• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಸರಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಸಂಗ್ರಹವಾಗುವ ಶುಲ್ಕವೆಲ್ಲ ಆಯಾ ಸಂಸ್ಥೆಗಳಿಗೇ ವರ್ಗಾವಣೆ

cknewsnow desk by cknewsnow desk
February 28, 2022
in CHIKKABALLAPUR, STATE
Reading Time: 1 min read
0
ಸರಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಸಂಗ್ರಹವಾಗುವ ಶುಲ್ಕವೆಲ್ಲ ಆಯಾ ಸಂಸ್ಥೆಗಳಿಗೇ ವರ್ಗಾವಣೆ

ಗೌರಿಬಿದನೂರಿನಲ್ಲಿ ಸೋಮವಾರದಂದು ಸರಕಾರಿ ಪ್ರಥಮ ದರ್ಜೆ ಕಾಲೇಜು, ಪಾಲಿಟೆಕ್ನಿಕ್ ಮತ್ತು ಜಿಟಿಟಿಸಿ ಹಾಸ್ಟೆಲ್ ಕಟ್ಟಡಗಳನ್ನು ಉದ್ಘಾಟಿಸಲಾಯಿತು. ಈ ಸಂದರ್ಭದಲ್ಲಿ ಸಚಿವರಾದ ಡಾ.ಸಿ.ಎನ್. ಅಶ್ವತ್ಥನಾರಾಯಣ, ಎಂ.ಟಿ.ಬಿ. ನಾಗರಾಜ್, ಶಾಸಕ ಶಿವಶಂಕರ ರೆಡ್ಡಿ ಮುಂತಾದವರು ಇದ್ದರು.

979
VIEWS
FacebookTwitterWhatsuplinkedinEmail

ಗೌರಿಬಿದನೂರಿನಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿಕೆ

ಗೌರಿಬಿದನೂರು: ಸರಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳಿಂದ ಸಂಗ್ರಹವಾಗುವ ಶುಲ್ಕವನ್ನು ಆಯಾಯ ಕಾಲೇಜು ಅಭಿವೃದ್ಧಿ ಸಮಿತಿಗಳಿಗೇ ನೀಡಲಾಗುವುದು. ಹೀಗೆ ಸಂಗ್ರಹವಾಗುವ ಹಣವನ್ನು ಆಯಾ ಶಿಕ್ಷಣ ಸಂಸ್ಥೆಗಳ ಮೂಲಸೌಕರ್ಯ ಅಭಿವೃದ್ಧಿಗೆ ವಿನಿಯೋಗಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.

ಅವರು ಸೋಮವಾರ ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜು ಕಟ್ಟಡ, ಸರಕಾರಿ ಪಾಲಿಟೆಕ್ನಿಕ್ ಮತ್ತು ಜಿಟಿಟಿಸಿ ಆವರಣದಲ್ಲಿ ನಿರ್ಮಿಸಿರುವ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳನ್ನು ಉದ್ಘಾಟಿಸಿ, ಮಾತನಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, “ರಾಜ್ಯದ ಸರಕಾರಿ ಪದವಿ ಕಾಲೇಜು, ಪಾಲಿಟೆಕ್ನಿಕ್ ಮತ್ತು ಎಂಜಿನಿಯರಿಂಗ್ ಕಾಲೇಜುಗಳಲ್ಲಿ 7 ಲಕ್ಷ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಇವರಿಂದ ಸಂಗ್ರಹವಾಗುವ ಶುಲ್ಕವನ್ನು ಸರಕಾರ ಇನ್ನು ಮುಂದೆ ಮುಟ್ಟುವುದಿಲ್ಲ. ಬದಲಿಗೆ, ಆಯಾಯ ಕಾಲೇಜು ಅಭಿವೃದ್ಧಿ ಸಮಿತಿಗಳ ಖಾತೆಗಳಿಗೇ ನೇರವಾಗಿ ಹೋಗುವಂತೆ ಮಾಡಲಿದ್ದು, ಮೂಲಸೌಕರ್ಯ ಮತ್ತು ಬೋಧನೆಯ ಗುಣಮಟ್ಟ ಸುಧಾರಿಸುವ ಮೂಲಕ ಶೈಕ್ಷಣಿಕ ಕ್ರಾಂತಿ ಮಾಡಲಾಗುವುದು” ಎಂದರು.

ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ತಂತ್ರಜ್ಞಾನವನ್ನು ಗರಿಷ್ಠ ಮಟ್ಟದಲ್ಲಿ ಅಳವಡಿಸಿಕೊಳ್ಳಲಾಗಿದ್ದು, ಇಡೀ ಶೈಕ್ಷಣಿಕ ವಲಯವು ಡೀಪ್ ಲರ್ನಿಂಗ್ ಕ್ರಮದತ್ತ ಹೊರಳಿಕೊಳ್ಳುತ್ತಿದೆ. ಇದಕ್ಕೆ ಪೂರಕವಾಗಿ ಕಲೆ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಕೂಡ ಆಧುನಿಕ ತಂತ್ರಜ್ಞಾನ ಕೋರ್ಸುಗಳನ್ನು ಪಠ್ಯದಲ್ಲಿ ಕಡ್ಡಾಯಗೊಳಿಸಲಾಗಿದೆ. ಈ ಕೌಶಲ್ಯ ಕಲಿಕೆಯಿಂದ ಪ್ರತಿಯೊಬ್ಬ ವಿದ್ಯಾರ್ಥಿಗೂ ಉದ್ಯೋಗದ ಖಾತ್ರಿ ದೊರೆಯಲಿದೆ ಎಂದು ಅವರು ಹೇಳಿದರು.

