• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home GUEST COLUMN

ವಿಶ್ವದಾಭಿರಾಮ ವಿನುರವೇಮ; ಭವದ ಬೇಗೆ ನೀಗುವ ದಾರಿ ತೋರಿದ ಯೋಗಿ ವೇಮನ

cknewsnow desk by cknewsnow desk
January 19, 2022
in GUEST COLUMN, STATE
Reading Time: 2 mins read
0
ವಿಶ್ವದಾಭಿರಾಮ ವಿನುರವೇಮ; ಭವದ ಬೇಗೆ ನೀಗುವ ದಾರಿ ತೋರಿದ ಯೋಗಿ ವೇಮನ
1.2k
VIEWS
FacebookTwitterWhatsuplinkedinEmail

ತೆಲುಗಿನ ವಚನಕಾರ ವೇಮನ ಜಯಂತಿ

by Dr.Guruprasad Rao Hawaldar

ಕಾಲ ಕಾಲಕ್ಕೆ ಸಮಾಜವನ್ನು ಸರಿದಾರಿಗೆ ತರುವ  ಕಾರ್ಯವನ್ನು ಯೋಗಿಗಳು, ಸಂತರು, ವಚನಕಾರರು, ದಾಸರು, ತತ್ವಪದಕಾರರು ಮಾಡುತ್ತಾಲೇ ಬಂದಿದ್ದಾರೆ. ಅಂತಹವರಲ್ಲಿ  16ನೆಯ ಶತಮಾನದ ಆಂಧ್ರ ಪ್ರದೇಶದ  ಕವಿ ಸಮಾಜ ಚಿಂತಕ; ಮಾನವ ಕುಲದ ಏಳಿಗೆಗಾಗಿ ಶ್ರಮಿಸಿದ ಯೋಗಿ ವೇಮನರು ಒಬ್ಬರು. 

ಕನ್ನಡಿಗರಿಗೆ ಸರ್ವಜ್ಞ, ತಮಿಳಿರಿಗೆ ತಿರುವಳ್ಳುವರ್ ಅವರಂತೆ ತೆಲುಗಿಗೆ ವೇಮನರು, ದಿಗಂಬರರಾಗಿ ಊರೂರು ಅಲೆಯುತ್ತಾ ಭಿಕ್ಷೆ ಬೇಡುತ್ತಾ ಲೋಕ ಸಂಚಾರಿಯಾಗಿ ಜನರ ಬದುಕನ್ನು ಸಮಾಜದ ಅಂಕುಡೊಂಕನ್ನು ತಮ್ಮ ಪದ್ಯಗಳಲ್ಲಿ  -“ಕೇಳು ವೇಮನ” ಎಂಬ ಅಂಕಿತನಾಮದೊಂದಿಗೆ ಹೇಳುತ್ತಾ ಸಾವಿರಾರು ಪದ್ಯಗಳನ್ನು ರಚಿಸಿದರು. ಅಂತಹ ಸಂತ, ತತ್ವಜ್ಞಾನಿ, ಯೋಗಿ, ವೇಮನರ 600ನೇ ಜಯಂತಿ ಇಂದು (ಜನವರಿ 19).

ಇವರ ಪದ್ಯಗಳನ್ನು ಬೆಳಕಿಗೆ ತಂದವರು ಬ್ರಿಟಿಷ್‌ ಆಧಿಕಾರಿಯಾಗಿದ್ದ ಸಿ.ಪಿ.ಬ್ರೌನ್‌. ಇವರು ವೇಮನ ಪದ್ಯಗಳನ್ನು ಇಂಗ್ಲೀಷ್ ಗೆ ಅನುವಾದ ಮಾಡಿ ಜಗತ್ತಿನಾದ್ಯಂತ ಪರಿಚಯಿಸಿದರು. ಕಡಪ ವಿಶ್ವವಿದ್ಯಾಲಯವು ಯೋಗಿ ವೇಮನರ ಸಮಾರು 15 ಸಾವಿರ ಪದ್ಯಗಳನ್ನು ಪ್ರಕಟಿಸಿದ್ದಾರೆ.

