• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home GUEST COLUMN

ಪುಲ್ವಾಮಾ ದಾಳಿ: ಭಾರತೀಯ ಸೈನ್ಯದ ಪ್ರತೀಕಾರದ ಕಥೆ

cknewsnow desk by cknewsnow desk
February 14, 2022
in GUEST COLUMN, STATE
Reading Time: 2 mins read
0
ಪುಲ್ವಾಮಾ ದಾಳಿ: ಭಾರತೀಯ ಸೈನ್ಯದ ಪ್ರತೀಕಾರದ ಕಥೆ
1.1k
VIEWS
FacebookTwitterWhatsuplinkedinEmail

ಹುತಾತ್ಮರಾದ 40 ಯೋಧರಿಗೆ ದೇಶದ ನಮನ

by by Guruprasad Hawaldar

ಈ ದಿನವನ್ನು ಇಡೀ ಜಗತ್ತಿನಾದ್ಯಂತ ಪ್ರೇಮಿಗಳ ದಿನವೆಂದು ಆಚರಿಸುತ್ತಿದ್ದರೆ, ಅದರೆ ಭಾರತೀಯರು ಮಾತ್ರ ಈ ದಿನವನ್ನು ಬ್ಲ್ಯಾಕ್ ಡೇಯನ್ನಾಗಿ ಆಚರಿಸಬೇಕಾಗಿದೆ. ಕಾರಣ ನಮ್ಮ ಹೆಮ್ಮೆಯ ವೀರಯೋಧರಾದ ಕೇಂದ್ರ ಮೀಸಲು ಪೊಲೀಸ್ ಪಡೆಯ ಮೇಲೆ ಇದೇ ದಿನ ಉಗ್ರರು ಭೀಕರ ದಾಳಿ ನಡೆಸಿ 40 ಯೋಧರ ದುರಂತ ಸಾವಿಗೆ ಕಾರಣರಾದರು. ಇದೇ ಪುಲ್ವಾಮಾ ದಾಳಿಯನ್ನು ಭಾರತೀಯರು ಬ್ಲ್ಯಾಕ್ ಡೇ ಎಂದು ಕರೆಯುತ್ತಾರೆ.

ಅದರೆ, ಸೇನೆ 40 ವೀರ ಯೋಧರ  ಬಲಿದಾನವನ್ನು ವ್ಯರ್ಥವಾಗಿ ಬಿಡದೇ ಜೊತೆಗೆ ಪ್ರತಿಯೊಬ್ಬ ಭಾರತೀಯನ  ಆಕ್ರೋಶವನ್ನು ಪ್ರತೀಕಾರ ತೀರಿಸಿಕೊಳ್ಳುವುದರ ಭಾರತೀಯ ಸೈನ್ಯವು ಯೋಧರ ಆತ್ಮಕ್ಕೆ ಶಾಂತಿ ಸಿಗುವಂತೆ ಮಾಡಿತು.

ಪ್ರತಿ ವರ್ಷವೂ ಜಮ್ಮು ಕಾಶ್ಮೀರದಲ್ಲಿ ಚಳಿಗಾಲದ ವೇಳೆ ಅತಿಯಾದ ಹಿಮಪಾತದಿಂದ ಜಮ್ಮು ಶ್ರೀನಗರದ ಹೆದ್ದಾರಿಯನ್ನು ಸಂಚಾರಕ್ಕೆ ಮುಚ್ಚಲಾಗಿರುತ್ತದೆ. ಯೋಧರು ಹಲವಾರು ದಿನಗಳು transit ಕ್ಯಾಂಪಿನಲ್ಲೇ ಕಳೆಯಬೇಕಾದ ಪರಿಸ್ಥಿತಿ ಇರುತ್ತದೆ. ಆ ಸಮಯದಲ್ಲಿ CRPF ಯೋಧರು ಪ್ರತಿ ವರ್ಷದಂತೆ ರಜೆ ಮುಗಿಸಿಕೊಂಡು ಮರಳಿ ಜಮ್ಮುವಿನ ತರಬೇತಿ ಕ್ಯಾಂಪಿಗೆ ಜಮಾವಣೆ ಆಗುವುದು ವಾಡಿಕೆ. ಅಲ್ಲಿಂದ ಮುಂದೆ ಬಸ್ಸಿನಲ್ಲಿ ಶ್ರೀನಗರಕ್ಕೆ ಪ್ರಯಾಣ. ಅಂತೂ ಕೊನೆಗೆ ಫೆಬ್ರವರಿ 13ರಂದು ಹೆದ್ದಾರಿಯನ್ನು ಸಂಚಾರಕ್ಕೆ ತೆರವುಗೊಳಿಸಲಾಗುತ್ತದೆ. ಅದರೆ 2019 ಫೆಬ್ರವರಿ 14 ರಂದು ಭಯೋತ್ಪಾದಕ ದಾಳಿ ಇಡೀ ದೇಶವನ್ನೇ ತಲ್ಲಣಗೊಳಿಸಿತು. ಈ ದಾಳಿ ಭಾರತೀಯ ಸೇನಾ ವಾಹನಗಳು ಜಮ್ಮುವಿನಿಂದ ಪುಲ್ವಾಮ ಮಾರ್ಗವಾಗಿ ಮಧ್ಯಾಹ್ನದ ಹೊತ್ತಿಗೆ  2547 ಜನ CRPF ಯೋಧರ ಹೊತ್ತಿದ್ದ  78 ಸೈನ್ಯದ ವಾಹನಗಳು ರಾಷ್ಟ್ರೀಯ ಹೆದ್ದಾರಿ ಮೂಲಕ ಪುಲ್ವಾಮ ಮಾರ್ಗವಾಗಿ ಶ್ರೀನಗರಕ್ಕೆ ತಲುಪಲು ಸಂಚರಿಸುತ್ತವೆ. ಇತ್ತ ಈ ಭಯೋತ್ಪಾದಕರಿಗೆ ಹಾದು ಹೋಗುವ ಮಾಹಿತಿಯನ್ನು ತಿಳಿದುಕೊಂಡು  ಸುಮಾರು 100 ಕೆಜಿಯಷ್ಟು ಸ್ಪೋಟಕಗಳನ್ನು ತುಂಬಿದ್ದ  ವಾಹನವನ್ನು ಅದಿಲ್ ಅಹ್ಮದ್ ದರ್ ಎಂಬ ಉಗ್ರ, ರಾಷ್ಟ್ರೀಯ ಹೆದ್ದಾರಿಯಲ್ಲಿ ಪುಲ್ವಾಮ ಜಿಲ್ಲೆಯ ಲೇತ್ಪುರ ಎನ್ನುವ ಗ್ರಾಮದಲ್ಲಿ ಹೊಂಚು ಹಾಕಿರುತ್ತಾನೆ.

ಸುಮಾರು ಇಪ್ಪತೈದು ಮುೂವತ್ತು ವಾಹನಗಳು ಹಾದು ಹೋದ ನಂತರ ತನ್ನ ವಾಹನವನ್ನು ಜೋರಾಗಿ ಚಲಾಯಿಸಿ ಒಂದು ಬಸ್ಸಿಗೆ ಡಿಕ್ಕಿ ಹೊಡೆದು ಬಿಡುತ್ತಾನೆ. ಕ್ಷಣಾರ್ಧದಲ್ಲಿ ಭೀಕರ ಸ್ಪೋಟ ಉಂಟಾಗಿ ಸೈನ್ಯದ ವಾಹನ ಮತ್ತು ಭಯೋತ್ಪಾದಕನ ವಾಹನ ಛಿದ್ರಗೊಂಡುಬಿಡುತ್ತವೆ. ಬಸ್ಸಿನಿಂದ ಹೊರಚಿಮ್ಮಿದ ದೇಹಗಳು ಹೆದ್ದಾರಿಯ ಸುತ್ತಲೂ ಚೆಲ್ಲಾಪಿಲ್ಲಿಯಾಗುತ್ತವೆ. ಘಟನೆಯಲ್ಲಿ ನಲವತ್ತು ವೀರ ಯೋಧರು ಹುತಾತ್ಮರಾಗುತ್ತಾರೆ. ಇದರಲ್ಲಿ ಕನ್ನಡಿಗ, ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿ ಸಮೀಪದ ಗುಡಿಗೆರೆ ಗ್ರಾಮದ ಗುರು (33) ಹುತಾತ್ಮರಾಗಿದ್ದರು. ಗುರು ಸಿಆರ್ಪಿಎಫ್ 82ನೇ ಬೆಟಾಲಿಯನ್ ಯೋಧರಾಗಿದ್ದರು. ಈ ಯೋಧರ ಬಲಿದಾನವು ಇಡೀ ದೇಶವೇ ಅಶ್ರುತರ್ಪಣದೊಂದಿಗೆ ಮುಳುಗಿತು.

