• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ನಾನು ಸಚಿವ ಈಶ್ವರಪ್ಪ ಪರ ವಕೀಲಿಕೆ ಮಾಡುತ್ತಿಲ್ಲ ಎಂದ ಹೆಚ್.ಡಿ.ಕುಮಾರಸ್ವಾಮಿ

cknewsnow desk by cknewsnow desk
February 18, 2022
in STATE
Reading Time: 1 min read
0
ಯಡಿಯೂರಪ್ಪ ಅವರಿಂದ ಎಷ್ಟು ಸೂಟ್ ಕೇಸ್ ತೆಗೆದುಕೊಂಡಿರಿ ಸಿದ್ದರಾಮಯ್ಯ?
949
VIEWS
FacebookTwitterWhatsuplinkedinEmail

2018ರಲ್ಲಿ ನಾನು ಸಿಎಂ ಅಲ್ಲ, FDCಯಂತೆ ಕೆಲಸ ಮಾಡಿಕೊಂಡಿದ್ದೆ ಎಂದ ಮಾಜಿ ಸಿಎಂ


ಬೆಂಗಳೂರು: ರಾಷ್ಟ್ರಧ್ವಜದ ವಿಷಯದಲ್ಲಿ ನಾನು ಸಚಿವ ಕೆ ಎಸ್ ಈಶ್ವರಪ್ಪ ಅವರ ಪರ ವಕೀಲಿಕೆ ಮಾಡುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಸ್ಪಷ್ಟಪಡಿಸಿದರು.

ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಅವರು; ನಾನು ಇರುವ ವಿಷಯವನ್ನು ಇದ್ದ ಹಾಗೆ ಹೇಳಿದ್ದೇನೆ. ಈಶ್ವರಪ್ಪ ಅವರು ಮಾಧ್ಯಮದವರು ಕೇಳಿದ ಪ್ರಶ್ನೆಗಳಿಗೆ ಸಹಜವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಅವರೇನೂ ದ್ವಜಕ್ಕೆ ಅಪಮಾನ ಆಗುವಂತಹ ಹೇಳಿಕೆ ಕೊಟ್ಟಿಲ್ಲ. ಹಾಗಂತ ನಾನೇನೂ ಈಶ್ವರಪ್ಪ ಪರ ವಕೀಲಿಕೆ ಮಾಡುತ್ತಿಲ್ಲ ಎಂದರು.

ದ್ವಜದ ಬಗ್ಗೆ ಅಷ್ಟೊಂದು ಹೇಳುವ ಕಾಂಗ್ರೆಸ್ ನಾಯಕರು, ಸದನದ ಬಾವಿಯಲ್ಲಿ ರಾಷ್ಟ್ರಧ್ವಜ ಹಾರಿಸುತ್ತ ಪ್ರತಿಭಟನೆ ಮಾಡಿದರು. ಇದು ರಾಷ್ಟ್ರಧ್ವಜಕ್ಕೆ ನೀಡುವ ಗೌರವವೇ? ಸುಖಾ ಸುಮ್ಮನೆ ಸದನದ ಕಲಾಪ ವ್ಯರ್ಥ ಮಾಡದೇ ಹೈಕೋರ್ಟ್ ನಲ್ಲಿ ಪಿಐಎಲ್ ಹಾಕಿ ಹೋರಾಟ ಮಾಡಲಿ ಎಂದು ಮಾಜಿ ಮುಖ್ಯಮಂತ್ರಿಗಳು ಟಾಂಗ್ ನೀಡಿದರು.

