• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಉಪ್ಪು ಹುಳಿ ಖಾರ ಇಲ್ಲದ, ಯಾರದ್ದೋ ಒತ್ತಡದಿಂದ ಓದಿದ ಬಜೆಟ್!: HDK

cknewsnow desk by cknewsnow desk
March 4, 2022
in STATE
Reading Time: 1 min read
0
ಯಡಿಯೂರಪ್ಪ ಅವರಿಂದ ಎಷ್ಟು ಸೂಟ್ ಕೇಸ್ ತೆಗೆದುಕೊಂಡಿರಿ ಸಿದ್ದರಾಮಯ್ಯ?
953
VIEWS
FacebookTwitterWhatsuplinkedinEmail

ಇದು ಕೇವಲ ಅಂಕಿ-ಅಂಶಗಳ ಅಲಂಕಾರಿಕ ಬಜೆಟ್ ಮಾತ್ರ!; ಮಾಜಿ ಮುಖ್ಯಮಂತ್ರಿ ಕಟುಟೀಕೆ

  • ರಾಜ್ಯಪಾಲರ ಭಾಷಣವೇ ಕಳೆಪೆ, ಮುಂಗಡ ಪತ್ರವೂ ಕಳಪೆ
  • ಇದು ಅನುಭವಿ ಮುಖ್ಯಮಂತ್ರಿಯ ನೀರಸ ಬಜೆಟ್
  • ನಿರುದ್ಯೋಗವನ್ನೇ ನಿರ್ಲಕ್ಷಿಸಿದ ಮುಂಗಡ ಪತ್ರ!


ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಸಿದ್ದು “ಉಪ್ಪು ಉಳಿ ಖಾರ” ಇಲ್ಲದ, ಯಾರದ್ದೋ ಒತ್ತಡದಿಂದ ಓದಿದ ನೀರಸ ಬಜೆಟ್ ಎಂದು ಮಾಜಿ ಮಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದರು.

ಬಜೆಟ್ ಬಗ್ಗೆ ವಿಧಾನಸೌಧದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, “ಕೇವಲ ಅಂಕಿ ಅಂಶಗಳನ್ನು ಅಲಂಕರಿಸಿ ಮಂಡಿಸಿದ ಬಜೆಟ್ ಇದಾಗಿದೆಯಷ್ಟೇ. ಇದು ಕೇವಲ ಅಲಂಕಾರಿಕ ಮುಂಗಡ ಪತ್ರ” ಎಂದು ಅಭಿಪ್ರಾಯಪಟ್ಟರು.

ಮುಖ್ಯಮಂತ್ರಿಗಳು ಅನುಭವಿಗಳು. ಐದು ವರ್ಷ ಜಲಸಂಪನ್ಮೂಲ ಸಚಿವರಾಗಿದ್ದರು. ಎರಡೂವರೆ ವರ್ಷ ಗೃಹ ಸಚಿವರಾಗಿದ್ದರು. ಆದರೂ ಅವರು ಸ್ವತಂತ್ರವಾಗಿ ಮುಂಗಡ ಪತ್ರ ಮಂಡಿಸಿರುವ ಬಗ್ಗೆ ನನಗೆ ಸಂಶಯವಿದೆ. ಯಾರದ್ದೋ ಒತ್ತಡಕ್ಕೆ ಸಿಲುಕಿ ಮಂಡಿಸಿದಂತಿದೆ. ತಮ್ಮ ಚೊಚ್ಚಲ ಮುಂಗಡ ಪತ್ರವನ್ನೇ ಎರಡು ಗಂಟೆಗಳ ಕಾಲ ಶ್ರಮಪಟ್ಟು ಓದಿದರಾ ಅನ್ನುವುದು ನನ್ನ ಅಭಿಪ್ರಾಯ. ಅವರಿಗೆ ವಿಶ್ವಾಸದ ಕೊರತೆ ಇದ್ದಂತೆ ಇತ್ತು ಎಂದು ನನಗೆ ಅನಿಸಿತು ಎಂದು ಅವರು ಹೇಳಿದರು.