ವೇಮನ ಕ್ರಿ.ಶ. 1652ರಲ್ಲಿ ಆಂಧ್ರ ಪ್ರದೇಶದ ಮೂಗಚಿಪಲ್ಲಿಯ ಕೋಮಗಿರಿ ವೇಮ ಭೂಪಾಲ ಮತ್ತು ಮಲ್ಲಮಾಂಬೆ ಎಂಬ ದಂಪತಿಗಳ ಮಗನಾಗಿ ಜನಿಸಿದರು. ವೇಮನ ಹೆತ್ತವರಿಂದ, ಒಡಹುಟ್ಟಿದವರಿಂದ, ಸಂಬಂಧಿಕರಿಂದ ಅನಾದಾರಕ್ಕೆ ಗುರಿಯಾಗಿ ದುಶ್ಚಟಗಳ ದಾಸನಾಗುತ್ತಾನೆ. ಪರಸ್ತ್ರೀ ಸಂಗದಲ್ಲಿ ವಿಷಯಾಸಕ್ತನಾದ ವೇಮನ ಭೋಗಾಸಕ್ತನಾಗುತ್ತಾನೆ. ವೇಶ್ಯಾಸ್ತ್ರೀಯೊಬ್ಬಳ ಸಹವಾಸ ಮಾಡಿ, ಮನೆಯ ಸಂಪತ್ತನ್ನೆಲ್ಲಾ ಹಾಳುಗೆಡವುತ್ತಾನೆ. ವೇಮನನಿಗೆ ಅತ್ತಿಗೆಯಾಗಿ ಬಂದ ಹೇಮರೆಡ್ಡಿ ಮಲ್ಲಮ್ಮ ಮೈದುನನ ಮನ ತಿದ್ದುವಲ್ಲಿ ಪ್ರಯತ್ನಿಸಿ ಸಫಲಳಾಗುತ್ತಾಳೆ.

ದುಶ್ಚಟಗಳ ದಾಸನಾದ ವೇಮನ ವೇಶ್ಯಾಸ್ತ್ರೀಯೊಬ್ಬಳ ಮನದಾಸೆ ಈಡೇರಿಸಲು, ಅತ್ತಿಗೆಯಾಗಿದ್ದ ಹೇಮರೆಡ್ಡಿ ಮಲ್ಲಮ್ಮನ ಮೂಗುತಿಯನ್ನು ಬೇಕೆಂದು ಕೇಳುತ್ತಾನೆ. ಹೇಮರೆಡ್ಡಿ ಮಲ್ಲಮ್ಮ ಮೈದುನನಾದ ವೇಮನನಿಗೆ ಮೂಗುತಿ ಕೊಡಲು ಒಪ್ಪಿ ಕರಾರೊಂದನ್ನು ವಿಧಿಸುತ್ತಾಳೆ.

“ವೇಮನ ಹೇಮರೆಡ್ಡಿ ಮಲ್ಲಮ್ಮನ ಮೂಗುತಿಯನ್ನು ಆ ವೇಶ್ಯಾಸ್ತ್ರೀಗೆ ಕೊಡುವಾಗ, ಆಕೆ ನಗ್ನಳಾಗಿ ಬಂದು ವೇಮನ ಕುಳಿತದ್ದ ಮಂಚವನ್ನು ಮೂರು ಸುತ್ತು ಸುತ್ತಬೇಕು. ಮೂರು ಸುತ್ತು ಹಾಕಿದ ನಂತರ ಹಿಂಬದಿಗೆ ಬಾಗಿ, ಎರಡು ಕಾಲುಗಳ ನಡುವೆ ಬಗ್ಗಿ ಕೈ ಚಾಚಿ ವೇಮನನಿಂದ ಮೂಗುತಿಯನ್ನು ಪಡೆಯಬೇಕು. ಅವಳು ಆ ಮೂಗುತಿಯನ್ನು ಪಡೆಯುವವರೆಗೂ ವೇಮನ ಆಕೆಯ ನಗ್ನದೇಹವನ್ನು ತದೇಕ ಚಿತ್ತನಾಗಿ ನೋಡಬೇಕು”. ವೇಮನ ಅ1652ತ್ತಿಗೆ ಹೇಮರೆಡ್ಡಿ ಮಲ್ಲಮ್ಮನ ಮಾತನ್ನು ಚಾಚೂ ತಪ್ಪದೆ ಪಾಲಿಸುತ್ತಾನೆ.