ಪ್ರತಿಷ್ಠೆಗೆ ಬಿದ್ದು ಮಂತ್ರಿಯ ರಾಜೀನಾಮೆ ಪಡೆಯಲು ಹೊರಟ ಕಾಂಗ್ರೆಸ್ ನಡೆಯನ್ನು ಜನ ಗಮನಿಸುತ್ತಾ ಇದ್ದಾರೆ. ಕಲಾಪಕ್ಕೆ ಅಡ್ಡಿ ಮಾಡುವವರನ್ನು ಸದನದಿಂದ ಅಮಾನತು ಮಾಡಿ, ಆ ನಂತರ ಸದನ ನಡೆಸಿ ಎಂದು ಸಭಾಧ್ಯಕ್ಷರಿಗೂ ಮನವಿ ಮಾಡುತ್ತೇನೆ. ಕೋವಿಡ್ ಅನಾಹುತ ಸಂದರ್ಭದಲ್ಲಿ ಆಗುತ್ತಿರುವ ಮತ್ತೊಂದು ‘ ರಾಜಕೀಯ ಕೋವಿಡ್ ದುರಂತ ‘ ಇದು. ಈ ವಿನಾಶಕಾರಿ ಕೋವಿಡ್ ಅನ್ನು ಎಲ್ಲಾ ಸೇರಿ ಹರಡಿಸಬೇಡಿ ಎಂದು ಕುಮಾರಸ್ವಾಮಿ ಅವರು ಖಾರವಾಗಿ ಪ್ರತಿಕ್ರಿಯಿಸಿದರು.

ನಾವು ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಲು ಸದನಕ್ಕೆ ಬಂದಿದ್ದೆವು. ಆದರೆ ಇವರು ಹಿಜಾಬ್ ಮತ್ತು ಕೇಸರಿ ಶಾಲು ಎಂದು ಕಲಾಪವನ್ನು ಹಾಳು ಮಾಡಿದರು. ಆಮೇಲೆ ಸಚಿವರ ರಾಷ್ಟ್ರಧ್ವಜದ ಹೇಳಿಕೆ ಇಟ್ಟುಕೊಂಡು ಎರಡು ದಿನಗಳ ಕಲಾಪವನ್ನು ಹಾಳುಗೆಡವಿದರು. ಇದನ್ನು ಒಪ್ಪಲು ಸಾಧ್ಯವೇ? ತಪ್ಪು ಎಂದಿದ್ದಕ್ಕೆ ಕಾಂಗ್ರೆಸ್ ನಾಯಕರು ಈಗ ಬೇರೆ ರಾಗ ಹಾಡುತ್ತಿದ್ದಾರೆ ಎಂದು ಅವರು ಹೇಳಿದರು.

ಕರಾವಳಿಯ ಒಂದು ಭಾಗದಲ್ಲಿ ಶುರುವಾದ ಹಿಜಾಬ್ ಗೊಂದಲ ಮತ್ತಿತರ ಭಾಗದವರಿಗೆ ಪ್ರೇರೇಪಣೆ ಕೊಟ್ಟಂತೆ ಆಗಿದೆ. ಆ ಪ್ರದೇಶದ ಕೆಲ ಭಾಗದಲ್ಲಿ ಮಕ್ಕಳು ಹಿಜಾಬ್ ಧರಿಸಿ ಶಾಲೆಗೆ ಹೋಗುತ್ತಿದ್ದರು. ತರಗತಿ ಪ್ರವೇಶ ಮಾಡುವ ಸಮಯದಲ್ಲಿ ಹಿಜಾಬ್ ತೆಗೆದು, ಮನೆಗೆ ಹೋಗುವಾಗ ಮತ್ತೆ ಧರಿಸಿ ಹೋಗುತ್ತಿದ್ದರು.

ಆರಂಭದಲ್ಲೇ ಚಿವುಟಿ ಹಾಕಬಹುದಾಗಿದ್ದ ವಿವಾದ ಎರಡು ಧರ್ಮದವರ ಸಂಘರ್ಷಕ್ಕೆ ಕಾರಣವಾಗಿದೆ. ಮಕ್ಕಳ ಮನಸ್ಸಲ್ಲಿ ದ್ವೇಷ ಭಿತ್ತಲಾಗಿದೆ. ಕೆಲ ಸಂಘಟನೆಗಳು ಇದನ್ನು ಮತಬ್ಯಾಂಕ್ ಆಗಿ ಪರಿವರ್ತನೆ ಮಾಡಿಕೊಳ್ಳಲು ಪ್ರಯತ್ನ ಮಾಡುತ್ತಿವೆ. ಕಳೆದ ಎರಡು ದಿನಗಳಿಂದ ಎರಡು ಸದನದಲ್ಲಿ ಕಲಾಪಗಳು ಸ್ಥಗಿತಗೊಳಿಸುವ ಹಾಗೆ ಕಾಂಗ್ರೆಸ್ ನಡವಳಿಕೆ ಇದೆ. ಜನರು ಇದನ್ನು ಕ್ಷಮಿಸುವುದಿಲ್ಲ ಎಂದರು ಕುಮಾರಸ್ವಾಮಿ ಅವರು.

ಮಾಧ್ಯಮಗಳಲ್ಲಿ ಬಂದ ಈಶ್ವರಪ್ಪ ಅವರ ಪ್ರತಿಕ್ರಿಯೆ ಇವತ್ತಿನ ಈ ರೀತಿಯ ಕಲಾಪಗಳಿಗೆ ಕಾರಣವಾಗಿದೆ. ಅದಕ್ಕಿಂತಲೂ ಹೆಚ್ಚಿನ ಮಹತ್ವದ ವಿಷಯಗಳ ಬಗ್ಗೆ ಚರ್ಚೆ ನಡೆಯಬೇಕಿತ್ತು. ಆದರೆ ಆಗಲಿಲ್ಲ. ಕಾರವಾರದ ಸಂಸದರೊಬ್ಬರು ಹಿಂದೆ ದೇಶದ ಸಂವಿಧಾನ ಬದಲಾಯಿಸುತ್ತೇವೆ ಎಂಬಂತೆ ಮಾತನಾಡಿದ್ದರು. ಬಿಜೆಪಿಯವರ ಅಜೆಂಡಾಗಳೇ ಈ ರೀತಿ ಇವೆ. ಈ ದೇಶದಲ್ಲಿ ಹಿಂದೂಗಳು ಮಾತ್ರ ಬದುಕಬೇಕು ಎಂಬ ಅಜೆಂಡಾ ಇಟ್ಟುಕೊಂಡಿದ್ದಾರೆ‌ ಅವರು. ಇಂತಹ ಭಾವನಾತ್ಮಕ ವಿಚಾರಗಳನ್ನು ಇಟ್ಟುಕೊಂಡೇ ಚುನಾವಣೆಗಳು ನಡೆಯುತ್ತಿವೆ ಎಂದು ಅವರು ಹೇಳಿದರು.

ಕೇಸರಿ ಎಂಬುದಕ್ಕೆ ನಮ್ಮ ಸಂಸ್ಕೃತಿಯಲ್ಲಿ ವಿಶೇಷ ಸ್ಥಾನ ಇದೆ. ಅದರ ಬಗ್ಗೆ ನಮಗೂ ಪೂಜ್ಯ ಭಾವನೆ ಇದೆ. ಧಾರ್ಮಿಕ ಕ್ಷೇತ್ರದಲ್ಲಿ ಕಠಿಣ ಜೀವನಶೈಲಿ ರೂಢಿಸಿಕೊಂಡವರು ಕೇಸರಿ ಧರಿಸುತ್ತಾ ಇದ್ದರು. ಈಗ ಎಲ್ಲರ ಮೈಮೇಲೆ ಕೇಸರಿ ಹಾಕುವ ಕೆಲಸ ನಡೆಯುತ್ತಿದೆ. ಬಿಜೆಪಿ ಅಯೋಧ್ಯ ಮಂದಿರ ಕಟ್ಟುವ ಚಳುವಳಿ ಶುರು ಮಾಡಿದಾಗ ಈ ಬಳಸುವುದನ್ನು ಬಿಜೆಪಿ ಶುರು ಮಾಡಿದ್ದರು. ಭಾವನಾತ್ಮಕ ವಿಚಾರ ಮುಂದಿಟ್ಟುಕೊಂಡು ಬದಲಾವಣೆ ತರಲು ಅವರು ಹೊರಟಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.

ಸರ್ಕಾರದ ಆಡಳಿತದ ವೈಫಲ್ಯ ಮತ್ತಿತರ ವಿಚಾರಗಳು ಕಲಾಪದಲ್ಲಿ ಚರ್ಚೆ ಆಗಬೇಕಿತ್ತು. ಉದ್ಯೋಗ, ಆರ್ಥಿಕ ಪರಿಸ್ಥಿತಿ, ಶಾಲೆಗಳ ಪರಿಸ್ಥಿತಿ ಬಗ್ಗೆ ಚರ್ಚೆ ಆಗಬೇಕಿತ್ತು.

ಭ್ರಷ್ಟ ಹಗರಣಗಳ ಬಗ್ಗೆ ಚರ್ಚೆ ಮಾಡುವವನಿದ್ದೆ

ನಾನು ಈ ಬಾರಿ ಸದನದಲ್ಲಿ ಕಳೆದ ಹತ್ತು ವರ್ಷಗಳ ಅವಧಿಯಲ್ಲಿ ನಡೆದ ಭ್ರಷ್ಟಾಚಾರಗಳ, ಹಗರಣಗಳ ಬಗ್ಗೆ ಸದನದಲ್ಲಿ ದಾಖಲೆಗಳನ್ನು ಇಡಲು ತಯಾರಿ ಮಾಡಿಕೊಂಡಿದ್ದೆ. ಆದರೆ ಸದನವು ಸರಿಯಾಗಿ ನಡೆಯಲೇ ಇಲ್ಲ. ನೀವು ಕೂಡ 14 ತಿಂಗಳು ಆಡಳಿತ ಮಾಡಿದ್ದಿರಿ. ಆಗ ಸರಿ ಮಾಡಬಹುದಿತ್ತಲ್ಲ ಎಂದು ಯಾರಾದರೂ ಕೇಳಬಹುದು. ಆದರೆ ನಾನು ಆಗ ಸಿಎಂ ಅಲ್ಲ, ಎಫ್ ಡಿಸಿ ಕೆಲಸ ಮಾಡಿದ್ದೆ ಅಷ್ಟೇ ಎಂದು ಮಾಜಿ ಮುಖ್ಯಮಂತ್ರಿಗಳು ಬೇಸರದಿಂದ ಹೇಳಿದರು.

cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಅಜ್ಞಾನ ಒಂದು ಮುಳ್ಳು, ಆ ಮುಳ್ಳನ್ನು ಜ್ಞಾನ ಎಂಬ ಇನ್ನೊಂದು ಮುಳ್ಳಿನಿಂದ ತೆಗೆಯಬೇಕು ಎಂದಿದ್ದರು ಶ್ರೀ ರಾಮಕೃಷ್ಣ ಪರಮಹಂಸರು

ಅಜ್ಞಾನ ಒಂದು ಮುಳ್ಳು, ಆ ಮುಳ್ಳನ್ನು ಜ್ಞಾನ ಎಂಬ ಇನ್ನೊಂದು ಮುಳ್ಳಿನಿಂದ ತೆಗೆಯಬೇಕು ಎಂದಿದ್ದರು ಶ್ರೀ ರಾಮಕೃಷ್ಣ ಪರಮಹಂಸರು

Leave a Reply Cancel reply

Your email address will not be published. Required fields are marked *

Recommended

ಬಾಂಬ್ ಇಟ್ಟ ಕಿರಾತಕ ಹೇಗಿದ್ದ? ಮಹತ್ವದ ಮಾಹಿತಿ ಕೊಟ್ಟ ಮುಖ್ಯಮಂತ್ರಿ

ಬಾಂಬ್ ಇಟ್ಟ ಕಿರಾತಕ ಹೇಗಿದ್ದ? ಮಹತ್ವದ ಮಾಹಿತಿ ಕೊಟ್ಟ ಮುಖ್ಯಮಂತ್ರಿ

2 years ago
ಅಧಿಕಾರದ ಕುರ್ಚಿಗೆ ವಿದಾಯ ಹೇಳಲು ಸಿದ್ಧರಾದರಾ ʼಬಲಶಾಲಿʼ ಯಡಿಯೂರಪ್ಪ! ಟೆಂಪಲ್‌ ರನ್‌ ಶುರುವಿಟ್ಟುಕೊಂಡ ಪುತ್ರ ವಿಜಯೇಂದ್ರ: ಹಾಗಾದರೆ, NEXT ಸಿಎಂ ಯಾರಪ್ಪ?

ಕೊರೊನ ಲಸಿಕೆ ಅಕ್ರಮ ಮಾರಾಟ ಮಾಡಿದರೆ ಜೈಲೇ ಗತಿ: ಗೃಹ ಸಚಿವ ಬಸವರಾಜ ಬೊಮ್ಮಾಯಿ ವಾರ್ನಿಂಗ್

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