• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಹರ್ಷ ಹಂತಕರನ್ನು ಗಲ್ಲಿಗೇರಿಸಿ: ಸಿದ್ದರಾಮಯ್ಯ

cknewsnow desk by cknewsnow desk
February 21, 2022
in STATE
Reading Time: 1 min read
0
ಮುಂದಿನ ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ? ಗುಟ್ಟುಬಿಟ್ಟುಕೊಟ್ಟ ಬಂಗಾರಪೇಟೆ ಶಾಸಕ ಎಸ್.ಎನ್‌.ನಾರಾಯಣಸ್ವಾಮಿ
918
VIEWS
FacebookTwitterWhatsuplinkedinEmail

ನೈತಿಕ ಹೊಣೆ ಹೊತ್ತು ಗೃಹ ಸಚಿವ ಅರಗ ಜ್ಞಾನೇಂದ್ರ ರಾಜೀನಾಮೆ ನೀಡಲಿ ಎಂದ ಪ್ರತಿಪಕ್ಷ ನಾಯಕ

ಬೆಂಗಳೂರು: ಶಿವಮೊಗ್ಗದ ಭಜರಂಗದಳದ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ಆಪರಾಧಿಗಳು ಯಾವುದೇ ಸಂಘಟನೆಗೆ ಸೇರಿದ್ದರೂ ಅವರನ್ನು ಸರ್ಕಾರ ಬಂಧಿಸಿ ಗಲ್ಲು ಶಿಕ್ಷೆಯಾಗುವಂತೆ ಕ್ರಮ ಕೈಗೊಳ್ಳಲಿ ಎಂದು ವಿಧಾನಸಭೆಯ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ವಿಧಾನಸೌಧದ ಬಳಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಈ ಘಟನೆಯನ್ನು ಗಮನಿಸಿದರೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದು ಸ್ಪಷ್ಟವಾಗುತ್ತದೆ. ಗೃಹ ಸಚಿವರ ಸ್ವಂತ ಜಿಲ್ಲೆಯಲ್ಲಿಯೇ ಕೊಲೆ ನಡೆದಿದೆ. ಹೀಗಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಕೂಡಲೇ ರಾಜಿನಾಮೆ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಮಾಧ್ಯಮ ಪ್ರತಿನಿಧಿಗಳಿಗೆ ಸಿದ್ದರಾಮಯ್ಯ ಅವರು ಹೇಳಿದ್ದು :

ನಾವು ಅಹಿಂಸೆಯಲ್ಲಿ ನಂಬಿಕೆ ಇಟ್ಟವರು. ಯಾರದ್ದೇ ಕೊಲೆಯಾದರೂ ತಪ್ಪಿತಸ್ಥರಿಗೆ ಕಠಿಣವಾದ ಶಿಕ್ಷೆಯಾಗಬೇಕು. ಹರ್ಷ ಅವರ ಕೊಲೆಯನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ. ಕೊಲೆ ಮಾಡಿದವರಿಗೆ ಗಲ್ಲು ಶಿಕ್ಷೆಯಾಗಬೇಕು.

ಆರೋಪಿಗಳು ಯಾವುದೇ ಸಮುದಾಯ, ಸಂಘಟನೆಗೆ ಸೇರಿದ್ದರೂ ಸರ್ಕಾರ ಕಠಿಣವಾದ ಕ್ರಮ ಕೈಗೊಳ್ಳಬೇಕು. ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಈಶ್ವರಪ್ಪ, ಯುಡಿಯೂರಪ್ಪ ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಜಿಲ್ಲೆ ಇದು. ಇದು ಏನನ್ನು ಸೂಚಿಸುತ್ತದೆ. ಕಾನೂನು ಸುವ್ಯವಸ್ಥೆ ರಾಜ್ಯದಲ್ಲಿ ಹಾಳಾಗಿರುವುದಕ್ಕೆ ಇದು ಉದಾಹರಣೆ. ಈಶ್ವರಪ್ಪ, ಆರಗ ಜ್ಞಾನೇಂದ್ರ ಇದಕ್ಕೆ ಜವಾಬ್ದಾರರು.

ಪೊಲೀಸರು ಅಪರಾಧಿಗಳನ್ನು ಮೊದಲು ಬಂಧಿಸಿ ಕಠಿಣವಾದ ತನಿಖೆ ಮಾಡಲಿ. ಬೆಂಗಳೂರಿನಲ್ಲಿ ಕುಳಿತು ಕಾಂಗ್ರೆಸ್ ಅಥವಾ ಯಾರ ಮೇಲೋ ಆರೋಪ ಮಾಡುವುದಲ್ಲ.

ಆರೋಪಿಗಳು ಯಾರೇ ಆಗಿದ್ದರೂ ಬಂಧಿಸಿ ಶಿಕ್ಷೆಗೆ ಒಳಪಡಿಸಲಿ. ಗೃಹ ಸಚಿವರು ಶಿವಮೊಗ್ಗ ಜಿಲ್ಲೆಯವರೇ ಆಗಿರುವುದರಿಂದ ಘಟನೆ ಹಿನ್ನೆಲೆಯಲಿ ಅವರು ರಾಜಿನಾಮೆ ಕೊಡಬೇಕು. ಆದರೆ, ಅವರು ಭಂಡರು. ರಾಜಿನಾಮೆ ಕೊಡುವುದಿಲ್ಲ. ನಮ್ಮ ಸರ್ಕಾರ ಇದ್ದಾಗ ಕೆ.ಜೆ. ಜಾರ್ಜ್ ಅವರು ರಾಜಿನಾಮೆ ಕೊಟ್ಟಿದ್ದರು. ರಾಜಿನಾಮೆ ಕೊಡುವುದೇ ಇಲ್ಲ ಎಂದು ಹೇಳಿದರೆ ಜನರೇ ತಕ್ಕ ಪಾಠ ಕಲಿಸುತ್ತಾರೆ.

ಸದನ ನಡೆಸಲು ಕಾಂಗ್ರೆಸ್‍ನವರಿಗೆ ಆಸಕ್ತಿ ಇಲ್ಲ ಎಂಬ ಸಚಿವ ಅಶೋಕ್ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಅವರು, ರಾಷ್ಟ್ರಧ್ವಜಕ್ಕೆ ಅವಮಾನ ಆಗುವಂಥ ಹೇಳಿಕೆ ನೀಡಿದಾಗ ಕಾಂಗ್ರೆಸ್ಸಿಗರು ಪ್ರತಿಭಟನೆ ನಡೆಸುತ್ತಾರೆ ಎಂದು ಬಿಜೆಪಿಯವರಿಗೆ ಗೊತ್ತು.

40 ಪರ್ಸೆಂಟ್ ಕಮಿಷನ್, ಬಿಟ್ ಕಾಯಿನ್ ಹಗರಣದ ಬಗ್ಗೆ ನಾವು ಪ್ರಸ್ತಾಪ ಮಾಡುತ್ತೇವೆÉ ಎಂಬ ಕಾರಣಕ್ಕೆ ಸದನ ನಡೆಯುವುದು ಅವರಿಗೂ ಇಷ್ಟವಿಲ್ಲ. ಹೀಗಾಗಿಯೇ ಈಶ್ವರಪ್ಪ ಅವರಿಂದ ರಾಜಿನಾಮೆ ಕೊಡಿಸುತ್ತಿಲ್ಲ.

ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಸಚಿವ ಅಶೋಕ್ ಅವರು ಸಂಧಾನಕ್ಕೆ ಬಂದಾಗ ಈಶ್ವರಪ್ಪ ಅವರಿಂದ ರಾಜಿನಾಮೆ ಕೊಡಿಸಿ, ನಾವು ಸದನಕ್ಕೆ ಹಾಜರಾಗುತ್ತೇವೆ ಎಂದು ಹೇಳಿದ್ದೆವು.

ದೇಶದ ಗೌರವದ ಸಂಕೇತವಾದ ರಾಷ್ಟ್ರಧ್ವಜಕ್ಕೆ ಈಶ್ವರಪ್ಪ ಅವರು ಅವಮಾನ ಮಾಡಿದಾಗ ಸುಮ್ಮನೆ ಕೂರಲು ಆಗುವುದಿಲ್ಲ ಎಂದಿದ್ದೆವು. ಆದರೆ, ಅದಕ್ಕೆ ಅವರು ಒಪ್ಪಲು ತಯಾರಿಲ್ಲ. ರಾಜ್ಯದ ಜನರ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಲು ಬಿಜೆಪಿಯವರಿಗೇ ಕಾಳಜಿ ಇಲ್ಲ.

ಈಶ್ವರಪ್ಪ ಅವರು ರಾಜಿನಾಮೆ ಕೊಟ್ಟಿದ್ದರೆ ಅಥವಾ ಅವರನ್ನು ಸಂಪುಟದಿಂದ ವಜಾ ಮಾಡಿದ್ದರೆ ನಾವೇಕೆ ಧರಣಿ ಮಾಡುತ್ತಿದ್ದೆವು.

ಜೆಡಿಎಸ್ ಶಾಸಕರು ನಮ್ಮ ವಿರುದ್ಧ ಪ್ರತಿಭಟನೆ ಮಾಡಲಿ, ಇದಕ್ಕೆ ನಮ್ಮ ತಕರಾರು ಇಲ್ಲ. ನಾವು ನಮ್ಮ ಜವಾಬ್ದಾರಿ ನಿರ್ವಹಿಸುತ್ತಿದ್ದೇವೆ. ಅವರಿಗೆ ತೊಂದರೆ ಕೊಡುವುದು ನಮ್ಮ ಉದ್ದೇಶವಲ್ಲ.

ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿರುವಾಗ ಮೌನದಿಂದ ಇರಲು ಸಾಧ್ಯವೇ ? ಒಂದು ವೇಳೆ ಸದನವನ್ನು ಅನಿರ್ದಿಷ್ಟ ಅವಧಿಗೆ ಮುಂದೂಡಿದರೆ ನಾವು ಜನತಾ ನ್ಯಾಯಾಲಯಕ್ಕೆ ಹೋಗುತ್ತೇವೆ ಎಂದು ಸಿದ್ದರಾಮಯ್ಯ ಅವರು ಹೇಳಿದರು.

cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ರಾಜಧಾನಿಯಲ್ಲಿ ಭೀಮಗರ್ಜನೆ

ರಾಜಧಾನಿಯಲ್ಲಿ ಭೀಮಗರ್ಜನೆ

Leave a Reply Cancel reply

Your email address will not be published. Required fields are marked *

Recommended

ಚಿಕ್ಕಬಳ್ಳಾಪುರ ಜಿಲ್ಲೆಗೆ ದೇವೇಗೌಡರು

ಉನ್ನತ ಶಿಕ್ಷಣ ಸಚಿವರಿಗೆ ಹೆಚ್.ಡಿ.ದೇವೇಗೌಡರ ಪತ್ರ

4 years ago
ಚಿಕ್ಕಬಳ್ಳಾಪುರ ಸಮೀಪದ ಹಳ್ಳಿಯ ಸರಕಾರಿ ಶಾಲೆಯಲ್ಲಿ ತರಗತಿ ಆರಂಭಕ್ಕೆ ಮುನ್ನ ಕಾಣಿಸಿಕೊಂಡ ಹಾವು; ಹಿಡಿದು ಅರಣ್ಯಕ್ಕೆ ಬಿಟ್ಟ ಸ್ನೇಕ್‌ ಭಾಷಾಗೆ ಧನ್ಯವಾದ ಅರ್ಪಿಸಿದ ಚಿಣ್ಣರು

ಚಿಕ್ಕಬಳ್ಳಾಪುರ ಸಮೀಪದ ಹಳ್ಳಿಯ ಸರಕಾರಿ ಶಾಲೆಯಲ್ಲಿ ತರಗತಿ ಆರಂಭಕ್ಕೆ ಮುನ್ನ ಕಾಣಿಸಿಕೊಂಡ ಹಾವು; ಹಿಡಿದು ಅರಣ್ಯಕ್ಕೆ ಬಿಟ್ಟ ಸ್ನೇಕ್‌ ಭಾಷಾಗೆ ಧನ್ಯವಾದ ಅರ್ಪಿಸಿದ ಚಿಣ್ಣರು

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