ವಿಶ್ವದ ಹಲವಾರು ದೇಶಗಳು ಈ ಘಟನೆಯನ್ನು ವ್ಯಾಪಕವಾಗಿ ಖಂಡಿಸುತ್ತವೆ. ಭಾರತದ ಪಾಕಿಸ್ತಾನದೊಂದಿನ ಸಂಬಂಧ ಇನ್ನಿಲ್ಲದಂತೆ ಹದಗೆಟ್ಟು ಹೋಗುತ್ತದೆ. ಪಾತಕ ಸಂಘಟನೆ ಜೈಷ್ ಎ ಮೊಹಮ್ಮದ್ʼನ ತಂತ್ರ ಫಲಿಸಿತು ಎಂದುಕೊಳ್ಳುವಷ್ಟರಲ್ಲಿ ಮತ್ತೊಮ್ಮೆ ಯುದ್ಧದ ವಾತಾವರಣ ಸೃಷ್ಟಿಯಾಯಿತು.

ಈ ದಾಳಿಗೆ ದೇಶಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಯಿತು. ಪಕ್ಷಭೇದ ಮರೆತು ರಾಜಕೀಯ ನಾಯಕರು, ಸಮಾಜದ ಗಣ್ಯರು ಘಟನೆಯನ್ನು ಖಂಡಿಸಿದರು. ಪ್ರಧಾನಿ ನರೇಂದ್ರ ಮೋದಿ ಈ ದಾಳಿ ನಂತರ ನನ್ನ ಹೃದಯದೊಳಗೆ ಸಹ ಅದೇ ರೀತಿ ದಾಳಿ ಮಾಡಬೇಕೆಂಬ ಆಕ್ರೋಶ ಕುದಿಯುತ್ತಿದೆ. ಯೋಧರನ್ನು ಕಳೆದುಕೊಂಡ ಕಣ್ಣೀರಿಗೆ ಪ್ರತೀಕಾರ ಖಂಡಿತಾ ತೀರಿಸುತ್ತೇವೆ. ಇದಕ್ಕಾಗಿ ನಮ್ಮ ಸೇನೆಗೆ ಸಂಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ ಎಂದು ಘೋಷಿಸಿದರು.

ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್

ಭಾರತೀಯ ಸೈನ್ಯದ ಪ್ರತಿಕಾರ

ಪಾಕ್‍ಗೆ ತಕ್ಕ ಉತ್ತರ ನೀಡಲು ನಿರ್ಧರಿಸಿ ಈ  ದಾಳಿ ನಡೆದು ಸರಿಯಾಗಿ 12 ದಿನಗಳ ನಂತರ ಅಂದರೆ ಕಳೆದ ವರ್ಷ ಫೆಬ್ರವರಿ 26ರಂದು ಭಾರತೀಯ ವಾಯುಪಡೆಯು ಗಡಿ ನಿಯಂತ್ರಣ ರೇಖೆಯನ್ನು ದಾಟಿ ಸುಮಾರು 85 ಕಿ.ಮೀ. ಒಳನುಗ್ಗಿದ ಮಿರಾಜ್-2000 ಯುದ್ಧ ವಿಮಾನಗಳು ಜೈಷ್‍ನ ತರಬೇತಿ ಶಿಬಿರಗಳ ಮೇಲೆ ಅತ್ಯಾಧುನಿಕ ಬಾಂಬ್‍ಗಳನ್ನು ಹಾಕಿ ಸಂಪೂರ್ಣ ನಾಶ ಮಾಡಿದ್ದವು.