ನಿರುದ್ಯೋಗದ ಬಗ್ಗೆ ಚಕಾರವಿಲ್ಲ:

ಕೋವಿಡ್ ನಂತರ ರಾಜ್ಯದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಅಸಂಖ್ಯಾತ ಜನರು ಕೆಲಸ ಕಳೆದುಕೊಂಡಿದ್ದಾರೆ. ಹೊಸದಾಗಿ ಉದ್ಯೋಗಾವಕಾಶ ಆಗುತ್ತಿಲ್ಲ. ಯುವಜನರು ಕೆಲಸಕ್ಕಾಗಿ ಅಲೆಯುತ್ತಿದ್ದಾರೆ. ಎಲ್ಲೂ ಕೆಲಸ ಸಿಗುತ್ತಿಲ್ಲ. ಆ ಬಗ್ಗೆ ಯಾವುದೇ ಪ್ರಸ್ತಾಪ ಇಲ್ಲ. ಕೊರೊನಾದಿಂದ ಆಗಿದ್ದ ಅನಾಹುತವನ್ನು ಸುಧಾರಿಸುವ ಬಗ್ಗೆ ಬಜೆಟ್ಟಿನಲ್ಲಿ ಮಾತೇ ಇಲ್ಲ. ಆದರೂ ಸಂಕಷ್ಟ ಕಾಲದಲ್ಲೂ ಆದಾಯ ನಿರೀಕ್ಷೆ ಮಾಡಿದ್ದಾರೆ ಮುಖ್ಯಮಂತ್ರಿಗಳು ಎಂದು ಕುಮಾರಸ್ವಾಮಿ ಅವರು ಟೀಕಿಸಿದರು.

ಉದ್ಯೋಗ ಮತ್ತು ಜೀವನೋಪಾಯದ ಬಗ್ಗೆ ಬಜೆಟ್ʼನಲ್ಲಿ ಪರಿಹಾರ ಇರುತ್ತದೆ ಎನ್ನುವುದು ನನ್ನ ಮತ್ತು ಜನರ ನಿರೀಕ್ಷೆ ಆಗಿತ್ತು. ಆದರೂ ಉದ್ಯೋಗ ಮತ್ತು ಜೀವನೋಪಾಯದ ಬಗ್ಗೆ ಏನನ್ನೂ ಹೇಳಿಲ್ಲ. ಮುಂದಿನ ದಿನಗಳಲ್ಲಿ ನಿರುದ್ಯೋಗ ಸಮಸ್ಯೆ ಮತ್ತಷ್ಟು ಬಿಗಡಾಯಿಸುವ ಸಾಧ್ಯತೆ ಇದೆ ಎಂದು ಕುಮಾರಸ್ವಾಮಿ ಅವರು ಕಳವಳ ವ್ಯಕ್ತಪಡಿಸಿದರು.

ಗ್ರೈಂಡರ್ʼನಲ್ಲಿ ಮಿಕ್ಸ್ ಮಾಡಿದ್ದಾರೆ!:

ಕೃಷಿ, ನೀರಾವರಿ ಸೇರಿ ಐದು ವಲಯಗಳು ಎಂದು ಹೊಸ ಪ್ರಯೋಗ ಮಾಡಲು ಹೋಗಿದ್ದೇವೆ ಎಂದು ಪ್ರದರ್ಶನ ಮಾಡಿದ್ದಾರೆ. ಎಲ್ಲಾ ವಲಯಗಳನ್ನೂ ಮಿಕ್ಸ್ ಮಾಡಿ ಗ್ರೈಂಡರ್ ನಲ್ಲಿ ಹಾಕಿ ರುಬ್ಬಿದ ಹಾಗೆ ಮಾಡಿದ್ದಾರೆ. ಯಾರಿಗೂ ಏನೂ ಕಾಣಬಾರದು ಎನ್ನುವ ಹಾಗೆ ಮಾಡಿದ್ದಾರೆ ಎಂದು ಮುಂಗಡ ಪತ್ರವನ್ನು ಮಾಜಿ ಸಿಎಂ ವಿಶ್ಲೇಷಣೆ ಮಾಡಿದರು.

