• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ರಾಜ್ಯಪಾಲರ ಮಧ್ಯಪ್ರವೇಶಕ್ಕೆ HDK ಆಗ್ರಹ

P K Channakrishna by P K Channakrishna
February 22, 2022
in STATE
Reading Time: 2 mins read
0
ಹೂ ಈಸ್ ಸಿದ್ದರಾಮಯ್ಯ?
921
VIEWS
FacebookTwitterWhatsuplinkedinEmail

ರಾಜ್ಯಪಾಲರು ಯಾರ ಕೈಗೊಂಬೆ ಆಗುವುದು ಬೇಡ; ಕೂಡಲೇ ಕೇಂದ್ರಕ್ಕೆ ವರದಿ ಸಲ್ಲಿಸಲು ಹೆಚ್ ಡಿಕೆ ಒತ್ತಾಯ; ಜೆಡಿಎಸ್’ನಿಂದ ಶೀಘ್ರವೇ ರಾಜ್ಯಪಾಲರಿಗೆ ದೂರು


HDK ಹೇಳಿದ್ದೇನು?

  • ರಾಜ್ಯದಲ್ಲಿ ಸರಕಾರ ವಜಾ ಆಗುವಂತಹ ಪರಿಸ್ಥಿತಿ ಇದೆ
  • ರಾಜ್ಯದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ರಾಜಕೀಯ ಕೋವಿಡ್ ಹಬ್ಬಿಸುತ್ತಿವೇ!
  • ಕಲಾಪವನ್ನು ಹಾಳು ಮಾಡಿದ ಕಾಂಗ್ರೆಸ್ ನೈತಿಕ ಅಧಃಪತನಕ್ಕೆ ಜಾರಿದೆ
  • ರಾಜ್ಯಪಾಲರ ಜತೆ ಕಾಂಗ್ರೆಸ್ ನಾಯಕರ ಭೇಟಿ ಯಾವ ಪುರುಷಾರ್ಥಕ್ಕೆ

ಬೆಂಗಳೂರು: ರಾಜ್ಯದಲ್ಲಿ ಶಾಂತಿ ಭದ್ರತೆಗೆ ದೊಡ್ಡ ಅಪಾಯ ಎದುರಾಗಿದ್ದು, ಕೂಡಲೇ ರಾಜ್ಯಪಾಲರು ಮಧ್ಯಪ್ರವೇಶ ಮಾಡಬೇಕು ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಆಗ್ರಹಪಡಿಸಿದರು.

ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದರು ಅವರು.

ಶಾಂತಿಯುತವಾಗಿದ್ದ ರಾಜ್ಯವು ಹಿಜಾಬ್, ಕೇಸರಿ ಶಾಲು ಹಾಗೂ ಈಗ ಶಿವಮೊಗ್ಗದಲ್ಲಿ ಯುವಕನೊಬ್ಬನ ಕೊಲೆ ಕಾರಣದಿಂದ ಇಡೀ ರಾಜ್ಯವೇ ಕುದಿಯುವ ಕುಲುಮೆಯಾಗಿದೆ. ಇಂಥ ಸೂಕ್ಷ್ಮ ಸಮಯದಲ್ಲಿ ರಾಜ್ಯಪಾಲರು ಮೌನವಾಗಿರುವುದು ಸರಿಯಲ್ಲ. ಅವರು ಯಾರ ಕೈಗೊಂಬೆಯೂ ಅಲ್ಲ, ಕೈಗೊಂಬೆ ಆಗಲೂ ಬಾರದು. ಹೀಗಾಗಿ ರಾಜ್ಯಪಾಲರು ಕೂಡಲೇ ಮಧ್ಯಪ್ರವೇಶ ಮಾಡಿ ಸರಕಾರದಿಂದ ಮಾಹಿತಿ ಪಡೆದು ಕೇಂದ್ರ ಸರಕಾರಕ್ಕೆ ವರದಿ ಸಲ್ಲಿಸಬೇಕು ಎಂದು ಒತ್ತಾಯಿಸಿದರು.