ನಸುಕಿನ ಜಾವ 3.30ರಿಂದ 3.55ರ ಅವಧಿಯಲ್ಲಿ ನಡೆದ ಈ ದಾಳಿಯಲ್ಲಿ ಸುಮಾರು 300 ಉಗ್ರರನ್ನು ಹೊಡೆದು ಹಾಕಿತು. ಆದರೆ ಪಾಕಿಸ್ತಾನ ತನ್ನ ಉಗ್ರ ಪೋಷಣೆಯನ್ನು ಮುಚ್ಚಿಕೊಳ್ಳಲು ದಾಳಿಯನ್ನು ಅಲ್ಲಗಳೆದಿತ್ತು. ಯಾವುದೇ ದಾಳಿಗಳು ನಡೆದಿಲ್ಲ ಎಂದು ಹೇಳಿಕೊಂಡಿತ್ತು. ಅದರೆ ಬಾಲಕೋಟ್ ದಾಳಿಗೆ ಪ್ರತಿಯಾಗಿ ಪಾಕ್ ತನ್ನ ಮೂರು ಎಫ್-16 ಯುದ್ಧ ವಿಮಾನಗಳ ಮೂಲಕ ಭಾರತ ಮೇಲೆ ದಾಳಿ ನಡೆಸಲು ಮುಂದಾಗಿತ್ತು. ಈ ವೇಳೆ ಪಾಕ್‍ನ ವಿಮಾನಗಳು ಭಾರತ ಗಡಿದಾಟಲು ಬಂದಾಗ  ತಕ್ಷಣ ನಮ್ಮ  ಮಿಗ್-21 ವಿಮಾನಗಳು ಪಾಕ್ ವಿಮಾನಗಳನ್ನು ಹಿಮ್ಮೆಟ್ಟಿಸಲು ಮುಗಿಬಿದ್ದವು. ಈ ವೇಳೆ ಮಿಗ್-21 ವಿಮಾನದಲ್ಲಿದ್ದ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್, ಪಾಕ್‍ನ ಎಫ್-16 ಯುದ್ಧ ವಿಮಾನವನ್ನು ಹೊಡೆದುರುಳಿಸಿದ್ದರು. ಈ ವೇಳೆ ಅವರ ವಿಮಾನ ಅಪಘಾಕ್ಕೀಡಾಗಿತ್ತು. ನಂತರ ಪಾಕ್ ಸೇನೆ ಅವರನ್ನು ವಶಕ್ಕೆ ಪಡೆದಿತ್ತು. ಭಾರತ ಹಾಗೂ ಜಾಗತಿಕ ಮಟ್ಟದ ಒತ್ತಡಕ್ಕೆ ಮಣಿದ ಪಾಕಿಸ್ತಾನವು ಅಭಿನಂದನ್ ಅವರನ್ನು ಭಾರತಕ್ಕೆ ಹಸ್ತಾಂತರಿಸಿತು.

ನಮ್ಮ ಸೇನೆ ಸತತವಾಗಿ ಕಾಶ್ಮೀರದಲ್ಲಿ ಉಗ್ರರ ವಿರುದ್ಧ ಕಾರ್ಯಚರಣೆ ನಡೆಸುತ್ತಿತು. ಪುಲ್ವಾಮಾ ದಾಳಿ ನಡೆಸಿದ 45 ದಿನಗಳಲ್ಲಿ ನಮ್ಮ ಸೇನೆಯು ವಿಶೇಷ ಕಾರ್ಯಾಚರಣೆ ಮೂಲಕ ಜೈಷೆ ಸಂಘಟನೆಯ ಪುಲ್ವಾಮಾದಲ್ಲಿ ನಡೆದ ಉಗ್ರನ ಆತ್ಮಾಹುತಿ ದಾಳಿಯ ಮಾಸ್ಟರ್ಮೈಂಡ್ ಎನ್ನಲಾದ ಜೈಶ್ ಉಗ್ರ ಸಂಘಟನೆಗೆ ಸೇರಿದ ಅಬ್ದುಲ್ ರಶೀದ್ ಘಾಜಿಯನ್ನು ಹತ್ಯೆ ಮಾಡುವ ಮೂಲಕ ಭಾರತೀಯ ಸೇನೆ ಪ್ರತೀಕಾರ ತೀರಿಸಿಕೊಂಡಿತು ಮತ್ತೂ ಪುಲ್ವಾಮಾ ದಾಳಿಯ ಸಂಚುಕೋರನಲ್ಲಿ ಒಬ್ಬನಾದ ಮಹಮ್ಮದ್ ಇಸ್ಮಾಲ್ ಅಲ್ವಿ ಅಲಿಯಾಸ್ ಲಂಬೂ ಅಲಿಯಾಸ್ ಅದ್ನಾನ್ʼನ್ನು ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಹತನಾದ. ಅಲ್ಲದೇ ಜೈಷ್ ಸಂಘಟನೆಯ ಮತ್ತೋರ್ವ ಕಮಾಂಡರ್ ಕಮ್ರಾನ್‍ನನ್ನು ಸಹ ಯೋಧರು ಮುಗಿಸಿದ್ದರು. ನಿಸಾರ್​ ಅಹಮದ್​ ತಂತ್ರೆ ಮತ್ತು ಸಾಜದ್​ ಎಂಬಿಬ್ಬರು ಉಗ್ರರರು ಸದ್ಯಕ್ಕೆ NIA ವಶದಲ್ಲಿದ್ದಾರೆ.

