• About
  • Advertise
  • Careers
  • Contact
Wednesday, May 6, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ನೀಟ್ ರದ್ದು ಮಾಡಲು ಕೇಂದ್ರಕ್ಕೆ ಹೆಚ್.ಡಿ.ಕುಮಾರಸ್ವಾಮಿ ಆಗ್ರಹ

cknewsnow desk by cknewsnow desk
March 3, 2022
in STATE
Reading Time: 1 min read
0
ನೀಟ್ ರದ್ದು ಮಾಡಲು ಕೇಂದ್ರಕ್ಕೆ ಹೆಚ್.ಡಿ.ಕುಮಾರಸ್ವಾಮಿ ಆಗ್ರಹ
937
VIEWS
FacebookTwitterWhatsuplinkedinEmail

ಜೆಡಿಎಸ್ ಅಧಿಕಾರಕ್ಕೆ ಬಂದರೆ ನೀಟ್ ವಿರುದ್ಧ ವಿಧಾನಮಂಡಲದಲ್ಲಿ ನಿರ್ಣಯ

  • ಮುಖ್ಯಾಂಶಗಳು
  • ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿಕೆ ಅಮಾನವೀಯ
  • ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ ನಾರಾಯಣಗೆ ಟಾಂಗ್ ಕೊಟ್ಟ ಮಾಜಿ ಸಿಎಂ
  • ಮೆಡಿಕಲ್ ಮಾಡಲು ವರ್ಷಕ್ಕೆ 38 ಲಕ್ಷ ಬೇಕು

ಬೆಂಗಳೂರು/ರಾಮನಗರ: 2023ರ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದರೆ ನೀಟ್ ನಿಂದ ಕರ್ನಾಟಕ ಹೊರಬರಲು ವಿಧಾನಮಂಡಲದಲ್ಲಿ ನಿರ್ಣಯ ಕೈಗೊಳ್ಳಲಾಗುವುದು ಎಂದು ಹೇಳಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಕೇಂದ್ರ ಸರಕಾರ ನೀಟ್ ಅನ್ನು ಸಂಪೂರ್ಣವಾಗಿ ರದ್ದು ಮಾಡಬೇಕು ಎಂದು ಒತ್ತಾಯಿಸಿದರು.ಮಾಧ್ಯಮಗಳ ಜತೆ ಈ ಬಗ್ಗೆ ಮಾತನಾಡಿದ ಅವರು, ರಾಜ್ಯದಲ್ಲಿ ನೀಟ್ ಬಂದ ಮೇಲೆ ಬಡ, ಮಧ್ಯಮ ವರ್ಗದ ಮಕ್ಕಳಿಗೆ ಅನ್ಯಾಯ ಆಗಿದೆ. ಆದರೂ ಸರಕಾರ
ವಿದ್ಯಾರ್ಥಿಗಳ ಆರ್ತನಾದ ಕೇಳುತ್ತಿಲ್ಲ ಎಂದರೆ ಸಚಿವರು ಮತ್ತು ಸರ್ಕಾರಕ್ಕೆ ಕಣ್ಣು, ಕಿವಿ ಇಲ್ಲ ಎಂದು ಭಾವಿಸಬೇಕಾಗುತ್ತದೆ ಎಂದು ಕಿಡಿಕಾರಿದರು.

ಅಲ್ಲದೆ, ನೀಟ್ ವಿರುದ್ಧ ಮಾತನಾಡಿದವರು ಧನದಾಹಿಗಳು ಹಾಗೂ ದೇಶ ದ್ರೋಹಿಗಳು ಎಂದಿರುವ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹಾಗೂ ವೈದ್ಯ ಶಿಕ್ಷಣ ಪಡೆಯಲು ವಿದೇಶಕ್ಕೆ ಹೋದ ವಿದ್ಯಾರ್ಥಿಗಳೆಲ್ಲರೂ ನೀಟ್ ಅರ್ಹತಾ ಪರೀಕ್ಷೆಯಲ್ಲಿ ಫೇಲಾದವರು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಹೇಳಿರುವುದು ಅಕ್ಷಮ್ಯ ಎಂದು ಮಾಜಿ ಮಖ್ಯಮಂತ್ರಿಗಳು ಹೇಳಿದರು.

ನಾನು ಅಶ್ವತ್ಥ ನಾರಾಯಣ ಅವರಿಗೆ ಕೇಳಲು ಬಯಸುತ್ತೇನೆ. ಮಕ್ಕಳು ಇರಲಿ, ಈಗ ಪಿಯುಸಿ ಪಾಠ ಮಾಡುತ್ತಿರುವ ಉಪನ್ಯಾಸಕರಿಂದ ಈಗಿನ ನೀಟ್ ಪರೀಕ್ಷೆ ಬರೆಸಿ. ಅವರಲ್ಲಿ ಎಷ್ಟು ಜನ ಪಾಸಾಗುತ್ತಾರೋ ನೋಡೋಣ. ಇನ್ನು, ನೀಟ್ ಪ್ರಶ್ನೆ ಪತ್ರಿಕೆಯಲ್ಲಿ ವೈದ್ಯ ಶಿಕ್ಷಣಕ್ಕೆ ಪೂರಕವಾದ ಪ್ರಶ್ನೆಗಳೇ ಇರುವುದಿಲ್ಲ ಎಂದು ಅನೇಕರು ಹೇಳುತ್ತಿದ್ದಾರೆ. ಕೆಲಸಕ್ಕೆ ಬಾರದ ಬೇರೆ ಬೇರೆ ವಿಷಯದ ಪ್ರಶ್ನೆಗಳಿರುತ್ತವೆ. ಎಂಸಿಕ್ಯೂ ಪ್ರಶ್ನೆಗಳಲ್ಲಿ ನೆಗೆಟೀವ್ ಅಂಕ ಬೇರೆ ಇರುತ್ತದೆ. ಇಂಥ ಕೆಟ್ಟ ವ್ಯವಸ್ಥೆಯಲ್ಲಿ ನಮ್ಮ ಮಕ್ಕಳು ಸಿಲುಕಿದ್ದಾರೆ ಎಂದು ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು.

ಲೋಕಸಭೆ ಸ್ಪೀಕರ್ ಅವರ ಕ್ಷೇತ್ರದಲ್ಲಿ ನೀಟ್ ಟ್ಯೂಷನ್ ಅಂಗಡಿಗಳು ನಾಯಿಕೊಡೆಗಳಂತೆ ಮೇಲೆದ್ದಿವೆ. ಅವುಗಳನ್ನು ದೊಡ್ಡ ಪ್ರಮಾಣದಲ್ಲಿ ಬೆಳೆಸಿದ್ದಾರೆ. ಉತ್ತರ ಭಾರತದ ಟ್ಯೂಷನ್ ಮಾಫಿಯಾ ನೀಟ್ ಹಿಂದೆ ಇದೆ ಎನ್ನುವ ಅನುಮಾನವಿದೆ ಎಂದು ಮಾಜಿ ಮುಖ್ಯಮಂತ್ರಿಗಳು ತಿಳಿಸಿದರು.

