• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಚಿಕ್ಕಬಳ್ಳಾಪುರದಲ್ಲಿ 73ನೇ ಗಣರಾಜ್ಯೋತ್ಸವ

cknewsnow desk by cknewsnow desk
January 26, 2022
in CHIKKABALLAPUR, STATE
Reading Time: 1 min read
0
ಚಿಕ್ಕಬಳ್ಳಾಪುರದಲ್ಲಿ 73ನೇ ಗಣರಾಜ್ಯೋತ್ಸವ
1k
VIEWS
FacebookTwitterWhatsuplinkedinEmail

ಡಾ.ಸುಧಾಕರ್‌ ಬದಲಿಗೆ ಎಂಟಿಬಿ ಅವರಿಂದ ಧ್ವಜಾರೋಹಣ

ಚಿಕ್ಕಬಳ್ಳಾಪುರ: ಭಾರತವು ಸ್ವಾತಂತ್ರ್ಯಾ ನಂತರ 1950ರ ಜನವರಿ 26ರಂದು ತನ್ನದೇ ಸಂವಿಧಾನವನ್ನು ಜಾರಿಗೊಳಿಸಿಕೊಂಡು ಸ್ವತಂತ್ರ ಗಣತಂತ್ರ ರಾಷ್ಟ್ರವಾಯಿತು. ಈ ಹಿನ್ನೆಲೆಯಲ್ಲಿ ಜನವರಿ 26, ಭಾರತೀಯರಿಗೆ ಮಹತ್ವದ ದಿನವಾಗಿದೆ ಎಂದು ಪೌರಾಡಳಿತ ಮತ್ತು ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಸಣ್ಣ ಉದ್ದಿಮೆಗಳ ಸಚಿವ ಹಾಗೂ ಜಿಲ್ಲಾ ನೂತನ ಉಸ್ತುವಾರಿ ಸಚಿವ ಎನ್.ನಾಗರಾಜು (ಎಂಟಿಬಿ) ತಿಳಿಸಿದರು.

ಅವರು ಇಂದು ನಗರದ ಸರ್.ಎಂ.ವಿ. ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಆಯೊಜಿಸಿದ್ದ ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ಕಾರ್ಯಕ್ರಮದ ಧ್ವಜಾರೊಹಣವನ್ನು ನೆರವೇರಿಸಿ ಮಾತನಾಡಿದರು.

ತಾಯ್ನಾಡಿನ ಸ್ವಾತಂತ್ರ್ಯಕ್ಕಾಗಿ ತಮ್ಮನ್ನು ಅರ್ಪಿಸಿಕೊಂಡ ದೇಶ ಪ್ರೇಮಿಗಳು ಹಾಗೂ ನಾಯಕರ ತ್ಯಾಗ ಬಲಿದಾನಗಳನ್ನು ನಾವು ಸ್ಮರಿಸೋಣ. ಜಗತ್ತಿನ ಅತಿ ದೊಡ್ಡ ಪ್ರಜಾಪ್ರಭುತ್ವ ವ್ಯವಸ್ಥೆ ಹೊಂದಿರುವ ನಮ್ಮ ದೇಶಕ್ಕೆ ಅತ್ಯಂತ ಶ್ರೇಷ್ಠ ಸಂವಿಧಾನ ರಚಿಸಿಕೊಟ್ಟು ದೇಶದ ಮುನ್ನಡೆಗೆ ದಾರಿದೀಪವಾಗಿರುವ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಅವರ ತಂಡದ ಸದಸ್ಯರನ್ನು ಕೃತಜ್ಞತಭಾವದಿಂದ ಸ್ಮರಿಸೋಣ ಎಂದರು ಸಚಿವರು.

