ವೆಂಟಿಲೇಟರ್ ಮೇಲೆ ಚಿಕಿತ್ಸೆ ಪಡೆಯುತ್ತಿರುವ ಹೊಂಬೆಳಕಿನ ಕವಿ
ಧಾರವಾಡ: ಇಲ್ಲಿನ ಎಸ್ ಡಿಎಂ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕವಿ ಚನ್ನವೀರ ಕಣವಿ ಅವರ ಆರೋಗ್ಯವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದಿಲ್ಲಿ ವಿಚಾರಿಸಿದರು.
ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರೊಂದಿಗೆ ಆಸ್ಪತ್ರೆಗೆ ಭೇಟಿ ನೀಡಿದ ಸಿಎಂ, ವೈದ್ಯರಿಂದ ಕಣವಿ ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡರು.
ಕಣವಿ ಅವರ ಚಿಕಿತ್ಸೆಗೆ ಆಗುವ ಪೂರ್ಣ ವೆಚ್ಚವನ್ನು ಸರಕಾರವೇ ಭರಿಸುತ್ತದೆ ಎಂದು ಈಗಾಗಲೇ ಮುಖ್ಯಮಂತ್ರಿಗಳು ಘೋಷಣೆ ಮಾಡಿದ್ದಾರೆ.
ನಾಡೋಜ ಚೆನ್ನವೀರ ಕಣವಿ ಅವರಿಗೆ ವೆಂಟಿಲೇಟರ್ʼನಲ್ಲಿ ಚಿಕಿತ್ಸೆ ಮುಂದುವರೆದಿದ್ದು, ಅವರು ಶ್ವಾಸಕೋಶದಲ್ಲಿನ ಸೋಂಕು ಕಾರಣಕ್ಕೆ ಆಸ್ಪತ್ರೆಗೆ ದಾಖಲಾಗಿದ್ದರು.
ಕಣವಿ ಅವರು ಅಕ್ಯೂಟ್ ರೆಸ್ಪಿರೇಟರಿ ಡಿಸ್ಟ್ರೆಸ್ ಸಿಂಡ್ರೋಮ್ ನಿಂದ (ARDS) ಬಳಲುತ್ತಿದ್ದು, ತಜ್ಞ ವೈದ್ಯರು ಅವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ.