• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS CRIME

ಶಿವಮೊಗ್ಗ ಯುವಕನ ಕೊಲೆ; ಗುಪ್ತಚರ ವೈಫಲ್ಯ ಎಂದ ಸಿಎಂ HDK

P K Channakrishna by P K Channakrishna
February 21, 2022
in CRIME, POLITICS, STATE
Reading Time: 1 min read
0
ಪ್ರಧಾನಿ ಮೌನವಾಗಿದ್ದಾರೆ ಎಂದಾಕ್ಷಣ ಬಿಟ್ ಕಾಯಿನ್ ಹಗರಣ ಮುಚ್ಚಿ ಹಾಕುತ್ತಾರೆ ಎಂದರ್ಥವಲ್ಲ
941
VIEWS
FacebookTwitterWhatsuplinkedinEmail

ಕೊಲೆ ಆಗುತ್ತಿದೆ ಎಂದು ಗೊತ್ತಿದ್ದರೂ ಆ ಯುವಕನಿಗೆ ರಕ್ಷಣೆ ನೀಡಲಿಲ್ಲ, ಯಾಕೆ?

ನಿಮ್ಮ ಕಾರ್ಯಕರ್ತನನ್ನು ರಕ್ಷಿಸಲಾರದ ನೀವು ರಾಜ್ಯ, ಜನರನ್ನು ಹೇಗೆ ರಕ್ಷಣೆ ಮಾಡುತ್ತೀರಿ: ಆಡಳಿತ ಪಕ್ಷಕ್ಕೆ ಬಿಸಿ ಮುಟ್ಟಿಸಿದ ಮಾಜಿ ಸಿಎಂ

ಬೆಂಗಳೂರು: ರಾಷ್ಟ್ರೀಯ ಪಕ್ಷಗಳು ತಮ್ಮ ಸ್ವಾರ್ಥ ಸಾಧನೆಗಾಗಿ ಅಮಾಯಕರ ಮಕ್ಕಳನ್ನು ಬಲಿ ತೆಗೆದುಕೊಳ್ಳುತ್ತವೆ ಹಾಗೂ ರಾಜ್ಯದಲ್ಲಿ ಶಾಂತಿ ಭದ್ರತೆ ಹಾಳಾಗಿದೆ ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಗುಪ್ತಚರ ವ್ಯವಸ್ಥೆ ಸಂಪೂರ್ಣ ವೈಫಲ್ಯವಾಗಿದೆ. ಗುಪ್ತಚರ ವಿಭಾಗ ಇದೆಯೇ ಎಂಬ ಅನುಮಾನ ಉಂಟಾಗಿದೆ ಎಂದು ಅವರು ಸರಕಾರದ ಮೇಲೆ ತೀವ್ರ ಪ್ರಹಾರ ನಡೆಸಿದರು.

ವಿಧಾನಸೌಧದ ಬಳಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಹಿಜಾಬ್ ಮತ್ತು ಕೇಸರಿ ಶಾಲುಗಳ ಗಲಾಟೆ ಇಡೀ ರಾಜ್ಯಕ್ಕೆ ವ್ಯವಸ್ಥಿತವಾಗಿ ಹಬ್ಬಿಸಿದಾಗಲೆ
ಅಮಾಯಕ ಮಕ್ಕಳನ್ನು ಬಲಿ ನೀಡುವ ಹುನ್ನಾರ ನಡೆದಿದೆ ಎಂಬ ಸಂಶಯ ಉಂಟಾಗಿತ್ತು. ಶಿವಮೊಗ್ಗದಲ್ಲಿ ನಡೆದ ಕೊಲೆಯೂ ಈ ಷಡ್ಯಂತ್ರದ ಒಂದು ಭಾಗ ಎಂಬ ಅನುಮಾನವಿದೆ ಎಂದರು.

ಮಕ್ಕಳು ತಮ್ಮ ಕುಟುಂಬದ ಬಗ್ಗೆ ಯೋಚಿಸಬೇಕು. ಪೋಷಕರ ಕೂಡ ಮಕ್ಕಳ ಬಗ್ಗೆ ಎಚ್ಚರಿಕೆ ವಹಿಸಬೇಕು. ಎಲ್ಲ ಅದ ಮೇಲೆ ನಿಮ್ಮ ಕುಟುಂಬಗಳ ಕಡೆ ಯಾರು ನೋಡುವುದಿಲ್ಲ. ಇದನ್ನು ಮಕ್ಕಳು, ತಂದೆ ತಾಯಿ ಅರ್ಥ ಮಾಡಿಕೊಂಡರೆ ಸಾಕು ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.