ವೇಮನ ತನ್ನ ಪ್ರೇಯಸಿಯ ನಗ್ನ ಶರೀರವನ್ನು ಕಂಡೊಡನೆ ಅವನೊಳಗೆ ಭಯಂಕರವಾದ ಜಿಗುಪ್ಸೆ, ಅಸಹ್ಯಭಾವನೆ ಆವರಿಸಿ ಒಡನೆಯೇ ಗಾಬರಿಗೊಂಡು ಕಣ್ಮುಚ್ಚಿ ತಾಯಿಯ ʼಗರ್ಭದಿಂದ ತಾಂ ಬರುವ ಸಮಯದಿ ಮೊದಲು ವಸ್ತ್ರಮಿಲ್ಲ, ತುದಿಗುಮಿಲ್ಲ ನಡುವೆ ಬಟ್ಟೆಯುಡುವುದೇಕೆಂದು ತಿಳಿಯಿರಿ ವಿಶ್ವತೋಭಿರಾಮ ಕೇಳು ವೇಮ||-ಎಂದು ತತ್ವ್ತಜ್ಞಾನ ಹೇಳುತ್ತಾ, ತಾನು ನಗ್ನನಾಗಿ ವೈರಾಗಿಯಂತೆ ಕಾಲ್ತೆಗೆದು ಹೊರ ಹೊರಟವನು, ಮುಂದೆ ತನ್ನ ಸಾಧನೆಯಿಂದ ಮಹಾಯೋಗಿಯಾದನು.

ತಂದೆತಾಯಿಯರಲಿ ದಯೆತೋರದ ಪುತ್ರ

ಹುಟ್ಟಲೇನು? ಮತ್ತೆ ಸತ್ತರೇನು?

ಹುತ್ತದಲಿ ಗೆದ್ದಲು ಹುಟ್ಟವೇ? ಸಾಯವೇ?

ವಿಶ್ವದಾಭಿರಾಮ ಕೇಳು ವೇಮ||.

ಆತ್ಮಶುದ್ಧಿ ಇರದ ಆಚಾರವೇತಕೆ?

ಮಡಕೆ ಶುದ್ಧಿ ಇರದ ಅಡಿಗೆ ಯಾತಕೆ?

ಚಿತ್ತಶುದ್ಧಿ ಇರದ ಶಿವನ ಪೂಜೆ ಯಾಕೆ?

ವಿಶ್ವದಾಭಿರಾಮ ಕೇಳು ವೇಮ||.

ಒಂದು ತೊಗಲು ತಂದು ಚೆಂದ ಗೊಂಬೆಯ ಮಾಡಿ

ಕುಣಿವಂತೆ ಮಾಡಿ ಹಾಗೆ ಇಡುವ

ತನ್ನ ಆಡಿಸುವವನ ತಾನೇಕೆ ಕಾಣನೊ

ವಿಶ್ವದಾಭಿರಾಮ ಕೇಳು ವೇಮ||

ಮಿಥ್ಯ ತಿಳಿವಿನಿಂದ ಮೋಕ್ಷ ದೊರಕಬಹುದೆ?

ಕೈಲಾಗದ ಕೆಲಸ ಗೆಯ್ಯಬೇಡ

ಗುರುವು ಎನ್ನಬೇಡ ಗುಣಹೀನನಾಗಿರೆ

ವಿಶ್ವದಾಭಿರಾಮ ಕೇಳು ವೇಮ|| –

ಈ ಎಂಬ ವಚನಗಳನ್ನು ರಚಿಸುತ್ತಾ ಜಗಕೆ ಬೆಳಕಾದರು,

ವೇಮನರ ಸಾಹಿತ್ಯವು ಮನಸ್ಸಿಗೆ ಸಂತೋಷವನ್ನು ನೀಡುತ್ತದೆ. ಜೀವನದಲ್ಲಿ ಪ್ರತಿಕೂಲ ಪ್ರಸಂಗ ಬಂದಾಗ ಅವರ ಕವಿತೆಗಳು ಸಾಂತ್ವಾನ ಹೇಳುತ್ತವೆ. ಅವುಗಳನ್ನು ಓದುವ ಜನರಿಗೆಲ್ಲ ಪ್ರಸನ್ನತೆಯನ್ನು ತಂದುಕೊಡುತ್ತದೆ. ಸಮಾಜದಲ್ಲಿ ದಿನನಿತ್ಯ ನಡೆಯುವ ಜಾತಿ ಸಂಘರ್ಷ, ಮೇಲು ಕೀಳುಗಳ ತಾರತಮ್ಯ, ನೋವು ಕ್ರೌರ್ಯಗಳಿಗೆ ವೇಮನರ ಸಾಹಿತ್ಯದಲ್ಲಿ ಉತ್ತರವಿದೆ.