ಮೀಸಲು ಅರಣ್ಯದಲ್ಲಿ ಉದ್ಯಾನವನ ಬಾಲಿಷ ಘೋಷಣೆ:

ಮೀಸಲು ಅರಣ್ಯ ಪ್ರದೇಶ ಜಾರಕು ಬಂಡೆ ಅರಣ್ಯದಲ್ಲಿ ಪಾರ್ಕ್ ಮಾಡುವ ಬಗ್ಗೆ ಹೇಳುವುದಾದರೆ, “ಈಗಾಗಲೇ ನಗರದಲ್ಲಿ ಅನೇಕ ಉದ್ಯಾನವನಗಳು ಇವೆ. ಅನೇಕ ಪಾರ್ಕ್ʼಗಳಲ್ಲಿ ಈಗಾಗಲೇ ಜನರು ವಾಯುವಿಹಾರ ಮಾಡುತ್ತಿದ್ದಾರೆ. ಲಾಲ್ ಬಾಗ್ ನಂಥ ಬೊಟಾನಿಕಲ್ ಗಾರ್ಡನ್ ನಗರದಲ್ಲಿದೆ. ದೇಶದ 12 ಬೊಟಾನಿಕಲ್ ಗಾರ್ಡೆನ್ʼಗಳಲ್ಲಿ ಅದೂ ಒಂದು. ಅಲ್ಲಿ ಸಂಶೋಧನೆಯನ್ನು ಕೂಡ ನಡೆಸಬಹುದು. ದೇಶ-ವಿದೇಶಗಳ ಸಾವಿರಾರು ತಳಿಯ ಸಸ್ಯಗಳಿವೆ. ಆದರೆ ಮೀಸಲು ಅರಣ್ಯದ ೩೫೦ ಎಕರೆಯಲ್ಲಿ ಉದ್ಯಾನವನ ಮಾಡುವ ಅಗತ್ಯವೇನು? ಇದು ಅತ್ಯಂತ ಬಾಲಿಷ ಪ್ರಸ್ತಾವನೆ ಎಂದು ಮಾಜಿ ಸಿಎಂ ತರಾಟೆಗೆ ತೆಗೆದುಕೊಂಡರು.

ರಾಜ್ಯಪಾಲರ ಭಾಷಣವೇ ಕಳಪೆ, ಬಜೆಟ್ ಕೂಡ ಹಾಗೇ ಇದೆ:

ಕಳೆದ ಕಲಾಪದಲ್ಲಿ ನಡೆದ ರಾಜ್ಯಪಾಲರ ಭಾಷಣವೇ ಕಳಪೆ. ಬಜೆಟ್ ಕೂಡ ಹಾಗೆಯೇ ಇದೆ. ಇನ್ನು ಮೇಕೆದಾಟು ಯೋಜನೆಗೆ 1000 ಕೋಟಿ ಘೋಷಣೆ ಮಾಡಿದ್ದಾರೆ. ನಿನ್ನೆ ಪಾದಯಾತ್ರೆ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕ ಡಾ.ಜಿ.ಪರಮೇಶ್ವರ ಅವರು ಈ ಯೋಜನೆಗೆ 5000 ಕೋಟಿ ನೀಡಬೇಕು ಎಂದು ಹೇಳಿದ್ದರು. ಬಹುಶಃ ಅವರಿಗೆ ಗೌರವ ಕೊಡೋದಿಕ್ಕೆ 1000 ಕೋಟಿ ಇಟ್ಟಿದ್ದಾರೇನೋ ಎಂದು ಕುಮಾರಸ್ವಾಮಿ ಅವರು ಲೇವಡಿ ಮಾಡಿದರು.