ಜಗತ್ತಿಗೆ ಮಾತೃಪ್ರೇಮ, ಸಮಾನತೆ ಮತ್ತು ಮಮತೆಯನ್ನು ಬೋಧಿಸಿದ ಪರಂಪರೆ ನಮ್ಮದು. ರಾಜಪ್ರಭುತ್ವ ಮತ್ತು ಊಳಿಗಮಾನ್ಯ ವ್ಯವಸ್ಥೆಯನ್ನು ಧಿಕ್ಕರಿಸಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಒಪ್ಪಿಕೊಂಡು, ಪ್ರಜೆಗಳೇ ಪ್ರಭುಗಳು ಎಂದು ಭಾವಿಸಿ ಹೆಣ್ಣು ಮಕ್ಕಳನ್ನು ತಾಯಿಯೆಂದು, ಮಕ್ಕಳನ್ನು ದೇವರೆಂದು ನಂಬಿಕೊಂಡು ಹಲವು ಧರ್ಮಗಳು ಮತ್ತು ಆಚರಣೆಗಳನ್ನು ಒಂದೇ ಮಣ್ಣಿನಲ್ಲಿ ಪೋಷಿಸಿಕೊಂಡು, ಅಧ್ಯಾತ್ಮ ಮತ್ತು ವಿಜ್ಞಾನ ಎರಡನ್ನು ಸಮನ್ವಯಿಸಿದ ಹೆಮ್ಮೆಯ ದೇಶ ನಮ್ಮದು ಎಂದು ಅವರು ಹೇಳಿದರು. 

ದಿಗ್ಗಜರ ಜಿಲ್ಲೆ ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ ಜಿಲ್ಲೆಯು ಅನೇಕ ಧೀಮಂತ ವ್ಯಕ್ತಿಗಳಿಗೆ ಜನ್ಮ ನೀಡಿದ್ದು, ಈ ಪೈಕಿ ಸರ್ ಎಂ.ವಿಶ್ವೇಶ್ವರಯ್ಯ ಮತ್ತು ಡಾ. ಸಿ.ಎನ್‍.ಆರ್.ರಾವ್ ಅವರುಗಳು ಭಾರತರತ್ನ ಪ್ರಶಸ್ತಿಗೆ ಭಾಜನರಾಗಿರುವುದು ಜಿಲ್ಲೆಯೇ ಹೆಮ್ಮೆ ಪಡುವಂತಹ ಸಂಗತಿ ಯಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯು ಕೃಷಿ ಪ್ರಧಾನ ಜಿಲ್ಲೆಯಾಗಿದ್ದು, ಹಣ್ಣು, ಹೂವು, ತರಕಾರಿ, ರೇಷ್ಮೆ, ಪ್ರಧಾನ ಆಹಾರ ಧಾನ್ಯ ರಾಗಿ, ಕ್ಷೀರೋತ್ಪಾದನೆಗೆ ಹೆಸರುವಾಸಿಯಾಗಿದೆ. ಜಿಲ್ಲೆಯಲ್ಲಿ ವಾರ್ಷಿಕ ವಾಡಿಕೆ ಮಳೆ (31.12.2021 ರ ಅಂತ್ಯಕ್ಕೆ) 735.7 ಮಿಲಿ ಮೀಟರ್ ಇದ್ದು, ವಾಸ್ತವಿಕವಾಗಿ 1269.3 ಮಿಲಿ ಮೀಟರ್ ಮಳೆಯಾಗುವ ಮೂಲಕ ಶೇ. 73% ಹೆಚ್ಚಿನ ಮಳೆಯಾಗಿದೆ ಎಂದರು.