ಹಣ, ಆಸ್ತಿ, ಕಾಮ, ಹಿಂಸೆಗಳಿಂದ ನಮ್ಮ ಕೌಟುಂಬಿಕ ವ್ಯವಸ್ಥೆ ಅಸ್ತವ್ಯಸ್ತವಾಗುವ ರೂಢಿಗತ ಶೋಷಣೆಯನ್ನು ವೇಮನರು ದಿಕ್ಕರಿಸಿದ್ದಾರೆ. ಈ ನೋವುಗಳಿಗೆ ಉತ್ತರಿಸಲು ಎಲ್ಲ ಕಾಲ ಘಟ್ಟಕ್ಕೂ ಅನ್ವಯಿಸುವಂತೆ ವೇಮನರು ಕಾವ್ಯವನ್ನು ಬರೆದಿದ್ದಾರೆ. ತಪ್ಪು ಮಾಡುವವರಿಗೆ ಎಚ್ಚರಿಸಿದ್ದಾರೆ. ಆದ್ದರಿಂದ ಅವರ ಕಾವ್ಯ ಎಲ್ಲ ಕಾಲಕ್ಕು ಎಲ್ಲ ಜನಾಂಗಕ್ಕೂ ಅನ್ವಯಿಸುವಂತದ್ದು.

ಜನರೊಂದಿಗೆ ಬೆರೆತು ಬದುಕಿನ ಪ್ರತಿಯೊಂದು ಕ್ಷೇತ್ರದಲ್ಲಿರುವ ನ್ಯೂನ್ಯತೆಗಳನ್ನು ಎತ್ತಿ ತೋರಿಸುವುದಲ್ಲದೆ ಆ ನ್ಯೂನತೆಗಳನ್ನು ಸರಿಪಡಿಸಿಕೊಂಡು ಹೇಗೆ ಬದುಕಬೇಕೆಂದು ವೇಮನರ ಕವಿತೆಗಳು ನಮಗೆ ಮಾರ್ಗದರ್ಶನ ನೀಡುತ್ತವೆ. ವೇಮನರು ಸಂತೆಯೊಳಗಿದ್ದ ಸಂತಕವಿ, ಕಾಲಾತೀತ ಕವಿ, ಮಾನವನ ಅಂತರಂಗ ಬಹಿರಂಗದ ಬಗ್ಗೆ ವಿಶ್ಲೇಸುತ್ತ ಬದಲಾವಣೆಯಾಗಲು ಇಂಬುಕೊಡುತ್ತಾನೆ.

ತತ್ವಜ್ಞಾನಿಯಾಗಿ, ಗುರುವಾಗಿ, ಹಿತೈಷಿಯಾಗಿ, ಗೆಳೆಯನಾಗಿ, ಬಂಧುವಾಗಿ, ಯೋಗಿಯಾಗಿ, ದೇವರ ಭಕ್ತನಾಗಿ, ನಮಗೆ ಮಾರ್ಗದರ್ಶನ ನೀಡುತ್ತಾನೆ. ವಿಚಾರ ಮಾಡಲು ಹಚ್ಚುತ್ತಾನೆ, ಕವಿಯಾಗಿ ನಮ್ಮನ್ನು ಕಾಡುವರು. ಆದ್ದರಿಂದ ವೇಮನರು ಇಂದಿಗೂ ಪ್ರಸ್ತುತನಾಗಿದ್ದಾರೆ.

