• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಬಿಜೆಪಿ ನಾಯಕರ ಮಕ್ಕಳು ಕೇಸರಿ ಶಾಲು ಹಾಕಿಕೊಂಡಿದ್ದಾರಾ?

cknewsnow desk by cknewsnow desk
February 10, 2022
in STATE
Reading Time: 1 min read
0
ಮಳೆಯಿಂದ ಜನ ಸಂಕಷ್ಟದಲ್ಲಿದ್ದಾರೆ, ಇಂಥ ಸಮಯದಲ್ಲಿ ಶಂಖ ಊದಿಕೊಂಡು ಹೋದರೆ ಸ್ವರಾಜ್ಯ ಸಿಗುತ್ತದಾ?

ಹೆಚ್.ಡಿ.ಕುಮಾರಸ್ವಾಮಿ

917
VIEWS
FacebookTwitterWhatsuplinkedinEmail

ಹಿಜಾಬ್, ಕೇಸರಿ ಶಾಲು ವಿವಾದದ ಬಗ್ಗೆ ಹೆಚ್ ಡಿ ಕುಮಾರಸ್ವಾಮಿ ಕಿಡಿ; ಬಿಜೆಪಿ, ಕಾಂಗ್ರೆಸ್ ಪಕ್ಷಗಳು ಕಂಡವರ ಮಕ್ಕಳನ್ನು ಬಾವಿಗೆ ತಳ್ಳಿ ತಮಾಷೆ ನೋಡುತ್ತಿವೆ!!

HDK ಹೇಳಿದ್ದೇನು?

  • ರಾಷ್ಟ್ರೀಯ ಪಕ್ಷಗಳು ಬಡವರ ಮಕ್ಕಳ ಬದುಕಿನ ಜತೆ ಚೆಲ್ಲಾಟ ಆಡುತ್ತಿವೆ
  • ಮಕಳನ್ನು ಪ್ರತಿಭಟನೆ ಗುರಾಣಿಗಳನ್ನಾಗಿ ಮಾಡಿಕೊಂಡು ಪಕ್ಷ, ಸಂಘಟನೆಗಳು ಬೇಳೆ ಬೆಯಿಸಿಕೊಳ್ಳುತ್ತಿವೆ
  • ಸರಕಾರಿ ಶಾಲೆ ಮಕ್ಕಳು ಬೀದಿಯಲ್ಲಿದ್ದಾರೆ, ಗಲಾಟೆಗೆ ಪ್ರಚೋದಿಸಿದ ಮುಖಂಡರ ಮಕ್ಕಳು ಹಾಗೂ ಖಾಸಗಿ ಶಾಲೆಗಳ ಮಕ್ಕಳು ಕಲಿಯುತ್ತಿದ್ದಾರೆ!

ಚನ್ನಪಟ್ಟಣ: ಹಿಜಾಬ್ ಮತ್ತು ಕೇಸರಿ ಶಾಲು ವಿಷಯದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ಬಡವರ ಮಕ್ಕಳನ್ನು ಬಾವಿಗೆ ತಳ್ಳಿ ತಮಾಷೆ ನೋಡುತ್ತಿವೆ ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು.

ಚನ್ನಪಟ್ಟಣದಲ್ಲಿ ಇಂದು ಬೆಳಗ್ಗೆ ಮಾಧ್ಯಮಗಳ ಜತೆ ಮಾತನಾಡಿದ ಅವರು; ವಿವಾದ ಮತ್ತು ಗಲಾಟೆಗೆ ಚಿತಾವಣೆ ನೀಡುತ್ತಿರುವ ವ್ಯಕ್ತಿಗಳ ಮಕ್ಕಳು ಇಂಗ್ಲಿಷ್ ಕಾನ್ವೆಂಟ್ ಗಳಲ್ಲಿ ನೆಮ್ಮದಿಯಾಗಿ ಓದುತ್ತಿದ್ದರೆ ಬಡವರ ಮಕ್ಕಳಿಗೆ ಹಿಜಾಬ್ ಮತ್ತು ಕೇಸರಿ ಶಾಲುಗಳನ್ನು ಹಾಕಿ ಗಲಾಟೆಗೆ ಅವರನ್ನು ಗುರಾಣಿಗಳನ್ನಾಗಿ ಮಾಡಿಕೊಳ್ಳಲಾಗುತ್ತಿದೆ ಎಂದು ಎರಡೂ ರಾಷ್ಟ್ರೀಯ ಪಕ್ಷಗಳು, ವಿವಾದಗಳ ಹಿಂದಿರುವ ಸಂಘಟನೆ, ಪಕ್ಷಗಳ ವಿರುದ್ಧ ಹರಿಹಾಯ್ದರು.