ಅಲ್ಲದೆ, ಶೀಘ್ರವೇ ತಾವು ಕೂಡ ಖುದ್ದು ರಾಜ್ಯಪಾಲರನ್ನು ಭೇಟಿಯಾಗಿ ರಾಜ್ಯದಲ್ಲಿ ನಡೆಯುತ್ತಿರುವ ಅಹಿತಕರ ಘಟನೆಗಳು ಹಾಗೂ ವಿಧಾನ ಮಂಡಲ ಕಲಾಪವನ್ನು ಸರಕಾರ ಸಮರ್ಪಕವಾಗಿ ನಡೆಸದ ಬಗ್ಗೆ ನಮ್ಮ ಪಕ್ಷದ ವತಿಯಿಂದ ದೂರು ನೀಡಲಾಗುವುದು ಎಂದು ಅವರು ತಿಳಿಸಿದರು.

ಸರಕಾರ ವಜಾ ಆಗುವಂತಹ ಪರಿಸ್ಥಿತಿ

ಕೇಂದ್ರ ಸರಕಾರವೇ ರಾಜ್ಯ ಸರಕಾರವನ್ನು ವಜಾ ಮಾಡುವಂಥ ಪರಿಸ್ಥಿತಿ ರಾಜ್ಯದಲ್ಲಿ ಸೃಷ್ಠಿ ಆಗಿದೆ. ಬಿಜೆಪಿ ಪಕ್ಷದ ಲೋಕಸಭಾ ಸದಸ್ಯರೊಬ್ಬರೇ ಸರಕಾರದ ಅಸಮರ್ಥತೆ ನಮಗೆ ನಾಚಿಕೆ ಉಂಟು ಮಾಡುತ್ತಿದೆ ಎಂದು ಹೇಳಿದ್ದಾರೆ. ಜನರು ಕೂಡ ರೋಸಿ ಹೋಗಿದ್ದಾರೆ. ಹೀಗಾಗಿ ರಾಜ್ಯಪಾಲರು ತಕ್ಷಣ ಮಧ್ಯಪ್ರವೇಶ ಮಾಡಲೇಬೇಕು ಎಂದು ಕುಮಾರಸ್ವಾಮಿ ಅವರು ಒತ್ತಾಯ ಮಾಡಿದರು.

ರಾಜ್ಯದಲ್ಲಿ ಇಂಥ ಕೆಟ್ಟ ವಾತಾವರಣ ಉಂಟಾಗಲು ರಾಜ್ಯ ಸರಕಾರವೇ ಕಾರಣ. ಅವರ ಅಸಮರ್ಪಕ ಕಾರ್ಯ ವೈಖರಿಯಿಂದ ಇಡೀ ಶಿಕ್ಷಣ ಕ್ಷೇತ್ರ ಬಂದ್ ಮಾಡಿ‌ ಕೂರಿಸಿದ್ದಾರೆ. ಶಾಲೆ ಕಾಲೇಜುಗಳಲ್ಲಿ ಸಂಘರ್ಷದ ವಾತಾವರಣ ಸೃಷ್ಟಿ ಆಗಿದೆ. ಇನ್ನು ಹೈಕೋರ್ಟ್ ಅಂತೂ ಬಿಬಿಎಂಪಿಗೆ ನಿತ್ಯವೂ ಛೀಮಾರಿ ಹಾಕುತ್ತಿದೆ. ಅಧಿಕಾರಿಗಳನ್ನು ಜೈಲಿಗೆ ಕಲಿಸುವ ಎಚ್ಚರಿಕೆಯನ್ನು ನೀಡಿದೆ. ನಿಮ್ಮನ್ನು ಜೈಲಿಗೆ ಹಾಕಬೇಕಿತ್ತು. ಆದರೂ ಔದಾರ್ಯ ತೋರಿಸಿದ್ದೇವೆ ಎಂದು ನ್ಯಾಯಮೂರ್ತಿಗಳೇ ಎಚ್ಚರಿಕೆ ನೀಡುತ್ತಿದ್ದಾರೆ. ಈ ಸರಕಾರಕ್ಕೆ ಜನರ ಬಗ್ಗೆ ಬದ್ಧತೆ ಇದೆಯಾ? ಬಹಳ ನೊಂದು ಈ ಮಾತನ್ನು ಹೇಳುತ್ತಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.

ಅಮೂಲ್ಯ ಕಲಾಪ ಹಾಳು ಮಾಡಿದರು

ಆಡಳಿತಾರೂಢ ಬಿಜೆಪಿ ಹಾಗೂ ಅಧಿಕೃತ ಪ್ರತಿಪಕ್ಷ ಕಾಂಗ್ರೆಸ್ ಎರಡೂ ಕುಮ್ಮಕ್ಕಾಗಿ ವಿಧಾನಮಂಡಲದ ಕಲಾಪವನ್ನು ಸಂಪೂರ್ಣವಾಗಿ ಹಾಳು ಮಾಡಿವೆ. 2022-2023ನೇ ವರ್ಷದ ಮೊದಲ ರಾಜ್ಯಪಾಲರ ಜಂಟಿ ಅಧಿವೇಶನ ಭಾಷಣದ ವಂದನಾ ನಿರ್ಣಯದ ಮೇಲೆ ಚರ್ಚೆ ಇದಾಗಿತ್ತು. ಸದನದಲ್ಲಿ ಚರ್ಚೆಗೆ ಅವಕಾಶಗಳು ಸಿಗಲಿಲ್ಲ. ಎರಡು ರಾಷ್ಟ್ರೀಯ ಪಕ್ಷಗಳ ನಡವಳಿಕೆಗಳಿಂದ ಇದು ಆಗಲಿಲ್ಲ. ಆದರೆ ಆಡಳಿತ ಪಕ್ಷದ ಸದಸ್ಯರು ವಂದನಾ ನಿರ್ಣಯದ ಮೇಲೆ ಮಾತನಾಡಿದರೂ ಅವರು ರಾಜ್ಯದ ಸಮಸ್ಯೆಗಳ ಬಗ್ಗೆ ಮಾತನಾಡುವುದು ಬಿಟ್ಟು ಬರೀ ಮೋದಿ ಅವರ ಸಾಧನೆಗಳ ಬಗ್ಗೆ ಮಾತ್ರ ಹೇಳಿದರು ಎಂದು ಕುಮಾರಸ್ವಾಮಿ ಅವರು ಬೇಸರ ವ್ಯಕ್ತಪಡಿಸಿದರು.

ಸಿಎಂ ಅವರು ಕಾಂಗ್ರೆಸ್ ಧರಣಿ ಮಧ್ಯೆ ಉತ್ತರ ನೀಡಿದ್ದಾರೆ. ರಾಜ್ಯದ ವಿಧಾನ ಮಂಡಲದ ಇತಿಹಾಸದಲ್ಲಿ ಮೊದಲನೇ ಬಾರಿ ಈ ರೀತಿ ಕಲಾಪ ಬಲಿಯಾಗಿದೆ. ಅತ್ಯಂತ ಮಹತ್ವದ ವಿಚಾರಗಳು ಸದನದಲ್ಲಿ ಚರ್ಚೆ ಆಗಬೇಕಿತ್ತು. ಹಲವಾರು ಬಾರಿ ನಾನು ಹೇಳಿದ್ದೇನೆ. ಗಲಾಟೆ ಮಾಡುವವರನ್ನು ಹೊರ ಹಾಕಿ ಅಥವಾ ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದಕ್ಕೆ ಹಾಕಿ ಎಂದು ಸಭಾಧ್ಯಕ್ಷರಿಗೆ ಮನವಿ ಮಾಡಿದ್ದೆ. ಆದರೆ, ನಮ್ಮ ಮನವಿಯನ್ನು ಪರಿಗಣಿಸದೇ, ನಮ್ಮ ಪಕ್ಷಕ್ಕೆ ಮಾತನಾಡಲು ಅವಕಾಶವನ್ನು ನೀಡದೇ ಕಲಾಪವನ್ನು ಪ್ರತಿಷ್ಠೆಗೆ ಬಲಿ ಕೊಡಲಾಗಿದೆ ಎಂದು ಕುಮಾರಸ್ವಾಮಿ ಅವರು ದೂರಿದರು.

ರಾಷ್ಟ್ರೀಯ ಪಕ್ಷಗಳಿಂದ ರಾಜಕೀಯ ಕೋವಿಡ್

ಬಡವರ ಮಕ್ಕಳು ವ್ಯಾಸಂಗ ಮಾಡುವಂಥ ಸರಕಾರಿ ಶಾಲೆ ಕಾಲೇಜುಗಳಲ್ಲಿ ಮಕ್ಕಳ ನಡುವೆ ದ್ವೇಷ ಭಾವನೆ ಮೂಡಿಸಿ ಅಶಾಂತಿ ಉಂಟು ಮಾಡಲಾಗುತ್ತಿದೆ. ಸರಕಾರಿ ಶಿಕ್ಷಣ ವ್ಯವಸ್ಥೆಯೇ ನಾಶವಾಗುವ ಹಂತ ಮುಟ್ಟಿದೆ. ಬಡಮಕ್ಕಳ ಮೇಲೆ ಆದ ಅನಾಹುತ ಇದರ ಬಗ್ಗೆ ಕಲಾಪದಲ್ಲಿ ಚರ್ಚೆ ಆಗಬೇಕಿತ್ತು. ಕೊರೊನಾ ಅನಾಹುತದಿಂದ ಎರಡು ವರ್ಷದಿಂದ ಶಿಕ್ಷಣ ರಂಗ ಪೂರ್ಣವಾಗಿ ನಾಶವಾಗಿದೆ. ಈ ವರ್ಷವೂ ಸಹ ಕೊರೊನಾ ಅನಾಹುತದ ನಂತರ ‘ರಾಜಕೀಯದ ಕೋವಿಡ್’ ಪ್ರಯೋಗವಾಗಿದೆ. ಎರಡೂ ರಾಷ್ಟ್ರೀಯ ಪಕ್ಷಗಳು ಇಡೀ ರಾಜ್ಯಕ್ಕೆ ‘ರಾಜಕೀಯ ಕೋವಿಡ್ ‘ ಅನ್ನು ಹಬ್ಬಿಸುತ್ತಿವೆ ಎಂದು ಮಾಜಿ ಮುಖ್ಯಮಂತ್ರಿಗಳು ಕಿಡಿ ಕಾರಿದರು.

ರಾಜಕೀಯ ಕೋವಿಡ್ ಗೆ ಔಷಧಿ ಇಲ್ಲ. ಇಡೀ ರಾಜ್ಯದ ನೆಮ್ಮದಿ ಶಾಂತಿಯನ್ನು ಬುಡಮೇಲು ಮಾಡುವ ರಾಜಕೀಯ ಸ್ವಾರ್ಥಕ್ಕೆ ಕೊನೆ ಇಲ್ಲದಾಗಿದೆ. ಅದಕ್ಕೆ ಈ ರೀತಿ ಗದ್ದಲ ಎಬ್ಬಿಸಿ ಕಲಾಪವನ್ನು ಮುಗಿಸಿದರು. ಸದನ ಸುಗಮವಾಗಿ ನಡೆಸಲು ಅವಕಾಶ ಕೊಡಿ. ಮತಾಂತರ ನಿಷೇಧ ಕಾಯ್ದೆ ವಿಷಯ ಇಟ್ಟುಕೊಂಡು ಬೆಳಗಾವಿ ಅಧಿವೇಶನವನ್ನೂ ಹಾಳುಗೆಡವಿದ್ದಾರೆ ಎಂದು ಅವರು ಹೇಳಿದರು.

ಯಾವ ಪುರುಷಾರ್ಥಕ್ಕೆ ರಾಜ್ಯಪಾಲರ ಭೇಟಿ?

ಸದನದ ಕಲಾಪವನ್ನು ಹಾಳು ಮಾಡಿದ ಅಧಿಕೃತ ಪ್ರತಿಪಕ್ಷವೇ ಸರಕಾರದ ವಿರುದ್ಧ ರಾಜ್ಯಪಾಲರಿಗೆ ದೂರು ಕೊಡಲು ಹೊರಟಿದೆ. ಅದೂ ರಾಜಭವನದ ತನಕ ನಡೆದುಕೊಂಡು ಹೋಗಿ ಮನವಿ ಕೊಟ್ಟು ಪ್ರಚಾರ ಪಡೆಯುವ ಹುನ್ನಾರ. ಯಾವ ಮುಖ ಇಟ್ಟುಕೊಂಡು ಆ ಪಕ್ಷದ ನಾಯಕರು ರಾಜ್ಯಪಾಲರನ್ನು ಭೇಟಿಯಾಗುತ್ತಾರೆ? ಈ ನಾಟಕವನ್ನು ಬೇರೆ ರಾಜ್ಯದ ಜನರು ನೋಡಬೇಕೆ ಎಂದು ಕುಮಾರಸ್ವಾಮಿ ಅವರು ಗುಡುಗಿದರು.

ಹಿಜಾಬ್, ಕೇಸರಿ ಶಾಲು ಹಾಗೂ ಶಿವಮೊಗ್ಗದಲ್ಲಿ ನಡೆದ ಕೊಲೆಗೆ ಸರಕಾರ ತಪ್ಪು ಹೆಜ್ಜೆಗಳೇ ಕಾರಣ. ಬಡವರ ಮನೆ ಮಕ್ಕಳನ್ನು ಇಂಥ ಘಟನೆಗಳು ಬಳಿ ತೆಗೆದುಕೊಳ್ಳುತ್ತವೆ. ಶ್ರೀಮಂತರ ಮಕ್ಕಳು, ಉಳ್ಳವರ ಮಕ್ಕಳು ಅಥವಾ ಮೇಲ್ಜಾತಿಯವರ ಮಕ್ಕಳು ಇಂಥ ಘಟನೆಗಳಲ್ಲಿ ಭಾಗಿಯಾಗುವುದಿಲ್ಲ. ಎರಡೂ ಹೊತ್ತು ಊಟಕ್ಕೂ ಕಷ್ಟ ಇರುವ ಬಡವರ ಮಕ್ಕಳು ಇಂಥ ಷಡ್ಯಂತ್ರಕ್ಕೆ ಬಲಿ ಆಗುತ್ತಿದ್ದಾರೆ. ಇಂಥ ವಿಷಯಗಳ ಬಗ್ಗೆ ಸದನ ಚರ್ಚೆ ನಡೆಸಬೇಕಿತ್ತು. ಇನ್ನಾದರೂ ರಾಷ್ಟ್ರೀಯ ಪಕ್ಷಗಳು ಬಡಮಕ್ಕಳ ಜೀವನದ ಜತೆ ಚೆಲ್ಲಾಟ ಆಡುವುದನ್ನು ನಿಲ್ಲಿಸಬೇಕು ಎಂದು ಅವರು ಒತ್ತಾಯಿಸಿದರು.

ಇದಕ್ಕೆಲ್ಲಾ ಕಾರಣ ಯಾರು ಅಂತ ವಿರೋಧ ಪಕ್ಷಗಳು ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಬೇಕಿತ್ತು. ಹಾಗೆ ಆಗಲಿಲ್ಲ. ಇದು ಅಧಿಕೃತ ಪ್ರತಿಪಕ್ಷ ಕಾಂಗ್ರೆಸ್ ನ ನೈತಿಕ ಅಧಃ ಪತನವನ್ನು ತೋರಿಸುತ್ತದೆ ಎಂದ ಅವರು; ಇಂಥ ಘಟನೆಗಳಿಂದ ಅನೇಕ ಕುಟುಂಬಗಳು ಬೀದಿ ಪಾಲಾಗಿವೆ. ಇಂಥ ಒಬ್ಬ ಯುವಕ ಬಲಿಯಾದರೆ ಆ ಮನೆಯೇ ಬೀದಿಗೆ ಬಿದ್ದಂತೆ. ಆ ತಂದೆ ತಾಯಿ ಭವಿಷ್ಯವೇನು? ಅಂಥ ಕುಟುಂಬಗಳ ಪರಿಸ್ಥಿತಿ ಬಗ್ಗೆ ಎರಡು ರಾಷ್ಟ್ರೀಯ ಪಕ್ಷಗಳು ಯೋಚನೆ ಮಾಡುತ್ತಿಲ್ಲ. ಶಿವಮೊಗ್ಗದಲ್ಲಿ ಕೊಲೆ ಆಗಿರುವ ಆ ಯುವಕನದ್ದು ಶ್ರೀಮಂತ ಕುಟುಂಬ ಅಲ್ಲ. ಸಣ್ಣ ಸಮಾಜದ ಹುಡುಗ ಆತ. ಹೀಗೆ ಅನೇಕ ಉದಹರಣೆಗಳನ್ನು ಕೊಡಬಹುದು ಎಂದು ಕುಮಾರಸ್ವಾಮಿ ಅವರು ಹೇಳಿದರು.

ಶಿವಮೊಗ್ಗ ಘಟನೆಯಲ್ಲಿ ಎಷ್ಟು ಜನರನ್ನು ಬಂಧಿಸಲಾಗಿದೆ. ಇಬ್ಬರು ಇಬ್ಬರು ಅಂತಾರೆ, ಇನ್ನೊಬ್ಬರು ಮೂವರು ಅಂತಾರೆ, ಆಮೇಲೆ ಮತ್ತಿಬ್ಬರು12 ಜ‌ನ ಅರೆಸ್ಟ್ ಅಂತಾರೆ. ಯಾರ ಮಾತು ನಂಬುವುದು ಬಿಡುವುದು. ಇದನ್ನೇ ಎಷ್ಟು ದಿನ ಪ್ರಚಾರಕ್ಕೆ ಇಡ್ತೀರಾ? ಸತ್ಯಾಸತ್ಯತೆ ಯಾವಾಗ ಹೊರ ಬರೋದು? ಕೇವಲ ಮರಣ ದಳ್ಳುರಿಯನ್ನೇ ಪ್ರಚಾರ ಮಾಡ್ತೀರಾ? ಎಂದು ಸರಕಾರವನ್ನು ತೀವ್ರವಾಗಿ ಪ್ರಶ್ನೆ ಮಾಡಿದರು ಕುಮಾರಸ್ವಾಮಿ ಅವರು.

ಗೃಹ ಸಚಿವರು ಶಿವಮೊಗ್ಗ ಜಿಲ್ಲೆಯವರೇ. ಕೊಲೆಯಾದ ಯುವಕ ಬಿಜೆಪಿ ಪರಿವಾರಕ್ಕೆ ಸೇರಿದವನು. ಆತನ ಬಗ್ಗೆ ಎಲ್ಲ ಮಾಹಿತಿ ಸರಕಾರದ ಬಳಿ ಇದೆ. ಆತನ ಪ್ರತೀ ಚಲನವಲನ ಎಲ್ಲಾ ಪೊಲೀಸರಿಗೆ ಗೊತ್ತಿದೆ. ಆದರೂ ರಕ್ಷಣೆ ನೀಡಲಿಲ್ಲ, ಆತನ ಜೀವ ಉಳಿಯಲಿಲ್ಲ ಎಂದು ಕುಮಾರಸ್ವಾಮಿ ಅವರು ಸರಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದಕೊಂಡರು.

ಸಿಎಎ ಘಟನೆಯಲ್ಲಿ ಮಂಗಳೂರಲ್ಲಿ ಇಬ್ಬರು ಮುಸ್ಲಿಂ ಯುವಕರ ಮೇಲೆ ಗುಂಡು ಹಾರಿಸಲಾಯಿತು. ನಂತರ 10 ಲಕ್ಷ ಹಣ ಪರಿಹಾರ ನೀಡಿ ಮತ್ತೆ ಅವರನ್ನು ಗೂಂಡಾಗಳು ಅಂತ ಹೇಳಿದಿರಿ. ಡಿಜೆ ಹಳ್ಳಿಯಲ್ಲಿ ನಡೆದ ಘಟನೆ ಯಾರು ಕಾರಣ? ಇನ್ನೂ ಅನೇಕ ಯುವಕರನ್ನು ಈಗಲೂ ಜೈಲಿನಲ್ಲೇ ಇಡಲಾಗಿದೆ. ಆದರೆ ಘಟನೆಗೆ ಕಾರಣರಾದವರು ಕೆಪಿಸಿಸಿ ಅಧ್ಯಕ್ಷರ ಹಿಂದೆ ಮುಂದೆ ಆರಾಮಾಗಿ ಓಡಾಡಿಕೊಂಡಿದ್ದಾರೆ. ಅವರಿಗೆ ಮುಂದಿನ ಚುನಾವಣೆಯಲ್ಲಿ ಟಿಕೆಟ್ ನೀಡುವ ಬಗ್ಗೆಯೂ ಮಾತುಕತೆ ನಡೆಯುತ್ತಿದೆಯಂತೆ ಎಂದು ಅವರು ಕಾಂಗ್ರೆಸ್ ಪಕ್ಷದ ಮೇಲೆ ತೀವ್ರ ವಾಗ್ಧಾಳಿ ನಡೆಸಿದರು.

ಇದು ಇಲ್ಲಿಗೇ ನಿಲ್ಲಲ್ಲ

ಶಿವಮೊಗ್ಗದಲ್ಲಿ ನಡೆದ ಘಟನೆ ಪರಿಣಾಮಗಳು ಇಲ್ಲಿಗೇ ನಿಲ್ಲಲ್ಲ. ಸರಕಾರ ಎಚ್ಚರಿಕೆ ವಹಿಸಿ ಇದರ ಬಿಸಿ ಬೇರೆ ಕಡೆ ಹಬ್ಬದಂತೆ ಮಾಡಬೇಕು. ಆದರೆ, ಎರಡೂ ಮತ ಬ್ಯಾಂಕ್ ಸೃಷ್ಟಿ ಮಾಡಲು ಹೀಗೆ ಮಾಡ್ತಾ ಇದ್ದಾರೆ. ಮತ ಬ್ಯಾಂಕ್ ಗಾಗಿ ಹೀಗೆ ಬಡವರನ್ನು ಬಳಸಿಕೊಳ್ತಾ ಇದ್ದಾರೆ. ಅದನ್ನು ಜನ ಅರ್ಥಮಾಡಿಕೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿಗಳು ಮನವಿ ಮಾಡಿದರು.

ಮಾಧ್ಯಮಗೋಷ್ಠಿಯಲ್ಲಿ ಮಾಜಿ ಸಚಿವ ಬಂಡೆಪ್ಪ ಖಾಷೆಂಪೂರ್, ಶಾಸಕ ರಾಜಾ ವೆಂಕಟಪ್ಪ ನಾಯಕ ಉಪಸ್ಥಿತರಿದ್ದರು.

Tags: cknewsnowgovernors of karnatakaHarsha Murder Casehd kumaraswamyjdsKarnataka violencenewsShivamogga
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ವಿಧಾನಮಂಡಲ ಅಧಿವೇಶನ

ಸಿಎಂ, ಸಚಿವರು, ಶಾಸಕರ ಸಂಬಳದಲ್ಲಿ ಭರ್ಜರಿ ಹೆಚ್ಚಳ

Leave a Reply Cancel reply

Your email address will not be published. Required fields are marked *

Recommended

ಬಾಂಬ್ ಇಟ್ಟ ಕಿರಾತಕ ಹೇಗಿದ್ದ? ಮಹತ್ವದ ಮಾಹಿತಿ ಕೊಟ್ಟ ಮುಖ್ಯಮಂತ್ರಿ

ಬಾಂಬ್ ಇಟ್ಟ ಕಿರಾತಕ ಹೇಗಿದ್ದ? ಮಹತ್ವದ ಮಾಹಿತಿ ಕೊಟ್ಟ ಮುಖ್ಯಮಂತ್ರಿ

2 years ago
ಅಧಿಕಾರದ ಕುರ್ಚಿಗೆ ವಿದಾಯ ಹೇಳಲು ಸಿದ್ಧರಾದರಾ ʼಬಲಶಾಲಿʼ ಯಡಿಯೂರಪ್ಪ! ಟೆಂಪಲ್‌ ರನ್‌ ಶುರುವಿಟ್ಟುಕೊಂಡ ಪುತ್ರ ವಿಜಯೇಂದ್ರ: ಹಾಗಾದರೆ, NEXT ಸಿಎಂ ಯಾರಪ್ಪ?

ಕೊರೊನ ಲಸಿಕೆ ಅಕ್ರಮ ಮಾರಾಟ ಮಾಡಿದರೆ ಜೈಲೇ ಗತಿ: ಗೃಹ ಸಚಿವ ಬಸವರಾಜ ಬೊಮ್ಮಾಯಿ ವಾರ್ನಿಂಗ್

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