ಕೊಂಡವೀಡು ಪಟ್ಟಣ, ರಾಯಲಸೀಮೆ ಪ್ರದೇಶದಲ್ಲಿ ಸುತ್ತಿ, ಪ್ರಚಾರ ಮಾಡಿ ಶಾರ್ವರಿ ನಾಮ ಸಂವತ್ಸರ ಶ್ರೀರಾಮನವಮಿ ದಿನದಂದು 1730ರಲ್ಲಿ ವೇಮನರು ಇಹಲೋಕ ತ್ಯಜಿಸಿದರು. ಆಂಧ್ರ ಪ್ರದೇಶದ ಕಡಪಾ ಜಿಲ್ಲೆಯ ಕದಿರಿ ತಾಲ್ಲೂಕಿನ ಕಟಾರುಪಲ್ಲಿಯಲ್ಲಿ ಅವರ ಸಮಾಧಿ ಇದ್ದು ಪ್ರತಿವರ್ಷ ಜಾತ್ರೆ ನಡೆಯುತ್ತದೆ. ಅವರ ಸಮಾಧಿ ಜ್ಞಾನೋಪಾಸಕರಿಗೆ, ಅತ್ಮದರ್ಶನಾಕಾಂಕ್ಷಿಗಳಿಗೆ ಪವಿತ್ರ ಯಾತ್ರಾ ಸ್ಥಾನವಾಗಿದೆ.

ವೇಮನರ ತತ್ತ್ವ ಸಂದೇಶಗಳ ಜ್ಞಾನ ಮತ್ತು ಜಾಗೃತಿ ಜನರಲ್ಲಿ ಮೂಡಬೇಕು. ಶಾಂತಿ, ಸಮತೆ, ಸೌಹಾರ್ದತೆಯ ಪರಿಮಳ ಜನಮನದಲ್ಲಿ ಪಸರಿಸುವಂತಾಗಬೇಕು ಎನ್ನುವ ಉದಾತ್ತ ಧ್ಯೇಯದೊಂದಿಗೆ ವೇಮನರ ಜಯಂತ್ಯೋತ್ಸವವನ್ನು ರಾಜ್ಯ ಸರ್ಕಾರ ಪ್ರತಿ ವರ್ಷ ಜನವರಿ 19ರಂದು ಸರ್ಕಾರಿ ಕಚೇರಿಗಳಲ್ಲಿ ಮತ್ತು ನಾಡಿನಾದ್ಯಂತ ಆಚರಿಸಲಾಗುತ್ತಿದೆ.

ಯೋಗಿ ವೇಮನ  ಜಯಂತ್ಯೋತ್ಸದ ಶುಭಾಶಯಗಳು.

ಡಾ.ಗುರುಪ್ರಸಾದ ಹವಲ್ದಾರ್

  • ಮೂಲತಃ ಉಪನ್ಯಾಸಕರು. ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲ್ಲೂಕಿನ ಮರಿಯಮ್ಮನ ಹಳ್ಳಿಯವರು. ಪ್ರಸ್ತುತ ಹಗರಿಬೊಮ್ಮನಹಳ್ಳಿ ಜಿವಿಪಿಪಿ ಪದವಿ ಕಾಲೇಜನಲ್ಲಿ ಕನ್ನಡ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತ ಜೊತೆಗೆ ಪತ್ರಿಕೆಗಳಿಗೆ ವೆಬ್ ನ್ಯೂಸ್ ಪೋಟ್೯ಲ್ ಗಳಿಗೆ ಲೇಖನ ಬರೆಯುತ್ತಿದ್ದಾರೆ.

cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಹಿರಿಯ ಪತ್ರಕರ್ತಕನಿಗೆ ಒಲಿದ ಕನ್ನಡ ಪರಿಚಾರಿಕೆಯ ಅದೃಷ್ಟ

ಹಿರಿಯ ಪತ್ರಕರ್ತಕನಿಗೆ ಒಲಿದ ಕನ್ನಡ ಪರಿಚಾರಿಕೆಯ ಅದೃಷ್ಟ

Leave a Reply Cancel reply

Your email address will not be published. Required fields are marked *

Recommended

ಗರ್ಭಿಣಿ ಪತ್ನಿಯನ್ನು ಕೊಚ್ಚಿಕೊಲೆ ಮಾಡಿದ ಕುಡುಕ ಪತಿ

ಗರ್ಭಿಣಿ ಪತ್ನಿಯನ್ನು ಕೊಚ್ಚಿಕೊಲೆ ಮಾಡಿದ ಕುಡುಕ ಪತಿ

4 years ago
ಹೆಚ್.ಡಿ.ಕುಮಾರಸ್ವಾಮಿ ಬೀಸಿದ ಚಾಟಿಯಿಂದ ಎಚ್ಚೆತ್ತ ಸರಕಾರ

ಜಾತಿ ಗಣತಿಯಿಂದ ಜಾತಿ ದ್ವೇಷ

3 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