  • ಈ ಸಂದರ್ಭದಲ್ಲಿ ಅವರು ಹೇಳಿದ್ದಿಷ್ಟು;

ಇದು ಹಲವಾರು ದೇಶಗಳಲ್ಲಿ ಚರ್ಚೆ ಮಾಡುವ ಹಂತಕ್ಕೆ ಹಿಜಾಬ್ ವಿವಾದವನ್ನು ತೆಗೆದುಕೊಂಡು ಹೋಗಿದ್ದಾರೆ. ಕಾಂಗ್ರೆಸ್ – ಬಿಜೆಪಿ ಪಕ್ಷಗಳ ಜತೆಗೆ ಹಲವು ಸಂಘಟನೆಗಳಿಗೆ ನಾನು ಕೆಲ ಪ್ರಶ್ನೆಗಳನ್ನು ಕೇಳುತ್ತೇನೆ. ಅಮಾಯಕ, ಮುಗ್ಧ ಮಕ್ಕಳ ಬದುಕಿನ ಜೊತೆಗೆ ಚೆಲ್ಲಾಟ ಅಡುತ್ತಿದ್ದಿರಿ. ಇದು ಸರಿಯಲ್ಲ

ಈ ಸಂಘರ್ಷ ಯಾವ ಶಾಲೆಗಳಲ್ಲಿ ನಡೆಯುತ್ತಿದೆ? ಇದು ದೊಡ್ಡದೊಡ್ಡ ಖಾಸಗಿ ಶಾಲೆಗಳಲ್ಲಿ ನಡೆಯುತ್ತಿದೆಯಾ? ಇಲ್ಲ. ಬಿಜೆಪಿ ನಾಯಕರು, ಕಾಂಗ್ರೆಸ್‌ ನಾಯಕರು ಹಾಗೂ ವಿವಾದದ ಹಿಂದಿರುವ ಸಂಘಟನೆಗಳ ನಾಯಕರ ಮಕ್ಕಳು ಯಾರೂ ಸರಕಾರಿ ಶಾಲೆಗಳಲ್ಲಿ ಅವರ ಮಕ್ಕಳನ್ನು ಓದಿಸುತ್ತಿಲ್ಲ. ಅವರೆಲ್ಲರೂ ಸಹ ಖಾಸಗಿ ಶಾಲೆಗಳಲ್ಲಿ ಓದುತ್ತಿದ್ದಾರೆ.

ಬಿಜೆಪಿ ನಾಯಕರು ತಾವು ಜನ್ಮಕೊಟ್ಟ ಮಕ್ಕಳ ಹೆಗಲ ಮೇಲೆ ಕೇಸರಿ ಶಾಲು ಹಾಕಿಸಿ ಹೋರಾಟ ಮಾಡಿಸುತ್ತಿದ್ದಾರಾ? ಅದೂ ಇಲ್ಲ. ಅವರ ಮಕ್ಕಳಿಗೆ ಕೇಸರಿ ಶಾಲು ಹಾಕಿಸಿ ಹೋರಾಟ ಯಾಕೆ ಮಾಡಿಸುತ್ತಿಲ್ಲ. ಅಮಾಯಕ, ಬಡಮಕ್ಕಳ ಮಕ್ಕಳ ಹೆಗಲ ಮೇಲೆ ಕೇಸರಿ ಶಾಲು ಹಾಕಿಸಿ ಹೋರಾಟ ಮಾಡಿಸುತ್ತಿದ್ದಾರೆ.