ನೀಟ್ ಕೋಚಿಂಗ್ ಗೆ 2 ಲಕ್ಷ

ಏಳೆಂಟು ವಿಧ್ಯಾರ್ಥಿಗಳು ನನ್ನ ಬಳಿಗೆ ಬಂದು, ನೀಟ್ ಕೋಚಿಂಗ್ ಗೆ ಸೇರಬೇಕು. ನಾವು ಬಡವರು, 2 ಲಕ್ಷ ರೂಪಾಯಿ ಫೀಸ್ ಕಟ್ಟಬೇಕು. ಸಹಾಯ ಮಾಡಿ ಎಂದು ಕೇಳಿದ್ದಾರೆ. ಅವರಿಗೆ ಸಚಿವ ಅಶ್ವತ್ಥ ನಾರಾಯಣ ಅವರನ್ನು ಭೇಟಿ ಮಾಡಲು ಆಗಿಲ್ಲ. ಬರೀ ಕೋಚಿಂಗ್ ತೆಗೆದುಕೊಳ್ಳಲಿಕ್ಕೇ 2 ಲಕ್ಷ ಬೇಕಾದರೆ, ಇನ್ನೂ ಇಡೀ ಮೆಡಿಕಲ್ ಕೋರ್ಸ್ ಮುಗಿಸಲಿಕ್ಕೆ ಎಷ್ಟು ಲಕ್ಷ ರೂಪಾಯಿ ಬೇಕು? ಬಡ ಮಕ್ಕಳು ಇಷ್ಟು ಖರ್ಚು ಮಾಡಲು ಸಾಧ್ಯವೇ? ಸತ್ಯ ಹೀಗಿರುವಾಗ ವಿದೇಶಕ್ಕೆ ಹೋದ ಮಕ್ಕಳ ಬಗ್ಗೆ ಲಘುವಾಗಿ ಮಾತನಾಡುವುದು, ನೀಟ್ ವ್ಯವಸ್ಥೆ ಪ್ರಶ್ನಿಸಿದವರನ್ನು ದ್ರೋಹಿಗಳು ಎನ್ನುವುದು ಸರಿಯಲ್ಲ ಎಂದು ಅವರು ಹೇಳಿದರು.

ನಮ್ಮ ರಾಜ್ಯದ ಮಕ್ಕಳಿಗೆ ಎಷ್ಟು ಸೀಟು ಸಿಕ್ಕಿವೆ?

ರಾಜ್ಯದಲ್ಲಿ ಎಷ್ಟು ವೈದ್ಯ ಕಾಲೇಜುಗಳಿವೆ, ಅವುಗಳನ್ನು ನಡೆಸುವವರ ಹಿನ್ನೆಲೆ ಏನು? ಸರಕಾರಿ ಕಾಲೇಜುಗಳು ಎಷ್ಟಿವೆ? ಅವುಗಳಲ್ಲಿ ರಾಜ್ಯದ ಎಷ್ಟು ಮಕ್ಕಳು ವ್ಯಾಸಂಗ ಮಾಡುತ್ತಿದ್ದಾರೆ? ಎನ್ನುವುದನ್ನು ಸರಕಾರ ಹೇಳಬೇಕು. ನಮ್ಮ ಜನರ ತೆರಿಗೆ ಹಣದಲ್ಲಿ ಕಟ್ಟಿದ ಕಾಲೇಜುಗಳಲ್ಲಿ ನೀಟ್ ಪಾಸಾದವರಿಗೆ ಸೀಟು ಕೊಡುತ್ತಾರೆ. ಪಿಯುಸಿಯಲ್ಲಿ 97% ಅಂಕ ಪಡೆದ ನವೀನ್ ಅಂಥವರಿಗೆ ಸೀಟು ಸಿಗಲ್ಲ. ಈ ಕಾರಣಕ್ಕಾಗಿಯೇ ತಮಿಳುನಾಡಿನ ಸ್ಟಾಲಿನ್ ಅವರ ಸರಕಾರ ನೀಟ್ ವಿರುದ್ಧ ಕೈಗೊಂಡ ಕ್ರಮವನ್ನು ಅಭಿನಂದಿಸುವೆ. ಅಲ್ಲಿನ ವಿಧಾನಸಭೆಯಲ್ಲಿ ನೀಟ್ ವಿರುದ್ಧ ಅವಿರೋಧ ನಿರ್ಣಯ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದರು.