ರಾಷ್ಟ್ರೀಯ ಪಕ್ಷಗಳು ಅಭಿವೃದ್ಧಿಯ ವಿಷಯದಲ್ಲಿ ರಾಜಕಾರಣ ಮಾಡುವುದು ಬಿಟ್ಟು ಕೋಮು ದ್ವೇಷ ಕೆರಳಿಸುವ ಹಾಗೂ ಸಮಾಜದ ಶಾಂತಿಯನ್ನು ಕದಡುವ ಶಕ್ತಿಗಳನ್ನು ಪ್ರೋತ್ಸಾಹಿಸುತ್ತಿವೆ ಎಂದು ಅವರು ದೂರಿದರು.

ಅಮಾಯಕ ಮಕ್ಕಳ ಬಲಿ ಆಗುತ್ತಿದೆ. ಈಗ ಶಿವಮೊಗ್ಗದಲ್ಲಿ ಅಶಾಂತಿ ಉಂಟಾಗಿದೆ. ರಾಜಕೀಯ ನಾಯಕರು ಆ ಯುವಕನ ಮನೆಗೆ ಹೋಗುವುದು, ಸಾಂತ್ವನ ಹೇಳುವುದು ಮಾಡುತ್ತಾರೆ. ಹೋದ ಜೀವದ ಹೆಸರಿನಲ್ಲಿ ರಾಜಕೀಯ ಮಾಡುತ್ತಾರೆ. ಮೂರು ದಿನ ಅದ ಮೇಲೆ ಅತ್ತ ಯಾರೂ ಸುಳಿಯಲ್ಲ. ಆ ಅಮಾಯಕನ ಕುಟುಂಬದ ಬಗ್ಗೆ ಕೇಳುವವರು ದಿಕ್ಕಿರುವುದಿಲ್ಲ ಎಂದು ಕುಮಾರಸ್ವಾಮಿ ಅವರು ಕಳವಳ ವ್ಯಕ್ತಪಡಿಸಿದರು.

ಎರಡು ವರ್ಷದ ಹಿಂದೆಯೇ ಈ ಯುವಕನ ಹತ್ಯೆಗೆ ಸಂಚು ರೂಪಿಸಲಾಗಿತ್ತು ಎಂದು ಅವರ ಕುಟುಂಬದವರು ಮತ್ತು ಸಂಬಂಧಿಕರು ಹೇಳುತ್ತಿದ್ದಾರೆ. ಆತನ ಕೊಲೆ ಮಾಡಿದರೆ 10 ಲಕ್ಷ ರೂಪಾಯಿ ಇನಾಮು ಕೊಡುವುದಾಗಿ ಕೆಲವರು ಘೋಷಣೆ ಮಾಡಿದ್ದರು ಎಂದು ಅವರು ಹೇಳುತ್ತಿದ್ದಾರೆ. ಇದು ಅತ್ಯಂತ ಗಂಭೀರವಾದ ಅಂಶ.

-ಹೆಚ್.ಡಿ.ಕುಮಾರಸ್ವಾಮಿ

ಎರಡು ವರ್ಷಗಳ ಹಿಂದೆಯೇ ಆ ಯುವಕನ ಪ್ರಾಣಕ್ಕೆ ಅಪಾಯವಿದೆ ಎನ್ನುವುದು ಗೊತ್ತಾಗಿದ್ದರೂ ಆತನಿಗೆ ಯಾಕೆ ರಕ್ಷಣೆ ನೀಡಲಿಲ್ಲ? ಇದು ಬಿಜೆಪಿ ನಾಯಕರಿಗೆ ಗೊತ್ತಿರಲಿಲ್ಲವೆ? ನಿಮ್ಮ‌ ಪಕ್ಷದ ಅಥವಾ ನಿಮ್ಮ ಸಂಘಟನೆಯ ಸದಸ್ಯನನ್ನು ರಕ್ಷಣೆ ಮಾಡಿಕೊಳ್ಳಲು ನಿಮಗೆ ಸಾಧ್ಯವಾಗಲಿಲ್ಲ ಏಕೆ? ನಿಮ್ಮ ಸದಸ್ಯನನ್ನೇ ರಕ್ಷಿಸಿಕೊಳ್ಳಲಾಗದ ನೀವು ರಾಜ್ಯ ಮತ್ತು ಜನರನ್ನು ಹೇಗೆ ರಕ್ಷಣೆ ಮಾಡುತ್ತೀರಿ ಎಂದು ಕುಮಾರಸ್ವಾಮಿ ಅವರು ಆಡಳಿತ ಪಕ್ಷವನ್ನು ತೀಕ್ಷ್ಣವಾಗಿ ಪ್ರಶ್ನಿಸಿದರು.