ಇನ್ನೊಂದು ಗುಂಪು ಹಿಜಾಬ್ ಹೆಸರಿನಲ್ಲಿ ಹೋರಾಟ ಮಾಡಿಸಿ ಅವರು ಬೇಳೆ ಬೇಯಿಸಿಕೊಳ್ಳಲು ಹೊರಟ್ಟಿದ್ದಾರೆ. ಇಲ್ಲಿ ಅಮಾಯಕ ಮಕ್ಕಳು, ಖಾಸಗಿ ಶಾಲೆಯಲ್ಲಿ ಓದುವ ಶಕ್ತಿ ಇಲ್ಲದೆ ಸರಕಾರಿ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳು ಈ ವಿವಾದಗಳಿಗೆ ಗುರಾಣಿಗಳು ಆಗುತ್ತಿದ್ದಾರೆ. ಸರಕಾರಿ ಶಾಲೆಗಳ ಮಕ್ಕಳು ಬಲಿ ಆಗುತ್ತಿದ್ದಾರೆ. ಕಂಡವರ ಮಕ್ಕಳನ್ನು ಬಾವಿಗೆ ತಳ್ಳುವ ಹೀನ ಕೆಲಸವನ್ನು ಕೆಲವರು ಮಾಡುತ್ತಿದ್ದಾರೆ. ಈ ರಾಜ್ಯದಲ್ಲಿ ಇದು ನಡೆಯುತ್ತಿದೆ ಎನ್ನುವುದು ಎಲ್ಲರಿಗೂ ಅರ್ಥವಾಗುತ್ತದೆ. ಮಕ್ಕಳ ಪೋಷಕರು ಸಹ ಈ ವಿವಾದಗಳ ಹಿಂದಿರುವ ದುರುದೇಶವನ್ನು ಅರ್ಥ ಮಾಡಿಕೊಳ್ಳಬೇಕು.

ಎಲ್ಲ ಕಡೆ ಪೊಲೀಸರು ಪ್ರತಿಭಟನೆ ಮಾಡುತ್ತಿರುವ ಮಕ್ಕಳ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದಾರೆ. ನಾಳೆಯ ದಿನ ಆ ಮಕ್ಕಳ ವಿರುದ್ಧ ಕೇಸುಗಳು ದಾಖಲಾಗಿ ಅವರು ಜೈಲಿಗೆ ಹೋಗಬೇಕಾದ ಪರಿಸ್ಥಿತಿ ಬಂದರೆ ಅವರ ಭವಿಷ್ಯ ಕಥೆ ಏನು? ಒಮ್ಮೆ ಪೊಲೀಸ್ ಕೇಸು ಬಿದ್ದರೆ ಅವರ ಜೀವನವೇ ಹಾಳಾಗುತ್ತದೆ. ಎಲ್ಲೂ ಕೆಲಸ ಸಿಗುವುದಿಲ್ಲ. ತೆವಲಿಗೆ, ತಮ್ಮ ಬೇಳೆ ಬೇಯಿಸಿಕೊಳ್ಳಲು ರಾಜಕೀಯ ಪಕ್ಷಗಳು, ಸಂಘಟನೆಗಳು ಮಕ್ಕಳನ್ನು ಈ ವಿವಾದಗಳಿಗೆ ಬಳಕೆ ಮಾಡಿಕೊಳ್ಳುತ್ತಿವೆ.

ಮುಂದೆ ಮಕ್ಕಳ ಈ ವಿಡಿಯೋಗಳನ್ನು ಇಟ್ಟುಕೊಂಡು ಕೇಸುಗಳನ್ನು ಹಾಕಿ ಅವರನ್ನು ಕೋರ್ಟ್ ಕಚೇರಿಗಳಿಗೆ ಅಲೆಯುವಂತೆ ಮಾಡುತ್ತಾರೆ. ಈಗಾಗಲೇ ಕೆಲ ಕಡೆ ಮಕ್ಕಳ ಮೇಲೆ FIR ಆಗಿದೆ ಎಂದು ಮಾಹಿತಿ ಇದೆ. ಇದು ನಿರಂತರವಾಗಿ ನಡೆಯುತ್ತದೆ. ಕೆಲ ಮಕ್ಕಳಿಗೆ ಎರಡು ಹೊತ್ತಿನ ಊಟಕ್ಕೂ ಇಲ್ಲದ ಕಷ್ಟದ ಪರಿಸ್ಥಿತಿ ಇದೆ. ಅಂತಹ ಮಕ್ಕಳ ಜೀವನದಲ್ಲಿ ಇವರು ಚೆಲ್ಲಾಟ ಆಡುತ್ತಿದ್ದಾರೆ. ಸಾವಿರಾರು ಜನ ಮಕ್ಕಳ ಮೇಲೆ ಕೇಸ್ ಬೀಳಲಿದೆ. ಇಂಥ ಹೀನ ಕೆಲಸವನ್ನು ಮೊದಲು ರಾಜಕೀಯ ಪಕ್ಷಗಳು ನಿಲ್ಲಿಸಬೇಕು.

ಪ್ರಿಯಾಂಕಾ ಗಾಂಧಿ, ರೇಣುಕಾಚಾರ್ಯ ಹೇಳಿಕೆ ಸರಿ ಅಲ್ಲ

ಹಿಜಾಬ್ ಬಗ್ಗೆ ಹೇಳಿಕೆ ನೀಡುವ ಭರದಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಹಾಗೂ ಹೊನ್ನಾಳಿ ಶಾಸಕ ರೇಣುಕಾಚಾರ್ಯ ನೀಡಿರುವ ಹೇಳಿಕೆಗಳು ಸರಿ ಅಲ್ಲ. ಅವುಗಳನ್ನು ನಾನು ಒಪ್ಪುವುದಿಲ್ಲ.

ಅವರ ಹೇಳಿಕೆಗಳ ಬಗ್ಗೆ ನಾನು ಮಾತನಾಡುವ ಅಗತ್ಯ ಇಲ್ಲ. ಆದರೆ ಜನಪ್ರತಿನಿಧಿಯಾಗಿ ಶಾಸಕರು ಮಾತನಾಡಿದ್ದು ತಪ್ಪು. ಅವರು ಈಗ ಕ್ಷಮೆ ಕೋರಿಕೊಂಡಿದ್ದಾರೆ. ಮುಂದೆ ಹೇಳಿಕೆ ನೀಡಬೇಕಾದರೆ ಎಚ್ಚರಿಕೆ ವಹಿಸಿ ಮಾತನಾಡಲಿ ಎಂದಷ್ಟೇ ನನ್ನ ಸಲಹೆ.

ಈ ಪ್ರಕರಣದಲ್ಲಿ ಸರ್ಕಾರದ ವೈಫಲ್ಯತೆ ಎದ್ದು ಕಾಣುತ್ತಿದೆ. ಗೃಹ ಸಚಿವರು ಮತ್ತು ಸರ್ಕಾರದ ವೈಫಲ್ಯ ಈ ಪ್ರಕರಣದಲ್ಲಿ ಹೆಚ್ಚು. ಇದರಿಂದ ಅಮಾಯಕ ಮಕ್ಕಳ ಜತೆ ಚೆಲ್ಲಾಟ ಆಡಿದ್ದು ಸಾಕು. ಮಂಡ್ಯದಲ್ಲಿ ಘೋಷಣೆ ಕೂಗಿದ್ದ ಯುವತಿಗೆ ಕೆಲ ಸಂಘಟನೆ 5 ಲಕ್ಷ ರೂಪಾಯಿ ಬಹುಮಾನ ಘೋಷಣೆ ಮಾಡಿದರೆ ಈ ಘಟನೆಗಳ ಹಿಂದೆ ಯಾರಿದ್ದಾರೆ ಎನ್ನುವುದು ಗೊತ್ತಾಗುತ್ತದೆ. ಈ ದೇಶವನ್ನ ಎಲ್ಲಿಗೆ ತೆಗೆದುಕೊಂಡು ಹೋಗ್ತಿದ್ದಾರೆ ಇವರೆಲ್ಲ. ಇಂತಹ ವಿಚಾರಕ್ಕೆ ಪ್ರಚೋದನೆ ಮಾಡುವವರ ಮೇಲೆ ಪೋಷಕರು, ಶಾಲಾ ಮಕ್ಕಳು, ರಾಜ್ಯದ ಜನರು ಎಚ್ಚರಿಕೆಯಿಂದ ಇರಬೇಕು.

ಕುವೆಂಪು ಅವರು ಕರ್ನಾಟಕವನ್ನು ಸರ್ವಜನಾಂಗದ ಶಾಂತಿಯ ತೋಟ ಎಂದು ಕರೆದಿದ್ದಾರೆ. ಈ ನಾಡು ಶಾಂತಿಯ ಬೀಡು. ಹಾಗಾಗಿ ಇಂತಹದಕ್ಕೆ ಪ್ರೋತ್ಸಾಹ ಕೊಡಬೇಡಿ ಎಂದು ಮನವಿ ಮಾಡ್ತೇನೆ.

ಡಿಕೆಶಿ ಹೇಳಿಕೆ ಬಗ್ಗೆ ಹೆಚ್ ಡಿಕೆ ಹೇಳಿದ್ದೇನು?

ಬಿಜೆಪಿ ಸರಕಾರದ ಸಚಿವರ ಮಗನೊಬ್ಬ ಕೇಸರಿ ಶಾಲು ಹಂಚುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿಕೆ ಓದಿದ್ದೇನೆ. ಅವರ ಬಳಿ ಮಾಹಿತಿ ಇದ್ದು ಹೇಳಿದ್ದಾರೋ, ಮಾಹಿತಿ ಇಲ್ಲದೇ ಹೇಳಿದ್ದಾರೋ ನನಗೆ ಗೊತ್ತಿಲ್ಲ. ಮಾಹಿತಿ ಇದ್ದರೆ ಸಾಕ್ಷಿ ಸಮೇತ ಜನತೆ ಮುಂದೆ ಇಟ್ಟರೆ ಒಪ್ಪುತ್ತಾರೆ. ಇಲ್ಲಾಂದ್ರೆ ಗಾಳಿಯಲ್ಲಿ ನಾನು ಒಂದು ಗುಂಡು ಹಾರಿಸುತ್ತೇನೆ ಎಂದಾಗುತ್ತದೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ದೇವರ ಹೆಸರಿನಲ್ಲಿ ಬೊಮ್ಮಾಯಿ ಪ್ರಮಾಣ

ಆಗಿದ್ದಾಯಿತು, ಇನ್ನು ನಿಲ್ಲಿಸಿಬಿಡಿ

Leave a Reply Cancel reply

Your email address will not be published. Required fields are marked *

Recommended

ಬಾಂಬ್ ಇಟ್ಟ ಕಿರಾತಕ ಹೇಗಿದ್ದ? ಮಹತ್ವದ ಮಾಹಿತಿ ಕೊಟ್ಟ ಮುಖ್ಯಮಂತ್ರಿ

ಬಾಂಬ್ ಇಟ್ಟ ಕಿರಾತಕ ಹೇಗಿದ್ದ? ಮಹತ್ವದ ಮಾಹಿತಿ ಕೊಟ್ಟ ಮುಖ್ಯಮಂತ್ರಿ

2 years ago
ಅಧಿಕಾರದ ಕುರ್ಚಿಗೆ ವಿದಾಯ ಹೇಳಲು ಸಿದ್ಧರಾದರಾ ʼಬಲಶಾಲಿʼ ಯಡಿಯೂರಪ್ಪ! ಟೆಂಪಲ್‌ ರನ್‌ ಶುರುವಿಟ್ಟುಕೊಂಡ ಪುತ್ರ ವಿಜಯೇಂದ್ರ: ಹಾಗಾದರೆ, NEXT ಸಿಎಂ ಯಾರಪ್ಪ?

ಕೊರೊನ ಲಸಿಕೆ ಅಕ್ರಮ ಮಾರಾಟ ಮಾಡಿದರೆ ಜೈಲೇ ಗತಿ: ಗೃಹ ಸಚಿವ ಬಸವರಾಜ ಬೊಮ್ಮಾಯಿ ವಾರ್ನಿಂಗ್

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