ವರ್ಷಕ್ಕೆ 38 ಲಕ್ಷ ರೂಪಾಯಿ ಬೇಕು!!

ನಮ್ಮ ರಾಜ್ಯದ ಮಕ್ಕಳು ವೈದ್ಯ ಶಿಕ್ಷಣ ಪಡೆಯಲು ಯುಕ್ರೇನ್ ಗೋ, ರಷ್ಯಾ ಅಥವಾ ಫಿಲಿಪ್ಪೀನ್ಸ್ ಗೆ ಹೋಗಬೇಕು. ಏಕೆಂದರೆ ರಾಜ್ಯದಲ್ಲಿ ಮೆಡಿಕಲ್ ಮುಗಿಸಲು ಒಂದೂವರೆ ಕೋಟಿ ರೂಪಾಯಿ ಕಟ್ಟಬೇಕು. ನೀಟ್ ಮೂಲಕ ಅರ್ಹತೆ ಪಡೆದವರೂ ಖಾಸಗಿ ಕಾಲೇಜಿನಲ್ಲಿ ಪ್ರವೇಶ ಪಡೆಯಬೇಕಾದರೆ ಇಷ್ಟು ಹಣ ತೆರಬೇಕು. ವರ್ಷಕ್ಕೆ 38 ಲಕ್ಷ ರೂಪಾಯಿ ಕಟ್ಟಲೇಬೇಕು. ಬರೀ ಐದು ವರ್ಷದ ಶುಲ್ಕಕ್ಕೆ 1.50ಯಿಂದ 1.75 ಕೋಟಿ ರೂಪಾಯಿ ಬೇಕು. ಬಡ, ಮಾಧ್ಯಮ ವರ್ಗದ ಮಕ್ಕಳಿಗೆ ಇಷ್ಟು ಹಣ ಹೊಂದಿಸಲು ಸಾಧ್ಯವೇ? ಹಾಗಾದರೆ ಆ ಮಕ್ಕಳು ಮೆಡಿಕಲ್ ವ್ಯಾಸಂಗ ಮಾಡಲೇಬಾರದೇ ಎಂದು ಕುಮಾರಸ್ವಾಮಿ ಅವರು ಪ್ರಶ್ನಿಸಿದರು.

ಸಚಿವ ಡಾ. ಅಶ್ವತ್ಥ ನಾರಾಯಣ ಅವರಿಗೆ ಟಾಂಗ್

ಇಂಥ ಕೆಟ್ಟ ವ್ಯವಸ್ಥೆ ಬಗ್ಗೆ ಮಾತನಾಡುವುದು ದೇಶ ದ್ರೋಹವೇ? ಇದನ್ನು ಉನ್ನತ ಶಿಕ್ಷಣ ಸಚಿವರನ್ನು ಕೇಳಲು ಬಯಸುತ್ತೇನೆ. ಹಾಗೆಯೇ ಪ್ರಹ್ಲಾದ್ ಜೋಷಿ ಹೇಳ್ತಾರೆ, ನಮ್ಮ ದೇಹದಲ್ಲಿ ನೀಟ್ ಫೇಲ್ ಆದವರೆಲ್ಲ ಉಕ್ರೇನ್ ಗೆ ಮೆಡಿಕಲ್ ಮಾಡಲಿಕ್ಕೆ ಹೋಗಿದಾರೆ ಎಂದು. 97% ಅಂಕ ಪಡೆದ ಆ ವಿದ್ಯಾರ್ಥಿಗೆ ಅಷ್ಟು ಅಂಕ ಬಿಟ್ಟಿ ಬಂದಿದೆಯಾ? ಸಾಲ ಸೋಲ ಮಾಡಿ ಮಾಡಿ ಅಲ್ಲಿಗೆ ಕಳಿಸಿ ಇವತ್ತು ಮಗನನ್ನು ಕಳೆದುಕೊಂಡ ಆ ಕುಟುಂಬ ಇವತ್ತು ದುಃಖದಲ್ಲಿದೆ. ಇಂಥ ಹೇಳಿಕೆ ನೀಡುವ ಸಚಿವರಿಗೆ ಜವಾಬ್ದಾರಿ ಬೇಡವೇ? ಎಂದು ಮಾಜಿ ಮುಖ್ಯಮಂತ್ರಿಗಳು ಖಾರವಾಗಿ ಪ್ರತಿಕ್ರಿಯಿಸಿದರು.

