ಪೂರಕ ದಾಖಲೆ ಇಲ್ಲ ಎಂದು ಅನರ್ಹತೆ ಕೋರಿದ್ದ ಅರ್ಜಿ ವಜಾ ಮಾಡಿದ ಜಿಲ್ಲಾಧಿಕಾರಿ ಕೋರ್ಟ್
by M Krishnappa Chikkaballapura
ಚಿಕ್ಕಬಳ್ಳಾಪುರ: ಇಲ್ಲಿನ ನಗರಸಭೆ ಚಿಕ್ಕಬಳ್ಳಾಪುರ ಅಧ್ಯಕ್ಷ-ಉಪಾದ್ಯಕ್ಷ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಏಳು ಸದಸ್ಯರು ವಿಪ್ ಉಲ್ಲಂಘನೆ ಹಾಗೂ ಗೈರು ಹಾಜರಾದ ಪ್ರಕರಣವನ್ನು ಹೈಕೋರ್ಟ್ ಆದೇಶದ ಮೇರೆಗೆ ಜಿಲ್ಲಾಧಿಕಾರಿ ಆರ್.ಲತಾ ಅವರು ಇತ್ಯರ್ಥಪಡಿಸಿದ್ದಾರೆ.
ಆ ಏಳೂ ಸದಸ್ಯರನ್ನು ಸದಸ್ಯತ್ವದಿಂದ ಅನರ್ಹಗೊಳಿಸಬೇಕು ಎಂದು ಸಲ್ಲಿಸಲಾಗಿದ್ದ ಮನವಿಯನ್ನು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಅವರು ಅರ್ಜಿಯನ್ನು ವಜಾ ಮಾಡಿದ್ದಾರೆ.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಎನ್.ಕೇಶವರೆಡ್ಡಿ ಸಲ್ಲಿಸಿದ್ದ ಅರ್ಜಿಯನ್ನು ಜಿಲ್ಲಾಧಿಕಾರಿಗಳು ತಿರಸ್ಕರಿಸಿದ್ದು, ಜಿಲ್ಲಾಧಿಕಾರಿಗಳು ಈ ಬಗ್ಗೆ ಅವರು ತಿರಸ್ಕರಿಸಿ ಫೆಬ್ರವರಿ 4ರಂದು ಆದೇಶ ಹೊರಡಿಸಿದ್ದಾರೆ.
ಈ ಅರ್ಜಿಯ ಮೇಲೆ ಕಳೆದ ಒಂದು ವರ್ಷಕ್ಕೂ ಅಧಿಕ ಸಮಯದಿಂದ ವಿಚಾರಣೆ ನಡೆದಿತ್ತು. ವಾದಿ-ಪ್ರತಿವಾದಿಗಳ ವಾದಗಳನ್ನು ಆಲಿಸಿದ ಜಿಲ್ಲಾಧಿಕಾರಿಗಳ ನ್ಯಾಯಾಲಯ ಅಂತಿಮವಾಗಿ ಅರ್ಜಿದಾರರು ಏಳು ಸದಸ್ಯರನ್ನು ಅನರ್ಹಗೊಳಿಸಲು ಸ್ಪಷ್ಟ ಹಾಗೂ ಪೂರಕವಾದ ದಾಖಲೆಗಳನ್ನು ಸಲ್ಲಿಸದ ಕಾರಣ ಅರ್ಜಿಯನ್ನು ತಿರಸ್ಕರಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಈ ಸುದ್ದಿಗಳನ್ನು ಓದಲು ಕೆಳಗಿನ ಲಿಂಕ್ʼಗಳನ್ನು ಕ್ಲಿಕ್ ಮಾಡಿ