ಜಿಲ್ಲೆಯಲ್ಲಿ ಒಟ್ಟು 4,244.72 ಕ್ವಿಂಟಲ್ ಬಿತ್ತನೆ ಬೀಜಗಳನ್ನು 30.682 ರೈತರು ಸಹಾಯಧನದಡಿ ಪಡೆದಿರುತ್ತಾರೆ. ಜಿಲ್ಲೆಯಲ್ಲಿ ಈ ವರ್ಷ ಉಂಟಾದ ಅತಿವೃಷ್ಟಿ ಮಳೆಯಿಂದ ಒಟ್ಟಾರೆ 58,207 ಹೆಕ್ಟೇರ್ ಬೆಳೆ ಹಾನಿಯಾಗಿದ್ದು,  NDRF ಮಾರ್ಗಸೂಚಿಯನ್ವಯ ಸುಮಾರು 44.87 ಕೋಟಿ ಪರಿಹಾರಧನವನ್ನು 81,165 ರೈತರಿಗೆ ನೇರ ನಗದು ಮೂಲಕ ಪಾವತಿಸಲಾಗಿರುತ್ತದೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕರೋನಾ ರೋಗವನ್ನು ದಿಟ್ಟವಾಗಿ ಎದುರಿಸಿದ್ದು, ಪ್ರಸ್ತುತ ಸಾರ್ವಜನಿಕರ ಚಿಕಿತ್ಸೆಗಾಗಿ ಜಿಲ್ಲೆಯಲ್ಲಿ 526 ಆಮ್ಲಜನಕಯುಕ್ತ ಹಾಸಿಗೆಗಳನ್ನು, 35 ಐ.ಸಿ.ಯು. ಜೊತೆಗೆ ವೆಂಟಿಲೇಟರ್, 15 ಐ.ಸಿ.ಯು. ಹಾಸಿಗೆಗಳ ವ್ಯವಸ್ಥೆಯ ಜೊತೆಗೆ ಬೆಂಗಳೂರು ನಗರದ ಆಸ್ಟರ್ ಸಿ.ಎಂ.ಐ. ಅಸ್ಪತ್ರೆಯಲ್ಲಿ 102 ಬೆಡ್ಗ ಳನ್ನು ಕಾಯ್ದಿರಿಸಲಾಗಿದೆ. ಜಿಲ್ಲೆಯು  2ನೇ ಡೋಸ್  ಕೋವಿಡ್  ಲಸಿಕಾ ಸಾಧನೆಯಲ್ಲಿ ರಾಜ್ಯದಲ್ಲಿ 2ನೇ ಸ್ಥಾನದಲ್ಲಿದ್ದು, ಶೇ 103 % ಮೊದಲನೆ ಡೋಸ್ ಹಾಗೂ 93% ಎರಡನೇ ಡೋಸ್ ಲಸಿಕಾಕರಣದ ಸಾಧನೆ ಮಾಡಲಾಗಿದೆ. ಕೋವಿಡ್ ಸೋಂಕಿನಿಂದ ಒಟ್ಟು 468 ಜನ ಮೃತರಾಗಿದ್ದು, ಈ ಪೈಕಿ 355 ಜನರಿಗೆ ಒಟ್ಟು ರೂ. 4.33 ಕೋಟಿ ಗಳನ್ನು ಈಗಾಗಲೇ ಪರಿಹಾರವಾಗಿ ಪಾವತಿಸಲಾಗಿದೆ ಎಂದರು. 

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಿವೇಶನ ರಹಿತರಿಗೆ ನಿವೇಶನ ಹಂಚಿಕೆ ಮಾಡಲು ರಾಜ್ಯದಲ್ಲೇ ಅತಿ ಹೆಚ್ಚು ಅಂದರೆ 836.27 ಎಕರೆ/ಗುಂಟೆ ಜಮೀನನ್ನು ಕಾಯ್ದಿರಿಸಿ ಸಂಬಂಧಪಟ್ಟ ಇಲಾಖೆಗೆ ಹಸ್ತಾಂತರಿಸಲಾಗಿರುತ್ತದೆ.   ಜಿಲ್ಲೆಯಲ್ಲಿ 2021-22ನೇ ಸಾಲಿನಲ್ಲಿ ನರೇಗಾ ಯೋಜನೆಯಡಿ 55 ಲಕ್ಷ ಮಾನವ ದಿನಗಳಿಗೆ ಅನುಗುಣವಾಗಿ 57.41 ಲಕ್ಷ ಮಾನವ ದಿನಗಳನ್ನು ಈಗಾಗಲೇ ಸೃಜಿಸಿ ಶೇ. 104.31% ಪ್ರಗತಿಯನ್ನು ಸಾಧಿಸಲಾಗಿದೆ ಎಂದರು. 