ಹಣದ ಅಡ್ಡೆಗಳಾದ ಖಾಸಗಿ ಕಾಲೇಜುಗಳು

ಖಾಸಗಿ ಕಾಲೇಜುಗಳು ಹಣದ ಅಡ್ಡೆಗಳಾಗಿವೆ. ಆದಾಯ ತೆರಿಗೆ ದಾಳಿ ನಡೆದರೆ ಒಂದೊಂದು ಕಾಲೇಜಿನಲ್ಲಿ 300, 400 ಕೋಟಿ ರೂಪಾಯಿ ದುಡ್ಡನ್ನು ಕೋಣೆಗಳಲ್ಲಿ ತುಂಬಿರುವ ದೃಶ್ಯಗಳನ್ನು ಮಾಧ್ಯಮಗಳೇ ತೋರಿಸಿವೆ. ಇಂಥದ್ದಕ್ಕೆ ಈ ವ್ಯವಸ್ಥೆ ಬೇಕಾ? ಅದಕ್ಕೆ ರಾಜ್ಯದ ಜನತೆಗೆ ನಾನು ಮನವಿ ಮಾಡುತ್ತಿದ್ದೇನೆ. ಎಲ್ಲ ಮಕ್ಕಳಿಗೆ ಉಚಿತ ಶಿಕ್ಷಣ ನೀಡಲು ಐದು ವರ್ಷಗಳ ಪೂರ್ಣ ಅವಧಿಯ ಪೂರ್ಣ ಬಹುಮತದ ಸರಕಾರ ನನ್ನ ಕೈಗೆ ಕೊಡಿ ಎಂದು ಇದೇ ಕಾರಣಕ್ಕೆ ಕೇಳುತ್ತಿದ್ದೇನೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಗೆ ಹೈಕೋರ್ಟ್ ಛೀಮಾರಿ

ಕಾಂಗ್ರೆಸ್‌ ಪಾದಯಾತ್ರೆಯಿಂದ ಟ್ರಾಫಿಕ್‌ ಜಾಂ; ಹೈಕೋರ್ಟ್‌ ಗರಂ

Leave a Reply Cancel reply

Your email address will not be published. Required fields are marked *

Recommended

ಗುರುವಿಲ್ಲದೆ ಯಾರೂ ಇಲ್ಲ, ಗುರುವಿನ ನಂತರವೇ ಎಲ್ಲರೂ ಎಂದ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

ಗುರುವಿಲ್ಲದೆ ಯಾರೂ ಇಲ್ಲ, ಗುರುವಿನ ನಂತರವೇ ಎಲ್ಲರೂ ಎಂದ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

5 years ago
ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ಹೋರಾಟ ನಡೆಸುತ್ತಿರುವ ಅನ್ನದಾತರಿಗೆ ಬೆಂಬಲ ನೀಡಲು ಬಾಗೇಪಲ್ಲಿ ರೈತರ 400 ಕಿ.ಮೀ. ಕಾಲ್ನಡಿಗೆ ಯಾತ್ರೆ

ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ಹೋರಾಟ ನಡೆಸುತ್ತಿರುವ ಅನ್ನದಾತರಿಗೆ ಬೆಂಬಲ ನೀಡಲು ಬಾಗೇಪಲ್ಲಿ ರೈತರ 400 ಕಿ.ಮೀ. ಕಾಲ್ನಡಿಗೆ ಯಾತ್ರೆ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