10,636 ಅತಿಥಿ ಉಪನ್ಯಾಸಕರನ್ನು ನೇಮಕ
ಬೆಂಗಳೂರು: 2021-22ನೇ ಶೈಕ್ಷಣಿಕ ವರ್ಷಕ್ಕೆ ಅನ್ವಯವಾಗುವಂತೆ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಜ.27ರಿಂದ (ಗುರುವಾರ) 30ರವರೆಗೆ ನಾಲ್ಕು ದಿನಗಳ ಕಾಲ ಆನ್ ಲೈನ್ ಕೌನ್ಸೆಲಿಂಗ್ ನಡೆಯಲಿದೆ ಎಂದು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ್ ತಿಳಿಸಿದ್ದಾರೆ.
ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಒಟ್ಟು 10,636 ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಳ್ಳಲಾಗುತ್ತದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಅಭ್ಯರ್ಥಿಗಳು ಜೇಷ್ಠತೆ ಆಧಾರದ ಮೇಲೆ ತಮಗೆ ಬೇಕಾದ ಕಾಲೇಜನ್ನು ಕೌನ್ಸೆಲಿಂಗ್ ನಲ್ಲಿ ಆಯ್ಕೆ ಮಾಡಿಕೊಳ್ಳಬಹುದು. ಬಳಿಕ ತಮ್ಮ ಕಚೇರಿಯಿಂದ ನೇಮಕಾತಿ ಆದೇಶ ನೀಡಲಾಗುತ್ತದೆ. ಅದರ ನಂತರದ ಎರಡು ದಿನಗಳಲ್ಲಿ ತಮಗೆ ಸೂಚಿಸಿದ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರು ವರದಿ ಮಾಡಿಕೊಳ್ಳಬೇಕಾಗುತ್ತದೆ. ಆ ಸಂದರ್ಭದಲ್ಲಿ ಅವರು ಮೂಲ ದಾಖಲೆಗಳನ್ನು ಪರಿಶೀಲನೆಗೆ ಒಪ್ಪಿಸಿ, ಕರ್ತವ್ಯಕ್ಕೆ ಹಾಜರಾಗಬೇಕು. ದಾಖಲೆಗಳಲ್ಲಿ ವ್ಯತ್ಯಾಸ ಕಂಡುಬಂದರೆ ಅಂತಹವರನ್ನು ಕೈಬಿಡಲಾಗುವುದು ಎಂದು ಅವರು ಹೇಳಿದ್ದಾರೆ.
`ಒಟ್ಟು 47 ವಿಷಯಗಳಲ್ಲಿ ವಾರಕ್ಕೆ 15 ಗಂಟೆಗಳ ಬೋಧನೆಯ ಪೂರ್ಣ ಕಾರ್ಯಭಾರವಿರುವ 7,225 ಮತ್ತು ಭಾಗಶಃ ಕಾರ್ಯಭಾರವಿರುವ 3,411 ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಅವರು ತಿಳಿಸಿದರು.
ಈ ಹುದ್ದೆಗಳಲ್ಲಿ ವಾಣಿಜ್ಯ ವಿಷಯವು 1,830, ಕನ್ನಡ 1,008, ಇತಿಹಾಸ 675, ಇಂಗ್ಲಿಷ್ 736, ಸಮಾಜಶಾಸ್ತ್ರ 526, ಅರ್ಥಶಾಸ್ತ್ರ 620, ಬಿಜೆನೆಸ್ ಮ್ಯಾನೇಜ್ಮೆಂಟ್ 490, ಕಂಪ್ಯೂಟರ್ ಸೈನ್ಸ್ 910, ಭೌತಶಾಸ್ತ್ರ 562, ರಾಜ್ಯಶಾಸ್ತ್ರ 602, ರಸಾಯನಶಾಸ್ತ್ರ 663, ಗಣಿತ 492, ಪ್ರಾಣಿಶಾಸ್ತ್ರ 198, ಸಸ್ಯಶಾಸ್ತ್ರ 212, ಮನೋವಿಜ್ಞಾನ 54, ಪರಿಸರ ವಿಜ್ಞಾನ 53, ಸಮಾಜಕಾರ್ಯ 80 ಮತ್ತು ಉರ್ದು 78 ಹುದ್ದೆಗಳನ್ನು ಹೊಂದಿವೆ ಎಂದು ಪ್ರದೀಪ್ ಮಾಹಿತಿ ನೀಡಿದ್ದಾರೆ.
ಆದ್ಯತೆ: ಈಗಾಗಲೇ ಅತಿಥಿ ಉಪನ್ಯಾಸಕರಾಗಿ ಕೆಲಸ ಮಾಡಿರುವವರನ್ನು ಜ್ಯೇಷ್ಠತೆಯ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತಿದೆ. ಕೌನ್ಸೆಲಿಂಗ್ ಬಳಿಕ ಎಲ್ಲರೂ ಹಾಜರಾಗಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ತಿಳಿಸಿದ್ದಾರೆ.
Some one have been enter this acedamic year (2021-2022)as 6 months, but it is only 1 month 15 days. So their experience has add by 1.5 marks so verify please, because others may come above the list but here it is not like this so please sir
ಸರ್ 2021-22 ನೇ ಸಾಲಿನಲ್ಲಿ ಕಾಲೇಜು ನಡೆದಿದ್ದು ಕೇವಲ 1 ತಿಂಗಳು 15 ದಿನಗಳಿಗಿಂತ ಕಡಿಮೆ…. ಆದ್ದರಿಂದ 1ತಿಂಗಳು ಎಂದು ಹಾಕಿದ್ದೇನೆ ಆದರೆ ಕೇಲವು ಅಭ್ಯರ್ಥಿಗಳು 6 ತಿಂಗಳು ಎಂದು ಹಾಕಿದ್ದಾರೆ. ಆದ್ದರಿಂದ ಅವರುಗಳು ಲಿಸ್ಟನಲ್ಲಿ 1.5 ಅಂಕಗಳಿಂದ ಮುಂದಿದ್ದಾರೆ ದಯಮಾಡಿ ಪಟ್ಟಿಯನ್ನು ಪರಿಶೀಲಿಸಿ ನಿಜವಾದವರಿಗೆ ನ್ಯಯ ಕೊಡಿ ಸಾರ್
ಈ ವರ್ಷದ ಅನುಭವ ೧ ತಿಂಗಳು ೧೫ ದಿವಸಗಳು ಮಾತ್ರ ಆದರೆ ತುಂಬಾ ಅಥಿತಿ ಉಪನ್ಯಾಸಕರು ೬ ತಿಂಗಳು ಎಂದು ತೋರಿಸುತ್ತಾರೆ ಅಂದರೆ ೧.೫ ಅಂಕಗಳೊಂದಿಗೆ ಮುಂದಿರುತ್ತಾರೆ ದಯವಿಟ್ಟು ಇದನ್ನು ಪರಿಶೀಲಿಸಿ ನ್ಯಾಯವನ್ನು ಕೊಡಬೇಕೆಂದು ನಿಮ್ಮಲ್ಲಿ ಕೇಳಿಕೊಳ್ಳುತ್ತೇನೆ