ಗ್ರಾಮೀಣ ವಸತಿ ಯೋಜನೆಯಡಿ ಚಿಕ್ಕಬಳ್ಳಾಪುರ ಜಿಲ್ಲೆಗೆ ಅಮೃತ ಗ್ರಾಮೀಣ ವಸತಿ ಯೋಜನೆಯಡಿ 17 ಗ್ರಾಮ ಪಂಚಾಯತಿಗಳನ್ನು ಈಗಾಗಲೇ ಆಯ್ಕೆ ಮಾಡಿಕೊಳ್ಳಲಾಗಿದೆ. 2021-22ನೇ ಸಾಲಿಗೆ 5,760 ಹೊಸ ಮನೆಗಳ ನಿರ್ಮಾಣದ ಗುರಿ ನೀಡಲಾಗಿದೆ.  ಜಿಲ್ಲೆಯನ್ನು ಕೈಗಾರಿಕಾ ಹಬ್ ಆಗಿ ಪರಿವರ್ತಿಸಲು ಸರ್ಕಾರವು ಒಲವು ತೋರಿದ್ದು, ಈ ದಿಸೆಯಲ್ಲಿ ರಾಜ್ಯ ಉನ್ನತ ಮಟ್ಟದ ಸಮಿತಿಯು 43 ಹೊಸ ಕೈಗಾರಿಕಾ ಯೋಜನೆಗಳಿಗೆ ಅನುಮೋದನೆ ನೀಡಿದ್ದು, ಒಟ್ಟು 4,521.64 ಕೋಟಿ ರೂ.ಗಳ ಬಂಡವಾಳ ಹೂಡಿಕೆಯನ್ನು ಜಿಲ್ಲೆಯಲ್ಲಿ ನಿರೀಕ್ಷಿಸಲಾಗಿದ್ದು, ಇದರಿಂದ 10,967 ಜನರಿಗೆ ಉದ್ಯೋಗಾವಕಾಶ ಲಭಿಸುವ ಸಾಧ್ಯತೆ ಇರುತ್ತದೆ ಎಂದರು. 

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸರ್ಕಾರದ ವತಿಯಿಂದ ವೈಧ್ಯಕೀಯ ಶಿಕ್ಷಣ ಕಾಲೇಜು ಹಾಗೂ 700 ಹಾಸಿಗೆಗಳ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯು ಸ್ಥಾಪನೆಯಾಗುವ ದಿನಗಳು ಹತ್ತಿರವಾಗಿದ್ದು, ಶೀಘ್ರದಲ್ಲೇ ಈ ಕನಸು ನನಸಾಗಿ ಜಿಲ್ಲೆಯ ಜನರಿಗೆ ಉತ್ತಮ ಆರೋಗ್ಯ ಸೇವೆ ಸಿಗುವ ದಿನಗಳು ದೂರದಲ್ಲಿಲ್ಲವೆಂದು  ಹರ್ಷ ವ್ಯಕ್ತ ಪಡಿಸಿದರು.

ಇತ್ತೀಚೆಗೆ ರಾಜ್ಯ ಸರ್ಕಾರವು ನಗರ ಸ್ಥಳೀಯ ಸಂಸ್ಥೆಗಳ ಅಭಿವೃದ್ಧಿಯ ಹಿತದೃಷ್ಟಿಯಿಂದ ಮುಖ್ಯಮಂತ್ರಿಗಳ ನಗರೋತ್ಥಾನ-4 ಯೋಜನೆಯನ್ನು ಜಾರಿಗೆ ತರಲು ಈಗಾಗಲೇ ಆದೇಶ ಹೊರಡಿಸಿದ್ದು, ಒಟ್ಟು 3,885 ಕೋಟಿ ರೂ.ಗಳನ್ನು (ಜಿಲ್ಲಾ ಕೇಂದ್ರ ಹಾಗೂ ಗ್ರೇಡ್-1 ನಗರಸಭೆಗೆ ರೂ. 40 ಕೋಟಿ, ನಗರಸಭೆಗೆ ರೂ. 30 ಕೋಟಿ, ಪುರಸಭೆಗೆ ರೂ. 10 ಕೋಟಿ ಹಾಗೂ ಪಟ್ಟಣ ಪಂಚಾಯತಿಗೆ ರೂ. 5 ಕೋಟಿ) ಮುಂದಿನ 3 ವರ್ಷಗಳ ಅವಧಿಯಲ್ಲಿ ಅಭಿವೃದ್ಧಿ ವ್ಯಯಿಸಲು ಸರ್ಕಾರವು ಇಚ್ಛಿಸಿದೆ. ಚಿಕ್ಕಬಳ್ಳಾಪುರ ಜಿಲ್ಲೆಯು ರಾಜ್ಯದಲ್ಲೇ ಘನ ತ್ಯಾಜ್ಯ ನಿರ್ವಹಣೆಯಲ್ಲಿ ಉತ್ತಮ ಪದ್ಧತಿಗಳನ್ನು ಅಳವಡಿಸಿಕೊಂಡಿದ್ದು, ಘನ ತ್ಯಾಜ್ಯ ನಿರ್ವಹಣೆಗಾಗಿ ಸೀಮ್ಯಾಕ್ನಿಂ ದ 2018-19ನೇ ಸಾಲಿನ ಪ್ರಶಸ್ತಿಗೆ ಭಾಜನವಾಗಿರುತ್ತದೆ ಎಂದರು. 

