಮದ ರಸ್ತೆ ಮಾರ್ಗದಲ್ಲಿ ಇರುವ ರಸ್ತೆಸಂಚಾರ ಜಾಗೃತಿ ಮೂಡಿಸುವ ಫಲಕಕ್ಕೆ ಕಿಡಿಗೇಡಿಗಳು ಕಪ್ಪುಮಸಿ ಬಳಿದಿದ್ದಾರೆ. ಲೋಕೋಪಯೋಗಿ ಇಲಾಖೆ ಅಳವಡಿಸಿದ್ದ ಈ ನಾಮಫಲಕಕ್ಕೆ ಕಿಡಿಗೇಡಿಗಳು ಮಸಿ ಬಳಿಯುವ ಮೂಲಕ ಬೆಳಗಾವಿಯಲ್ಲಿ ಮತ್ತೆ ಅಶಾಂತಿಗೆ ಕಾರಣರಾಗಿದ್ದಾರೆ.