ಭದ್ರಾ ಮೇಲ್ದಂಡೆ ಯೋಜನೆಗೆ 23,000 ಕೋಟಿ ರೂ. ಬೇಕು. ಆದರೆ ಇವರು ಕೊಟ್ಟಿರುವುದು ಕೇವಲ 3000 ಕೋಟಿ ರೂ. ಮಾತ್ರ. ಹತ್ತು ವರ್ಷವಾದರೂ ಒಂದು ಹನಿ ನೀರನ್ನೂ ಕೊಡದ ಎತ್ತಿನಹೊಳೆಗೆ ಮತ್ತೆ 3000 ಕೋಟಿ ರೂ. ಘೋಷಣೆ ಮಾಡಿದ್ದಾರೆ. ಅದಕ್ಕೆ ನಾನು ಹೇಳಿದ್ದು, ಇದು ಅಂಕಿ ಅಂಶಗಳ ಅಲಂಕಾರಿಕ ಬಜೆಟ್ ಎಂದು ಕುಮಾರಸ್ವಾಮಿ ಅವರು ತಿಳಿಸಿದರು.

cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಕಾಂಗ್ರೆಸ್ ವಶಕ್ಕೆ ಗುಡಿಬಂಡೆ ಪಟ್ಟಣ ಪಂಚಾಯತಿ: ಸಿಪಿಎಂ-ಬಿಜೆಪಿಗೆ ಭಾರೀ ಮುಖಭಂಗ! ಒಂದು ಮತದಲ್ಲಿ ಗೆದ್ದ ಹಸ್ತ ಅಭ್ಯರ್ಥಿ!! ಹೊಸ ಅಭ್ಯರ್ಥಿಗಳ ಕೈಹಿಡಿದ ಮತದಾರರು

ಗುಡಿಬಂಡೆ ಪಟ್ಟಣ ಪಂಚಾಯತಿಗೆ 3 ನಾಮನಿರ್ದೇಶನ ಸದಸ್ಯರು

Leave a Reply Cancel reply

Your email address will not be published. Required fields are marked *

Recommended

ಮುಜರಾಯಿ ಇಲಾಖೆ ಅರ್ಚಕರು, ದೇವಾಲಯ ನೌಕರರಿಗೆ ದಸರಾ ಬಂಪರ್

ಮುಜರಾಯಿ ಇಲಾಖೆ ಅರ್ಚಕರು, ದೇವಾಲಯ ನೌಕರರಿಗೆ ದಸರಾ ಬಂಪರ್

5 years ago
ನಮ್ಮ ದೇಶದಲ್ಲೇ ತಯಾರಾದ ಕೊರೊನಾ ಲಸಿಕೆ ಕುರಿತು ಅಗೌರವ ಬೇಡ; ಭಾರತ್ ಬಯೋಟೆಕ್ ನಂಬಿಕೆಗೆ ಅರ್ಹವಾದ ಕಂಪನಿ ಎಂದ ಡಾ.ಕೆ.ಸುಧಾಕರ್

ಕೋಲಾರದ ಮಾಲೂರಿನಲ್ಲಿ 100 ಎಕರೆ ಜಾಗದಲ್ಲಿ ಕೊವ್ಯಾಕ್ಸಿನ್ ಲಸಿಕೆ ತಯಾರಿಕಾ ಘಟಕ I ದೃಢಪಡಿಸಿದ ಡಿಸಿಎಂ I ಐದು ಪಟ್ಟು ಹೆಚ್ಚು ಲಸಿಕೆ ತಯಾರಿಕೆ, ರಾಜ್ಯದಲ್ಲಿ ನೀಗುತ್ತಾ ವ್ಯಾಕ್ಸಿನ್‌ ಕೊರತೆ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