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಾವುದೇ ಶಾಶ್ವತವಾದ ನೀರಿನ ಹರಿವು ಹೊಂದಿರುವ ನದಿಗಳು ಇಲ್ಲದಿರುವುದರಿಂದ ಜನ ಹಾಗೂ ಜಾನುವಾರುಗಳಿಗೆ ತೀವ್ರ ಕುಡಿಯುವ ನೀರಿನ ಸಮಸ್ಯೆ ಉಂಟಾಗುತ್ತಿತ್ತು. ಇದನ್ನು ಮನಗಂಡು ಸರ್ಕಾರವು ಹೆಚ್.ಎನ್. ವ್ಯಾಲಿ ಯೋಜನೆಯಡಿ ಜಿಲ್ಲೆಯ 44 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯನ್ನು ಜಾರಿಗೆ ತಂದಿರುತ್ತದೆ. ಈ ಬಾರಿ ಸುರಿದ ಉತ್ತಮ ಮಳೆಯಿಂದ 43 ಕೆರೆಗಳು ಸಂಪೂರ್ಣ ಭರ್ತಿಯಾಗಿರುತ್ತದೆ ಎಂದು ತಿಳಿಸಿದತರು. 

ಭಾರತದ ಸಂವಿಧಾನವು ಸರ್ವರಿಗೆ ಸಮಪಾಲು, ಸರ್ವರಿಗೆ ಸಮ ಬಾಳು ಎಂಬ ಆದರ್ಶದೊಂದಿಗೆ ಜಾರಿಯಾಗಿದ್ದು, ಈ ದಿನದ ಮಹತ್ವವನ್ನು ನಾವು ನೀವೆಲ್ಲರೂ ಅರಿತು ಮುಂದೆ ಸಾಗಿದಲ್ಲಿ ಭವ್ಯ ಭಾರತದ ನಿರ್ಮಾಣ ಸಾಧ್ಯ ಎಂಬ ಅಭಿಪ್ರಾಯ ವ್ಯಕ್ತಪಡಿಸಿ ಜಿಲ್ಲೆಯ, ರಾಜ್ಯದ ಹಾಗೂ ರಾಷ್ಟ್ರದ ಜನತೆಗೆ  ಗಣ ರಾಜ್ಯೋತ್ಸವದ ಶುಭಾಷಯಗಳನ್ನು ಕೊರಿದರು.ಈ  ವೇಳೆ ಈ ಕಾರ್ಯಕ್ರಮವನ್ನು ಸರಳ ಹಾಗೂ ಅಚ್ಚುಕಟ್ಟಾಗಿ ಆಯೋಜಿಸಿದ್ದಕ್ಕಾಗಿ  ಜಿಲ್ಲಾಡಳಿತವನ್ನು ಅಭಿನಂದಿಸಿ ಮೆಚ್ಚುಗೆ ಸೂಚಿಸಿದರು.

