• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home COVID-19

ವಿದ್ಯಾರ್ಥಿಗಳಿಗೆ ಹೆಚ್ಚುತ್ತಿರುವ ಕೋವಿಡ್ ಸೋಂಕು

cknewsnow desk by cknewsnow desk
January 20, 2022
in COVID-19, STATE
Reading Time: 1 min read
0
11 ಸಲ ಕಾಲ್‌ ಮಾಡಿದ  ಮಾಜಿ ಸಿಎಂ! ಜೆಡಿಎಸ್‌ ಶಾಸಕರ ಬ್ರೈನ್‌ವಾಶ್!!
965
VIEWS
FacebookTwitterWhatsuplinkedinEmail

15-20 ದಿನ ಶಾಲಾ, ಕಾಲೇಜು ಮುಚ್ಚುವಂತೆ HDK ಆಗ್ರಹ; ಮಕ್ಕಳಲ್ಲಿ ಸೋಂಕು ಹೆಚ್ಚುತ್ತಿದ್ದರೂ ಸರಕಾರದ ಉಪೇಕ್ಷೆ ಸರಿಯಲ್ಲ

ಚನ್ನಪಟ್ಟಣ: ಶಾಲೆ, ಕಾಲೇಜು ಹಾಗೂ ಹಾಸ್ಟೆಲ್‌ʼಗಳಲ್ಲಿ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳಿಗೆ ಕೋವಿಡ್‌ ಪಾಸಿಟೀವ್‌ ಬರುತ್ತಿದ್ದು, ಸರಕಾರ ಕೂಡಲೇ ಶಾಲಾ-ಕಾಲೇಜುಗಳಿಗೆ ಕೊನೆಪಕ್ಷ 15ರಿಂದ 20 ದಿನ ರಜೆ ಘೋಷಣೆ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಒತ್ತಾಯ ಮಾಡಿದರು.

ಚನ್ನಪಟ್ಟಣದ ಹೊಂಗನೂರಿನಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಅವರು; ವಸತಿ ಶಾಲೆಗಳಲ್ಲಿ ಅತ್ಯಂತ ಹೆಚ್ಚಿನ ಪ್ರಮಾಣದಲ್ಲಿ ವಿದ್ಯಾರ್ಥಿಗಳು ಸೋಂಕಿತರಾಗಿದ್ದಾರೆ. ಹೀಗಾಗಿ ಇಂಥ ಶಾಲೆಗಳನ್ನು ತಕ್ಷಣವೇ ಬಂದ್‌ ಮಾಡಿಸಬೇಕು ಎಂದರು.

ತಜ್ಞರಲ್ಲಿ ಕೆಲವರು ಶಾಲೆಗಳಿಗೆ ಘೋಷಿಸುವುದಕ್ಕೆ ಪರ ವಿರೋಧ ಇದ್ದಾರೆ ಎಂಬ ಬಗ್ಗೆ ಗಮನ ಸೆಳೆದಾಗ ಮಾಜಿ ಮುಖ್ಯಮಂತ್ರಿಗಳು ಹೇಳಿದ್ದಿಷ್ಟು;

ತಜ್ಞರು ಪರ ಅಥವಾ ವಿರೋಧ ಎನ್ನುವ ಮಾತು ಬೇರೆ. ಆದರೆ, ಸರಕಾರದ ಮುಂದೆ ಕೋವಿಡ್‌ ಸ್ಥಿತಿಗತಿಗಳ ಬಗ್ಗೆ ವಾಸ್ತವಾಂಶಗಳಿವೆ. ಆ ಮಾಹಿತಿಗಳ ಆಧಾರದ ಮೇಲೆ ಸರಕಾರ ನಿರ್ಧಾರ ಕೈಗೊಳ್ಳಬೇಕು. ಮೊನ್ನೆಯಷ್ಟೇ ಮಂಡ್ಯದ ಪಿಇಎಸ್‌ ಕಾಲೇಜಿನಲ್ಲಿ 163 ವಿದ್ಯಾರ್ಥಿಗಳಿಗೆ ಕೋವಿಡ್‌ ಪಾಸಿಟೀವ್‌ ಬಂದಿದೆ. ತುಮಕೂರಿನಲ್ಲಿ ಒಂದೇ ಕಾಲೇಜಿನ 600 ವಿದ್ಯಾರ್ಥಿಗಳಿಗೆ ಪಾಸಿಟೀವ್‌ ಬಂದಿದೆ. ಈ ಎಲ್ಲ ಅಂಕಿ ಅಂಶಗಳೇ ಎಲ್ಲವನ್ನೂ ಹೇಳುತ್ತಿವೆ ಎಂದರು.

