• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಹಿಂದುಳಿದ ವರ್ಗಗಳಿಗೆ ಮೀಸಲು; ಆಯೋಗದ ಸಾಮಾಜಿಕ ಶೈಕ್ಷಣಿಕ & ಆರ್ಥಿಕ ಸಮೀಕ್ಷೆ ಒಪ್ಪಿಕೊಳ್ಳಲು ಸಿದ್ದು ಆಗ್ರಹ

P K Channakrishna by P K Channakrishna
February 22, 2022
in STATE
Reading Time: 1 min read
0
ಕೋವಿಡ್ ಕೆಸರು; ಬಿಜೆಪಿ, ಕಾಂಗ್ರೆಸ್ ಪಕ್ಷಗಳಿಗೆ ಪಂಚಪ್ರಶ್ನೆ ಹಾಕಿದ ಎಚ್ಡಿಕೆ

ಸಿದ್ದರಾಮಯ್ಯ

923
VIEWS
FacebookTwitterWhatsuplinkedinEmail

ಅಧಿವೇಶನದ ನಡುವೆ ದಿಢೀರ್‌ ಪತ್ರಿಕಾಗೋಷ್ಠಿ ನಡೆಸಿದ ಪ್ರತಿಪಕ್ಷ ನಾಯಕ

ಬೆಂಗಳೂರು: ಸುಪ್ರೀಮ್ ಕೋರ್ಟ್ ಇತ್ತೀಚಿನ ಆದೇಶದಿಂದಾಗಿ ಸ್ಥಳೀಯ ಸಂಸ್ಥೆಗಳಲ್ಲಿನ ಹಿಂದುಳಿದ ಜಾತಿಯ ರಾಜಕೀಯ ಮೀಸಲಾತಿಗೆ ಎದುರಾಗಿರುವ ಅಡ್ಡಿಯನ್ನು ರಾಜ್ಯ ಹಿಂದುಳಿದ ವರ್ಗಗಳ ಆಯೋಗ ನಡೆಸಿರುವ ಸಾಮಾಜಿಕ,ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ ವರದಿಯಿಂದ ಪರಿಹರಿಸಿಕೊಳ್ಳಲು ಸಾಧ್ಯವಿದೆ ಎಂದು ಪ್ರತಿಪಕ್ಷ ನಾಯಕ ನಾಯಕ ಸಿದ್ದರಾಮಯ್ಯ ಹೇಳಿದರು.

ವಿಧಾನಂಡಲ ಕಲಾಪದ ನಡುವೆಯೇ ದಿಢೀರನೇ ಮಾಧ್ಯಮಗಳ ಜತೆ ಮಾತನಾಡಿದ ಅವರು ಹೇಳಿದ್ದಿಷ್ಟು;

ಮೂರು ಹಂತದ ಪರಿಶೀಲನೆ ನಡೆಸಿ ಹಿಂದುಳಿದ ಜಾತಿಗಳ ರಾಜಕೀಯ ಮೀಸಲಾತಿಯನ್ನು ರೂಪಿಸಬೇಕೆಂದು ಸುಪ್ರೀಮ್ ಕೋರ್ಟ್ ಹೇಳಿದೆ. ನಮ್ಮ ಸರ್ಕಾರ ದೇಶದಲ್ಲಿಯೇ ಮೊದಲ ಬಾರಿ ಮನೆಮನೆ ತೆರಳಿ ರಾಜ್ಯದಲ್ಲಿ ನಡೆಸಲಾಗಿರುವ ಸಾಮಾಜಿಕ,ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿ ಸಿದ್ದವಾಗಿದೆ.

ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ಜಾತಿಗಳಿಗೆ ರಾಜಕೀಯ ಮೀಸಲಾತಿ ನೀಡಲು ಪ್ರತ್ಯೇಕವಾದ ಆಯೋಗವನ್ನು ರಚಿಸಬೇಕೆಂದು ಹೇಳಿದೆ. ಆದರೆ ಕರ್ನಾಟಕದಲ್ಲಿ  ಸುಪ್ರೀಮ್ ಕೋರ್ಟ್ ಆದೇಶಕ್ಕೆ ಅನುಗುಣವಾಗಿ ಇದೇ ಉದ್ದೇಶದಿಂದ ರಾಜ್ಯದ ಸಮಸ್ತ ಜನತೆಯ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಿದೆ. ಈ ರೀತಿ ವೈಜ್ಞಾನಿಕವಾಗಿ ದೇಶದ ಬೇರೆ ಯಾವ ರಾಜ್ಯಗಳಲ್ಲಿಯೂ ಸಮೀಕ್ಷೆಯನ್ನು ನಡೆಸಲಾಗಿಲ್ಲ.

ಹಿರಿಯ ವಕೀಲ ಕಾಂತರಾಜ್ ನೇತೃತ್ವದ ಹಿಂದುಳಿದ ವರ್ಗಗಳ ಆಯೋಗದ ಕಾರ್ಯವ್ಯಾಪ್ತಿಯಲ್ಲಿ ರಾಜಕೀಯ ಕ್ಷೇತ್ರ ಸೇರಿಲ್ಲದೆ ಇದ್ದರೂ ಅದು ರಾಜ್ಯದ ಎಲ್ಲ ಜಾತಿಜನರ ರಾಜಕೀಯ ಪ್ರಾತಿನಿಧ್ಯದ ಮಾಹಿತಿಯನ್ನು ಕೂಡಾ ಸಂಗ್ರಹಿಸಿದೆ. ರಾಜ್ಯಸರ್ಕಾರ ಈ ಅಂಶವನ್ನು ಗಮನಕ್ಕೆ ತಂದರೆ ಸುಪ್ರೀಮ್ ಕೋರ್ಟ್ ಗಣನೆಗೆ ತೆಗೆದುಕೊಳ್ಳಬಹುದು.

ಕಳೆದ ವರ್ಷದ ಡಿಸೆಂಬರ್ ನಲ್ಲಿ ನೀಡಿರುವ ಆದೇಶದಲ್ಲಿ ಸಾಮಾಜಿಕ-ಆರ್ಥಿಕ ಸಮೀಕ್ಷೆ ನಡೆಸಲು ಆಯೋಗ ರಚಿಸಲು ಹೇಳಿರುವ ಸುಪ್ರೀಮ್ ಕೋರ್ಟ್ ‘’ ರಾಜ್ಯ ಸರ್ಕಾರಗಳು ಈಗಾಗಲೇ ನಡೆಸಿರುವ ಸಮೀಕ್ಷೆಯ ಅಂಕಿ-ಅಂಶ ಮತ್ತು ಮಾಹಿತಿಯನ್ನು ಹೊಸ ಆಯೋಗಕ್ಕೆ ನೀಡಬಹುದು. ಆ ಮಾಹಿತಿಯನ್ನು ಆಧರಿಸಿ ಎರಡು ವಾರಗಳ ಅವಧಿಯೊಳಗೆ ಆಯೋಗ ಹಿಂದುಳಿದ ಜಾತಿಗಳ ಮೀಸಲಾತಿ ಬಗ್ಗೆ ಮಧ್ಯಂತರ ವರದಿಯನ್ನು ನೀಡಬಹುದು..” ಎಂದು ಕೂಡಾ ಹೇಳಿದೆ.

ರಾಜ್ಯದ ಬಿಜೆಪಿ ಸರ್ಕಾರ ಕಾಲವ್ಯಯಮಾಡದೆ ಹಿಂದುಳಿದ ವರ್ಗಗಳ ಆಯೋಗದ ಸಾಮಾಜಿಕ ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯನ್ನು ತಕ್ಷಣ ಒಪ್ಪಿಕೊಂಡು ಜಾರಿಗೆ ತರಬೇಕು. ಇದೇ ವರದಿಯನ್ನು ಮುಂದಿಟ್ಟುಕೊಂಡು ಸುಪ್ರೀಂ ಕೋರ್ಟ್ ಮುಂದೆ ತನ್ನವಾದ ಮಂಡಿಸಿ ಹಿಂದುಳಿದ ಜಾತಿಗಳಿಗೆ ಆಗಲಿರುವ ಅನ್ಯಾಯವನ್ನು ತಪ್ಪಿಸಬೇಕು.

ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮೂಲಕ ಮನೆಮನೆಗೆ ಹೋಗಿ ರಾಜ್ಯದ ಜನತೆಯ ಸಾಮಾಜಿಕ,ಆರ್ಥಿಕ,ಶೈಕ್ಷಣಿಕ ಸಮೀಕ್ಷೆ ನಡೆಸಿರುವುದರಿಂದ ಎಲ್ಲ ಜಾತಿ ಜನರ ರಾಜಕೀಯ ಪ್ರಾತಿನಿಧ್ಯದ ನಿಖರವಾದ ಮಾಹಿತಿ ಇರುವುದರಿಂದ ಬೇರೆ ರಾಜ್ಯಗಳಂತೆ ಪ್ರತ್ಯೇಕ ಸಮೀಕ್ಷೆ ನಡೆಸುವ ಅಗತ್ಯ ಇರಲಾರದು.

2010ರಲ್ಲಿಯೇ ಸುಪ್ರೀಂಕೋರ್ಟ್ ರಾಜಕೀಯ ಮೀಸಲಾತಿಗೆ ಪ್ರತ್ಯೇಕ ಮಾನದಂಡ ರೂಪಿಸುವಂತೆ ಆದೇಶಿಸಿತ್ತು. ಆ ಆದೇಶವನ್ನು ಪರಿಶೀಲಿಸಲು ನಾನು ಮುಖ್ಯಮಂತ್ರಿಯಾಗಿದ್ದಾಗ ಕಾನೂನು ಸಚಿವ ಟಿ.ಬಿ.ಜಯಚಂದ್ರ ಅವರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಿದ್ದೆ. ಅದೇ ಸಮಿತಿಯನ್ನು ಪುನರ್ರಚಿಸಿ ಈಗಿನ ಬಿಕ್ಕಟ್ಟಿಗೆ ಪರಿಹಾರಕ್ಕೆ ಪ್ರಯತ್ನಿಸಬೇಕು.

ಮೀಸಲಾತಿಗೆ ಸಂಬಂಧಿಸಿದ ಪ್ರಕರಣಗಳು ವಿಚಾರಣೆಗೆ ಬಂದಾಗೆಲ್ಲ ಸುಪ್ರೀಮ್ ಕೋರ್ಟ್ ವಿಸ್ತೃತ,ವಿಶ್ವಾಸಾರ್ಹ ಅಂಕಿ-ಅಂಶಗಳ ಆಧಾರವನ್ನು ಕೇಳುತ್ತಾ ಬಂದಿದೆ.  ಇದು ಕರ್ನಾಟಕದಲ್ಲಿ ನಡೆದಂತೆ ಮನೆಮನೆಗೆ ಹೋಗಿ ಸಂಗ್ರಹಿಸಿದ ಸಾಮಾಜಿಕ,ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯೇ ಸರಿಯಾದ ಉತ್ತರವಾಗಿದೆ.

ರಾಜ್ಯದ ಹಿಂದುಳಿದ ವರ್ಗಗಳ ಆಯೋಗ ನಡೆಸಿದ್ದ ಸಾಮಾಜಿಕ,ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿ ಸಿದ್ದವಿರುವುದರಿಂದ ಸುಪ್ರೀಮ್ ಕೋರ್ಟ್ ಆದೇಶದಿಂದ ಬೇರೆ ರಾಜ್ಯಗಳಂತೆ ಕರ್ನಾಟಕ ರಾಜ್ಯ ಆತಂಕ ಪಡಬೇಕಾಗಿಲ್ಲ. ರಾಜ್ಯ ಸರ್ಕಾರ ರಾಜಕೀಯ ಮಾಡದೆ ಈ ವರದಿಯನ್ನು ಮೊದಲು ಜಾರಿಗೆ ತರಬೇಕು.

ಸುಪ್ರೀಮ್ ಕೋರ್ಟ್ ಆದೇಶವನ್ನು ಜಿಲ್ಲಾ ಪಂಚಾಯತ್ –ತಾಲೂಕು ಪಂಚಾಯತ್ ಚುನಾವಣೆಗಳನ್ನು ಮುಂದೂಡಲು ಸಿಕ್ಕಿದ ಪಿಳ್ಳೆ ನೆಪ ಎಂದು ಪರಿಗಣಿಸದೆ ತಕ್ಷಣ ಹಿಂದುಳಿದ ಜಾತಿಗಳಿಗೆ ಆಗಲಿರುವ ರಾಜಕೀಯ ಅನ್ಯಾಯವನ್ನು ಸರಿಪಡಿಸಲು ಯುದ್ದೋಪಾದಿಯಲ್ಲಿ ತನ್ನನ್ನು ತೊಡಗಿಸಿಕೊಳ್ಳಬೇಕು.

ಮುಖ್ಯಮಂತ್ರಿ ಎಸ್.ಆರ್.ಬೊಮ್ಮಾಯಿಯವರು ತಕ್ಷಣ ವಿರೋಧಪಕ್ಷಗಳ ನಾಯಕರು ಮತ್ತು ಕಾನೂನು ತಜ್ಞರ ಸಭೆ ಕರೆದು ಚರ್ಚೆ ನಡೆಸಿ, ಸುಪ್ರೀಮ್ ಕೋರ್ಟ್ ಆದೇಶದಿಂದ ಉದ್ಭವವಾಗಿರುವ ಬಿಕ್ಕಟ್ಟು ಪರಿಹಾರಕ್ಕೆ ಅಭಿಪ್ರಾಯ ಪಡೆದು ಹಿಂದುಳಿದ ಜಾತಿಗಳಿಗೆ ನ್ಯಾಯ ಒದಗಿಸಬೇಕು..

ಜಿಲ್ಲಾ ಪಂಚಾಯತ್-ತಾಲೂಕು ಪಂಚಾಯತ್ ಗಳಲ್ಲಿ ದೇಶದಲ್ಲಿಯೇ ಮೊದಲ ಬಾರಿ ಹಿಂದುಳಿದ ಜಾತಿಗಳಿಗೆ ರಾಜಕೀಯ ಮೀಸಲಾತಿ ನೀಡಿದ ರಾಜ್ಯ ಕರ್ನಾಟಕ. ಪ್ರಧಾನಿ ರಾಜೀವ್ ಗಾಂಧಿಯವರು ಸಂವಿಧಾನಕ್ಕೆ 73 ಮತ್ತು 74ನೇ ತಿದ್ದುಪಡಿ ಮಾಡಿ ಈ ಮೀಸಲಾತಿಯನ್ನು ಇಡೀ ದೇಶಕ್ಕೆ ವಿಸ್ತರಿಸಿದ್ದನ್ನು ಇಲ್ಲಿ ನೆನಪು ಮಾಡಬಯಸುತ್ತೇನೆ,

ಹಿಂದುಳಿದ ಜಾತಿಗಳು ದಶಕಗಳ ಕಾಲದಿಂದ ರಾಜಕೀಯ ಮೀಸಲಾತಿ ಇಲ್ಲದೆ ಕಾರಣದಿಂದ ನ್ಯಾಯಬದ್ದ ರಾಜಕೀಯ ಪ್ರಾತಿನಿಧ್ಯದಿಂದ ವಂಚಿತವಾಗಿವೆ. ಸುಪ್ರೀಮ್ ಕೋರ್ಟ್ ಆದೇಶದಿಂದ ಮತ್ತೆ ಅವರು ಅವಕಾಶವನ್ನು ಕಳೆದುಕೊಂಡರೆ ಅದು ಸಾಮಾಜಿಕ ನ್ಯಾಯದ ಉಲ್ಲಂಘನೆಯಾಗುತ್ತದೆ.

P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಗೋದಾವರಿಯಿಂದ ಕೃಷ್ಣಾ-ಪೆನ್ನಾರ್-ಕಾವೇರಿ ನದಿ ರಾಜ್ಯಗಳಿಗೆ ನೀರು ಹಂಚಿಕೆ: ಕರ್ನಾಟಕಕ್ಕೆ ಸೊನ್ನೆ ಸುತ್ತಿದ ಕೇಂದ್ರ!!

ಗೋದಾವರಿಯಿಂದ ಕೃಷ್ಣಾ-ಪೆನ್ನಾರ್-ಕಾವೇರಿ ನದಿ ರಾಜ್ಯಗಳಿಗೆ ನೀರು ಹಂಚಿಕೆ: ಕರ್ನಾಟಕಕ್ಕೆ ಸೊನ್ನೆ ಸುತ್ತಿದ ಕೇಂದ್ರ!!

Leave a Reply Cancel reply

Your email address will not be published. Required fields are marked *

Recommended

ದೇವರಾಜ ಅರಸು ಆಶಯ ಉಲ್ಟಾ ಮಾಡಿದ ಬಿಜೆಪಿ!!

ಸಂಕಷ್ಟ ಸೂತ್ರ ಇಲ್ಲದಿರುವುದೇ ಸಂಕಷ್ಟಕ್ಕೆ ಕಾರಣ ಎಂದು ಕೈಚೆಲ್ಲಿದ ಸಿದ್ದರಾಮಯ್ಯ

3 years ago
ಲಾಕ್ ಡೌನ್ ಇಲ್ಲ

ವೈಫಲ್ಯ ಮುಚ್ಚಿಕೊಳ್ಳಲು ಬೊಮ್ಮಾಯಿ ಬುಲ್ಡೋಜರ್ ಜಪ

4 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