ಕಾರ್ಯಕ್ರಮದಲ್ಲಿ ಮಹಾತ್ಮಾ ಗಾಂಧಿ ಮತ್ತು ಡಾ||ಬಾಬಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.ಪೊಲೀಸ್ ಪಥಸಂಚಲನ ಹಾಗೂ ಪೊಲೀಸ್ ಬ್ಯಾಂಡ್ ಮಾಸ್ಟರ್ ವೆಂಕಟೇಶಪ್ಪ ಮತ್ತು ಅವರ ತಂಡದಿಂದ ಮೂಡಿಬಂದ ರಾಷ್ಟ್ರಗೀತೆ ನೆರೆದಿದ್ದವರ ಗಮನ ಸೆಳೆಯಿತು. ಸಂಗೀತ ಶಿಕ್ಷಕ ಮಹಾಲಿಂಗಯ್ಯ ಮಠದ ಹಾಗೂ ಸರ್ಕಾರಿ ಫ್ರೌಢಶಾಲೆಯ ಮಕ್ಕಳಿಂದ ನಾಡಗೀತೆ ಸುಶ್ರಾವ್ಯವಾಗಿ ಮೂಡಿಬಂದಿತು.

ಮಾನ್ಯ ಮುಖ್ಯಮಂತ್ರಿಗಳಿಂದ ಚಿನ್ನದ ಪದಕ್ಕೆ ಅರ್ಹರಾದ ರಾಜ್ಯ ರಸ್ತೆ ಸಾರಿಗೆ ನಿಗಮದ 11 ಚಾಲಕರನ್ನು ಈ ವೇಳೆ ಗಣ್ಯರು ಸನ್ಮಾನಿಸಿ ಗೌರವಿಸಿದರು. ಪಥಸಂಚಲನದಲ್ಲಿ  ಭಾಗವಹಿಸಿದ ಪೊಲೀಸ್ ಪಡೆಯ ತುಕಡಿಗಳ ಮುಖ್ಯಸ್ಥರಿಗೆ ನೆನಪಿನ ಕಾಣಿಕೆ ನೀಡಲಾಯಿತು. ಈ ಸಂದರ್ಭಲ್ಲಿ ಜಿಲ್ಲಾಧಿಕಾರಿ ಆರ್.ಲತಾ,ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಜಿ.ಕೆ. ಮಿಥುನ್ ಕುಮಾರ್, ಜಿಲ್ಲಾ ಪಂಚಾಯತ್  ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ಶಿವಶಂಕರ್, ಅಪರ ಜಿಲ್ಲಾಧಿಕಾರಿ ಹೆಚ್.ಅಮರೇಶ್, ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಜಿಲ್ಲಾಡಳಿತ ಭವನದಲ್ಲಿಯೂ ಗಣರಾಜ್ಯೋತ್ಸವ

ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೂ ಮುನ್ನ ಜಿಲ್ಲಾಧಿಕಾರಿ ಆರ್.ಲತಾ ಅವರು 73 ನೇ ಗಣರಾಜ್ಯೋತ್ಸವ ಕಾರ್ಯಕ್ರಮದ ಅಂಗವಾಗಿ ಜಿಲ್ಲಾಡಳಿತ ಭವನದಲ್ಲಿ ಧ್ವಜಾರೋಹಣ ನೆರವೇರಿಸಿದರು.ಈ ವೇಳೆ  ಜಿಲ್ಲಾ ಪಂಚಾಯತ್  ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ಶಿವಶಂಕರ್, ಅಪರ ಜಿಲ್ಲಾಧಿಕಾರಿ ಹೆಚ್.ಅಮರೇಶ್, ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಮಾಜಿ ಸಚಿವ ಬಂಡೆಪ್ಪ ಕಾಶೆಂಪೂರ್‌ ನೇತೃತ್ವದಲ್ಲಿ ಜೆಡಿಎಸ್‌ ನೂತನ ಕೋರ್‌ ಕಮಿಟಿ

ಮಾಜಿ ಸಚಿವ ಬಂಡೆಪ್ಪ ಕಾಶೆಂಪೂರ್‌ ನೇತೃತ್ವದಲ್ಲಿ ಜೆಡಿಎಸ್‌ ನೂತನ ಕೋರ್‌ ಕಮಿಟಿ

Leave a Reply Cancel reply

Your email address will not be published. Required fields are marked *

Recommended

ಎಂಜಿನಿಯರಿಂಗ್ ಪ್ರವೇಶ: ಡಿ.31ರವರೆಗೂ ಅವಕಾಶ

ಎಂಜಿನಿಯರಿಂಗ್ ಪ್ರವೇಶ: ಡಿ.31ರವರೆಗೂ ಅವಕಾಶ

4 years ago
ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

11 months ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