ತಜ್ಞರ ವರದಿಗಿಂತ ಸರಕಾರದ ಜವಾಬ್ದಾರಿ ಹೆಚ್ಚು. ಸರ್ಕಾರವು ಮಕ್ಕಳ ಆರೋಗ್ಯದ ದೃಷ್ಟಿಯಿಂದ ಕೆಲಸ ಮಾಡಲಿ. ಮಕ್ಕಳು, ಪೋಷಕರು ಆತಂಕಕ್ಕೆ ಒಳಗಾಗುವುದಕ್ಕೆ ಅವಕಾಶ ನೀಡಬಾರದು. ಸರಕಾರ ಈ ನಿಟ್ಟಿನಲ್ಲಿ ಚಿಂತಸಲಿ ಎಂದು ಅವರು ಸಲಹೆ ಮಾಡಿದರು.

ಬಿಜೆಪಿ ನಾಯಕರಲ್ಲೇ ಗೊಂದಲವಿದೆ

ವೀಕೆಂಡ್ ಕರ್ಫ್ಯೂ ವಿಚಾರದಲ್ಲಿ ಎಲ್ಲ ಕಡೆ ಗೊಂದಲವಿದೆ. ಅದರಲ್ಲೂ ಬಿಜೆಪಿ ಪಕ್ಷದ ನಾಯಕರಲ್ಲೇ ಗೊಂದಲಗಳಿವೆ. ಮೊದಲು ಇದನ್ನು ಅವರು ಸರಿಪಡಿಸಿಕೊಳ್ಳಲಿ. ಕೂಲಿ ಕಾರ್ಮಿಕರು, ಸಣ್ಣಪುಟ್ಟ ವ್ಯಾಪಾರಸ್ಥರು ಕಷ್ಟದಲ್ಲಿದ್ದಾರೆ. ವೀಕೆಂಡ್ ಕರ್ಫ್ಯೂನಿಂದ ಅವರಿಗೆ ಜೀವನ ನಿರ್ವಹಣೆ ಕಷ್ಟ. ದಿನನಿತ್ಯದ ಆದಾಯದಲ್ಲಿ ಕುಟುಂಬ ನಿರ್ವಹಿಸಬೇಕಿದೆ. ಇಂತಹ ಕುಟುಂಬಗಳ ಬದುಕು ಕಟ್ಟಿ ಕೊಡಬೇಕು. ಬದುಕು ಕಟ್ಟಿ ಕೊಡುವ ಜವಾಬ್ದಾರಿ ಸರ್ಕಾರದ್ದು. ವಿರೋಧ ಪಕ್ಷದವರು ಸುಲಭವಾಗಿ ಹೇಳುತ್ತಾರೆ ಅಂತಾರೆ ಅಂತ ಲಘುವಾಗಿ ಮಾತನಾಡುವುದು ಬೇಡ ಎಂದರು ಕುಮಾರಸ್ವಾಮಿ ಅವರು.

ನಾವು ಸರಕಾರ ನಡೆಸಿದ್ದೇವೆ. ಆ ಕಷ್ಟ ನಷ್ಟ ನನಗೂ ಗೊತ್ತಿದೆ. ಪ್ರತಿಯೊಬ್ಬ ನಾಗರಿಕರ ಹಿತ ಕಾಪಾಡೋದು ಸರಕಾರದ ಜವಾಬ್ದಾರಿ. ಜನರ ಬದುಕು ಕಲ್ಪಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸೋದು ಸರಕಾರದ ಕರ್ತವ್ಯ. ನಾನು ಸರಕಾರವನ್ನು ಇಕ್ಕಟ್ಟಿನಲ್ಲಿ ಸಿಲುಕಿಸಲು ಹೀಗೆ ಹೇಳುತ್ತಿಲ್ಲ. ನಾಡಿನ ಜನರು ನೀಡುವ ತೆರಿಗೆ ಹಣವನ್ನೇ ಬಳಸಿ ಬಡ ವರ್ಗದ ಜನರ ನೆರವಿಗೆ ಸರಕಾರ ಧಾವಿಸಲಿ ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.

ರಾಮನಗರದಲ್ಲಿ ಹೆಚ್ಚಿದ ಸೋಂಕು

ರಾಮನಗರದಲ್ಲಿ ಕೋವಿಡ್ ಪಾಸಿಟಿವಿಟಿ ರೇಟ್ ಹೆಚ್ಚಾಗಿದೆ ಎಂದ ಕುಮಾರಸ್ವಾಮಿ ಅವರು; ಇದು ಕಾಂಗ್ರೆಸ್ ಪಾದಯಾತ್ರೆಯಿಂದ ಹೆಚ್ಚಾಯಿತೋ ಅಥವಾ ಬೇರೆ ಯಾವುದೇ ಕಾರಣದಿಂದ ಹೆಚ್ಚಾಯಿತೋ ಎಂದು ನಾನು ಚರ್ಚೆ ಮಾಡಲ್ಲ. ಆದಾಗ್ಯೂ ಜಿಲ್ಲೆಯ ಅಧಿಕಾರಿಗಳು ಉತ್ತಮ ಕೆಲಸ ಮಾಡುತ್ತಿದ್ದಾರೆ. ಅವರ ಕೆಲಸವನ್ನು ಗುರುತಿಸಿ ಪ್ರೋತ್ಸಾಹ ನೀಡಬೇಕಿದೆ ಎಂದರು ಅವರು.

cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಲಸಿಕೆ: ಗುಜರಾತ್‌ಗೆ ಬೆಣ್ಣೆ! ಕರ್ನಾಟಕಕ್ಕೆ ಸುಣ್ಣ!!

ಬೆಮೆಲ್ ಕಾಂತರಾಜು ಕಾಂಗ್ರೆಸ್‌ ಸೇರ್ತಿದ್ದಾರೆ, ಕೆಪಿಸಿ ಕಚೇರಿಗೆ ಯಾರೂ ತಲೆ ಹಾಕಬೇಡಿ ಎಂದ ಡಿಕೆಶಿ

Leave a Reply Cancel reply

Your email address will not be published. Required fields are marked *

Recommended

ಬಾಂಬ್ ಇಟ್ಟ ಕಿರಾತಕ ಹೇಗಿದ್ದ? ಮಹತ್ವದ ಮಾಹಿತಿ ಕೊಟ್ಟ ಮುಖ್ಯಮಂತ್ರಿ

ಬಾಂಬ್ ಇಟ್ಟ ಕಿರಾತಕ ಹೇಗಿದ್ದ? ಮಹತ್ವದ ಮಾಹಿತಿ ಕೊಟ್ಟ ಮುಖ್ಯಮಂತ್ರಿ

2 years ago
ಅಧಿಕಾರದ ಕುರ್ಚಿಗೆ ವಿದಾಯ ಹೇಳಲು ಸಿದ್ಧರಾದರಾ ʼಬಲಶಾಲಿʼ ಯಡಿಯೂರಪ್ಪ! ಟೆಂಪಲ್‌ ರನ್‌ ಶುರುವಿಟ್ಟುಕೊಂಡ ಪುತ್ರ ವಿಜಯೇಂದ್ರ: ಹಾಗಾದರೆ, NEXT ಸಿಎಂ ಯಾರಪ್ಪ?

ಕೊರೊನ ಲಸಿಕೆ ಅಕ್ರಮ ಮಾರಾಟ ಮಾಡಿದರೆ ಜೈಲೇ ಗತಿ: ಗೃಹ ಸಚಿವ ಬಸವರಾಜ ಬೊಮ್ಮಾಯಿ ವಾರ್ನಿಂಗ್

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