21ನೇ ಶತಮಾನದಲ್ಲಿ ಡಿಜಿಟಲ್ ಕೌಶಲ್ಯಗಳು ಅನಿವಾರ್ಯವಾಗಿವೆ. ಹೀಗಾಗಿಯೇ ಸರಕಾರಿ ಕಾಲೇಜುಗಳಲ್ಲಿ ಐಒಟಿ, ಆರ್ಟಿಫಿಷಿಯಲ್ ಇಂಟೆಲಿಜೆನ್ಸ್, ರೋಬೋಟಿಕ್ಸ್ ಮುಂತಾದವುಗಳನ್ನು ಅಳವಡಿಸಲಾಗಿದೆ. ಪಾಲಿಟೆಕ್ನಕ್ ಕಾಲೇಜಿನಲ್ಲೂ ವಿದ್ಯುಚ್ಚಾಲಿತ ವಾಹನಗಳ ಕೌಶಲ್ಯ ಮತ್ತು ನವೀಕರಿಸಬಹುದಾದ ಇಂಧನಮೂಲಗಳ ಕಲಿಕೆಯಂತಹ ಸಮಕಾಲೀನ ಬೇಡಿಕೆಯ ಕೋರ್ಸುಗಳನ್ನು ಸೇರಿಸಲಾಗಿದೆ. ಇಲ್ಲಿನ ಜಿಟಿಟಿಸಿ ಸಂಸ್ಥೆಯಿಂದ ವರ್ಷಕ್ಕೆ 1,000 ವಿದ್ಯಾರ್ಥಿಗಳು ಕೌಶಲ್ಯಸಹಿತರಾಗಿ ಹೊರಹೊಮ್ಮಲಿದ್ದಾರೆ.

ಡಾ.ಸಿ.ಎನ್. ಅಶ್ವತ್ಥನಾರಾಯಣ

ಕಳೆದ ಎರಡೂವರೆ ವರ್ಷಗಳಲ್ಲಿ ಪ್ರಬಲ ಇಚ್ಛಾಶಕ್ತಿಯೊಂದಿಗೆ ಸರಕಾರಿ ಕಾಲೇಜುಗಳನ್ನು ಜಾಗತಿಕ ಗುಣಮಟ್ಟಕ್ಕೆ ಏರಿಸಲಾಗಿದೆ. ಇವತ್ತು ಖಾಸಗಿ ವಿ.ವಿ.ಗಳು ಕೂಡ ಈ ಮಟ್ಟಕ್ಕಿಲ್ಲ ಎಂದು ಅವರು ಬಣ್ಣಿಸಿದರು.

ಕಾರ್ಯಕ್ರಮದಲ್ಲಿ ಸಚಿವ ಎಂ.ಟಿ.ಬಿ.ನಾಗರಾಜ್, ಶಾಸಕ ಶಿವಶಂಕರ ರೆಡ್ಡಿ ಮಾತನಾಡಿದರು. ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಶಿವಣ್ಣ ಸೇರಿದಂತೆ ಪ್ರಾಚಾರ್ಯರು, ಬೋಧಕ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಹೊಸೂರು ವಿಜ್ಞಾನ ಕೇಂದ್ರದಲ್ಲಿ ಸಭಾಂಗಣ, ಕಿರು ತಾರಾಲಯ, ಗ್ಯಾಲರಿ ಲೋಕಾರ್ಪಣೆ

ಹೊಸೂರು ವಿಜ್ಞಾನ ಕೇಂದ್ರದಲ್ಲಿ ಸಭಾಂಗಣ, ಕಿರು ತಾರಾಲಯ, ಗ್ಯಾಲರಿ ಲೋಕಾರ್ಪಣೆ

Leave a Reply Cancel reply

Your email address will not be published. Required fields are marked *

Recommended

ದಾಖಲೆ ಸಲ್ಲಿಸಲು ಪೂರೈಕೆ ಕಂಪನಿಗಳ ಮೀನಾ-ಮೇಷ; ತಯಾರಿಕೆ ಕಂಪನಿಗಳಿಂದಲೇ ನೇರವಾಗಿ ವ್ಯಾಕ್ಸಿನ್  ಖರೀದಿಗೆ ಮುಂದಾದ ಸರಕಾರ

ಕಾಲೇಜು ವಿದ್ಯಾರ್ಥಿಗಳಿಗೆ ಜುಲೈ ತಿಂಗಳಲ್ಲಿ ಲಸಿಕೆ: ಶೀಘ್ರ ತರಗತಿಗಳ ಆರಂಭಕ್ಕೆ ಚಿಂತನೆ ಎಂದ ಡಿಸಿಎಂ

5 years ago
ಯಡಿಯೂರಪ್ಪ ಅವರಿಂದ ಎಷ್ಟು ಸೂಟ್ ಕೇಸ್ ತೆಗೆದುಕೊಂಡಿರಿ ಸಿದ್ದರಾಮಯ್ಯ?

ಮೇಲ್ಮನೆ ಚುನಾವಣೆ ಮೈತ್ರಿ ವಿಚಾರ, ಭಾನುವಾರದೊಳಗೆ ನಿರ್ಧಾರ

4 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