ಎರಡು ವರ್ಷಗಳ‌ ಹಿಂದೆಯೇ ಈ ಮಾಹಿತಿ ನಿಮಗಿತ್ತು ಎನ್ನುವುದಾದರೆ ಪೊಲೀಸರು ಏನು ಮಾಡುತ್ತಿದ್ದರು? ಗುಪ್ತದಳ ಏನು ಮಾಡುತ್ತಿತ್ತು? ಯಾಕೆ ಯುವಕನ ರಕ್ಷಣೆ ಮಾಡಿಕೊಳ್ಳಲಿಲ್ಲ? ಇದು 2023ರ ಚುನಾವಣೆಯ ಸ್ಯಾಂಪಲ್ಲೋ ಏನೋ‌ ಗೊತ್ತಿಲ್ಲ. ಆದರೆ ಈಗ ಟ್ರೈಲರ್ ಬಿಟ್ಟಿದ್ದಾರೆ. ಮುಂದೆ ಪಿಕ್ಚರ್ ಬಿಡುತ್ತಾರೆ. ಇದು ಆರಂಭಿಕ ಹಂತ ಎನಿಸುತ್ತದೆ. ಮುಂದೆ ಏನೆಲ್ಲಾ ಕಾದಿದೆಯೋ ಎಂದು ಕುಮಾರಸ್ವಾಮಿ ಅವರು ಕಳವಳ ವ್ಯಕ್ತಪಡಿಸಿದರು

ಸರಕಾರ ಇದನ್ನು ಮೊದಲೇ ಅರ್ಥ ಮಾಡಿಕೊಳ್ಳಬೇಕಿತ್ತು. ಈಗ ಡಿಕೆ ಶಿವಕುಮಾರ್ ಪ್ರಚೋದನೆ ಮಾಡ್ತಿದ್ದಾರೆ ಎಂದು ಕೆಲವರು ಹೇಳುತ್ತಿದ್ದಾರೆ. ಆದರೆ, ಅವರ ಪ್ರಚೋದನೆಯನ್ನು ತಡೆಯುವ ಶಕ್ತಿ ಸರಕಾರಕ್ಕೆ ಇಲ್ಲವೇ? ಎಲ್ಲವೂ ಗೊತ್ತಿದ್ದೂ ಸರಕಾರ ಸುಮ್ಮನಾಗಿದ್ದು ಯಾಕೆ? ಎಂದು ಹೆಚ್ಡಿಕೆ ಅವರು ಪ್ರಶ್ನೆ ಮಾಡಿದರು.

Tags: çkharsha murder caşehd kumaraswam̧̧yjḑ̧skarnatakaShivamogga murder
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಸಚಿವ ಈಶ್ವರಪ್ಪ ವಿರುದ್ಧ ಗುಡಿಬಂಡೆಯಲ್ಲಿ ಕಾಂಗ್ರೆಸ್‌ ಪ್ರತಿಭಟನೆ

ಸಚಿವ ಈಶ್ವರಪ್ಪ ವಿರುದ್ಧ ಗುಡಿಬಂಡೆಯಲ್ಲಿ ಕಾಂಗ್ರೆಸ್‌ ಪ್ರತಿಭಟನೆ

Leave a Reply Cancel reply

Your email address will not be published. Required fields are marked *

Recommended

ರಾಜ್ಯ ಸರಕಾರದ ವೈಫಲ್ಯಗಳನ್ನು ತಮಿಳುನಾಡು ಲಾಭ ಮಾಡಿಕೊಳ್ಳುತ್ತಿದೆ!

ರಾಜ್ಯ ಸರಕಾರದ ವೈಫಲ್ಯಗಳನ್ನು ತಮಿಳುನಾಡು ಲಾಭ ಮಾಡಿಕೊಳ್ಳುತ್ತಿದೆ!

3 years ago
ಶ್ರೀರಾಮಪ್ರಭುವೇ ಕ್ಷಮಿಸು! ನಿನ್ನ ಹೆಸರಿಟ್ಟುಕೊಂಡವರೆಲ್ಲ ನಿನ್ನವರಲ್ಲ!!

ರಾಮಮಂದಿರ ನಿರ್ಮಾಣಕ್ಕೆ ಸಿದ್ದರಾಮಯ್ಯ ದೇಣಿಗೆ ಕೊಟ್ಟಿರುತ್ತಾರೆ! ಅವರು ಬಾಯಿ ಚಪಲಕ್ಕೆ ಲೆಕ್ಕ ಕೇಳುತ್ತಿದ್ದಾರೆ ಅಷ್ಟೇ ಎಂದು ಹೊಸ ಬಾಣ ಬಿಟ್ಟ ಸಚಿವ ಸೋಮಶೇಖರ್

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