ಈ ಮೂಲಕ  ಭಾರತದ 40 ಯೋಧರ ಬಲಿ ಪಡೆದಿದ್ದ ದಾಳಿಯ ಸಂಚುಕೋರರನ್ನು ಸೇನೆ ಹೊಡೆದುರುಳಿಸಿ ಸೇನೆಯು ತನ್ನ ಸೇಡು ತಿರಿಸಿಕೊಂಡು ವೀರ ಯೋಧರ ಬಲಿದಾನವನ್ನು ವ್ಯರ್ಥವಾಗದೆ ಬಿಡಲಿಲ್ಲ.‌

ನಮ್ಮ ಸೇನೆ ನಮ್ಮ ಹೆಮ್ಮೆ. ಜೈ ಹಿಂದ್.


ಡಾ.ಗುರುಪ್ರಸಾದ ಹವಲ್ದಾರ್

  • ಮೂಲತಃ ಉಪನ್ಯಾಸಕರು. ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲ್ಲೂಕಿನ ಮರಿಯಮ್ಮನ ಹಳ್ಳಿಯವರು. ಪ್ರಸ್ತುತ ಹಗರಿಬೊಮ್ಮನಹಳ್ಳಿ ಜಿವಿಪಿಪಿ ಪದವಿ ಕಾಲೇಜನಲ್ಲಿ ಕನ್ನಡ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತ ಜೊತೆಗೆ ಪತ್ರಿಕೆಗಳಿಗೆ ವೆಬ್ ನ್ಯೂಸ್ ಪೋಟ್೯ಲ್ ಗಳಿಗೆ ಲೇಖನ ಬರೆಯುತ್ತಿದ್ದಾರೆ.
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ನಂದಿಬೆಟ್ಟಕ್ಕೆ ರೋಪ್ ವೇ; ಜುಲೈ 23ಕ್ಕೆ ಸಚಿವ ಸಿ.ಪಿ.ಯೋಗೇಶ್ವರ ಸ್ಥಳ ಪರಿಶೀಲನೆ

ನಂದಿ ಗಿರಿಧಾಮಕ್ಕೆ ರೋಪ್‌ ವೇ: ಆಡಳಿತಾತ್ಮಕ ಅನುಮೋದನೆ ಕೊಟ್ಟ ರಾಜ್ಯ ಸರಕಾರ

Leave a Reply Cancel reply

Your email address will not be published. Required fields are marked *

Recommended

ದಾಖಲೆ ಸಲ್ಲಿಸಲು ಪೂರೈಕೆ ಕಂಪನಿಗಳ ಮೀನಾ-ಮೇಷ; ತಯಾರಿಕೆ ಕಂಪನಿಗಳಿಂದಲೇ ನೇರವಾಗಿ ವ್ಯಾಕ್ಸಿನ್  ಖರೀದಿಗೆ ಮುಂದಾದ ಸರಕಾರ

ಕಾಲೇಜು ವಿದ್ಯಾರ್ಥಿಗಳಿಗೆ ಜುಲೈ ತಿಂಗಳಲ್ಲಿ ಲಸಿಕೆ: ಶೀಘ್ರ ತರಗತಿಗಳ ಆರಂಭಕ್ಕೆ ಚಿಂತನೆ ಎಂದ ಡಿಸಿಎಂ

5 years ago
ಯಡಿಯೂರಪ್ಪ ಅವರಿಂದ ಎಷ್ಟು ಸೂಟ್ ಕೇಸ್ ತೆಗೆದುಕೊಂಡಿರಿ ಸಿದ್ದರಾಮಯ್ಯ?

ಮೇಲ್ಮನೆ ಚುನಾವಣೆ ಮೈತ್ರಿ ವಿಚಾರ, ಭಾನುವಾರದೊಳಗೆ ನಿರ್ಧಾರ

4 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